Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 14:22 - ಕನ್ನಡ ಸತ್ಯವೇದವು J.V. (BSI)

22 ಈ ಮನುಷ್ಯರೆಲ್ಲರು ಐಗುಪ್ತದೇಶದಲ್ಲಿಯೂ ಅರಣ್ಯದಲ್ಲಿಯೂ ನಾನು ನಡಿಸಿರುವ ಮಹತ್ಕಾರ್ಯಗಳನ್ನೂ ನನ್ನ ಮಹಿಮೆಯನ್ನೂ ನೋಡಿದರೂ ನನ್ನ ಮಾತಿಗೆ ಕಿವಿಗೊಡದೆ ಪದೇಪದೇ ನನ್ನನ್ನು ಪರೀಕ್ಷಿಸಿದದರಿಂದ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಈ ಮನುಷ್ಯರೆಲ್ಲರು ಐಗುಪ್ತ ದೇಶದಲ್ಲಿಯೂ, ಮರುಭೂಮಿಯಲ್ಲಿಯೂ, ನಾನು ನಡೆಸಿರುವ ಮಹತ್ಕಾರ್ಯಗಳನ್ನೂ, ನನ್ನ ಮಹಿಮೆಯನ್ನೂ ನೋಡಿದರೂ ನನ್ನ ಮಾತಿಗೆ ಕಿವಿಗೊಡದೆ, ಪದೇ ಪದೇ ನನ್ನನ್ನು ಪರೀಕ್ಷಿಸಿದ್ದರಿಂದ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಈಜಿಪ್ಟ್ ದೇಶದಲ್ಲೂ ಮರುಭೂಮಿಯಲ್ಲೂ ನಾನು ಮಾಡಿದ ಮಹತ್ಕಾರ್ಯಗಳನ್ನು ಹಾಗೂ ನನ್ನ ಅಸ್ತಿತ್ವದ ತೇಜಸ್ಸನ್ನು ಈ ಮಾನವರೆಲ್ಲರೂ ನೋಡಿದ್ದರೂ ನನ್ನ ಮಾತಿಗೆ ಕಿವಿಗೊಡಲಿಲ್ಲ. ಬದಲಿಗೆ ನನ್ನನ್ನು ಪದೇ ಪದೇ ಪರೀಕ್ಷಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಈಜಿಪ್ಟಿನಲ್ಲಿಯೂ ಮರುಭೂಮಿಯಲ್ಲಿಯೂ ನಾನು ನಡಿಸಿರುವ ಮಹಾತ್ಕಾರ್ಯಗಳನ್ನೂ ನನ್ನ ಮಹಿಮೆಯನ್ನೂ ನೋಡಿದ ಈ ಜನರೆಲ್ಲರೂ ಪದೇಪದೇ ನನ್ನನ್ನು ಪರೀಕ್ಷಿಸಿದ್ದರಿಂದ ಮತ್ತು ನನಗೆ ವಿಧೇಯರಾಗದಿದ್ದ ಕಾರಣ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಏಕೆಂದರೆ ನನ್ನ ಮಹಿಮೆಯನ್ನೂ, ಈಜಿಪ್ಟ್ ದೇಶದಲ್ಲಿಯೂ, ಮರುಭೂಮಿಯಲ್ಲಿಯೂ ನಾನು ಮಾಡಿದ ಸೂಚಕಕಾರ್ಯಗಳನ್ನೂ ನೋಡಿದ ಈ ಸಕಲ ಜನರು, ನನ್ನನ್ನು ಈಗ ಹತ್ತು ಸಾರಿ ಪರೀಕ್ಷಿಸಿ, ನನ್ನ ಮಾತನ್ನು ಕೇಳದೆ ಹೋದದ್ದರಿಂದ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 14:22
31 ತಿಳಿವುಗಳ ಹೋಲಿಕೆ  

ಈವರೆಗೆ ಹತ್ತಾರು ಸಾರಿ ನನ್ನನ್ನು ಅವಮಾನಪಡಿಸಿ ನನಗೆ ಕೇಡುಮಾಡುತ್ತಿರುವದಕ್ಕೆ ನಿಮಗೆ ನಾಚಿಕೆಯಿಲ್ಲವಲ್ಲಾ.


ಇದರಿಂದ ಆತನು ಅವರನ್ನು ಅರಣ್ಯದಲ್ಲಿಯೇ ಬೀಳಿಸುವೆನೆಂದೂ


ಅವನು ಚಪಲಚಿತ್ತನಾಗಿ ಹತ್ತುಸಾರಿ ನನ್ನ ಸಂಬಳವನ್ನು ಬದಲಾಯಿಸಿ ವಂಚಿಸಿದರೂ ನನಗೆ ಕೇಡುಮಾಡುವದಕ್ಕೆ ದೇವರು ಅವನಿಗೆ ಅವಕಾಶಕೊಡಲಿಲ್ಲ.


ಮೋಶೆ ಬೆಟ್ಟದಿಂದ ಇಳಿಯದೆ ತಡಮಾಡಿದ್ದನ್ನು ಇಸ್ರಾಯೇಲ್ಯರು ನೋಡಿ ಆರೋನನ ಬಳಿಗೆ ಕೂಡಿಬಂದು - ಏಳು; ನಮ್ಮ ಮುಂದುಗಡೆಯಲ್ಲಿ ಹೋಗುವದಕ್ಕೆ ನಮಗೆ ದೇವರುಗಳನ್ನು ಮಾಡಿಕೊಡು; ಐಗುಪ್ತದೇಶದಿಂದ ನಮ್ಮನ್ನು ಕರಕೊಂಡು ಬಂದ ಆ ಮೋಶೆಯು ಏನಾದನೋ ಗೊತ್ತಿಲ್ಲ ಎಂದು ಹೇಳಿದರು.


ಕುಡಿಯುವದಕ್ಕೆ ನೀರಿಲ್ಲದ ಕಾರಣ ಜನರು ಮೋಶೆಯ ಸಂಗಡ ವಾದಿಸುತ್ತಾ - ನಮಗೆ ಕುಡಿಯುವದಕ್ಕೆ ನೀರು ದೊರಕಿಸಿಕೊಡಬೇಕು ಎಂದು ಹೇಳಿದಾಗ ಮೋಶೆ - ನೀವು ನನ್ನ ಸಂಗಡ ವಾದಿಸುವದೇನು? ಯೆಹೋವನನ್ನು ಯಾಕೆ ಪರೀಕ್ಷಿಸುತ್ತೀರಿ ಎಂದು ಅವರಿಗೆ ಹೇಳಿದನು.


ಅವರು ಅರಣ್ಯದಲ್ಲಿ ನನ್ನನ್ನು ಪರೀಕ್ಷಿಸಿ ಶೋಧಿಸಿ ನಾಲ್ವತ್ತು ವರುಷ ನಾನು ನಡಿಸುತ್ತಿದ್ದ ಕೃತ್ಯಗಳನ್ನು ನೋಡಿದರು.


ಅವರಲ್ಲಿ ಕೆಲವರು ಕರ್ತನನ್ನು ಪರೀಕ್ಷಿಸಿ ಸರ್ಪಗಳಿಂದ ನಾಶವಾದರು; ನಾವು ಪರೀಕ್ಷಿಸದೆ ಇರೋಣ.


ಆದರೂ ಅವರೊಳಗೆ ಬಹುಮಂದಿಯ ವಿಷಯದಲ್ಲಿ ದೇವರು ಸಂತೋಷಿಸಲಿಲ್ಲ. ಅವರು ಅಡವಿಯಲ್ಲಿ ಸಂಹರಿಸಲ್ಪಟ್ಟರೆಂದು ಬರೆದದೆಯಷ್ಟೆ.


ಅದಕ್ಕೆ ಯೇಸು - ನಿನ್ನ ದೇವರಾಗಿರುವ ಕರ್ತನನ್ನು ಪರೀಕ್ಷಿಸಬಾರದು ಎಂಬದಾಗಿ ಸಹ ಬರೆದದೆ ಅಂದನು.


ಈಗ ಅಹಂಕಾರಿಗಳನ್ನು ಧನ್ಯರೆಂದು ಕೊಂಡಾಡಬೇಕಾಗಿ ಬಂತು; ಹೌದು, ದುಷ್ಕರ್ಮಿಗಳು ಏಳಿಗೆಗೆ ಬಂದಿದ್ದಾರೆ, ದೇವರನ್ನು ಪರೀಕ್ಷಿಸಿದರೂ ಸುರಕ್ಷಿತರಾಗಿದ್ದಾರೆ ಅಂದುಕೊಂಡಿದ್ದೀರಲ್ಲಾ.


ಅರಣ್ಯದಲ್ಲಿ ಆಶಾತುರರಾಗಿ ಅಡವಿಯಲ್ಲಿ ದೇವರನ್ನು ಪರೀಕ್ಷಿಸಿದರು.


ಯೆಹೋವನು ಮೋಶೆಗೆ - ಈ ಜನರು ಇನ್ನು ಎಷ್ಟರ ಮಟ್ಟಿಗೆ ನನ್ನನ್ನು ಅಲಕ್ಷ್ಯಮಾಡುವರೋ; ನಾನು ನಡಿಸಿದ ಎಲ್ಲಾ ಮಹತ್ಕಾರ್ಯಗಳನ್ನು ಇವರು ಪ್ರತ್ಯಕ್ಷವಾಗಿ ನೋಡಿದಾಗ್ಯೂ ಇನ್ನು ಎಷ್ಟು ದಿನ ನನ್ನನ್ನು ನಂಬದೆ ಇರುವರೋ.


ಅವರು ಮೋಶೆಗೆ - ಐಗುಪ್ತದೇಶದಲ್ಲಿ ಸಮಾಧಿಗಳಿಲ್ಲವಾದದರಿಂದ ಅರಣ್ಯದಲ್ಲಿ ಸಾಯಲಿ ಎಂಬದಾಗಿ ನಮ್ಮನ್ನು ಇಲ್ಲಿಗೆ ಕರಕೊಂಡು ಬಂದಿಯೇನು? ಯಾಕೆ ನಮಗೆ ಈ ಪ್ರಕಾರ ಮಾಡಿ ಐಗುಪ್ತದೇಶದಿಂದ ಕರಕೊಂಡು ಬಂದಿ?


ಇಪ್ಪತ್ತು ವರುಷ ನಿನ್ನ ಮನೆಯಲ್ಲಿದ್ದೆನು; ನಿನ್ನಿಬ್ಬರ ಹೆಣ್ಣುಮಕ್ಕಳಿಗಾಗಿ ಹದಿನಾಲ್ಕು ವರುಷವೂ ನಿನ್ನ ಆಡುಕುರಿಗಳಿಗಾಗಿ ಆರು ವರುಷವೂ ಸೇವೆ ಮಾಡಿದೆನು. ನೀನು ಹತ್ತು ಸಾರಿ ನನ್ನ ಸಂಬಳವನ್ನು ಬದಲಾಯಿಸಿದಿ.


ಫರೋಹನೂ ಅವನ ಸೇವಕರೂ ನಮ್ಮನ್ನು ನೋಡಿ ಹೇಸಿಕೊಳ್ಳುವಂತೆ ನೀವು ಮಾಡಿದಿರಿ; ನಮ್ಮನ್ನು ಸಂಹಾರಮಾಡುವದಕ್ಕೆ ಅವರ ಕೈಗೆ ಕತ್ತಿಯನ್ನು ಕೊಟ್ಟ ಹಾಗಾಯಿತು; ಯೆಹೋವನು ನಿಮ್ಮ ತಪ್ಪನ್ನು ವಿಚಾರಿಸಿ ತಕ್ಕ ಶಿಕ್ಷೆಯನ್ನು ವಿಧಿಸಲಿ ಎಂದು ಹೇಳಿದರು.


ಜನರು - ನಾವೇನು ಕುಡಿಯಬೇಕೆಂದು ಮೋಶೆಯ ಮೇಲೆ ಗುಣುಗುಟ್ಟುತ್ತಿರಲು ಮೋಶೆಯು ಯೆಹೋವನನ್ನು ಪ್ರಾರ್ಥಿಸಿದನು.


ಅರಣ್ಯದಲ್ಲಿ ಇಸ್ರಾಯೇಲ್ಯರ ಸಮೂಹವೆಲ್ಲಾ ಮೋಶೆ ಆರೋನರ ಮೇಲೆ ಗುಣುಗುಟ್ಟಿ


ಅಲ್ಲಿ ಜನರು ನೀರಿಲ್ಲದೆ ಬಾಯಾರಿಕೆಯ ಸಂಕಟದಿಂದ ಮೋಶೆಯ ಮೇಲೆ ಗುಣುಗುಟ್ಟುತ್ತಾ - ನೀನು ನಮ್ಮನ್ನೂ ನಮ್ಮ ಮಕ್ಕಳನ್ನೂ ದನಗಳನ್ನೂ ಐಗುಪ್ತ ದೇಶದಿಂದ ಕರತಂದು ಈಗ ನೀರಿಲ್ಲದೆ ಸಾಯುವ ಹಾಗೆ ಮಾಡಿದ್ದೇಕೆ ಎಂದರು.


ಇಸ್ರಾಯೇಲ್ಯರು - ಯೆಹೋವನು ನಮ್ಮ ಮಧ್ಯದಲ್ಲಿ ಇದ್ದಾನೋ ಇಲ್ಲವೋ ಎಂದು ಯೆಹೋವನನ್ನು ಅಲ್ಲಿ ಪರೀಕ್ಷಿಸಿದ್ದರಿಂದ ಮೋಶೆ ಆ ಸ್ಥಳಕ್ಕೆ ಮಸ್ಸಾ ಎಂತಲೂ ಅವರು ವಿವಾದ ಮಾಡಿದ್ದರಿಂದ ಮೆರೀಬಾ ಎಂತಲೂ ಹೆಸರಿಟ್ಟನು.


ಇಸ್ರಾಯೇಲ್ಯರು ತಮಗೆ ದುರವಸ್ಥೆ ಪ್ರಾಪ್ತವಾಯಿತೆಂದು ಯೆಹೋವನಿಗೆ ಕೇಳಿಸುವಂತೆ ಗುಣುಗುಟ್ಟುವವರಾದರು. ಅದಕ್ಕೆ ಆತನು ಕೋಪಗೊಂಡು ಅವರ ಮಧ್ಯದಲ್ಲಿ ಬೆಂಕಿಯನ್ನುಂಟುಮಾಡಿದ್ದರಿಂದ ಪಾಳೆಯದ ಕಡೇ ಭಾಗದಲ್ಲಿದ್ದವರು ಸುಟ್ಟುಹೋದರು.


ಅವರ ಮಧ್ಯದಲ್ಲಿದ್ದ ಇತರ ಜನರು ಮಾಂಸವನ್ನು ಆಶಿಸಿದರು. ಇಸ್ರಾಯೇಲ್ಯರು ಕೂಡ ತಿರಿಗಿ ಅತ್ತುಕೊಂಡು - ಮಾಂಸವು ನಮಗೆ ಹೇಗೆ ಲಭಿಸೀತು;


ಮೋಶೆ ಕೂಷ್ ದೇಶದ ಸ್ತ್ರೀಯನ್ನು ಮದುವೆ ಮಾಡಿಕೊಂಡಿದ್ದನು. ಅದರ ನಿವಿುತ್ತ ವಿುರ್ಯಾಮಳೂ ಆರೋನನೂ ಅವನಿಗೆ ವಿರೋಧವಾಗಿ ಮಾತಾಡುವವರಾಗಿ -


ಇಸ್ರಾಯೇಲ್ಯರೆಲ್ಲರೂ ಮೋಶೆ ಆರೋನರಿಗೆ ವಿರೋಧವಾಗಿ ಗುಣುಗುಟ್ಟಿ - ನಾವು ಐಗುಪ್ತದೇಶದಲ್ಲಿಯೇ ಸತ್ತಿದ್ದರೆ ಎಷ್ಟೋ ಮೇಲಾಗಿತ್ತು; ಈ ಅರಣ್ಯದಲ್ಲಿಯಾದರೂ ಸತ್ತಿದ್ದರೆ ಮೇಲಾಗಿತ್ತು.


ನೀವು ಅರಣ್ಯದಲ್ಲಿ ನಿಮ್ಮ ದೇವರಾದ ಯೆಹೋವನಿಗೆ ಕೋಪಹುಟ್ಟಿಸಿದ್ದನ್ನು ನೆನಪುಮಾಡಿಕೊಳ್ಳಿರಿ; ಅದನ್ನು ಮರೆಯಬೇಡಿರಿ. ನೀವು ಐಗುಪ್ತದೇಶವನ್ನು ಬಿಟ್ಟಂದಿನಿಂದ ಈ ಸ್ಥಳಕ್ಕೆ ಬಂದ ದಿನದವರೆಗೂ ಯೆಹೋವನ ಆಜ್ಞೆಗಳನ್ನು ಧಿಕ್ಕರಿಸುವವರಾಗಿದ್ದಿರಿ.


ಆತನನ್ನು ಪದೇಪದೇ ಪರೀಕ್ಷಿಸಿ ಇಸ್ರಾಯೇಲ್ಯರ ಸದಮಲಸ್ವಾವಿುಯನ್ನು ಕರಕರೆಗೊಳಿಸಿದರು.


ಬಳಿಕ ರಾಜನು ಶಾಸ್ತ್ರೀಯ ವಿದ್ಯೆಯ ಸರ್ವವಿಷಯಗಳಲ್ಲಿ ಅವರನ್ನು ವಿಚಾರಮಾಡಲು ಅವನ ಪೂರ್ಣರಾಜ್ಯದಲ್ಲಿನ ಎಲ್ಲಾ ಜೋಯಿಸರಿಗಿಂತಲೂ ಮಂತ್ರವಾದಿಗಳಿಗಿಂತಲೂ ಹತ್ತರಷ್ಟು ನಿಪುಣರಾಗಿ ಕಂಡುಬಂದರು.


ನೀನು ಬಹು ವಿಷಯಗಳನ್ನು ಕಂಡಿದ್ದರೂ ನಿನಗೆ ಗಮನವಿಲ್ಲ; ಇವನ ಕಿವಿ ತೆರೆದಿದ್ದರೂ ಕೇಳನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು