Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 13:29 - ಕನ್ನಡ ಸತ್ಯವೇದವು J.V. (BSI)

29 ದಕ್ಷಿಣ ಸೀಮೆಯಲ್ಲಿ ಅಮಾಲೇಕ್ಯರೂ ಬೆಟ್ಟದ ಸೀಮೆಯಲ್ಲಿ ಹಿತ್ತಿಯರು, ಯೆಬೂಸಿಯರು, ಅಮೋರಿಯರು ಇವರೂ ಸಮುದ್ರತೀರದಲ್ಲಿ ಮತ್ತು ಯೊರ್ದನ್ ಹೊಳೆಯ ಬಳಿಯಲ್ಲಿ ಕಾನಾನ್ಯರೂ ವಾಸವಾಗಿದ್ದಾರೆ ಎಂದು ತಿಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ದಕ್ಷಿಣ ಸೀಮೆಯಲ್ಲಿ ಅಮಾಲೇಕ್ಯರು, ಬೆಟ್ಟದ ಸೀಮೆಯಲ್ಲಿ ಹಿತ್ತಿಯರು, ಯೆಬೂಸಿಯರು, ಅಮೋರಿಯರು ಸಮುದ್ರತೀರದಲ್ಲಿ ಮತ್ತು ಯೊರ್ದನ್ ಹೊಳೆಯ ಬಳಿಯಲ್ಲಿ ಕಾನಾನ್ಯರೂ ವಾಸವಾಗಿದ್ದಾರೆ” ಎಂದು ತಿಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ದಕ್ಷಿಣ ಪ್ರಾಂತದಲ್ಲಿ ಅಮಾಲೇಕ್ಯರು, ಮಲೆನಾಡಿನಲ್ಲಿ ಹಿತ್ತಿಯರು ಯೆಬೂಸಿಯರು ಹಾಗು ಅಮೋರಿಯರು ಮತ್ತು ಸಮುದ್ರ ತೀರದಲ್ಲಿ ಹಾಗೂ ಜೋರ್ಡನ್ ನದಿಯ ಪರಿಸರದಲ್ಲಿ ಕಾನಾನ್ಯರು ವಾಸವಾಗಿದ್ದಾರೆ,” ಎಂದು ವರದಿ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ಅಮಾಲೇಕ್ಯರು ನೆಗೆವ್‌ನಲ್ಲಿ ವಾಸಿಸುತ್ತಾರೆ. ಹಿತ್ತಿಯರು, ಯೆಬೂಸಿಯರು ಮತ್ತು ಅಮೋರಿಯರು ಪರ್ವತ ಪ್ರದೇಶದಲ್ಲಿ ವಾಸಿಸುತ್ತಾರೆ. ಕಾನಾನ್ಯರು ಸಮುದ್ರ ತೀರದಲ್ಲಿಯೂ ಮತ್ತು ಯೋರ್ದನ್ ನದಿಯ ಉದ್ದಕ್ಕೂ ವಾಸಿಸುತ್ತಾರೆ” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ಅಮಾಲೇಕ್ಯರು ದೇಶದ ನೆಗೆವನಲ್ಲಿ ವಾಸವಾಗಿದ್ದಾರೆ. ಹಿತ್ತಿಯರೂ ಯೆಬೂಸಿಯರೂ ಅಮೋರಿಯರೂ ಪರ್ವತಗಳಲ್ಲಿಯೂ; ಕಾನಾನ್ಯರು ಸಮುದ್ರದ ಬಳಿಯಲ್ಲಿಯೂ ಯೊರ್ದನಿನ ತೀರದಲ್ಲಿಯೂ ವಾಸವಾಗಿದ್ದಾರೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 13:29
27 ತಿಳಿವುಗಳ ಹೋಲಿಕೆ  

ಅಲ್ಲಿ ಅಮಾಲೇಕ್ಯರೂ ಕಾನಾನ್ಯರೂ ನಿಮ್ಮ ಎದುರಿನಲ್ಲಿರುವದರಿಂದ ನೀವು ಅವರ ಕತ್ತಿಯಿಂದ ಸತ್ತೀರಿ; ನೀವು ಯೆಹೋವನ ಮಾತನ್ನು ಅನುಸರಿಸದೆ ತಿರುಗಿಬಿದ್ದ ಕಾರಣ ಆತನು ನಿಮ್ಮೊಂದಿಗೆ ಇರುವದಿಲ್ಲ ಎಂದು ಹೇಳಿದನು.


ಇವರು ಬೀಜ ಬಿತ್ತಿದ ತರುವಾಯ ವಿುದ್ಯಾನ್ಯರೂ ಅಮಾಲೇಕ್ಯರೂ ಮೂಡಣ ದೇಶದವರೂ ಇವರಿಗೆ ವಿರೋಧವಾಗಿ ದಂಡೆತ್ತಿ ಬಂದು ಇಳುಕೊಂಡು


ಇವರೆಲ್ಲಾ ಏಕಮನಸ್ಸಿನಿಂದ ಕೂಡಿ ನಿನಗೇ ವಿರೋಧವಾಗಿ ಒಳಸಂಚು ಮಾಡುತ್ತಾರಲ್ಲಾ;


ದಾವೀದನೂ ಅವನ ಜನರೂ ಮೂರನೆಯ ದಿನ ಚಿಕ್ಲಗ್ ಊರನ್ನು ಮುಟ್ಟಿದರು. ಅಷ್ಟರೊಳಗೆ ಅಮಾಲೇಕ್ಯರು ದಂಡೆತ್ತಿ ದಕ್ಷಿಣಪ್ರಾಂತಕ್ಕೂ ಚಿಕ್ಲಗ್ ಊರಿಗೂ ಬಂದು ಚಿಕ್ಲಗ್ ಊರನ್ನು ಸುಟ್ಟು ಹಾಳುಮಾಡಿ


ಇದಲ್ಲದೆ ಅವನು ಸುಲಿಗೆಮಾಡುವವರಾದ ಅಮಾಲೇಕ್ಯರಿಗೆ ವಿರೋಧವಾಗಿ ದಂಡೆತ್ತಿ ಹೋಗಿ ಅವರನ್ನು ಮುರಿಬಡಿದು ಇಸ್ರಾಯೇಲ್ಯರನ್ನು ಅವರ ಕೈಗೆ ಸಿಕ್ಕದಂತೆ ತಪ್ಪಿಸಿದನು.


ತರುವಾಯ ಅಮಾಲೇಕ್ಯರನ್ನು ನೋಡಿ ಅವರ ವಿಷಯದಲ್ಲಿ ನುಡಿದದ್ದೇನಂದರೆ - ಅಮಾಲೇಕ್ಯರು ಜನಾಂಗಗಳಲ್ಲಿ ಪ್ರಮುಖರಲ್ಲವೇ; ಆದರೂ ನಾಶವೇ ಅವರ ಗತಿ.


ಆಗ ಆ ಬೆಟ್ಟದ ಸೀಮೆಯಲ್ಲಿ ವಾಸವಾಗಿದ್ದ ಅಮಾಲೇಕ್ಯರೂ ಕಾನಾನ್ಯರೂ ಇಳಿದುಬಂದು ಅವರನ್ನು ಹೊಡೆದು ಹೊರ್ಮಾ ಪಟ್ಟಣದವರೆಗೆ ಸಂಹರಿಸಿದರು.


ಅಮಾಲೇಕ್ಯರೂ ಕಾನಾನ್ಯರೂ ಆ ತಗ್ಗಿನಲ್ಲಿ ವಾಸವಾಗಿದ್ದಾರೆ. ನೀವು ನಾಳೆ ಹಿಂದಿರುಗಿಕೊಂಡು ಕೆಂಪುಸಮುದ್ರಕ್ಕೆ ಹೋಗುವ ದಾರಿಯಲ್ಲಿ ಅರಣ್ಯಕ್ಕೆ ಪ್ರಯಾಣಮಾಡಬೇಕು ಎಂದು ಹೇಳಿದನು.


ಐಗುಪ್ತದೇಶದಲ್ಲಿ ನಿಮಗುಂಟಾಗಿರುವ ದುರವಸ್ಥೆಯಿಂದ ನಿಮ್ಮನ್ನು ತಪ್ಪಿಸಿ ಹಾಲೂ ಜೇನೂ ಹರಿಯುವ ದೇಶಕ್ಕೆ ಅಂದರೆ ಕಾನಾನ್ಯರೂ ಹಿತ್ತಿಯರೂ ಅಮೋರಿಯರೂ ಪೆರಿಜೀಯರೂ ಹಿವ್ವಿಯರೂ ಯೆಬೂಸಿಯರೂ ವಾಸವಾಗಿರುವ ದೇಶಕ್ಕೆ ಬರಮಾಡುವೆನೆಂದು ನಿರ್ಣಯಿಸಿದ್ದೇನೆ ಎಂಬದಾಗಿ ನನಗೆ ಹೇಳಿದನೆಂದು ತಿಳಿಸು.


ಆದಕಾರಣ ಅವರನ್ನು ಐಗುಪ್ತ್ಯರ ಕೈಯೊಳಗಿಂದ ತಪ್ಪಿಸುವದಕ್ಕೂ ಆ ದೇಶದಿಂದ ಬಿಡಿಸಿ ಹಾಲೂ ಜೇನೂ ಹರಿಯುವ ವಿಸ್ತಾರವಾದ ಒಳ್ಳೇ ದೇಶಕ್ಕೆ ಅಂದರೆ ಕಾನಾನ್ಯರೂ ಹಿತ್ತಿಯರೂ ಅಮೋರಿಯರೂ ಪೆರಿಜೀಯರೂ ಹಿವ್ವಿಯರೂ ಯೆಬೂಸಿಯರೂ ವಾಸವಾಗಿರುವ ದೇಶಕ್ಕೆ ನಡಿಸಿಕೊಂಡು ಹೋಗುವದಕ್ಕೂ ಇಳಿದುಬಂದಿದ್ದೇನೆ.


ಆಮೇಲೆ ಅವರು ಹಿಂದಿರುಗಿಕೊಂಡು ಕಾದೇಶ್ ಎನ್ನುವ ಎನ್ಮಿಷ್ಪಾಟಿಗೆ ಬಂದು ಅಮಾಲೇಕ್ಯರ ಸಮಸ್ತದೇಶವನ್ನೂ ಹಚಚೋನ್‍ತಾಮರಿನಲ್ಲಿ ವಾಸವಾಗಿದ್ದ ಅಮೋರಿಯರನ್ನೂ ಜಯಿಸಿದರು.


ಕಾನಾನ್ ದೇಶವನ್ನು ಸಂಚರಿಸಿ ನೋಡುವದಕ್ಕೆ ಮೋಶೆ ಅವರನ್ನು ಕಳುಹಿಸುವಾಗ ಅವರಿಗೆ - ನೀವು ಕಾನಾನ್ ದೇಶದ ದಕ್ಷಿಣಪ್ರಾಂತ್ಯದ ಮಾರ್ಗವಾಗಿ ಬೆಟ್ಟದ ಸೀಮೆಗೆ ಹತ್ತಿಹೋಗಿ ಆ ದೇಶದ ಸಂಗತಿಯನ್ನೆಲ್ಲಾ ನೋಡಿ ತಿಳಿದುಕೊಳ್ಳಬೇಕು.


ಇಸ್ರಾಯೇಲ್ಯರು ಮೋಶೆಗೆ ವಿರೋಧವಾಗಿ ಗುಣುಗುಟ್ಟಲಾಗಿ ಕಾಲೇಬನು ಅವರನ್ನು ಸುಮ್ಮನಿರಿಸಿ - ನಾವು ನಿರ್ಭಯವಾಗಿ ಆ ಬೆಟ್ಟದ ಸೀಮೆಗೆ ಹತ್ತಿಹೋಗಿ ಅದನ್ನು ಸ್ವಾಧೀನಪಡಿಸಿಕೊಳ್ಳೋಣ; ಅದನ್ನು ಜಯಿಸಬಲ್ಲೆವು ಎಂದು ಹೇಳಿದನು.


ಯೊರ್ದನಿನ ಪಶ್ಚಿಮದಲ್ಲಿದ್ದ ಎಲ್ಲಾ ಅಮೋರಿಯರ ಅರಸರೂ ಸಮುದ್ರದ ಬಳಿಯಲ್ಲಿದ್ದ ಸರ್ವ ಕಾನಾನ್ ರಾಜರೂ ಯೆಹೋವನು ಇಸ್ರಾಯೇಲ್ಯರ ಮುಂದೆ ಯೊರ್ದನನ್ನು ಬತ್ತಿಸಿ ಅವರನ್ನು ದಾಟಿಸಿದನೆಂದು ಕೇಳಲು ಅವರ ಎದೆಯೊಡೆದು ಹೋಯಿತು. ಇಸ್ರಾಯೇಲ್ಯರ ನಿವಿುತ್ತವಾಗಿ ಅವರಿಗೆ ಧೈರ್ಯವಿಲ್ಲವಾಯಿತು.


ಯೊರ್ದನ್ ಹೊಳೆಯ ಆಚೆ ಬೆಟ್ಟದ ಮೇಲಿನ ಪ್ರದೇಶ, ಇಳಕಲಿನ ಪ್ರದೇಶ, ಲೆಬನೋನಿನ ಎದುರಿಗಿರುವ ಮಹಾಸಾಗರದ ತೀರಪ್ರದೇಶ ಇವುಗಳಲ್ಲಿ ವಾಸವಾಗಿದ್ದ ಅಮೋರಿಯ ಹಿತ್ತಿಯ ಕಾನಾನ್ ಪೆರಿಜ್ಜೀಯ ಹಿವ್ವಿಯ ಯೆಬೂಸಿಯ ರಾಜರು ನಡೆದ ಸಂಗತಿಯನ್ನು ಕೇಳಿ


ಆಗ ಯೆರೂಸಲೇಮ್, ಹೆಬ್ರೋನ್, ಯರ್ಮೂತ್, ಲಾಕೀಷ್, ಎಗ್ಲೋನ್ ಎಂಬ ಪಟ್ಟಣಗಳ ಐದು ಮಂದಿ ಅಮೋರಿಯ ರಾಜರು ದಂಡೆತ್ತಿ ಕೂಡಿಬಂದು ಗಿಬ್ಯೋನಿಗೆ ಮುತ್ತಿಗೆಹಾಕಿ ಯುದ್ಧಮಾಡಿದರು.


ಗಿಬ್ಯೋನ್ಯರು ಗಿಲ್ಗಾಲಿನಲ್ಲಿದ್ದ ಯೆಹೋಶುವನ ಪಾಳೆಯಕ್ಕೆ ದೂತರನ್ನು ಕಳುಹಿಸಿ - ನಿನ್ನ ಸೇವಕರನ್ನು ಕೈಬಿಡಬೇಡ; ಬೇಗ ಬಂದು ಸಹಾಯಮಾಡು; ನಮಗೆ ವಿರೋಧವಾಗಿ ಕೂಡಿ ಬಂದಿರುವ ಈ ಬೆಟ್ಟದ ಸೀಮೆಯ ಎಲ್ಲಾ ಅಮೋರಿಯ ರಾಜರಿಂದ ನಮ್ಮನ್ನು ತಪ್ಪಿಸು ಎಂದು ಬೇಡಿಕೊಂಡರು.


ಅವರು ಎಕ್ರೋನ್ ಮೊದಲುಗೊಂಡು ಗತ್ ಊರಿನವರೆಗೆ ಇಸ್ರಾಯೇಲ್ಯರಿಂದ ಕಿತ್ತುಕೊಂಡಿದ್ದ ಎಲ್ಲಾ ಪಟ್ಟಣಗಳು ಇಸ್ರಾಯೇಲ್ಯರಿಗೇ ದೊರಕಿದವು. ಅವುಗಳಿಗೆ ಸೇರಿದ ಗ್ರಾಮಗಳನ್ನೂ ಇಸ್ರಾಯೇಲ್ಯರು ಫಿಲಿಷ್ಟಿಯರಿಂದ ತೆಗೆದುಕೊಂಡರು. ಇಸ್ರಾಯೇಲ್ಯರಿಗೂ ಅಮೋರಿಯರಿಗೂ ಸಮಾಧಾನವಿತ್ತು.


ನೀವು ಸ್ವಾಧೀನಮಾಡಿಕೊಳ್ಳುವದಕ್ಕೆ ಹೋಗುವ ದೇಶದಲ್ಲಿ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಸೇರಿಸಿ ಸಂಖ್ಯೆಯಲ್ಲಿಯೂ ಬಲದಲ್ಲಿಯೂ ನಿಮಗೆ ಮೀರುವ ಹಿತ್ತಿಯರು, ಗಿರ್ಗಾಷಿಯರು, ಅಮೋರಿಯರು, ಕಾನಾನ್ಯರು, ಪೆರಿಜ್ಜೀಯರು, ಹಿವ್ವಿಯರು, ಯೆಬೂಸಿಯರು ಎಂಬ ಏಳು ಜನಾಂಗಗಳನ್ನು


ನಿಮ್ಮ ದೇವರಾದ ಯೆಹೋವನು ನಿಮಗೆ ಅಪ್ಪಣೆಕೊಟ್ಟಂತೆ ಇವರನ್ನು ಅಂದರೆ ಹಿತ್ತಿಯರು, ಅಮೋರಿಯರು, ಕಾನಾನ್ಯರು, ಪೆರಿಜ್ಜೀಯರು, ಹಿವ್ವಿಯರು, ಯೆಬೂಸಿಯರು, ಇವರೆಲ್ಲರನ್ನೂ ನಾಶಮಾಡಿಬಿಡಬೇಕು.


ಚೈತನ್ಯಸ್ವರೂಪನಾದ ದೇವರು ನಿಮ್ಮ ಮಧ್ಯದಲ್ಲಿರುತ್ತಾನೆಂಬದೂ ಆತನು ಕಾನಾನ್ಯರು, ಹಿತ್ತಿಯರು, ಹಿವ್ವಿಯರು, ಪೆರಿಜೀಯರು, ಗಿರ್ಗಾಷಿಯರು, ಅಮೋರಿಯರು, ಯೆಬೂಸಿಯರು ಇವರನ್ನೆಲ್ಲಾ ನಿಮ್ಮ ಮುಂದೆ ತಪ್ಪದೆ ಹೊರಡಿಸುವನೆಂಬದೂ


ಇಸ್ರಾಯೇಲ್ಯರು ಕಾನಾನ್ಯ, ಹಿತ್ತಿಯ, ಅಮೋರಿಯ, ಪೆರಿಜ್ಜೀಯ, ಹಿವ್ವಿಯ, ಯೆಬೂಸಿಯ ಎಂಬೀ ಜನಾಂಗಗಳ ಮಧ್ಯದಲ್ಲಿ ವಾಸಮಾಡುತ್ತಾ


ಈ ಕಾಲದಲ್ಲಿ ಅವನೂ ಅವನ ಜನರೂ ತೇಲಾವಿುನಿಂದ ಶೂರಿನವರೆಗೂ ಐಗುಪ್ತ ದೇಶದವರೆಗೂ ವಿಸ್ತರಿಸಿಕೊಂಡಿರುವ ಪ್ರಾಂತಗಳಲ್ಲಿ ವಾಸಿಸುತ್ತಿರುವ ಗೆಷೂರ್ಯರು, ಗಿಜ್ರೀಯರು, ಅಮಾಲೇಕ್ಯರು ಇವರ ಮೇಲೆ ಬಿದ್ದು ಸುಲುಕೊಳ್ಳುತ್ತಿದ್ದರು.


ಅವನು ಯಥಾರ್ಥಚಿತ್ತನೆಂದು ಕಂಡು ಅವನಿಗೆ - ಕಾನಾನ್ಯರು, ಹಿತ್ತಿಯರು, ಅಮೋರಿಯರು, ಪೆರಿಜ್ಜೀಯರು, ಯೆಬೂಸಿಯರು, ಗಿರ್ಗಾಷಿಯರು ಇವರ ದೇಶವನ್ನು ನಿನ್ನ ಸಂತಾನದವರಿಗೆ ಕೊಡುತ್ತೇನೆಂದು ವಾಗ್ದಾನಮಾಡಿ ಅದನ್ನು ನೆರವೇರಿಸಿದ್ದೀ; ನೀನು ಧರ್ಮಸ್ವರೂಪನೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು