Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 13:21 - ಕನ್ನಡ ಸತ್ಯವೇದವು J.V. (BSI)

21 ಅವರು ಬೆಟ್ಟವನ್ನು ಹತ್ತಿ ಚಿನ್ ಅರಣ್ಯದಿಂದ ಹಮಾತಿನ ದಾರಿಯಲ್ಲಿರುವ ರೆಹೋಬಿನವರೆಗೆ ಆ ದೇಶವನ್ನು ಸಂಚರಿಸಿ ನೋಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಅವರು ಬೆಟ್ಟವನ್ನು ಹತ್ತಿ ಚಿನ್ ಅರಣ್ಯದಿಂದ ಹಮಾತಿನ ದಾರಿಯಲ್ಲಿರುವ ರೆಹೋಬಿನ ವರೆಗೆ ಆ ದೇಶವನ್ನು ಸಂಚರಿಸಿ ನೋಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಅವರು ಬೆಟ್ಟವನ್ನು ಹತ್ತಿ ಚಿನ್ ಮರುಭೂಮಿಯಿಂದ ಹಮಾತಿನ ದಾರಿಯಲ್ಲಿರುವ ರೆಹೋಬಿನವರೆಗೆ ಆ ನಾಡನ್ನು ಸಂಚರಿಸಿ ನೋಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಅವರು ಬೆಟ್ಟದ ಸೀಮೆಗೆ ಹತ್ತಿಹೋಗಿ, ಚಿನ್ ಮರುಭೂಮಿಯಿಂದಿಡಿದು ಲೆಬೊಹಮಾತಿನ ಬಳಿಯಲ್ಲಿರುವ ರೆಹೋಬಿನವರೆಗೂ ದೇಶದ ವಿಷಯಗಳನ್ನು ಸಂಗ್ರಹಿಸಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಆಗ ಅವರು ಏರಿಹೋಗಿ ಚಿನ್ ಎಂಬ ಮರುಭೂಮಿಯಿಂದ ಹಮಾತಿನ ಕಡೆಯಲ್ಲಿರುವ ರೆಹೋಬಿನವರೆಗೂ ದೇಶವನ್ನು ಸಂಚರಿಸಿ ನೋಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 13:21
15 ತಿಳಿವುಗಳ ಹೋಲಿಕೆ  

ಎಚ್ಯೋನ್‍ಗೆಬೆರಿನಿಂದ ಹೊರಟು ಚಿನ್ ಅರಣ್ಯದಲ್ಲಿ ಇಳಿದುಕೊಂಡರು; ಅದು ಕಾದೇಶ್.


ಮೊದಲನೆಯ ತಿಂಗಳಲ್ಲಿ ಇಸ್ರಾಯೇಲ್ಯರ ಸರ್ವಸಮೂಹದವರು ಚಿನ್ ಎಂಬ ಅರಣ್ಯಕ್ಕೆ ಬಂದು ಕಾದೇಶಿನಲ್ಲಿ ಇಳಿದುಕೊಂಡರು. ಅಲ್ಲಿ ವಿುರ್ಯಾಮಳು ತೀರಿಹೋದಳು; ಆಕೆಯ ಶವವನ್ನು ಸಮಾಧಿಮಾಡಿದರು.


ಚಿನ್ ಅರಣ್ಯದಲ್ಲಿ ಇಸ್ರಾಯೇಲ್ಯರ ಸಮೂಹದವರು ನನ್ನೊಡನೆ ವಿವಾದಿಸಿದಾಗ ನೀವಿಬ್ಬರೂ ನನ್ನ ಗೌರವವನ್ನು ಅವರ ಎದುರಿನಲ್ಲಿ ಕಾಪಾಡದೆ ನನ್ನ ಆಜ್ಞೆಯನ್ನು ಉಲ್ಲಂಘಿಸಿದದರಿಂದ ಆ ದೇಶವನ್ನು ಸೇರಬಾರದು ಎಂದು ಹೇಳಿದನು. ಚಿನ್ ಅರಣ್ಯದಲ್ಲಿ ಮೆರೀಬಾ ಕಾದೇಶಿನ ಪ್ರವಾಹದ ಹತ್ತಿರ ನಡೆದ ಸಂಗತಿಯನ್ನು ಸೂಚಿಸಿ ಇದನ್ನು ಹೇಳಿದನು.


ಎದೋಮ್ ಸೀಮೆಯೂ ಚಿನ್ ಅರಣ್ಯವೂ ಮೇರೆಯಾಗಿರುವ ಕಾನಾನ್ ದೇಶದ ದಕ್ಷಿಣ ಭಾಗವು ಯೆಹೂದ ಕುಲದ ಗೋತ್ರಗಳಿಗೆ ಸ್ವಾಸ್ತ್ಯವಾಗಿ ಸಿಕ್ಕಿತು.


ಗೆಬಾಲ್ಯರ ಸೀಮೆ, ಹೆರ್ಮೋನ್ ಬೆಟ್ಟದ ಬುಡದಲ್ಲಿರುವ ಬಾಲ್ಗಾದಿನಿಂದ ಹಾಮಾತಿನ ದಾರಿಯವರೆಗಿರುವ ಲೆಬನೋನಿನ ಪೂರ್ವಪ್ರದೇಶ,


ಕಲ್ನೆಗೆ ಹೋಗಿ ನೋಡಿರಿ, ಅಲ್ಲಿಂದ ಮಹಾ ಪಟ್ಟಣವಾದ ಹಮಾತಿಗೆ ತೆರಳಿರಿ, ಆಮೇಲೆ ಫಿಲಿಷ್ಟಿಯರ ಗತ್ ಊರಿಗೆ ಇಳಿಯಿರಿ; ಅವು ಈ ರಾಜ್ಯಗಳಿಗಿಂತ ಶ್ರೇಷ್ಠವೋ? ಅವುಗಳ ಪ್ರಾಂತವು ನಿಮ್ಮ ಪ್ರಾಂತಕ್ಕಿಂತ ದೊಡ್ಡದೋ?


ದಾವೀದನು ಹದದೆಜೆರನ ಸೈನ್ಯವನ್ನು ಸೋಲಿಸಿದನೆಂಬ ವರ್ತಮಾನವು ಹಮಾತಿನ ಅರಸನಾದ ತೋವಿಗೆ ಮುಟ್ಟಿತು.


ನೀವಿಬ್ಬರೂ ಚಿನ್ ಅರಣ್ಯದಲ್ಲಿನ ಮೆರೀಬಾ ಕಾದೇಶಿನಲ್ಲಿ ನೀರು ಹೊರಟ ಸ್ಥಳದ ಬಳಿಯಲ್ಲಿ ಇಸ್ರಾಯೇಲ್ಯರ ಮಧ್ಯದಲ್ಲಿ ನನಗೆ ವಿರೋಧವಾಗಿ ದ್ರೋಹಮಾಡಿ ಅವರ ಮುಂದೆ ನನ್ನ ಗೌರವವನ್ನು ಕಾಪಾಡದೆ ಹೋದದರಿಂದ ಹೀಗೆ ಆಗಬೇಕು.


ಅವರು ಹೋಗಿ ಆ ಬೆಟ್ಟದ ಸೀಮೆಯನ್ನು ಹತ್ತಿ ಎಷ್ಕೋಲೆಂಬ ತಗ್ಗಿನ ಬಳಿಗೆ ಬಂದು ಆ ಪ್ರದೇಶವನ್ನು ಸಂಚರಿಸಿ ನೋಡಿ ಅಲ್ಲಿನ ಹಣ್ಣುಗಳಲ್ಲಿ ಕೆಲವನ್ನು ತಂದು ತೋರಿಸಿ -


ದಮಸ್ಕವನ್ನು ಕುರಿತದ್ದು. ಹಮಾತಿಗೂ ಅರ್ಪಾದಿಗೂ ಆಶಾಭಂಗವಾಯಿತು; ಅವು ಅಶುಭಸಮಾಚಾರವನ್ನು ಕೇಳಿ ಕರಗಿಹೋಗಿವೆ; ಸಮುದ್ರಕ್ಕೆ ತಲ್ಲಣಹತ್ತಿದೆ, ಸುಮ್ಮನಿರಲಾರದು.


ಅನಂತರ ಕಸ್ದೀಯರು ಅವನನ್ನು ಹಮಾತ್ ಪ್ರದೇಶದ ರಿಬ್ಲದಲ್ಲಿದ್ದ ತಮ್ಮ ಅರಸನ ಬಳಿಗೆ ತೆಗೆದುಕೊಂಡು ಬರಲು ಆ ಅರಸನು ಅವನಿಗೆ ಶಿಕ್ಷೆಯನ್ನು ವಿಧಿಸಿ


ಹಮಾತ್, ಬೇರೋತ, ದಮಸ್ಕದ ಎಲ್ಲೆಗೂ ಹಮಾತಿನ ಎಲ್ಲೆಗೂ ನಡುವಣ ಸಿಬ್ರಯಿಮ್ ಎಂಬ ಊರುಗಳ ಮೇಲೆ ಹವ್ರಾನಿನ ಸರಹದ್ದಿಗೆ ಹತ್ತಿರವಾದ ಹಾಚೇರ್ ಹತ್ತೀಕೋನಿನ ಬಳಿಯಲ್ಲಿ ಮುಗಿಯಬೇಕು.


ಆ ಪರ್ವತದಿಂದ ಹಮಾತಿನ ದಾರಿಗೂ ಗುರುತು ಹಾಕಿಕೊಳ್ಳಬೇಕು.


ಆ ಪಟ್ಟಣವು ಚೀದೋನಿಗೆ ದೂರವಾಗಿದ್ದದ್ದರಿಂದಲೂ ಸಮೀಪದಲ್ಲಿ ಪರಿಚಯಸ್ಥರಾರೂ ಇಲ್ಲದ್ದರಿಂದಲೂ ಅವರಿಗೆ ಸಹಾಯದೊರಕಲಿಲ್ಲ. ಬೇತ್‍ರೆಹೋಬಿನ ತಗ್ಗಿನಲ್ಲಿದ್ದ ಈ ಪಟ್ಟಣವನ್ನು ದಾನ್ಯರು ತಿರಿಗಿ ಕಟ್ಟಿಸಿ ಅದರಲ್ಲಿ ವಾಸಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು