ಅರಣ್ಯಕಾಂಡ 13:20 - ಕನ್ನಡ ಸತ್ಯವೇದವು J.V. (BSI)20 ಭೂವಿುಯು ಸಾರವಾದದ್ದೋ ನಿಸ್ಸಾರವಾದದ್ದೋ, ಮರಗಳುಳ್ಳದ್ದೋ ಬೈಲೋ ನೋಡಿ ತಿಳಿದುಕೊಳ್ಳಬೇಕು. ಅದಲ್ಲದೆ ಆ ದೇಶದ ಉತ್ಪನ್ನಗಳಲ್ಲಿ ಕೆಲವನ್ನು ಸಾಹಸಮಾಡಿ ತರಬೇಕೆಂದು ಬೋಧಿಸಿದನು. ಆಗ ದ್ರಾಕ್ಷಾಲತೆಗಳ ಪ್ರಥಮಫಲಕಾಲವಾಗಿತ್ತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಭೂಮಿಯು ಸಾರವಾದುದೋ ಅಥವಾ ನಿಸ್ಸಾರವಾದುದೋ, ಮರಗಳುಳ್ಳದ್ದೋ ಅಥವಾ ಬಯಲುಪ್ರದೇಶವೋ ಎಂದು ನೋಡಿ ತಿಳಿದುಕೊಳ್ಳಬೇಕು. ಅದಲ್ಲದೆ ನೀವು ಧೈರ್ಯವುಳ್ಳವರಾಗಿದ್ದು ಆ ದೇಶದ ಉತ್ಪನ್ನಗಳಲ್ಲಿ ಕೆಲವನ್ನು ತರಬೇಕು” ಎಂದು ಹೇಳಿದನು. ಆಗ ದ್ರಾಕ್ಷಾಲತೆಗಳ ಪ್ರಥಮ ಫಲದ ಕಾಲವಾಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಭೂಮಿ ಸಾರವತ್ತಾದುದೋ ನಿಸ್ಸಾರವಾದುದೋ ಮರಗಿಡಗಳಿಂದ ಕೂಡಿದೆಯೋ ಬೈಲುಪ್ರದೇಶವಾಗಿದೆಯೋ ನೋಡಿ ತಿಳಿದುಕೊಳ್ಳಿ. ಅದಲ್ಲದೆ, ಆ ನಾಡಿನ ಉತ್ಪನ್ನಗಳಲ್ಲಿ ಕೆಲವನ್ನು ಪ್ರಯಾಸಪಟ್ಟು ತರಬೇಕು.” ಅದು ದ್ರಾಕ್ಷೆಯ ಪ್ರಥಮ ಫಲಕಾಲವಾಗಿತ್ತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ಭೂಮಿಯು ಸಾರವಾದದ್ದೋ ಅಥವಾ ನಿಸ್ಸಾರವಾದದ್ದೋ, ಮರಗಳನ್ನು ಹೊಂದಿದೆಯೋ ಅಥವಾ ಇಲ್ಲವೋ ಎಂಬುದನ್ನು ತಿಳಿದುಕೊಳ್ಳಿ. ಅದಲ್ಲದೆ ಆ ದೇಶದ ಉತ್ಪನ್ನಗಳಲ್ಲಿ ಕೆಲವನ್ನು ತರಲು ಪ್ರಯತ್ನ ಮಾಡಿ” ಎಂದು ಹೇಳಿದನು. (ಆಗ ದ್ರಾಕ್ಷಾಲತೆಗಳ ಪ್ರಥಮ ಫಲದ ಕಾಲವಾಗಿತ್ತು.) ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಆ ಭೂಮಿಯು ಎಂಥಾದ್ದೋ? ಸಾರವಾದದ್ದೋ? ನಿಸ್ಸಾರವಾದದ್ದೋ? ಮರಗಳುಳ್ಳದ್ದೋ? ಇಲ್ಲದಿರುವುದೋ? ಎಂದು ನೋಡಿರಿ. ನೀವು ಧೈರ್ಯವುಳ್ಳವರಾಗಿದ್ದು, ಆ ಭೂಮಿಯ ಫಲವನ್ನು ತರಬೇಕು,” ಎಂದನು. ಆ ಕಾಲವು ಪ್ರಥಮ ದ್ರಾಕ್ಷಿ ಹಣ್ಣುಗಳ ಕಾಲವಾಗಿತ್ತು. ಅಧ್ಯಾಯವನ್ನು ನೋಡಿ |