Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 13:23 - ಕನ್ನಡ ಸತ್ಯವೇದವು J.V. (BSI)

23 ಅವರು ಎಷ್ಕೋಲ್ ಎಂಬ ತಗ್ಗಿಗೆ ಬಂದು ಅಲ್ಲಿ ದ್ರಾಕ್ಷಾಲತೆಯಿಂದ ಒಂದೇ ಗೊಂಚಲುಳ್ಳ ಕೊಂಬೆಯನ್ನು ಕೊಯಿದರು; ಇಬ್ಬರು ಅದನ್ನು ಅಡ್ಡದಂಡಿಗೆಯಿಂದ ಹೊತ್ತುಕೊಂಡು ಬಂದರು. ಕೆಲವು ದಾಳಿಂಬ ಹಣ್ಣುಗಳನ್ನೂ ಅಂಜೂರದ ಹಣ್ಣುಗಳನ್ನೂ ತಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಅವರು ಎಷ್ಕೋಲ್ ಎಂಬ ತಗ್ಗಿಗೆ ಬಂದು ಅಲ್ಲಿ ದ್ರಾಕ್ಷಾಲತೆಯಿಂದ ಒಂದೇ ಗೊಂಚಲುಳ್ಳ ಕೊಂಬೆಯನ್ನು ಕೊಯ್ದರು; ಇಬ್ಬರು ಅದನ್ನು ಅಡ್ಡಕೋಲಿನಿಂದ ಹೊತ್ತುಕೊಂಡು ಬಂದರು. ಕೆಲವು ದಾಳಿಂಬೆ ಮತ್ತು ಅಂಜೂರದ ಹಣ್ಣುಗಳನ್ನೂ ತಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಎಷ್ಕೋಲ್ ಎಂಬ ತಗ್ಗಿಗೆ ಬಂದು ಅಲ್ಲಿ ದ್ರಾಕ್ಷಿ ಹಣ್ಣಿನ ಗೊಂಚಲಿದ್ದ ಒಂದು ಕೊಂಬೆಯನ್ನು ಕೊಯ್ದರು. ಅದನ್ನು ಅಡ್ಡದಂಡಿಗೆಯಲ್ಲಿ ಇಬ್ಬರು ಹೊತ್ತು ತಂದರು. ಕೆಲವು ದಾಳಿಂಬೆ ಹಣ್ಣುಗಳನ್ನೂ ಅಂಜೂರದ ಹಣ್ಣುಗಳನ್ನು ತಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಬಳಿಕ ಅವರು ಎಷ್ಕೋಲ್ ಕಣಿವೆಗೆ ಹೋದರು. ಅಲ್ಲಿ ಅವರು ದ್ರಾಕ್ಷಾಲತೆಯಿಂದ ಒಂದು ಕೊಂಬೆಯನ್ನು ಕಡಿದರು. ಆ ಕೊಂಬೆಯಲ್ಲಿ ದ್ರಾಕ್ಷೆಯ ಗೊಂಚಲಿತ್ತು. ಅವರು ಅದನ್ನು ಒಂದು ಕೋಲಿಗೆ ಕಟ್ಟಿ ಇಬ್ಬರು ಅದನ್ನು ಹೊತ್ತುಕೊಂಡು ಬಂದರು. ಕೆಲವು ದಾಳಿಂಬೆ ಹಣ್ಣುಗಳನ್ನು ಮತ್ತು ಅಂಜೂರದ ಹಣ್ಣುಗಳನ್ನು ಹೊತ್ತುತಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಅವರು ಎಷ್ಕೋಲ್ ಹಳ್ಳದವರೆಗೂ ಬಂದು, ಅಲ್ಲಿ ದ್ರಾಕ್ಷಿ ಹಣ್ಣುಗಳ ಗೊಂಚಲಿನ ಕೊಂಬೆಯನ್ನು ಕೊಯ್ದು, ಅದನ್ನು ಅಡ್ಡ ಕೋಲಿನ ಮೇಲೆ ಇಬ್ಬರಾಗಿ ಹೊತ್ತುಕೊಂಡು ಹೋದರು. ಇದಲ್ಲದೆ ದಾಳಿಂಬೆ, ಅಂಜೂರ ಹಣ್ಣುಗಳನ್ನು ತೆಗೆದುಕೊಂಡು ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 13:23
6 ತಿಳಿವುಗಳ ಹೋಲಿಕೆ  

ಅವರು ಎಷ್ಕೋಲ್ ತಗ್ಗಿಗೆ ಬಂದು ಆ ದೇಶವನ್ನು ನೋಡಿ ಇಸ್ರಾಯೇಲ್ಯರಿಗೆ ಅಧೈರ್ಯವನ್ನು ಹುಟ್ಟಿಸಿದದರಿಂದ ಇಸ್ರಾಯೇಲ್ಯರು ತಮಗೆ ಯೆಹೋವನು ವಾಗ್ದಾನಮಾಡಿದ ದೇಶಕ್ಕೆ ಹೋಗಲೇ ಇಲ್ಲ.


ಇಸ್ರಾಯೇಲ್ಯರು ಅಲ್ಲಿ ಆ ದ್ರಾಕ್ಷೆಯ ಗೊಂಚಲನ್ನು ಕೊಯಿದದರಿಂದಲೇ ಆ ಸ್ಥಳಕ್ಕೆ ಎಷ್ಕೋಲ್ ಎಂದು ಹೆಸರುಂಟಾಯಿತು.


ಅನಂತರ ಸಂಸೋನನು ಸೋರೇಕ್ ತಗ್ಗಿನಲ್ಲಿ ವಾಸವಾಗಿದ್ದ ದೆಲೀಲಾ ಎಂಬ ಹೆಸರುಳ್ಳ ಒಬ್ಬ ಸ್ತ್ರೀಯಲ್ಲಿ ಮೋಹಿತನಾದನು.


ತಪ್ಪಿಸಿಕೊಂಡವನೊಬ್ಬನು ಇಬ್ರಿಯನಾದ ಅಬ್ರಾಮನ ಬಳಿಗೆ ಬಂದು ಇದನ್ನು ತಿಳಿಸಿದನು. ಅಬ್ರಾಮನು ಅಮೋರಿಯನಾದ ಮಮ್ರೆಯನ ತೋಪಿನ ಬಳಿಯಲ್ಲಿ ವಾಸವಾಗಿದ್ದನು. ಮಮ್ರೆಯನು ಎಷ್ಕೋಲ ಆನೇರರಿಗೆ ಸಹೋದರನು; ಇವರಿಬ್ಬರಿಗೂ ಅಬ್ರಾಮನಿಗೂ ಒಡಂಬಡಿಕೆಯಿತ್ತು.


ಆ ದೇಶದಲ್ಲಿ ಗೋದಿ, ಜವೆಗೋದಿ, ದ್ರಾಕ್ಷೆ, ಅಂಜೂರ, ದಾಳಿಂಬ ಇವುಗಳು ಬೆಳೆಯುತ್ತವೆ; ಎಣ್ಣೆ ಮರಗಳೂ ಜೇನೂ ಸಿಕ್ಕುತ್ತವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು