ಐಗುಪ್ತದೇಶದೊಳಗಿಂದ ಬಂದ ಈ ಜನರೊಳಗೆ ಕೆನಿಜ್ಜೀಯನಾದ ಯೆಫುನ್ನೆಯ ಮಗ ಕಾಲೇಬನೂ ನೂನನ ಮಗನಾದ ಯೆಹೋಶುವನೂ ಇವರಿಬ್ಬರೇ ಹೊರತಾಗಿ ಯಾರೂ ನನ್ನನ್ನು ಪೂರ್ಣಮನಸ್ಸಿನಿಂದ ಅನುಸರಿಸದೆ ಹೋದದರಿಂದ ಅವರೊಳಗೆ ಇಪ್ಪತ್ತು ವರುಷ ಮೊದಲುಗೊಂಡು ಹೆಚ್ಚಾದ ವಯಸ್ಸಿನವರಲ್ಲಿ ಅವರಿಬ್ಬರೇ ಹೊರತಾಗಿ ಒಬ್ಬನಾದರೂ ನಾನು ಅಬ್ರಹಾಮ್ ಇಸಾಕ್ ಯಾಕೋಬರಿಗೆ ಪ್ರಮಾಣಪೂರ್ವಕವಾಗಿ ಕೊಟ್ಟ ದೇಶವನ್ನು ನೋಡುವದೇ ಇಲ್ಲ ಎಂದು ಖಂಡಿತವಾಗಿ ಹೇಳಿದನು.
ದೇವರ ಕೆಲಸಗಳು ಲೋಕಾದಿಯಿಂದ ಮುಗಿದು ಹೋಗಿ [ಆತನ ವಿಶ್ರಾಂತಿಯು ಸಿದ್ಧವಾಗಿದ್ದರೂ] ಆತನು - ನನ್ನ ವಿಶ್ರಾಂತಿಯಲ್ಲಿ ಇವರು ಸೇರುವದೇ ಇಲ್ಲವೆಂದು ಕೋಪಗೊಂಡು ಪ್ರಮಾಣಮಾಡಿದೆನು ಎಂಬದಾಗಿ ಹೇಳಿದೆನಷ್ಟೆ. ನಂಬಿರುವ ನಾವಾದರೋ ಆ ವಿಶ್ರಾಂತಿಯಲ್ಲಿ ಸೇರುತ್ತಲೇ ಇದ್ದೇವೆ.
ಅವರ ಮಕ್ಕಳನ್ನು ಆಕಾಶದ ನಕ್ಷತ್ರಗಳಷ್ಟು ಹೆಚ್ಚಿಸಿ - ನೀವು ಈ ದೇಶದೊಳಕ್ಕೆ ಪ್ರವೇಶಿಸಿ ಸ್ವಾಧೀನ ಮಾಡಿಕೊಳ್ಳುವಿರಿ ಎಂದು ಅವರ ಪಿತೃಗಳಿಗೆ ವಾಗ್ದಾನಮಾಡಿದ್ದ ದೇಶಕ್ಕೆ ಅವರನ್ನು ಬರಮಾಡಿದಿ.
ಅವರೆಲ್ಲರೂ ಅರಣ್ಯದಲ್ಲಿಯೇ ಸಾಯುವರೆಂದು ಯೆಹೋವನು ಅವರ ವಿಷಯದಲ್ಲಿ ಹೇಳಿದ್ದನಷ್ಟೆ; ಆದದರಿಂದ ಯೆಫುನ್ನೆಯ ಮಗನಾದ ಕಾಲೇಬ್ ಮತ್ತು ನೂನನ ಮಗನಾದ ಯೆಹೋಶುವ ಇವರಿಬ್ಬರೇ ಹೊರತಾಗಿ ಅವರಲ್ಲಿ ಯಾರೂ ಉಳಿಯಲಿಲ್ಲ.
ಆ ದೇಶವನ್ನು ನಿಮಗೇ ಕೊಟ್ಟಿದ್ದೇನೆ; ಯೆಹೋವನೆಂಬ ನಾನು ನಿಮ್ಮ ಪಿತೃಗಳಾದ ಅಬ್ರಹಾಮ್ ಇಸಾಕ್ ಯಾಕೋಬರಿಗೂ ಅವರ ಸಂತತಿಯವರಿಗೂ ಆ ದೇಶವನ್ನು ಪ್ರಮಾಣಪೂರ್ವಕವಾಗಿ ವಾಗ್ದಾನ ಮಾಡಿದೆನಲ್ಲಾ. ಅದರಲ್ಲಿ ಪ್ರವೇಶಮಾಡಿ ಸ್ವಾಧೀನಮಾಡಿಕೊಳ್ಳಿರಿ ಎಂದು ಆಜ್ಞಾಪಿಸಿದನು.