Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 12:5 - ಕನ್ನಡ ಸತ್ಯವೇದವು J.V. (BSI)

5 ಆ ಮೂವರು ಬಂದಾಗ ಯೆಹೋವನು ಮೇಘಸ್ತಂಭದೊಳಗೆ ಇಳಿದು ಬಂದು ದೇವದರ್ಶನದ ಗುಡಾರದ ಬಾಗಲಲ್ಲಿ ನಿಂತು ಆರೋನ್ ವಿುರ್ಯಾಮರನ್ನು ಹತ್ತಿರಕ್ಕೆ ಕರೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಯೆಹೋವನು ಮೇಘಸ್ತಂಭದೊಳಗೆ ಇಳಿದು ಬಂದು ದೇವದರ್ಶನದ ಗುಡಾರದ ಬಾಗಿಲ ಬಳಿಯಲ್ಲಿ ನಿಂತು ಆರೋನನ್ನು ಮತ್ತು ಮಿರ್ಯಾಮಳನ್ನು ಹತ್ತಿರಕ್ಕೆ ಕರೆದನು. ಅವರು ಮುಂದೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಅವರು ಬಂದಾಗ ಸರ್ವೇಶ್ವರ ಮೇಘಸ್ತಂಭದಲ್ಲಿ ಇಳಿದು ಬಂದು ದೇವದರ್ಶನದ ಗುಡಾರದ ಬಾಗಿಲಲ್ಲಿ ನಿಂತು ಆರೋನ್ ಹಾಗೂ ಮಿರ್ಯಾಮಳನ್ನು ಹತ್ತಿರಕ್ಕೆ ಕರೆದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಯೆಹೋವನು ಎತ್ತರವಾದ ಮೇಘದಲ್ಲಿ ಇಳಿದು ಬಂದು ದೇವದರ್ಶನಗುಡಾರದ ಪ್ರವೇಶದ್ವಾರದ ಬಳಿ ನಿಂತನು. ಯೆಹೋವನು ಆರೋನನನ್ನೂ ಮಿರ್ಯಾಮಳನ್ನೂ ಕರೆದನು. ಆರೋನನೂ ಮಿರ್ಯಾಮಳೂ ಹತ್ತಿರಕ್ಕೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಯೆಹೋವ ದೇವರು ಮೇಘ ಸ್ತಂಭದಲ್ಲಿ ಇಳಿದು ಗುಡಾರದ ಬಾಗಿಲ ಬಳಿಯಲ್ಲಿ ನಿಂತು, ಆರೋನನನ್ನೂ ಮಿರ್ಯಾಮಳನ್ನೂ ಕರೆದಾಗ, ಅವರಿಬ್ಬರು ಮುಂದೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 12:5
6 ತಿಳಿವುಗಳ ಹೋಲಿಕೆ  

ಯೆಹೋವನು ಆ ಮೇಘದಲ್ಲಿ ಇಳಿದು ಬಂದು ಅವನ ಸಂಗಡ ಮಾತಾಡಿ ಅವನಲ್ಲಿದ್ದ ಆತ್ಮೀಯವರಗಳಲ್ಲಿ ಆ ಎಪ್ಪತ್ತು ಮಂದಿ ಹಿರಿಯರಿಗೂ ಪಾಲುಕೊಟ್ಟನು; ಆ ವರಗಳು ಅವರಿಗೆ ದೊರಕಿದಾಗ ಅವರು ಪರವಶರಾಗಿ ಪ್ರವಾದಿಸಿದರು; ಆಮೇಲೆ ಅವರು ತಿರಿಗಿ ಪ್ರವಾದಿಸಲಿಲ್ಲ.


ಆಗ ಯೆಹೋವನು ಮೇಘದಿಂದ ಆವರಿಸಲ್ಪಟ್ಟವನಾಗಿ ಇಳಿದು ಬಂದು ಅಲ್ಲಿ ಅವನ ಹತ್ತಿರ ನಿಂತು ಯೆಹೋವನೆಂಬ ನಾಮವನ್ನು ಪ್ರಕಟಿಸಿದನು.


ಆತನು ಮೇಘಸ್ತಂಭದಲ್ಲಿದ್ದು ಅವರೊಡನೆ ಮಾತಾಡುತ್ತಿದ್ದನು; ಅವರು ಆತನ ವಿಧಿನಿಯಮಗಳನ್ನು ಕೈಕೊಂಡವರು.


ಇಸ್ರಾಯೇಲ್ಯರ ಎಲ್ಲಾ ಪ್ರಯಾಣಗಳಲ್ಲಿಯೂ ಅವರ ಕಣ್ಣ ಮುಂದೆ ಹಗಲು ಹೊತ್ತಿನಲ್ಲಿ ಯೆಹೋವನ ಮೇಘವು ಗುಡಾರದ ಮೇಲೆ ಇತ್ತು; ರಾತ್ರಿ ವೇಳೆಯಲ್ಲಿ ಆ ಮೇಘದೊಳಗೆ ಅಗ್ನಿಯು ಪ್ರಕಾಶಿಸುತ್ತಿತ್ತು.


ಯೆಹೋವನು ಮೋಶೆಗೆ - ಇಗೋ ನಾನು ನಿನ್ನ ಸಂಗಡ ಮಾತಾಡುವಾಗ ಜನರು ಕೇಳಿ ಯಾವಾಗಲೂ ನಿನ್ನನ್ನು ನಂಬುವಂತೆ ನಾನು ಕಾರ್ಮುಗಿಲಲ್ಲಿ ನಿನ್ನ ಬಳಿಗೆ ಬರುವೆನು ಎಂದು ಹೇಳಿದನು.


ಹೀಗಿರಲಾಗಿ ಅವರು ಆಡಿದ ಮಾತನ್ನು ಯೆಹೋವನು ಕೇಳಿ ಫಕ್ಕನೆ ಮೋಶೆ ಆರೋನ್ ವಿುರ್ಯಾಮರಿಗೆ - ನೀವು ಮೂರು ಮಂದಿಯೂ ದೇವದರ್ಶನದ ಗುಡಾರಕ್ಕೆ ಬರಬೇಕೆಂದು ಆಜ್ಞಾಪಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು