Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 13:27 - ಕನ್ನಡ ಸತ್ಯವೇದವು J.V. (BSI)

27 ಅವರು ಮೋಶೆಗೆ - ನೀನು ನಮ್ಮನ್ನು ಕಳುಹಿಸಿದ ದೇಶಕ್ಕೆ ಹೋದೆವು; ಅದು ಹಾಲೂ ಜೇನೂ ಹರಿಯುವ ದೇಶವೇ; ಅಲ್ಲಿನ ಹಣ್ಣುಗಳು ಇಂಥವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಅವರು ಮೋಶೆಗೆ, “ನೀನು ನಮ್ಮನ್ನು ಕಳುಹಿಸಿದ ದೇಶಕ್ಕೆ ಹೋದೆವು; ಅದು ನಿಜವಾಗಿಯೂ ಹಾಲೂ ಮತ್ತು ಜೇನೂ ಹರಿಯುವ ದೇಶವೇ; ಅಲ್ಲಿನ ಹಣ್ಣುಗಳು ಇಂಥವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಮೋಶೆಗೆ, “ನೀವು ನಮ್ಮನ್ನು ಕಳಿಸಿದ ನಾಡಿಗೆ ಹೋಗಿದ್ದೆವು. ಅದು ಹಾಲು-ಜೇನು ಹರಿಯುವಂಥ ನಾಡು. ಅಲ್ಲಿನ ಹಣ್ಣುಹಂಪಲುಗಳು ಇಂಥವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಜನರು ಮೋಶೆಗೆ, “ನೀನು ಕಳುಹಿಸಿದ ದೇಶಕ್ಕೆ ನಾವು ಹೋಗಿ ಸಂಚರಿಸಿ ನೋಡಿದೆವು. ಅದು ಹಾಲೂ ಜೇನೂ ಹರಿಯುವ ದೇಶವಾಗಿದೆ. ಇಗೋ, ಹಣ್ಣುಗಳಲ್ಲಿ ಕೆಲವು ಇಲ್ಲಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಅವರು ಮೋಶೆಗೆ, “ನೀನು ನಮ್ಮನ್ನು ಕಳುಹಿಸಿದ ದೇಶಕ್ಕೆ ಹೋದೆವು. ಅದು ನಿಜವಾಗಿಯೂ ಹಾಲೂ ಜೇನೂ ಹರಿಯುವ ದೇಶವೇ. ಅದರ ಫಲವು ಇವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 13:27
22 ತಿಳಿವುಗಳ ಹೋಲಿಕೆ  

ಆದಕಾರಣ ಅವರನ್ನು ಐಗುಪ್ತ್ಯರ ಕೈಯೊಳಗಿಂದ ತಪ್ಪಿಸುವದಕ್ಕೂ ಆ ದೇಶದಿಂದ ಬಿಡಿಸಿ ಹಾಲೂ ಜೇನೂ ಹರಿಯುವ ವಿಸ್ತಾರವಾದ ಒಳ್ಳೇ ದೇಶಕ್ಕೆ ಅಂದರೆ ಕಾನಾನ್ಯರೂ ಹಿತ್ತಿಯರೂ ಅಮೋರಿಯರೂ ಪೆರಿಜೀಯರೂ ಹಿವ್ವಿಯರೂ ಯೆಬೂಸಿಯರೂ ವಾಸವಾಗಿರುವ ದೇಶಕ್ಕೆ ನಡಿಸಿಕೊಂಡು ಹೋಗುವದಕ್ಕೂ ಇಳಿದುಬಂದಿದ್ದೇನೆ.


ಐಗುಪ್ತದೇಶದಲ್ಲಿ ನಿಮಗುಂಟಾಗಿರುವ ದುರವಸ್ಥೆಯಿಂದ ನಿಮ್ಮನ್ನು ತಪ್ಪಿಸಿ ಹಾಲೂ ಜೇನೂ ಹರಿಯುವ ದೇಶಕ್ಕೆ ಅಂದರೆ ಕಾನಾನ್ಯರೂ ಹಿತ್ತಿಯರೂ ಅಮೋರಿಯರೂ ಪೆರಿಜೀಯರೂ ಹಿವ್ವಿಯರೂ ಯೆಬೂಸಿಯರೂ ವಾಸವಾಗಿರುವ ದೇಶಕ್ಕೆ ಬರಮಾಡುವೆನೆಂದು ನಿರ್ಣಯಿಸಿದ್ದೇನೆ ಎಂಬದಾಗಿ ನನಗೆ ಹೇಳಿದನೆಂದು ತಿಳಿಸು.


ಯೆಹೋವನು ನಿಮ್ಮ ಪಿತೃಗಳಿಗೆ ಪ್ರಮಾಣವಾಗಿ ಹೇಳಿದಂತೆ ನಿಮ್ಮನ್ನು ಹಾಲೂ ಜೇನೂ ಹರಿಯುವ ದೇಶಕ್ಕೆ ಅಂದರೆ ಕಾನಾನ್ಯರೂ ಹಿತ್ತಿಯರೂ ಅಮೋರಿಯರೂ ಹಿವ್ವಿಯರೂ ಯೆಬೂಸಿಯರೂ ವಾಸವಾಗಿರುವ ದೇಶಕ್ಕೆ ಕರತಂದು, ಅದನ್ನು ನಿಮಗೆ ಕೊಟ್ಟಾಗ ನೀವು ಈ ತಿಂಗಳಲ್ಲಿ ಈ ಆಚಾರವನ್ನು ನಡಿಸಬೇಕು.


ನಾನು ಪ್ರಮಾಣಮಾಡಿಕೊಟ್ಟ ದೇಶದಲ್ಲಿ ಇವರು ಸೇರುವದಕ್ಕಿಂತ ಮುಂಚಿತವಾಗಿಯೇ ಇವರು ಈಗಲೂ ಮಾಡುವ ದುರಾಲೋಚನೆಗಳನ್ನು ನಾನು ಬಲ್ಲೆ. ನಾನು ಇವರ ಪಿತೃಗಳಿಗೆ ಪ್ರಮಾಣಮಾಡಿದಂತೆ ಹಾಲೂ ಜೇನೂ ಹರಿಯುವ ದೇಶಕ್ಕೆ ಇವರನ್ನು ಸೇರಿಸಿದ ಮೇಲೆ ಇವರು ಚೆನ್ನಾಗಿ ಉಂಡು ಕೊಬ್ಬಿದವರಾದಾಗ ಇತರ ದೇವರುಗಳನ್ನು ಅವಲಂಬಿಸಿ ಸೇವಿಸಿ ನನ್ನನ್ನು ತಾತ್ಸಾರಮಾಡಿ ನನ್ನ ನಿಬಂಧನೆಯನ್ನು ಮೀರುವರು. ಅನಂತರ ಅನೇಕ ಕಷ್ಟಗಳೂ ವಿಪತ್ತುಗಳೂ ಸಂಭವಿಸಿದಾಗ ಈ ಪದ್ಯವು ಇವರ ಸಂತತಿಯವರ ಬಾಯಲ್ಲಿ ಇದ್ದುಕೊಂಡು ಅವರ ಮುಂದೆ ಸಾಕ್ಷಿಕೊಡುವದು ಎಂದು ಹೇಳಿದನು.


ಅದು ಹಾಲೂ ಜೇನೂ ಹರಿಯುವ ದೇಶವೇ. ಆದರೆ ನಾನೇ ನಿಮ್ಮ ಸಂಗಡ ಬರುವದಿಲ್ಲ; ನೀವು ನನ್ನ ಆಜ್ಞೆಗೆ ಬೊಗ್ಗದವರಾದ್ದರಿಂದ ನಾನು ದಾರಿಯಲ್ಲಿ ನಿಮ್ಮನ್ನು ಸಂಹರಿಸೇನು ಅಂದನು.


ನಮ್ಮನ್ನು ಬಿಡಿಸಿ ಐಗುಪ್ತದೇಶದಿಂದ ಕರತಂದು ಹಾಲೂ ಜೇನೂ ಹರಿಯುವ ಈ ದೇಶವನ್ನು ನಮಗೆ ಕೊಟ್ಟಿದ್ದಾನೆ.


ಮತ್ತು ಯೆಹೋವನು ನಿಮ್ಮ ಪಿತೃಗಳಿಗೂ ಅವರ ಸಂತತಿಗೂ ಕೊಡುತ್ತೇನೆಂದು ಪ್ರಮಾಣ ಮಾಡಿದ ಆ ದೇಶದಲ್ಲಿ ನೀವು ಬಹುಕಾಲ ಬದುಕಿಕೊಳ್ಳುವಿರಿ; ಅದು ಹಾಲೂ ಜೇನೂ ಹರಿಯುವ ದೇಶ.


ಆದದರಿಂದ ಇಸ್ರಾಯೇಲ್ಯರೇ, ನಿಮ್ಮ ಪಿತೃಗಳ ದೇವರಾದ ಯೆಹೋವನು ವಾಗ್ದಾನಮಾಡಿದ ಪ್ರಕಾರ ಹಾಲೂ ಜೇನೂ ಹರಿಯುವ ಆ ದೇಶದಲ್ಲಿ ನಿಮಗೆ ಶುಭವುಂಟಾಗುವದಕ್ಕೂ ನೀವು ಬಹಳವಾಗಿ ಹೆಚ್ಚುವದಕ್ಕೂ ಈ ಆಜ್ಞೆಗಳನ್ನು ಲಕ್ಷ್ಯವಿಟ್ಟು ಕೇಳಿ ಅನುಸರಿಸಲೇಬೇಕು.


ಅದು ಹಾಲೂ ಜೇನೂ ಹರಿಯುವ ದೇಶ; ಯೆಹೋವನು ನಮ್ಮನ್ನು ಮೆಚ್ಚಿಕೊಂಡರೆ ಅದರಲ್ಲಿ ನಮ್ಮನ್ನು ಸೇರಿಸಿ ಅದನ್ನು ನಮ್ಮ ಸ್ವಾಧೀನಕ್ಕೆ ಕೊಡುವನು;


ಆಮೇಲೆ ಸಕಲದೇಶಶಿರೋಮಣಿಯಾದ ಯಾವ ದೇಶವನ್ನು ಅವರಿಗೆ ವಾಗ್ದಾನ ಮಾಡಿದೆನೋ ಹಾಲೂ ಜೇನೂ ಹರಿಯುವ ಆ ದೇಶಕ್ಕೆ ನಿಮ್ಮನ್ನು ಸೇರಿಸೆನೆಂದು ಅರಣ್ಯದಲ್ಲಿ ಅವರಿಗೆ ಪ್ರಮಾಣ ಮಾಡಿದೆನು;


ಸಕಲದೇಶ ಶಿರೋಮಣಿಯಾದ ದೇಶವನ್ನು ನಿಮಗಾಗಿ ನೋಡಿದ್ದೇನೆ; ನಾನು ನಿಮ್ಮನ್ನು ಐಗುಪ್ತದೇಶದೊಳಗಿಂದ ಉದ್ಧರಿಸಿ ಹಾಲೂ ಜೇನೂ ಹರಿಯುವ ಆ ದೇಶಕ್ಕೆ ಸೇರಿಸುವೆನು ಎಂದು ಪ್ರಮಾಣಮಾಡಿ


ಅವರ ಪಿತೃಗಳಿಗೆ ವಾಗ್ದಾನಮಾಡಿದ ಪ್ರಕಾರ ಹಾಲೂ ಜೇನೂ ಹರಿಯುವ ಈ ದೇಶವನ್ನು ಅವರಿಗೆ ಅನುಗ್ರಹಿಸಿದಿ;


ನಾನು ನಿಮ್ಮ ದೇವರಾಗಿದ್ದು ಹಾಲೂ ಜೇನೂ ಹರಿಯುವ ದೇಶವನ್ನು ಕೊಡುವದಾಗಿ ನಿಮ್ಮ ಮೂಲಪಿತೃಗಳಿಗೆ ಮಾಡಿದ ವಾಗ್ದಾನವನ್ನು ನೆರವೇರಿಸುವೆನು ಎಂದು ಹೇಳಿದೆನಷ್ಟೆ; ಆ ನನ್ನ ಮಾತು ಈಗ ಕೈಗೂಡಿದೆ. ನಾನು ಅವರಿಗೆ ವಿಧಿಸಿದ ನಿಬಂಧನವಾಕ್ಯಗಳಿಗೆ ಕಿವಿಗೊಡದವನು ಶಾಪಗ್ರಸ್ತನಾಗಲಿ ಎಂಬದಾಗಿ ಇಸ್ರಾಯೇಲ್ಯರ ದೇವರಾದ ಯೆಹೋವನು ನುಡಿಯುತ್ತಾನೆಂದೇ ಸಾರಬೇಕು. ಆಗ ನಾನು - ಅಪ್ಪಣೆಯಂತಾಗಲಿ, ಯೆಹೋವನೇ, ಎಂದು ಉತ್ತರಕೊಟ್ಟೆನು.


ಐಗುಪ್ತದಿಂದ ಬಂದ ಇಸ್ರಾಯೇಲ್ಯರು ಯೆಹೋವನ ಮಾತನ್ನು ಕೇಳದೆ ಹೋದದರಿಂದ ಅವರು ತಮ್ಮ ಭಟರೆಲ್ಲರೂ ಸಂಹಾರವಾಗುವ ತನಕ ನಾಲ್ವತ್ತು ವರುಷ ಅರಣ್ಯದಲ್ಲಿ ಅಲೆಯುತ್ತಿರಬೇಕಾಯಿತು. ಯೆಹೋವನು ತಾನು ಅವರ ಪಿತೃಗಳಿಗೆ ವಾಗ್ದಾನ ಮಾಡಿದ್ದ ಹಾಲೂ ಜೇನೂ ಹರಿಯುವ ದೇಶದಲ್ಲಿ ಅವರನ್ನು ಸೇರಿಸುವದಿಲ್ಲವೆಂದು ಆಣೆಯಿಟ್ಟನು.


ನಿಮಗಾದರೋ - ನೀವು ಅವರ ದೇಶವನ್ನು ಸ್ವಾಧೀನಪಡಿಸಿಕೊಳ್ಳುವಿರಿ; ಹಾಲೂ ಜೇನೂ ಹರಿಯುವಂಥ ಆ ದೇಶವನ್ನು ನಿಮಗೆ ಸ್ವದೇಶವಾಗುವದಕ್ಕೆ ಕೊಡುವೆನು ಎಂದು ನಾನು ಮಾತುಕೊಟ್ಟೆನಲ್ಲವೇ. ನಾನು ನಿಮ್ಮನ್ನು ಇತರ ಜನಾಂಗಗಳಿಂದ ಪ್ರತ್ಯೇಕಿಸಿದ ನಿಮ್ಮ ದೇವರಾದ ಯೆಹೋವನು.


ಇಸ್ರಾಯೇಲ್ಯರ ಸರ್ವಸಮೂಹದವರಿಗೆ ಹೀಗಂದರು - ನಾವು ಸಂಚರಿಸಿ ನೋಡಿದ ದೇಶವು ಅತ್ಯುತ್ತಮವಾದದ್ದು;


ಅಷ್ಟು ಮಾತ್ರವೇ ಅಲ್ಲ, ಹಾಲೂ ಜೇನೂ ಹರಿಯುವ ದೇಶಕ್ಕೆ ನಮ್ಮನ್ನು ಸೇರಿಸಲಿಲ್ಲವಲ್ಲಾ; ಹೊಲಗಳನ್ನೂ ದ್ರಾಕ್ಷೇತೋಟಗಳನ್ನೂ ನಮಗೆ ಸ್ವಂತಕ್ಕೆ ಕೊಡಲೇ ಇಲ್ಲ ; ಈ ಜನರ ಕಣ್ಣಿಗೆ ಮಣ್ಣು ಹಾಕಬೇಕೆಂದಿದ್ದೀಯೋ? ನಾವು ಬರುವದಿಲ್ಲ ಎಂದು ಹೇಳಿದರು.


ಅವರು ಕೋಟೆ ಕೊತ್ತಲುಗಳುಳ್ಳ ಪಟ್ಟಣಗಳನ್ನೂ ಸಾರವುಳ್ಳ ಭೂವಿುಯನ್ನೂ ಸಮಸ್ತ ವಿಧವಾದ ಉತ್ತಮವಸ್ತುಗಳಿಂದ ತುಂಬಿದ ಮನೆಗಳನ್ನೂ ತೋಡಿದ ಬಾವಿಗಳನ್ನೂ ದ್ರಾಕ್ಷೇತೋಟ, ಎಣ್ಣೇಮರಗಳ ತೋಪು, ಎಷ್ಟೋ ಹಣ್ಣಿನ ಮರ ಇವುಗಳನ್ನೂ ವಶಮಾಡಿಕೊಂಡು ಚೆನ್ನಾಗಿ ತಿಂದು ತೃಪ್ತರಾಗಿ ಕೊಬ್ಬಿ ನೀನು ಕೊಟ್ಟ ಸಮೃದ್ಧಿಯಲ್ಲಿ ಆನಂದಿಸುತ್ತಿದ್ದರು.


ನಾವು ಬರುವದಿಲ್ಲ, ನೀನು ಹಾಲೂ ಜೇನೂಹರಿಯವ ದೇಶದಿಂದ ನಮ್ಮನ್ನು ಕರಕೊಂಡು ಬಂದು ಮರಳುಕಾಡಿನಲ್ಲಿ ಸಾಯಿಸುವದು ಅಲ್ಪಕಾರ್ಯವೆಂದು ಎಣಿಸಿ ನಮ್ಮ ಮೇಲೆ ದೊರೆತನ ಮಾಡಬೇಕೆಂದು ಕೋರುತ್ತೀಯೋ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು