ಅರಣ್ಯಕಾಂಡ 13:33 - ಕನ್ನಡ ಸತ್ಯವೇದವು J.V. (BSI)33 ಅಲ್ಲಿ ನೆಫೀಲಿಯರನ್ನು ಅಂದರೆ ನೆಫೀಲಿಯ ವಂಶದವರಾದ ಉನ್ನತಪುರುಷರನ್ನು ನೋಡಿದೆವು. ನಾವು ಅವರ ಮುಂದೆ ವಿುಡತೆಗಳಂತೆ ಇದ್ದೇವೆಂದು ತಿಳಿದುಕೊಂಡೆವು; ಅವರಿಗೂ ನಾವು ಹಾಗೆಯೇ ತೋರಿದೆವು ಅಂದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201933 ಅಲ್ಲಿ ನೆಫೀಲಿಯರನ್ನು ಅಂದರೆ ನೆಫೀಲಿಯ ವಂಶದವರಾದ ಉನ್ನತ ಪುರುಷರನ್ನು ನೋಡಿದೆವು. ನಾವು ಅವರ ಮುಂದೆ ಮಿಡತೆಗಳಂತೆ ಇದ್ದೇವೆ ಎಂದು ತಿಳಿದುಕೊಂಡೆವು. ಅವರಿಗೂ ನಾವು ಹಾಗೆಯೇ ಕಾಣಿಸಿದೆವು” ಎಂದು ಹೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)33 ಅಲ್ಲಿ ‘ನೆಫೀಲಿಯರನ್ನು’ ಅಂದರೆ ನೆಫೀಲಿಯನ ವಂಶದವರಾದ ‘ಅನಕಿಮ್’ರನ್ನು ನೋಡಿದೆವು. ಅವರ ಮುಂದೆ ನಾವು ಮಿಡತೆಗಳಂತೆ ಇದ್ದೆವು. ಅವರಿಗೂ ನಾವು ಹಾಗೆಯೆ ಕಾಣಿಸಿಕೊಂಡೆವು,” ಎಂದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್33 ಪ್ರಚಂಡರಾದ ನೆಫೀಲಿಯರು ಅಲ್ಲಿ ವಾಸವಾಗಿರುವುದನ್ನು ನಾವು ನೋಡಿದೆವು. (ಅನಾಕ್ಯರು ನೆಫೀಲಿಯ ಜನರ ಸಂತತಿಯವರಾಗಿದ್ದಾರೆ.) ಅವರ ಮುಂದೆ ನಾವು ಮಿಡತೆಗಳೊ ಎಂದೆನಿಸಿತು. ಅವರಿಗೂ ಸಹ ನಾವು ಮಿಡತೆಗಳಂತೆ ಕಂಡುಬಂದೆವು” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ33 ಅಲ್ಲಿ ನೆಫೀಲಿಯರನ್ನು ಅಂದರೆ ನೆಫೀಲಿಯ ವಂಶದವರಾದ ಮಹಾಶರೀರವುಳ್ಳ ಪುರುಷರನ್ನು ನೋಡಿದೆವು. ನಾವು ಅವರ ಮುಂದೆ ಮಿಡತೆಗಳ ಹಾಗೆ ಇದ್ದೆವು. ಅವರ ದೃಷ್ಟಿಗೂ ನಾವು ಹಾಗೆಯೇ ಕಾಣಿಸಿದೆವು,” ಎಂದರು. ಅಧ್ಯಾಯವನ್ನು ನೋಡಿ |
ಹೀಗಿರಲಾಗಿ ಯೆಹೋವನು ಆ ದಿನದಲ್ಲಿ ಸೂಚಿಸಿದಂಥ ಈ ಪರ್ವತಪ್ರದೇಶವನ್ನು ನನಗೆ ಕೊಡು. ಇದರಲ್ಲಿ ಉನ್ನತ ಪುರುಷರಿರುತ್ತಾರೆಂದೂ ಇದರ ಪಟ್ಟಣಗಳು ದೊಡ್ಡವೂ ಕೋಟೆಕೊತ್ತಲುಳ್ಳವುಗಳೂ ಆಗಿವೆ ಎಂದೂ ಆ ಕಾಲದಲ್ಲಿ ನೀನು ಕೇಳಿದಿಯಲ್ಲಾ. ಅವರೆಲ್ಲರನ್ನೂ ಓಡಿಸಿ ಬಿಡುವದಕ್ಕೋಸ್ಕರ ಯೆಹೋವನು ತನ್ನ ಮಾತಿಗನುಸಾರವಾಗಿ ನನಗೆ ಸಹಾಯ ಮಾಡುವನೆಂದು ನಿರೀಕ್ಷಿಸಿಕೊಂಡಿದ್ದೇನೆ ಅಂದನು.