Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 13:17 - ಕನ್ನಡ ಸತ್ಯವೇದವು J.V. (BSI)

17 ಕಾನಾನ್ ದೇಶವನ್ನು ಸಂಚರಿಸಿ ನೋಡುವದಕ್ಕೆ ಮೋಶೆ ಅವರನ್ನು ಕಳುಹಿಸುವಾಗ ಅವರಿಗೆ - ನೀವು ಕಾನಾನ್ ದೇಶದ ದಕ್ಷಿಣಪ್ರಾಂತ್ಯದ ಮಾರ್ಗವಾಗಿ ಬೆಟ್ಟದ ಸೀಮೆಗೆ ಹತ್ತಿಹೋಗಿ ಆ ದೇಶದ ಸಂಗತಿಯನ್ನೆಲ್ಲಾ ನೋಡಿ ತಿಳಿದುಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಕಾನಾನ್ ದೇಶದಲ್ಲಿ ಸಂಚರಿಸಿ ನೋಡುವುದಕ್ಕೆ ಮೋಶೆ ಅವರನ್ನು ಕಳುಹಿಸುವಾಗ ಅವರಿಗೆ, “ನೀವು ಕಾನಾನ್ ದೇಶದ ದಕ್ಷಿಣ ಪ್ರಾಂತ್ಯದ ಮಾರ್ಗವಾಗಿ ಬೆಟ್ಟದ ಸೀಮೆಗೆ ಹತ್ತಿಹೋಗಿ ಆ ದೇಶದ ಸಂಗತಿಯನ್ನೆಲ್ಲಾ ನೋಡಿ ತಿಳಿದುಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಕಾನಾನ್ ನಾಡನ್ನು ಸಂಚರಿಸಿ ನೋಡಿ ಬರುವುದಕ್ಕೆ ಅವರನ್ನು ಕಳಿಸುವಾಗ ಮೋಶೆ ಹೀಗೆಂದು ಸಂಬೋಧಿಸಿದನು: “ನೀವು ನೆಗೆಬಾ ಮಾರ್ಗವಾಗಿ ಮಲೆನಾಡಿಗೆ ಹತ್ತಿಹೋಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಕಾನಾನ್ ದೇಶದ ವಿಷಯವನ್ನು ಸಂಗ್ರಹಿಸಿಕೊಂಡು ಬರಲು ಮೋಶೆ ಅವರನ್ನು ಕಳುಹಿಸುವಾಗ ಅವರಿಗೆ, “ನೀವು ಬೆಟ್ಟದ ಸೀಮೆಗೆ ನೆಗೆವ್ ಮೂಲಕ ಹತ್ತಿ ಹೋಗಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಮೋಶೆ ಕಾನಾನ್ ದೇಶವನ್ನು ಸಂಚರಿಸಿ ನೋಡುವುದಕ್ಕೆ ಅವರನ್ನು ಕಳುಹಿಸುವಾಗ ಅವರಿಗೆ, “ನೀವು ನೆಗೆವ ಮಾರ್ಗವಾಗಿ ಮಲೆನಾಡಿಗೆ ಹತ್ತಿಹೋಗಿರಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 13:17
16 ತಿಳಿವುಗಳ ಹೋಲಿಕೆ  

ತರುವಾಯ ಅವರು ಹೋಗಿ ಪರ್ವತಪ್ರದೇಶ, ದಕ್ಷಿಣ ಸೀಮೆ, ಇಳಕಲಿನ ಪ್ರದೇಶ ಇವುಗಳಲ್ಲಿದ್ದ ಕಾನಾನ್ಯರೊಡನೆ ಯುದ್ಧಮಾಡಿದರು.


ತರುವಾಯ ಅಬ್ರಾಮನು ಅಲ್ಲಿಂದ ಹೊರಟು ಕಾನಾನ್‍ದೇಶದ ದಕ್ಷಿಣಸೀಮೆಗೆ ಮುಂದೆ ಮುಂದೆ ಹೋಗುತ್ತಾ ಇದ್ದನು.


ಯೆಹೋವನು ಯೆಹೂದ್ಯರ ಸಂಗಡ ಇದ್ದದರಿಂದ ಅವರು ಪರ್ವತಪ್ರದೇಶಗಳನ್ನೆಲ್ಲಾ ಸ್ವತಂತ್ರಿಸಿಕೊಂಡರು. ಆದರೆ ತಗ್ಗಿನ ಪ್ರದೇಶಗಳಲ್ಲಿ ವಾಸಿಸುವವರಿಗೆ ಕಬ್ಬಿಣದ ರಥಗಳಿದ್ದದರಿಂದ ಅವರನ್ನು ಹೊರಡಿಸುವದು ಆಗಲಿಲ್ಲ.


ಆಕೆಯು - ನನಗೊಂದು ದಾನಕೊಡಬೇಕು; ನನ್ನನ್ನು ಬೆಗ್ಗಾಡಿಗೆ ಕೊಟ್ಟುಬಿಟ್ಟಿಯಲ್ಲಾ, ಬುಗ್ಗೆಗಳಿರುವ ಸ್ಥಳವನ್ನು ನನಗೆ ಕೊಡು ಅಂದಳು. ಆಗ ಅವನು ಆಕೆಗೆ ಮೇಲಣ ಮತ್ತು ಕೆಳಗಣ ಬುಗ್ಗೆಗಳನ್ನು ಕೊಟ್ಟನು.


ಅಕ್ರಬ್ಬೀಮೆಂಬ ಕಣಿವೆಯ ದಕ್ಷಿಣಮಾರ್ಗವಾಗಿ ಚಿನಿಗೆ ಹೋಗುವದು. ಅಲ್ಲಿಂದ ಕಾದೇಶ್‍ಬರ್ನೇಯದ ದಕ್ಷಿಣಮಾರ್ಗವಾಗಿ ಹೆಚ್ರೋನಿಗೂ ಅಲ್ಲಿಂದ ಏರುತ್ತಾ ಅದ್ದಾರಿಗೂ ಹೋಗಿ ಕರ್ಕದ ಕಡೆಗೆ ತಿರುಗಿಕೊಂಡು


ಹೀಗೆ ಅಬ್ರಾಮನು ತನ್ನದನ್ನೆಲ್ಲಾ ತೆಗೆದುಕೊಂಡು ಹೆಂಡತಿಯನ್ನೂ ಲೋಟನನ್ನೂ ಸಂಗಡ ಕರಕೊಂಡು ಐಗುಪ್ತ ದೇಶವನ್ನು ಬಿಟ್ಟು ಕಾನಾನ್‍ದೇಶದ ದಕ್ಷಿಣ ಪ್ರಾಂತ್ಯಕ್ಕೆ ಏರಿ ಬಂದನು.


ಆಗ ಬೆಟ್ಟದಲ್ಲಿದ್ದ ಅಮೋರಿಯರು ನಿಮಗೆ ವಿರೋಧವಾಗಿ ಹೊರಟು ಜೇನುಹುಳಗಳಂತೆ ನಿಮ್ಮನ್ನು ಮುತ್ತಿ ಸೇಯೀರಿನಲ್ಲಿ ಹೊರ್ಮದವರೆಗೂ ಬೆನ್ನಟ್ಟಿ ಸಂಹರಿಸಿದರು.


ಮರುದಿನ ಬೆಳಿಗ್ಗೆ ಜನರು ಎದ್ದು - ನಾವು ಪಾಪಮಾಡಿರುವದು ನಿಜ; ಯೆಹೋವನು ವಾಗ್ದಾನಮಾಡಿದ ಸ್ಥಳಕ್ಕೆ ಹತ್ತೋಣ ಬನ್ನಿ ಎಂದು ಹೇಳಿಕೊಳ್ಳುತ್ತಾ ಆ ಬೆಟ್ಟದ ಮೇಲಕ್ಕೆ ಹತ್ತಿಹೋಗುವವರಾದರು.


ದಕ್ಷಿಣ ಸೀಮೆಯಲ್ಲಿ ಅಮಾಲೇಕ್ಯರೂ ಬೆಟ್ಟದ ಸೀಮೆಯಲ್ಲಿ ಹಿತ್ತಿಯರು, ಯೆಬೂಸಿಯರು, ಅಮೋರಿಯರು ಇವರೂ ಸಮುದ್ರತೀರದಲ್ಲಿ ಮತ್ತು ಯೊರ್ದನ್ ಹೊಳೆಯ ಬಳಿಯಲ್ಲಿ ಕಾನಾನ್ಯರೂ ವಾಸವಾಗಿದ್ದಾರೆ ಎಂದು ತಿಳಿಸಿದರು.


ಆದರೆ ಸಿದ್ದೀಮ್ ತಗ್ಗಿನಲ್ಲಿ ಕಲ್ಲರಗಿನ ಕೆಸರುಕುಣಿಗಳು ತುಂಬಾ ಇದ್ದವು. ಸೊದೋಮ್ ಗೊಮೋರಗಳ ರಾಜರ ಕಡೆಯವರು ಓಡಿಹೋಗುವಾಗ ಆ ಕುಣಿಗಳಲ್ಲಿ ಬಿದ್ದು ಸತ್ತರು; ಉಳಿದವರು ಬೆಟ್ಟಗಳಿಗೆ ಓಡಿಹೋದರು.


ಅವನು ದಕ್ಷಿಣ ದೇಶವನ್ನು ಬಿಟ್ಟು ಮುಂದೆ ಮುಂದೆ ಪ್ರಯಾಣ ಮಾಡುತ್ತಾ ಬೇತೇಲಿನವರೆಗೆ ಅಂದರೆ


ನೀನೆದ್ದು ಈ ದೇಶದ ಎಲ್ಲಾ ಕಡೆಯಲ್ಲಿಯೂ ತಿರುಗಾಡು; ಇದನ್ನು ನಿನಗೆ ಕೊಡುವೆನು ಎಂದು ಹೇಳಿದನು.


ಅಲ್ಲಿನ ನಿವಾಸಿಗಳು ಬಲಿಷ್ಠರೋ ಬಲಹೀನರೋ, ಬಹಳ ಮಂದಿಯೋ ಸ್ವಲ್ಪ ಮಂದಿಯೋ,


ನೂನನ ಮಗನಾದ ಯೆಹೋಶುವನು [ಕಾನಾನ್] ದೇಶವನ್ನೂ ಯೆರಿಕೋ ಪಟ್ಟಣವನ್ನೂ ನೋಡುವದಕ್ಕೋಸ್ಕರ ಶಿಟ್ಟೀವಿುನಿಂದ ಇಬ್ಬರು ಗೂಢಚಾರರನ್ನು ಕಳುಹಿಸಿದನು. ಅವರು ಹೊರಟು ಹೋಗಿ ರಾಹಾಬಳೆಂಬ ಸೂಳೆಯ ಮನೆಯಲ್ಲಿ ಇಳುಕೊಂಡರು.


ಹೀಗೆ ಯೆಹೋಶುವನು ಬೆಟ್ಟದ ಮೇಲಣ ಪ್ರದೇಶ, ದಕ್ಷಿಣಪ್ರಾಂತ್ಯ, ಇಳಕಲಿನ ಪ್ರದೇಶ, ಬೆಟ್ಟಗಳ ಬುಡದ ಪ್ರದೇಶ ಇವುಗಳನ್ನು ಸ್ವತಂತ್ರಿಸಿಕೊಂಡು ಇವುಗಳ ರಾಜಪ್ರಜೆಗಳನ್ನು ಸಂಹರಿಸಿಬಿಟ್ಟನು. ಒಬ್ಬನನ್ನೂ ಉಳಿಸಲಿಲ್ಲ. ಇಸ್ರಾಯೇಲ್ ದೇವರಾದ ಯೆಹೋವನ ಆಜ್ಞೆಯಂತೆ ಜೀವವಿರುವದೆಲ್ಲವನ್ನೂ ಸಂಹರಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು