Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 11:8 - ಕನ್ನಡ ಸತ್ಯವೇದವು J.V. (BSI)

8 ಜನರು ತಿರುಗಾಡುತ್ತಾ ಅದನ್ನು ಕೂಡಿಸಿಕೊಂಡು ಬೀಸುವ ಕಲ್ಲುಗಳಿಂದ ಬೀಸಿ ಇಲ್ಲವೆ ಒರಳಲ್ಲಿ ಕುಟ್ಟಿ ಪಾತ್ರೆಗಳಲ್ಲಿ ಬೇಯಿಸಿ ರೊಟ್ಟಿಗಳನ್ನು ಮಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಜನರು ತಿರುಗಾಡುತ್ತಾ ಅದನ್ನು ಕೂಡಿಸಿಕೊಂಡು ಬೀಸುವ ಕಲ್ಲುಗಳಿಂದ ಬೀಸಿ, ಇಲ್ಲವೆ ಒರಳಿನಲ್ಲಿ ಕುಟ್ಟಿ ಪಾತ್ರೆಗಳಲ್ಲಿ ಬೇಯಿಸಿ ರೊಟ್ಟಿಗಳನ್ನು ಮಾಡಿಕೊಂಡರು. ಅದರ ರುಚಿ ಎಣ್ಣೆ ಬೆರಸಿ ಮಾಡಿದ ಭಕ್ಷ್ಯಗಳಂತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಜನರು ಹೊರಗೆ ಹೋಗಿ ಅದನ್ನು ಕೂಡಿಸಿಕೊಂಡು ಬಂದು ಬೀಸುವ ಕಲ್ಲುಗಳಿಂದ ಬೀಸಿ, ಇಲ್ಲವೆ ಒರಳಲ್ಲಿ ಕುಟ್ಟಿ, ಮಡಕೆಗಳಲ್ಲಿ ಬೇಯಿಸಿ ರೊಟ್ಟಿಗಳನ್ನು ಮಾಡಿಕೊಳ್ಳುತ್ತಿದ್ದರು. ಅದರ ರುಚಿ ಎಣ್ಣೆಬೆರೆಸಿ ಮಾಡಿದ ತಿಂಡಿಯಂತೆ ಇರುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಜನರು ಮನ್ನವನ್ನು ಕೂಡಿಸಿಕೊಂಡು ಬೀಸುವ ಕಲ್ಲುಗಳಿಂದ ಬೀಸಿ ಅಥವಾ ಒರಳಲ್ಲಿ ಕುಟ್ಟಿ, ಮಡಕೆಗಳಲ್ಲಿ ಬೇಯಿಸಿ ತೆಳುವಾದ ರೊಟ್ಟಿಗಳನ್ನು ಮಾಡಿಕೊಂಡರು. ಅದರ ರುಚಿ ಆಲಿವ್ ಎಣ್ಣೆಯಿಂದ ಮಾಡಿದ ಭಕ್ಷ್ಯಗಳಂತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಜನರು ಹೊರಗೆ ಹೋಗಿ ಅದನ್ನು ಕೂಡಿಸಿ, ಬೀಸುವ ಕಲ್ಲುಗಳಲ್ಲಿ ಬೀಸಿ ಇಲ್ಲವೆ ಒರಳಿನಲ್ಲಿ ಕುಟ್ಟಿ, ಪಾತ್ರೆಗಳಲ್ಲಿ ಬೇಯಿಸಿ ರೊಟ್ಟಿಗಳನ್ನು ಮಾಡುತ್ತಿದ್ದರು. ಅದರ ರುಚಿಯು ಓಲಿವ್ ಎಣ್ಣೆಯಿಂದ ಮಾಡಿದ ರೊಟ್ಟಿಯಹಾಗೆ ಇತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 11:8
9 ತಿಳಿವುಗಳ ಹೋಲಿಕೆ  

ಇಸ್ರಾಯೇಲ್ಯರು ಆ ಆಹಾರಕ್ಕೆ ಮನ್ನ ಎಂದು ಹೆಸರಿಟ್ಟರು. ಅದು ಬಿಳೀ ಕೊತ್ತುಂಬರಿ ಕಾಳಿನಂತಿದ್ದು ರುಚಿಯಲ್ಲಿ ಜೇನುತುಪ್ಪ ಕಲಸಿದ ದೋಸೆಗಳ ಹಾಗಿತ್ತು.


ದುಡಿಯಿರಿ; ಕೆಟ್ಟುಹೋಗುವ ಆಹಾರಕ್ಕಾಗಿ ದುಡಿಯಬೇಡಿರಿ, ನಿತ್ಯಜೀವಕ್ಕೆ ಉಳಿಯುವ ಆಹಾರಕ್ಕಾಗಿ ದುಡಿಯಿರಿ; ಇಂಥ ಆಹಾರವನ್ನು ಮನುಷ್ಯಕುಮಾರನು ನಿಮಗೆ ಕೊಡುವನು; ಇದಕ್ಕಾಗಿ ತಂದೆಯಾದ ದೇವರು ಆತನನ್ನು ನೇವಿುಸಿ ಮುದ್ರೆಹಾಕಿದ್ದಾನೆ ಅಂದನು.


ಅದಕ್ಕೆ ಅವನು - ಇದು ಯೆಹೋವನು ಹೇಳಿದ ಮಾತು; ನಾಳೆ ವಿರಾಮಮಾಡಿಕೊಳ್ಳತಕ್ಕ ಯೆಹೋವನ ಪರಿಶುದ್ಧ ಸಬ್ಬತ್ ದಿನವಾಗಿದೆ. [ಈ ಹೊತ್ತಿಗೆ] ಸುಡಬೇಕಾದದ್ದನ್ನು ಸುಟ್ಟು ಬೇಯಿಸಬೇಕಾದದ್ದನ್ನು ಬೇಯಿಸಿದ ನಂತರ ವಿುಕ್ಕದ್ದನ್ನು ನಾಳೆಯ ತನಕ ಇಟ್ಟುಕೊಳ್ಳಿರಿ ಅಂದನು.


ನಮ್ಮ ಹಿರಿಯರು ಅಡವಿಯಲ್ಲಿ ಮನ್ನಾ ತಿಂದರು; ಪರಲೋಕದಿಂದ ರೊಟ್ಟಿಯನ್ನು ಅವರಿಗೆ ತಿನ್ನುವದಕ್ಕೆ ಕೊಟ್ಟನು ಎಂದು ಶಾಸ್ತ್ರದಲ್ಲಿ ಬರೆದದೆಯಲ್ಲಾ, ನೀನು ಏನು ಕೆಲಸ ನಡಿಸುತ್ತೀ? ಎಂದು ಕೇಳಿದಾಗ


ಒಂದು ದಿನ ಯಾಕೋಬನು ಅಡಿಗೆ ಮಾಡುತ್ತಿರುವಾಗ ಏಸಾವನು ಕಾಡಿನಿಂದ ದಣಿದು ಬಂದು


ಆ ಮನ್ನವು ಕೊತ್ತುಂಬರಿ ಕಾಳಿನಂತಿತ್ತು; ಬದೋಲಖಧೂಪದಂತೆ ಕಾಣಿಸಿತು.


ಅದರ ರುಚಿ ಎಣ್ಣೆ ಬೆರಸಿ ಮಾಡಿದ ಭಕ್ಷ್ಯಗಳಂತಿತ್ತು. ರಾತ್ರಿಕಾಲದಲ್ಲಿ ಮಂಜು ಪಾಳೆಯದಲ್ಲಿ ಬೀಳುತ್ತಿದ್ದಾಗ ಅದರೊಂದಿಗೆ ಮನ್ನವೂ ಬೀಳುತ್ತಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು