ಅರಣ್ಯಕಾಂಡ 12:11 - ಕನ್ನಡ ಸತ್ಯವೇದವು J.V. (BSI)11 ಆಗ ಆರೋನನು ಮೋಶೆಗೆ - ಅಯ್ಯಾ, ನಾವು ವಿವೇಕವಿಲ್ಲದೆ ನಡೆದು ದೋಷಿಗಳಾದರೂ ಈ ದೋಷದ ಫಲವನ್ನು ನಾವು ಅನುಭವಿಸುವಂತೆ ಮಾಡಬೇಡವೆಂದು ನಿನ್ನನ್ನು ಬೇಡಿಕೊಳ್ಳುತ್ತೇನೆ; ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಆಗ ಆರೋನನು ಮೋಶೆಗೆ, “ನನ್ನ ಒಡೆಯನೇ, ನಾವು ವಿವೇಕವಿಲ್ಲದೆ ನಡೆದು ದೋಷಿಗಳಾದೆವು. ಈ ದೋಷದ ಫಲವನ್ನು ನಾವು ಅನುಭವಿಸುವಂತೆ ಮಾಡಬೇಡ ಎಂದು ನಿನ್ನನ್ನು ಬೇಡಿಕೊಳ್ಳುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಆಗ ಆರೋನನು ಮೋಶೆಗೆ, “ಅಯ್ಯಾ, ನಾವು ಮೂರ್ಖರಾಗಿ ನಡೆದು ಪಾಪಕಟ್ಟಿಕೊಂಡೆವು. ಈ ಪಾಪದ ಫಲವನ್ನು ನಾವು ಅನುಭವಿಸುವಂತೆ ಮಾಡಬೇಡ,” ಇದು ನನ್ನ ವಿನಂತಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಆಗ ಆರೋನನು ಮೋಶೆಗೆ, “ಸ್ವಾಮೀ, ನಾವು ಮೂರ್ಖತನದಿಂದ ಮಾಡಿದ ಪಾಪಕ್ಕೆ ದಯವಿಟ್ಟು ನಮ್ಮನ್ನು ದಂಡಿಸಬೇಡ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಆರೋನನು ಮೋಶೆಗೆ, “ಅಯ್ಯೋ ನನ್ನ ಒಡೆಯನೇ, ನಾವು ಪಾಪಮಾಡಿದೆವು. ಬುದ್ಧಿ ಇಲ್ಲದೆ ಮಾಡಿದ ಈ ಪಾಪವನ್ನು ನಮ್ಮ ಮೇಲೆ ಹಾಕಬೇಡ. ಅಧ್ಯಾಯವನ್ನು ನೋಡಿ |