Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 11:32 - ಕನ್ನಡ ಸತ್ಯವೇದವು J.V. (BSI)

32 ಇಸ್ರಾಯೇಲ್ಯರು ಎದ್ದು ಆ ದಿನ ಹಗಲಿರುಳೂ ಮರುದಿನ ಹಗಲೂ ಆ ಲಾವಕ್ಕಿಗಳನ್ನು ಕೂಡಿಸಿಕೊಳ್ಳುತ್ತಿದ್ದರು; ಸ್ವಲ್ಪವಾಗಿ ಕೂಡಿಸಿಕೊಂಡವರು ಹದಿನೆಂಟು ಖಂಡುಗ ಕೂಡಿಸಿದರು. ಅವುಗಳನ್ನು ಪಾಳೆಯದ ಸುತ್ತಲೂ ಹರವಿ ಒಣಗಿಸಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ಇಸ್ರಾಯೇಲರು ಆ ದಿನವೆಲ್ಲಾ, ರಾತ್ರಿಯೆಲ್ಲಾ, ಮರುದಿನವೆಲ್ಲಾ ಲಾವಕ್ಕಿಗಳನ್ನು ಕೂಡಿಸಿದರು. ಯಾರು ಹತ್ತು ಹೋಮೆರಿಗಿಂತ ಕಡಿಮೆ ಕೂಡಿಸಿಕೊಳ್ಳಲಿಲ್ಲ. ಅವರು ಪಾಳೆಯದ ಸುತ್ತಲೂ ಅವುಗಳನ್ನು ಹರಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

32 ಇಸ್ರಯೇಲರು ಆ ದಿನ ಹಗಲಿರುಳೂ ಮರುದಿನ ಹಗಲೂ ಆ ಲಾವಕ್ಕಿಗಳನ್ನು ಕೂಡಿಸಿಕೊಂಡರು. ಕಡಿಮೆ ಕೂಡಿಸಿಕೊಂಡವರು ಕೂಡ ಸಾವಿರ ಕಿಲೋಗ್ರಾಂನಷ್ಟು ಕೂಡಿಸಿಕೊಂಡರು. ಅವುಗಳನ್ನು ಪಾಳೆಯದ ಸುತ್ತಲೂ ಹರವಿ ಒಣಗಿಸಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

32 ಜನರು ಎದ್ದು ಆ ದಿನವೆಲ್ಲಾ ಮತ್ತು ರಾತ್ರಿಯೆಲ್ಲಾ ಮತ್ತು ಮರುದಿನವೆಲ್ಲಾ ಲಾವಕ್ಕಿಗಳನ್ನು ಕೂಡಿಸಿಕೊಂಡರು. ಸ್ವಲ್ಪ ಕೂಡಿಸಿಕೊಂಡವನು ಅರವತ್ತು ಕಿಲೋಗ್ರಾಂ ಕೂಡಿಸಿಕೊಂಡನು. ಬಳಿಕ ಜನರು ಲಾವಕ್ಕಿಗಳ ಮಾಂಸವನ್ನು ಪಾಳೆಯದ ಸುತ್ತಲೂ ಹರಡಿ ಬಿಸಿಲಿನಲ್ಲಿ ಒಣಗಿಸಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

32 ಜನರು ಆ ದಿನವೆಲ್ಲಾ, ಆ ರಾತ್ರಿಯೆಲ್ಲಾ, ಮರು ದಿವಸವೆಲ್ಲಾ ಲಾವಕ್ಕಿಗಳನ್ನು ಕೂಡಿಸಿದರು. ಕಡಿಮೆ ಕೂಡಿಸಿದವನು ಸಾವಿರ ಕಿಲೋಗ್ರಾಮಿನಷ್ಟು ಕೂಡಿಸಿದನು. ಅವರು ಪಾಳೆಯದ ಸುತ್ತಲೂ ಅವುಗಳನ್ನು ಹರಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 11:32
3 ತಿಳಿವುಗಳ ಹೋಲಿಕೆ  

ಏಫಾ [ಎಂಬ ಧಾನ್ಯದ ಅಳತೆಯು] ಮತ್ತು ಬತ್ [ಎಂಬ ರಸದ್ರವ್ಯದ ಅಳತೆಯು] ಒಂದೇ ಪ್ರಮಾಣವಾಗಿರತಕ್ಕದ್ದು; ಬತ್ ಎಂಬದು ಹೋಮೆರಿನ ಹತ್ತನೆಯ ಒಂದು ಪಾಲು; ಏಫಾ ಎಂಬದು ಹೋಮೆರಿನ ಹತ್ತನೆಯ ಒಂದು ಪಾಲು; ಈ ಎರಡೂ ಹೋಮೆರ್ ಅಳತೆಗೆ ಸಂಬಂಧವಾಗಿರಬೇಕು.


ಗೋಮೆರೆಂಬದು ಏಫಾದಲ್ಲಿ ಹತ್ತನೆಯ ಒಂದು ಪಾಲು ಹಿಡಿಯುವದು.


ಆದರೆ ಅವರು ಆ ಮಾಂಸವನ್ನು ಇನ್ನೂ ಆಹಾರಮಾಡಿಕೊಳ್ಳುತ್ತಿರುವಾಗ ಅದು ಮುಗಿದುಹೋಗುವದರೊಳಗಾಗಿಯೇ ಯೆಹೋವನು ಅವರ ಮೇಲೆ ಕೋಪಗೊಂಡು ಬಹಳ ಜನರನ್ನು ಘೋರವ್ಯಾಧಿಯಿಂದ ಸಾಯಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು