Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 14:16 - ಕನ್ನಡ ಸತ್ಯವೇದವು J.V. (BSI)

16 ಯೆಹೋವನು ಪ್ರಮಾಣಪೂರ್ವಕವಾಗಿ ವಾಗ್ದಾನಮಾಡಿದ ದೇಶದಲ್ಲಿ ಆ ಜನರನ್ನು ಸೇರಿಸುವದಕ್ಕೆ ಶಕ್ತಿ ಸಾಲದೆ ಅವರನ್ನು ಅರಣ್ಯದಲ್ಲಿ ಕೊಂದು ಹಾಕಿಬಿಟ್ಟನು ಎಂದು ಮಾತಾಡಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 “‘ಯೆಹೋವನು ಪ್ರಮಾಣಪೂರ್ವಕವಾಗಿ ವಾಗ್ದಾನಮಾಡಿದ ದೇಶದಲ್ಲಿ ಆ ಜನರನ್ನು ಸೇರಿಸುವುದಕ್ಕೆ ಶಕ್ತಿಸಾಲದೆ, ಅವರನ್ನು ಅರಣ್ಯದಲ್ಲಿ ಕೊಂದುಹಾಕಿಬಿಟ್ಟನು’ ಎಂದು ಮಾತನಾಡಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ‘ಸರ್ವೇಶ್ವರ ಪ್ರಮಾಣ ಪೂರ್ವಕವಾಗಿ ವಾಗ್ದಾನ ಮಾಡಿದ ನಾಡಿಗೆ ತನ್ನ ಜನರನ್ನು ಸೇರಿಸಲು ಶಕ್ತಿ ಸಾಲದೆ ಹೋಯಿತು; ಅವರನ್ನು ಮರುಭೂಮಿಯಲ್ಲೇ ಕೊಂದುಹಾಕಿಬಿಟ್ಟ’ ಎಂದುಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ‘ಯೆಹೋವನು ಪ್ರಮಾಣಪೂರ್ವಕವಾಗಿ ವಾಗ್ದಾನಮಾಡಿದ ದೇಶದಲ್ಲಿ ಇಸ್ರೇಲರನ್ನು ಸೇರಿಸುವುದಕ್ಕೆ ಶಕ್ತಿಸಾಲದೆ ಅವರನ್ನು ಮರುಭೂಮಿಯಲ್ಲಿ ನಾಶಮಾಡಿದನು’ ಎಂದು ಮಾತಾಡಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಯೆಹೋವ ದೇವರು ಈ ಜನರನ್ನು ಅವರಿಗೆ ಪ್ರಮಾಣಪೂರ್ವಕವಾಗಿ ವಾಗ್ದಾನಮಾಡಿದ ದೇಶಕ್ಕೆ ತರಲಾರದ ಕಾರಣ ಅವರನ್ನು ಮರುಭೂಮಿಯಲ್ಲಿ ಕೊಂದುಹಾಕಿದರು,” ಎಂದು ಹೇಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 14:16
6 ತಿಳಿವುಗಳ ಹೋಲಿಕೆ  

ನೀನು ಯಾವ ದೇಶದಿಂದ ನಮ್ಮನ್ನು ಬರಮಾಡಿದಿಯೋ ಆ ದೇಶದವರು - ಯೆಹೋವನು ಇಸ್ರಾಯೇಲ್ಯರಿಗೆ ವಾಗ್ದಾನಮಾಡಿದ ದೇಶಕ್ಕೆ ಅವರನ್ನು ಸೇರಿಸಲಾರದೆ ಹಗೆಮಾಡಿ ಅರಣ್ಯದಲ್ಲಿ ಕೊಲ್ಲುವದಕ್ಕೆ ಕರಕೊಂಡು ಹೋದನೆಂದು ಹೇಳುವದಕ್ಕೆ ಆಸ್ಪದವಾದೀತು.


ಕಾನಾನ್ಯರೂ ದೇಶದ ಬೇರೆ ಎಲ್ಲಾ ನಿವಾಸಿಗಳೂ ಇದನ್ನು ಕೇಳಿ ನಮ್ಮನ್ನು ಸುತ್ತಿಕೊಂಡು ಭೂಲೋಕದಲ್ಲಿ ನಮ್ಮ ಹೆಸರುಳಿಯದಂತೆ ಮಾಡುವರು. ನಿನ್ನ ಮಹಾನಾಮಕ್ಕೋಸ್ಕರ ಏನು ಮಾಡುವಿ ಅಂದನು.


ಮತ್ತು ಯೆಹೋಶುವನು - ಅಯ್ಯೋ ಕರ್ತನೇ, ಯೆಹೋವನೇ, ನೀನು ಈ ಜನರನ್ನು ಯೊರ್ದನ್ ಹೊಳೆ ದಾಟಿಸಿದ್ದೇಕೆ? ನಮ್ಮನ್ನು ಅಮೋರಿಯರ ಕೈಗೆ ಒಪ್ಪಿಸಿ ನಾಶಮಾಡಬೇಕೆಂದಿದ್ದೀಯಾ? ನಾವು ಇಷ್ಟೇ ಸಾಕೆಂದು ಯೊರ್ದನ್ ಹೊಳೆಯ ಆಚೆಯಲ್ಲಿಯೇ ಇದ್ದರೆ ಎಷ್ಟೋ ಒಳ್ಳೇದಾಗಿತ್ತು.


ನನ್ನ ಸ್ವಾವಿುಯೇ, ನೀನು ನಿನ್ನ ವಿಷಯದಲ್ಲಿ-


ಐಗುಪ್ತ್ಯರು ನಿನ್ನ ವಿಷಯದಲ್ಲಿ - ಯೆಹೋವನು ಕೇಡುಮಾಡಬೇಕೆಂಬ ಅಭಿಪ್ರಾಯದಿಂದಲೇ ಇಸ್ರಾಯೇಲ್ಯರನ್ನು ಇಲ್ಲಿಂದ ಕರಕೊಂಡು ಹೋದನಲ್ಲಾ; ಅವರನ್ನು ಬೆಟ್ಟಗಳಲ್ಲಿ ಸಾಯಿಸಿ ಭೂವಿುಯಲ್ಲಿ ಉಳಿಯದಂತೆ ನಿರ್ಮೂಲ ಮಾಡುವದಕ್ಕೇನೇ ಅವರನ್ನು ಕರಕೊಂಡು ಹೋದನೆಂದು ಹೇಳುವದಕ್ಕೆ ಆಸ್ಪದವಾಗಬೇಕೇ? ನೀನು ರೋಷಾಗ್ನಿಯನ್ನು ಬಿಟ್ಟು ನಿನ್ನ ಪ್ರಜೆಗಳಿಗೆ ಕೆಡುಕನ್ನು ಮಾಡದೆ ಮನಸ್ಸನ್ನು ಬೇರೆ ಮಾಡಿಕೋ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು