Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 13:4 - ಕನ್ನಡ ಸತ್ಯವೇದವು J.V. (BSI)

4 ಅವರ ಹೆಸರುಗಳು ಯಾವವಂದರೆ - ರೂಬೇನ್ ಕುಲದ ಜಕ್ಕೂರನ ಮಗನಾದ ಶಮ್ಮೂವ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಅವರ ಹೆಸರುಗಳು ಯಾವುವೆಂದರೆ: ರೂಬೇನ್ ಕುಲದ ಜಕ್ಕೂರನ ಮಗನಾದ ಶಮ್ಮೂವ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಆ ಮುಖ್ಯಸ್ಥರ ಹೆಸರುಗಳು ಇವು - ರೂಬೇನ್ ಕುಲದ ಜಕ್ಕೂರನ ಮಗ ಶಮ್ಮೂವ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಆ ನಾಯಕರು ಯಾರೆಂದರೆ: ರೂಬೇನ್ ಕುಲದಿಂದ ಜಕ್ಕೂರನ ಮಗನಾದ ಶಮ್ಮೂವ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಅವರ ಹೆಸರುಗಳು ಯಾವುವೆಂದರೆ: ರೂಬೇನನ ಗೋತ್ರದ ಜಕ್ಕೂರನ ಮಗ ಶಮ್ಮೂವ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 13:4
10 ತಿಳಿವುಗಳ ಹೋಲಿಕೆ  

ಯೆಹೋವನ ಅಪ್ಪಣೆಯ ಮೇರೆಗೆ ಮೋಶೆ ಪಾರಾನ್ ಅರಣ್ಯದಿಂದ ಇಸ್ರಾಯೇಲ್ಯರ ಮುಖ್ಯಸ್ಥರನ್ನು ಕಳುಹಿಸಿದನು.


ಸಿಮೆಯೋನ್ ಕುಲದ ಹೋರಿಯ ಮಗನಾದ ಶಾಫಾಟ್,


ಆ ದೇಶವನ್ನು ಸಂಚರಿಸಿ ನೋಡುವದಕ್ಕೆ ಮೋಶೆಯಿಂದ ಕಳುಹಿಸಲ್ಪಟ್ಟು ಹಿಂದಿರುಗಿ ಬಂದು ಆ ದೇಶದ ವಿಷಯದಲ್ಲಿ ಅಶುಭಸಮಾಚಾರವನ್ನು ಹೇಳಿ ಸರ್ವಸಮೂಹದವರನ್ನು ಅವನಿಗೆ ವಿರೋಧವಾಗಿ ಗುಣುಗುಟ್ಟುವಂತೆ ಮಾಡಿದ ಮನುಷ್ಯರು ಯೆಹೋವನ ಸನ್ನಿಧಿಯಲ್ಲಿ ವ್ಯಾಧಿಯಿಂದ ಸತ್ತರು.


ಯೆಹೋವನು ಇಸ್ರಾಯೇಲ್ಯರಿಗೆ ಕೊಟ್ಟ ದೇಶಕ್ಕೆ ಅವರು ಹೋಗದಂತೆ ನೀವು ಯಾಕೆ ಅವರಿಗೆ ಅಧೈರ್ಯವನ್ನು ಹುಟ್ಟಿಸುತ್ತೀರಿ?


ಇಸ್ರಾಯೇಲನು ಆ ದೇಶದಲ್ಲಿ ವಾಸವಾಗಿದ್ದಾಗ ರೂಬೇನನು ತನ್ನ ತಂದೆಯ ಉಪಪತ್ನಿಯಾದ ಬಿಲ್ಹಳಲ್ಲಿ ಸಂಗವಿುಸಿದನು; ಮತ್ತು ಆ ಸಂಗತಿಯು ಇಸ್ರಾಯೇಲನಿಗೆ ತಿಳಿದುಬಂತು. ಯಾಕೋಬನ ಗಂಡು ಮಕ್ಕಳು ಹನ್ನೆರಡು ಮಂದಿ.


ಅವರು ಯಾರಾರಂದರೆ - ಯಾಕೋಬನ ಚೊಚ್ಚಲಮಗನಾದ ರೂಬೇನ್; ಆಮೇಲೆ ಸಿಮೆಯೋನ್, ಲೇವಿ, ಯೆಹೂದಾ, ಇಸ್ಸಾಕಾರ್, ಜೆಬುಲೂನ್; ಇವರು ಲೇಯಳಲ್ಲಿ ಹುಟ್ಟಿದವರು.


ನೀವು ಆಯಾ ಕುಲಗಳಿಂದ ನೇವಿುಸಬೇಕಾದವರು ಯಾರಂದರೆ - ಯೆಹೂದ ಕುಲದಿಂದ ಯೆಫುನ್ನೆಯ ಮಗನಾದ ಕಾಲೇಬ್,


ಇಸ್ರಾಯೇಲನ ಮಕ್ಕಳು ಯಾರಂದರೆ - ರೂಬೇನ್, ಸಿಮೆಯೋನ್, ಲೇವಿ, ಯೆಹೂದ,


[ಹಂಚುವಿಕೆಯನ್ನು ಅನುಸರಿಸಿ] ಕುಲಗಳ ಹೆಸರುಗಳು ಇವೇ; [ದೇಶದ] ಕೇವಲ ಉತ್ತರದಲ್ಲಿ ಹಮಾತ್ ಸೀಮೆಯ ಹತ್ತಿರ ದಾನಿಗೆ ಒಂದು ಪಾಲು; ಅದರ ಬಡಗಣ ಮೇರೆಯು ಹೆತ್ಲೋನಿನ ದಾರಿಯ ಪಕ್ಕದಲ್ಲಿ ಹೊರಟು ಹಮಾತಿನ ದಾರಿಯನ್ನು ದಾಟಿ ದಮಸ್ಕದ ಸರಹದ್ದಿನಲ್ಲಿರುವ ಹಚರ್ ಏನಾನಿನವರೆಗೆ ಹಬ್ಬುವದು; ಅದರ ಪಾರ್ಶ್ವಗಳು [ದೇಶದ] ಪೂರ್ವಪಶ್ಚಿಮಗಳ [ಎಲ್ಲೆಗಳ] ತನಕ ಚಾಚಿಕೊಂಡಿರುವವು.


ಯೂದನ ಕುಲದವರಲ್ಲಿ ಮುದ್ರೆಹಾಕಿಸಿಕೊಂಡವರು ಹನ್ನೆರಡು ಸಾವಿರ, ರೂಬೇನನ ಕುಲದವರಲ್ಲಿ ಹನ್ನೆರಡು ಸಾವಿರ, ಗಾದನ ಕುಲದವರಲ್ಲಿ ಹನ್ನೆರಡು ಸಾವಿರ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು