Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 14:2 - ಕನ್ನಡ ಸತ್ಯವೇದವು J.V. (BSI)

2 ಇಸ್ರಾಯೇಲ್ಯರೆಲ್ಲರೂ ಮೋಶೆ ಆರೋನರಿಗೆ ವಿರೋಧವಾಗಿ ಗುಣುಗುಟ್ಟಿ - ನಾವು ಐಗುಪ್ತದೇಶದಲ್ಲಿಯೇ ಸತ್ತಿದ್ದರೆ ಎಷ್ಟೋ ಮೇಲಾಗಿತ್ತು; ಈ ಅರಣ್ಯದಲ್ಲಿಯಾದರೂ ಸತ್ತಿದ್ದರೆ ಮೇಲಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಇಸ್ರಾಯೇಲರೆಲ್ಲರೂ ಮೋಶೆ ಮತ್ತು ಆರೋನರಿಗೆ ವಿರುದ್ಧವಾಗಿ ಗುಣುಗುಟ್ಟಿ, “ನಾವು ಈ ಮರುಭೂಮಿಯಲ್ಲಿ ಸಾಯುವುದಕ್ಕಿಂತ ಐಗುಪ್ತ ದೇಶದಲ್ಲಿಯೇ ಸತ್ತಿದ್ದರೆ ಎಷ್ಟೋ ಒಳ್ಳೆಯದಾಗಿತ್ತು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಇಸ್ರಯೇಲರೆಲ್ಲರು ಮೋಶೆ ಮತ್ತು ಆರೋನರ ವಿರುದ್ಧ ಗುಣಗುಟ್ಟಿದರು. “ಈಜಿಪ್ಟಿನಲ್ಲೇ ನಾವು ಸತ್ತಿದ್ದರೆ ಚೆನ್ನಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಇಸ್ರೇಲರು ಮೋಶೆ ಆರೋನರ ವಿರುದ್ಧ ಗೊಣಗುಟ್ಟಿದರು. ಜನರೆಲ್ಲರೂ ಒಟ್ಟಾಗಿ ಮೋಶೆ ಆರೋನರ ಬಳಿಗೆ ಬಂದು, “ನಾವು ಈಜಿಪ್ಟಿನಲ್ಲಿಯಾಗಲೀ ಅಥವಾ ಈ ಮರುಭೂಮಿಯಲ್ಲಾಗಲಿ ಸತ್ತಿದ್ದರೆ ಒಳ್ಳೆಯದಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಇಸ್ರಾಯೇಲರೆಲ್ಲರು ಮೋಶೆಗೂ ಆರೋನನಿಗೂ ವಿರೋಧವಾಗಿ ಗೊಣಗುಟ್ಟಿದರು. ಅವರು, “ನಾವು ಈಜಿಪ್ಟ್ ದೇಶದಲ್ಲಿ ಸತ್ತಿದ್ದರೆ ಇಲ್ಲವೆ ಈ ಮರುಭೂಮಿಯಲ್ಲಾದರೂ ಸತ್ತಿದ್ದರೆ ಚೆನ್ನಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 14:2
31 ತಿಳಿವುಗಳ ಹೋಲಿಕೆ  

ಜನರು - ನಾವೇನು ಕುಡಿಯಬೇಕೆಂದು ಮೋಶೆಯ ಮೇಲೆ ಗುಣುಗುಟ್ಟುತ್ತಿರಲು ಮೋಶೆಯು ಯೆಹೋವನನ್ನು ಪ್ರಾರ್ಥಿಸಿದನು.


ಮರುದಿನ ಇಸ್ರಾಯೇಲ್ಯರ ಸರ್ವಸಮೂಹದವರು ಮೋಶೆ ಆರೋನರ ಮೇಲೆ ಗುಣುಗುಟ್ಟುತ್ತಾ - ನೀವೇ ಯೆಹೋವನ ಜನರನ್ನು ಸಾಯಿಸಿದಿರಿ ಎಂದು ಹೇಳುವವರಾದರು.


ಅಲ್ಲಿ ಜನರು ನೀರಿಲ್ಲದೆ ಬಾಯಾರಿಕೆಯ ಸಂಕಟದಿಂದ ಮೋಶೆಯ ಮೇಲೆ ಗುಣುಗುಟ್ಟುತ್ತಾ - ನೀನು ನಮ್ಮನ್ನೂ ನಮ್ಮ ಮಕ್ಕಳನ್ನೂ ದನಗಳನ್ನೂ ಐಗುಪ್ತ ದೇಶದಿಂದ ಕರತಂದು ಈಗ ನೀರಿಲ್ಲದೆ ಸಾಯುವ ಹಾಗೆ ಮಾಡಿದ್ದೇಕೆ ಎಂದರು.


ಇವರು ಗುಣುಗುಟ್ಟುವವರೂ ತಮ್ಮ ಗತಿಯನ್ನು ನಿಂದಿಸುವವರೂ ತಮ್ಮ ದುರಾಶೆಗಳನ್ನನುಸರಿಸಿ ನಡೆಯುವವರೂ ಆಗಿದ್ದಾರೆ. ಇವರ ಬಾಯಿಂದ ದೊಡ್ಡ ದೊಡ್ಡ ಮಾತುಗಳು ಬರುತ್ತವೆ. ಇವರು ಸ್ವಪ್ರಯೋಜನಕ್ಕಾಗಿ ಮುಖಸ್ತುತಿ ಮಾಡುತ್ತಾರೆ.


ಇದಲ್ಲದೆ ಅವರಲ್ಲಿ ಕೆಲವರು ಗುಣುಗುಟ್ಟಿ ಸಂಹಾರಕನ ಕೈಯಿಂದ ನಾಶವಾದರು; ನೀವು ಗುಣುಗುಟ್ಟಬೇಡಿರಿ.


ಸೂರ್ಯನು ಹುಟ್ಟಿದಾಗ ದೇವರು ಬಿಸಿಯಾದ ಮೂಡಣ ಗಾಳಿಯನ್ನು ಏರ್ಪಡಿಸಿದನು; ಬಿಸಿಲು ಯೋನನ ತಲೆಗೆ ಹೊಡೆಯಲು ಅವನು ಮೂರ್ಛೆ ಹೋಗುವವನಾಗಿ ನಾನು ಬದುಕುವದಕ್ಕಿಂತ ಸಾಯುವದೇ ಲೇಸು ಎಂದು ಮರಣವನ್ನು ಕೇಳಿಕೊಂಡನು.


ಈಗ, ಯೆಹೋವನೇ, ನನ್ನ ಪ್ರಾಣವನ್ನು ತೆಗೆ; ನಾನು ಬದುಕುವದಕ್ಕಿಂತ ಸಾಯುವದೇ ಲೇಸು ಎಂದು ವಿಜ್ಞಾಪಿಸಿಕೊಂಡನು.


ಮತ್ತು ಅವರು ಆ ರಮಣೀಯದೇಶವನ್ನು ತಿರಸ್ಕರಿಸಿ ಆತನ ಮಾತನ್ನು ನಂಬಲಿಲ್ಲ.


ಯೆಹೋವನು ನಮ್ಮನ್ನು ಐಗುಪ್ತದೇಶದಿಂದ ಬರಮಾಡಿದ್ದು ಹಗೆತನದಿಂದಲೇ; ಆತನು ನಮ್ಮನ್ನು ಸಂಹರಿಸಬೇಕೆಂದು ಅಮೋರಿಯರ ಕೈಗೆ ಒಪ್ಪಿಸುತ್ತಾನೆ.


ನೀನು ಹೀಗೆ ಮಾಡುವದಕ್ಕಿಂತಲೂ ನನ್ನನ್ನು ಈಗಲೇ ಕೊಂದುಹಾಕಿಬಿಟ್ಟರೆ ಉಪಕಾರ; ನನಗಾಗುವ ದುರವಸ್ಥೆಯನ್ನು ನಾನು ನೋಡಲಾರೆನು ಅಂದನು.


ಇಸ್ರಾಯೇಲ್ಯರು ತಮಗೆ ದುರವಸ್ಥೆ ಪ್ರಾಪ್ತವಾಯಿತೆಂದು ಯೆಹೋವನಿಗೆ ಕೇಳಿಸುವಂತೆ ಗುಣುಗುಟ್ಟುವವರಾದರು. ಅದಕ್ಕೆ ಆತನು ಕೋಪಗೊಂಡು ಅವರ ಮಧ್ಯದಲ್ಲಿ ಬೆಂಕಿಯನ್ನುಂಟುಮಾಡಿದ್ದರಿಂದ ಪಾಳೆಯದ ಕಡೇ ಭಾಗದಲ್ಲಿದ್ದವರು ಸುಟ್ಟುಹೋದರು.


ತನ್ನ ಒಡಂಬಡಿಕೆಯನ್ನು ನೆನಪುಮಾಡಿಕೊಂಡು ತನ್ನ ಕೃಪಾತಿಶಯದಿಂದ ಅವರನ್ನು ಕನಿಕರಿಸಿದನು.


ನಾನು ಹುಟ್ಟುವಾಗಲೇ ಏಕೆ ಸಾಯಲಿಲ್ಲ? ಗರ್ಭದಿಂದ ಬಂದಾಗಲೇ ಏಕೆ ಪ್ರಾಣ ಬಿಡಲಿಲ್ಲ?


ತರುವಾಯ ತಾನೊಬ್ಬನಾಗಿ ಅರಣ್ಯದೊಳಗೆ ಒಂದು ದಿವಸದ ಪ್ರಯಾಣದಷ್ಟು ದೂರ ಹೋಗಿ ಒಂದು ಜಾಲೀಗಿಡದ ಕೆಳಗೆ ಕೂತುಕೊಂಡು ಮರಣವನ್ನು ಅಪೇಕ್ಷಿಸಿದನು. ಅವನು - ಯೆಹೋವನೇ, ನನಗೆ ಸಾಕಾಯಿತು; ನನ್ನ ಪ್ರಾಣವನ್ನು ತೆಗೆದುಬಿಡು; ನಾನು ನನ್ನ ಪಿತೃಗಳಿಗಿಂತ ಉತ್ತಮನಲ್ಲ ಎಂದು ದೇವರನ್ನು ಪ್ರಾರ್ಥಿಸಿ


ಎಂಬದರಲ್ಲಿ ಕೇಳಿ ಕೋಪವನ್ನೆಬ್ಬಿಸಿದವರು ಯಾರು? ಮೋಶೆಯ ಕೈಕೆಳಗಿದ್ದು ಐಗುಪ್ತದೊಳಗಿಂದ ಹೊರಟುಬಂದವರೆಲ್ಲರೂ ಅಲ್ಲವೇ.


ಐಗುಪ್ತದೇಶದಲ್ಲಿ ನಾವು ಬಿಟ್ಟಿಯಾಗಿ ತಿನ್ನುತ್ತಿದ್ದ ಮೀನು, ಸವತೆಕಾಯಿ, ಕರ್ಬೂಜು, ಉಳ್ಳಿಗಡ್ಡೆ, ನೀರುಳ್ಳಿ, ಬೆಳ್ಳುಳ್ಳಿ ಇವು ನೆನಪಿಗೆ ಬರುತ್ತವಲ್ಲಾ;


ಅದನ್ನು ಕೇಳಿ ಜನಸಮೂಹದವರೆಲ್ಲರೂ ಗುಲ್ಲುಮಾಡಿ ಬಹಳ ಕೂಗಿಕೊಂಡರು; ಆ ರಾತ್ರಿಯೆಲ್ಲಾ ಜನರು ಅಳುತ್ತಿದ್ದರು.


ಈ ಮನುಷ್ಯರೆಲ್ಲರು ಐಗುಪ್ತದೇಶದಲ್ಲಿಯೂ ಅರಣ್ಯದಲ್ಲಿಯೂ ನಾನು ನಡಿಸಿರುವ ಮಹತ್ಕಾರ್ಯಗಳನ್ನೂ ನನ್ನ ಮಹಿಮೆಯನ್ನೂ ನೋಡಿದರೂ ನನ್ನ ಮಾತಿಗೆ ಕಿವಿಗೊಡದೆ ಪದೇಪದೇ ನನ್ನನ್ನು ಪರೀಕ್ಷಿಸಿದದರಿಂದ


ನಾವು ಬರುವದಿಲ್ಲ, ನೀನು ಹಾಲೂ ಜೇನೂಹರಿಯವ ದೇಶದಿಂದ ನಮ್ಮನ್ನು ಕರಕೊಂಡು ಬಂದು ಮರಳುಕಾಡಿನಲ್ಲಿ ಸಾಯಿಸುವದು ಅಲ್ಪಕಾರ್ಯವೆಂದು ಎಣಿಸಿ ನಮ್ಮ ಮೇಲೆ ದೊರೆತನ ಮಾಡಬೇಕೆಂದು ಕೋರುತ್ತೀಯೋ?


ನಮ್ಮ ಜನರು ಯೆಹೋವನ ಸನ್ನಿಧಿಯಲ್ಲಿ ಸತ್ತಾಗ ನಾವೂ ಸತ್ತುಹೋಗಿದ್ದರೆ ಎಷ್ಟೋ ಮೇಲಾಗಿತ್ತು ಎಂದೂ


ನೀವು ಯೆಹೋವನ ಸಭೆಯವರಾದ ನಮ್ಮನ್ನೂ ನಮ್ಮ ಪಶುಗಳನ್ನೂ ಈ ಮರಳುಕಾಡಿಗೆ ಕರಕೊಂಡು ಬಂದು ಯಾಕೆ ಸಾಯಿಸುತ್ತೀರಿ?


ಆಗ ಅವರು ದೇವರಿಗೂ ಮೋಶೆಗೂ ವಿರೋಧವಾಗಿ ಮಾತಾಡುತ್ತಾ - ನೀವು ನಮ್ಮನ್ನು ಈ ಮರಳುಕಾಡಿನಲ್ಲಿ ಕೊಲ್ಲಬೇಕೆಂದು ಐಗುಪ್ತದೇಶದಿಂದ ಕರೆದುಕೊಂಡು ಬಂದಿರೋ? ಇಲ್ಲಿ ಆಹಾರವೂ ಇಲ್ಲ, ನೀರೂ ಇಲ್ಲ; ಈ ನಿಸ್ಸಾರವಾದ ಆಹಾರವನ್ನು ತಿಂದು ತಿಂದು ನಮಗೆ ಬೇಸರವಾಯಿತೆಂದು ಹೇಳುವವರಾದರು.


ತಮ್ಮ ತಮ್ಮ ಗುಡಾರಗಳಲ್ಲಿ ಗುಣುಗುಟ್ಟಿ ಯೆಹೋವನ ಮಾತಿಗೆ ಕಿವಿಗೊಡಲಿಲ್ಲ.


ಅವರು ಮೋಶೆಗೆ - ಐಗುಪ್ತದೇಶದಲ್ಲಿ ಸಮಾಧಿಗಳಿಲ್ಲವಾದದರಿಂದ ಅರಣ್ಯದಲ್ಲಿ ಸಾಯಲಿ ಎಂಬದಾಗಿ ನಮ್ಮನ್ನು ಇಲ್ಲಿಗೆ ಕರಕೊಂಡು ಬಂದಿಯೇನು? ಯಾಕೆ ನಮಗೆ ಈ ಪ್ರಕಾರ ಮಾಡಿ ಐಗುಪ್ತದೇಶದಿಂದ ಕರಕೊಂಡು ಬಂದಿ?


ಅದಕ್ಕನುಸಾರವಾಗಿ ಮೋಶೆಯು ಇಸ್ರಾಯೇಲ್ಯರ ಸಂಗಡ ಮಾತಾಡಲಾಗಿ ಅವರ ಕುಲಾಧಿಪತಿಗಳೆಲ್ಲರೂ ಕುಲಕ್ಕೆ ಒಂದು ಕೋಲಿನ ಮೇರೆಗೆ ಹನ್ನೆರಡು ಕೋಲುಗಳನ್ನು ಅವನ ಕೈಗೆ ಕೊಟ್ಟರು; ಅವುಗಳೊಡನೆ ಆರೋನನ ಕೋಲೂ ಇತ್ತು.


ಸಮೂಹದವರಿಗೆ ನೀರು ಇಲ್ಲದ ಕಾರಣ ಅವರು ಮೋಶೆ ಆರೋನರಿಗೆ ವಿರೋಧವಾಗಿ ಕೂಡಿಕೊಂಡು ಮೋಶೆಯ ಸಂಗಡ ವಿವಾದಿಸುವವರಾಗಿ -


ಅದಲ್ಲದೆ ಕಾದೇಶ್‍ಬರ್ನೇಯದಲ್ಲಿ ಯೆಹೋವನು ನಿಮಗೆ - ಬೆಟ್ಟದ ಸೀಮೆಯನ್ನು ಹತ್ತಿ ನಾನು ನಿಮಗೆ ಕೊಟ್ಟಿರುವ ದೇಶವನ್ನು ಸ್ವಾಧೀನಮಾಡಿಕೊಳ್ಳಿರಿ ಎಂದು ಅಪ್ಪಣೆಕೊಟ್ಟಾಗಲೂ ನೀವು ನಿಮ್ಮ ದೇವರಾದ ಯೆಹೋವನ ಆ ಆಜ್ಞೆಯನ್ನು ಧಿಕ್ಕರಿಸಿ ಆತನನ್ನು ನಂಬದೆ ಆತನ ಮಾತನ್ನು ಅಲಕ್ಷ್ಯಮಾಡಿದಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು