Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 13:16 - ಕನ್ನಡ ಸತ್ಯವೇದವು J.V. (BSI)

16 ದೇಶವನ್ನು ಸಂಚರಿಸಿ ನೋಡುವದಕ್ಕೆ ಮೋಶೆ ಕಳುಹಿಸಿದ ಮನುಷ್ಯರ ಹೆಸರುಗಳು ಇವೇ. ಮೋಶೆ ನೂನನ ಮಗನಾದ ಹೋಶೇಯನಿಗೆ ಯೆಹೋಶುವನೆಂದು ಹೆಸರಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ದೇಶವನ್ನು ಸಂಚರಿಸಿ ನೋಡುವುದಕ್ಕೆ ಮೋಶೆ ಕಳುಹಿಸಿದ ಮನುಷ್ಯರ ಹೆಸರುಗಳು ಇವೇ. ಮೋಶೆ ನೂನನ ಮಗನಾದ ಹೋಶೇಯನಿಗೆ ಯೆಹೋಶುವನೆಂದು ಹೆಸರಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ನಾಡನ್ನು ಸಂಚರಿಸಿ ನೋಡಿಬರುವುದಕ್ಕೆ ಮೋಶೆ ಕಳಿಸಿದ್ದ ವ್ಯಕ್ತಿಗಳ ಹೆಸರುಗಳು ಇವೇ. ಮೋಶೆ ನೂನನ ಮಗ ಹೋಶೇಯನಿಗೆ ‘ಯೆಹೋಶುವ’ ಎಂದು ಹೆಸರಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ದೇಶದ ವಿಷಯವನ್ನು ಸಂಗ್ರಹಿಸಿಕೊಂಡು ಬರಲು ಮೋಶೆ ಕಳುಹಿಸಿದ ಗೂಢಚಾರರ ಹೆಸರುಗಳು ಇವೇ. (ಮೋಶೆಯು ನೂನನ ಮಗನಾದ ಹೋಶೇಯನಿಗೆ ಯೆಹೋಶುವನೆಂದು ಹೆಸರಿಟ್ಟನು.)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ದೇಶವನ್ನು ಸಂಚರಿಸಿ ನೋಡುವುದಕ್ಕಾಗಿ ಮೋಶೆ ಕಳುಹಿಸಿದ ಮನುಷ್ಯರ ಹೆಸರುಗಳು ಇವೇ. ಮೋಶೆ ನೂನನ ಮಗ ಹೋಶೇಯನಿಗೆ ಯೆಹೋಶುವ ಎಂದು ಹೆಸರಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 13:16
14 ತಿಳಿವುಗಳ ಹೋಲಿಕೆ  

ಎಫ್ರಾಯೀಮ್ ಕುಲದ ನೂನನ ಮಗನಾದ ಹೋಶೇಯ,


ಮೋಶೆಯು ಯೆಹೋಶುವನಿಗೆ - ನೀನು ಭಟರನ್ನು ಆದುಕೊಂಡು ನಾಳೆ ನಮ್ಮ ಮುಂದೆ ಹೊರಟು ಅಮಾಲೇಕ್ಯರೊಡನೆ ಯುದ್ಧಮಾಡಬೇಕು; ನಾನು ದೇವದಂಡವನ್ನು ಕೈಯಲ್ಲಿ ಹಿಡುಕೊಂಡು ಗುಡ್ಡದ ತುದಿಯಲ್ಲಿ ನಿಂತುಕೊಳ್ಳುವೆನು ಎಂದು ಹೇಳಿದನು.


ಯೆಹೋಶುವನು ಅವರನ್ನು ಆ ವಿಶ್ರಾಂತಿಯಲ್ಲಿ ಸೇರಿಸಿದ್ದಾದರೆ ತರುವಾಯ ಮತ್ತೊಂದು ದಿವಸವನ್ನು ಕುರಿತು ಹೇಳೋಣವಾಗುತ್ತಿರಲಿಲ್ಲ.


ಆ ವಚನವೇನಂದರೆ - ನನ್ನ ಜನವಲ್ಲದ್ದನ್ನು ನನ್ನ ಜನವೆಂದೂ ನನಗೆ ಅಪ್ರಿಯವಾದವಳನ್ನು ಪ್ರಿಯಳೆಂದೂ ಹೇಳುವೆನು.


ನಮ್ಮ ಹಿರಿಯರು ಅದನ್ನು ತಮ್ಮ ತಂದೆಗಳಿಂದ ಹೊಂದಿದರು; ಅವರು ಯೆಹೋಶುವನ ಹಿಂದೆ ಬಂದು ದೇವರು ತಮ್ಮ ಮುಂದೆ ಹೊರಡಿಸಿದ ಅನ್ಯಜನಗಳ ದೇಶವನ್ನು ಸ್ವಾಧೀನಮಾಡಿಕೊಂಡಾಗ ಆ ಗುಡಾರವನ್ನು ಕೂಡ ತಂದರು. ಅದು ದಾವೀದನ ಕಾಲದವರೆಗೂ ಇಲ್ಲೇ ಇತ್ತು.


ಯೆಹೂದದ ಅರಸನಾದ ಉಜ್ಜೀಯ, ಯೋಥಾಮ, ಆಹಾಜ, ಹಿಜ್ಕೀಯ, ಇವರ ಕಾಲದಲ್ಲಿ, ಅಂದರೆ ಇಸ್ರಾಯೇಲಿನ ಅರಸನೂ ಯೋವಾಷನ ಮಗನೂ ಆದ ಯಾರೊಬ್ಬಾಮನ ಕಾಲದಲ್ಲಿ ಬೆಯೇರಿಯ ಮಗನಾದ ಹೋಶೇಯನಿಗೆ ಯೆಹೋವನು ದಯಪಾಲಿಸಿದ ವಾಕ್ಯವು.


ಮೋಶೆಯೂ ನೂನನ ಮಗನಾದ ಯೆಹೋಶುವನೂ ಈ ಪದ್ಯದ ಮಾತುಗಳನ್ನೆಲ್ಲಾ ಜನರಿಗೆ ಕೇಳಿಸುವಂತೆ ಹೇಳಿದರು.


ಯೆಫುನ್ನೆಯ ಮಗನಾದ ಕಾಲೇಬ್ ಮತ್ತು ನೂನನ ಮಗನಾದ ಯೆಹೋಶುವ ಇವರಿಬ್ಬರೇ ಹೊರತು ನಿಮ್ಮಲ್ಲಿ ಯಾರೂ ನಿಮ್ಮ ನಿವಾಸಕ್ಕಾಗಿ ನಾನು ಪ್ರಮಾಣಪೂರ್ವಕವಾಗಿ ವಾಗ್ದಾನ ಮಾಡಿದ ದೇಶವನ್ನು ಸೇರುವದಿಲ್ಲ.


ಮತ್ತು ದೇಶವನ್ನು ಸಂಚರಿಸಿ ನೋಡಿದವರಲ್ಲಿದ್ದ ನೂನನ ಮಗನಾದ ಯೆಹೋಶುವನೂ ಯೆಪುನ್ನೆಯ ಮಗನಾದ ಕಾಲೇಬನೂ ತಮ್ಮ ಬಟ್ಟೆಗಳನ್ನು ಹರಿದುಕೊಂಡು


ಗಾದ್ ಕುಲದ ಮಾಕೀಯನ ಮಗನಾದ ಗೆಯೂವೇಲ್.


ಅದಕ್ಕೆ ಯೆಹೋವನು - ನೂನನ ಮಗನಾದ ಯೆಹೋಶುವನು ಆತ್ಮವರ ಸಂಪನ್ನನು;


ಇವನ ಮಗನು ಎಲೀಷಾಮ; ಇವನ ಮಗನು ನೋನ್; ಇವನ ಮಗನು ಯೆಹೋಷುವ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು