ಅರಣ್ಯಕಾಂಡ 14:18 - ಕನ್ನಡ ಸತ್ಯವೇದವು J.V. (BSI)18 ಯೆಹೋವನು ದೀರ್ಘಶಾಂತನು, ಬಹು ಪ್ರೀತಿಯುಳ್ಳವನು, ಅಪರಾಧ ಪಾಪಗಳನ್ನು ಕ್ಷವಿುಸುವವನು; ಆದಾಗ್ಯೂ [ಅಪರಾಧಿಗಳನ್ನು] ಶಿಕ್ಷಿಸದೆ ಬಿಡದವನು, ತಂದೆಗಳ ಪಾಪಫಲವನ್ನು ಮಕ್ಕಳ ಮೇಲೆ ಮೂರುನಾಲ್ಕು ತಲೆಗಳವರೆಗೆ ಬರಮಾಡುವವನು ಎಂದು ಹೇಳಿದಿಯಲ್ಲಾ. ಈ ಮಾತಿಗೆ ದೃಷ್ಟಾಂತವನ್ನು ಕೊಟ್ಟು ನಿನ್ನ ಮಹಿಮೆಯನ್ನು ದೃಢಪಡಿಸಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ‘ಯೆಹೋವನು ದೀರ್ಘಶಾಂತನು, ದಯೆಯುಳ್ಳವನು, ಅಪರಾಧ ಪಾಪಗಳನ್ನು ಕ್ಷಮಿಸುವವನು, ಆದರೂ ಅಪರಾಧಿಗಳನ್ನು ಶಿಕ್ಷಿಸದೆ ಬಿಡದವನು, ತಂದೆಗಳ ಪಾಪಫಲವನ್ನು ಮಕ್ಕಳ ಮೇಲೆ ಮೂರು ನಾಲ್ಕು ತಲೆಗಳವರೆಗೆ ಬರಮಾಡುವವನು’ ಎಂದು ಹೇಳಿದ್ದಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ‘ಸರ್ವೇಶ್ವರ ದೀರ್ಘಶಾಂತನು, ಪ್ರೀತಿಮಯನು, ಪಾಪ-ಅಪರಾಧಗಳನ್ನು ಕ್ಷಮಿಸುವವನು, ಆದರೂ ಶಿಕ್ಷಿಸದೆ ಬಿಡದವನು, ತಂದೆಗಳ ಪಾಪಫಲವನ್ನು ಮಕ್ಕಳ ಮೇಲೆ ಮೂರು ನಾಲ್ಕು ತಲೆಗಳವರೆಗೆ ಬರಮಾಡುವವನು,’ ಎಂದು ಹೇಳಿದ್ದೀರಿ. ಆ ಮಾತನ್ನು ನೆನಪಿಗೆ ತಂದುಕೊಳ್ಳಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ನೀನು ನಿನ್ನ ವಿಷಯದಲ್ಲಿ ‘ಯೆಹೋವನು ದೀರ್ಘಶಾಂತನು, ಬಹುಪ್ರೀತಿಯುಳ್ಳವನು, ಅಪರಾಧ, ಪಾಪಗಳನ್ನು ಕ್ಷಮಿಸುವವನಾಗಿದ್ದರೂ ಎಲ್ಲಾ ದಂಡನೆಯನ್ನು ರದ್ದುಪಡಿಸದವನು, ತಂದೆಗಳ ಪಾಪಫಲವನ್ನು ಮಕ್ಕಳ ಮೇಲೆ ಮೂರು ನಾಲ್ಕು ತಲೆಗಳವರೆಗೆ ಬರಮಾಡುವವನು’ ಎಂದು ನೀನೇ ಹೇಳಿರುವಿಯಲ್ಲಾ! ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಯೆಹೋವ ದೇವರು ದೀರ್ಘಶಾಂತನು, ಮಹಾ ಪ್ರೀತಿಯುಳ್ಳವನು, ತಿರುಗಿಬೀಳುವುದನ್ನು ಮತ್ತು ಪಾಪವನ್ನು ಕ್ಷಮಿಸುವಾತನು, ಆದರೂ ಅಪರಾಧಿಯನ್ನು ಶಿಕ್ಷಿಸದೆ ಬಿಡದವನೂ ತಂದೆಗಳ ದೋಷವನ್ನು ಮಕ್ಕಳ ಮೇಲೆಯೂ ಮೊಮ್ಮಕ್ಕಳ ಮೇಲೆಯೂ ಮೂರನೆಯ ಮತ್ತು ನಾಲ್ಕನೆಯ ತಲೆಗಳವರೆಗೂ ಶಿಕ್ಷಿಸುವಾತನೂ ಎಂದು ನೀವು ಹೇಳಿದ್ದೀರಲ್ಲಾ? ಅಧ್ಯಾಯವನ್ನು ನೋಡಿ |