ಅರಣ್ಯಕಾಂಡ 12:14 - ಕನ್ನಡ ಸತ್ಯವೇದವು J.V. (BSI)14 ಅದಕ್ಕೆ ಯೆಹೋವನು - ತಂದೆ ಮುಖದ ಮೇಲೆ ಉಗುಳಿದರೆ ಆಕೆ ಹೇಗೂ ಏಳು ದಿವಸ ನಾಚಿಕೆಯಿಂದ ಮರೆಯಾಗುವದಿಲ್ಲವೇ; ಹಾಗಾದರೆ ಆಕೆ ಏಳು ದಿವಸ ಪಾಳೆಯದ ಹೊರಗೆ ಇರಬೇಕು; ತರುವಾಯ ನೀನು ಆಕೆಯನ್ನು ಪಾಳೆಯದೊಳಗೆ ಸೇರಿಸಿಕೊಳ್ಳಬಹುದು ಎಂದು ಉತ್ತರಕೊಟ್ಟನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಅದಕ್ಕೆ ಯೆಹೋವನು ಮೋಶೆಗೆ, “ಆಕೆಯ ತಂದೆ ಆಕೆಯ ಮುಖದ ಮೇಲೆ ಉಗುಳಿದರೆ, ಆಕೆ ಏಳು ದಿನ ನಾಚಿಕೆಯಿಂದ ಮರೆಯಾಗುತ್ತಿದ್ದಳಲ್ಲವೇ? ಹಾಗಾದರೆ ಆಕೆ ಏಳು ದಿನ ಪಾಳೆಯದ ಹೊರಗೆ ಇರಲಿ, ತರುವಾಯ ನೀನು ಆಕೆಯನ್ನು ಪಾಳೆಯದೊಳಗೆ ಸೇರಿಸಿಕೊಳ್ಳಬಹುದು” ಎಂದು ಉತ್ತರಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಅದಕ್ಕೆ ಸರ್ವೇಶ್ವರ, “ಅವಳ ತಂದೆ ಅವಳ ಮುಖದ ಮೇಲೆ ಉಗುಳಿದ್ದರೆ ಏಳು ದಿವಸ ಅವಳು ನಾಚಿಕೆಯಿಂದ ಮರೆಯಾಗುತ್ತಿದ್ದಳಲ್ಲವೆ? ಅಂತೆಯೇ ಅವಳು ಏಳು ದಿವಸ ಪಾಳೆಯದಿಂದ ಹೊರಗಿರಲಿ. ಅನಂತರ ಅವಳನ್ನು ನೀನು ಪಾಳೆಯದೊಳಗೆ ಸೇರಿಸಿಕೊಳ್ಳಬಹುದು,” ಎಂದು ಉತ್ತರಕೊಟ್ಟರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಅದಕ್ಕೆ ಯೆಹೋವನು, “ಆಕೆಯ ತಂದೆ ಮುಖದ ಮೇಲೆ ಉಗುಳಿದ್ದರೆ ಆಕೆ ಏಳು ದಿವಸ ನಾಚಿಕೆಯಿಂದ ಇರುತ್ತಿರಲಿಲ್ಲವೇ? ಹಾಗಾದರೆ ಆಕೆ ಏಳು ದಿವಸ ಪಾಳೆಯದ ಹೊರಗೆ ಇರಬೇಕು. ತರುವಾಯ ಆಕೆ ಪಾಳೆಯದೊಳಗೆ ಬರಬಹುದು” ಎಂದು ಉತ್ತರಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಆಗ ಯೆಹೋವ ದೇವರು ಮೋಶೆಗೆ, “ಆಕೆಯ ತಂದೆ ಅವಳ ಮುಖದ ಮೇಲೆ ಉಗುಳಿದರೆ, ಆಕೆ ಏಳು ದಿನ ನಾಚಿಕೆಯಿಂದ ಮರೆಯಾಗಿರುವುದಿಲ್ಲವೇ? ಹಾಗಾದರೆ ಆಕೆಯು ಏಳು ದಿವಸ ಪಾಳೆಯದ ಹೊರಗೆ ಇರಲಿ, ತರುವಾಯ ಅವಳನ್ನು ನೀನು ಪಾಳೆಯದೊಳಗೆ ಸೇರಿಸಿಕೊಳ್ಳಬಹುದು,” ಎಂದರು. ಅಧ್ಯಾಯವನ್ನು ನೋಡಿ |