ಅರಣ್ಯಕಾಂಡ 14:3 - ಕನ್ನಡ ಸತ್ಯವೇದವು J.V. (BSI)3 ಯೆಹೋವನು ನಮ್ಮನ್ನು ಯಾಕೆ ಕತ್ತಿಯ ಬಾಯಿಂದ ಸಾಯಿಸುವದಕ್ಕೆ ಈ ದೇಶಕ್ಕೆ ಬರಮಾಡುತ್ತಾನೆ; ನಮ್ಮ ಹೆಂಡರೂ ಮಕ್ಕಳೂ ಪರರ ಪಾಲಾಗುವರಲ್ಲಾ; ನಾವು ಐಗುಪ್ತದೇಶಕ್ಕೆ ತಿರಿಗಿ ಹೋಗುವದು ಒಳ್ಳೇದಲ್ಲವೇ ಎಂದು ಹೇಳಿಕೊಳ್ಳುತ್ತಾ ಒಬ್ಬರ ಸಂಗಡಲೊಬ್ಬರು - ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಯೆಹೋವನು ನಮ್ಮನ್ನು ಯಾಕೆ ಕತ್ತಿಯ ಬಾಯಿಂದ ಸಾಯಿಸುವುದಕ್ಕೆ ಈ ದೇಶಕ್ಕೆ ಕರೆದುಕೊಂಡು ಬಂದನು. ನಮ್ಮ ಹೆಂಡತಿಯರು ಮತ್ತು ಮಕ್ಕಳು ಬೇರೆಯವರ ಪಾಲಾಗುವರು. ನಾವು ಐಗುಪ್ತ ದೇಶಕ್ಕೆ ತಿರುಗಿ ಹೋಗುವುದು ಒಳ್ಳೆಯದಲ್ಲವೇ” ಎಂದು ಮಾತನಾಡಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಕತ್ತಿಯ ಬಾಯಿಗೆ ತುತ್ತಾಗಿಸಲು ಸರ್ವೇಶ್ವರ ಸ್ವಾಮಿ ನಮ್ಮನ್ನೇಕೆ ಈ ನಾಡಿಗೆ ಬರಮಾಡಿದರು? ನಮ್ಮ ಮಡದಿ ಮಕ್ಕಳು ಪರರ ಪಾಲಾಗುವರಲ್ಲಾ? ನಾವು ಮರಳಿ ಈಜಿಪ್ಟ್ ದೇಶಕ್ಕೆ ಹೋಗುವುದೇ ಒಳಿತಲ್ಲವೆ?” ಎಂದು ಹೇಳಿಕೊಂಡರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಯುದ್ಧದಲ್ಲಿ ನಾವು ಸತ್ತುಹೋಗುವಂತೆ ಯೆಹೋವನು ನಮ್ಮನ್ನು ಈ ಹೊಸ ದೇಶಕ್ಕೆ ತರುತ್ತಿರುವುದೇಕೆ? ವೈರಿಗಳು ನಮ್ಮನ್ನು ಕೊಂದು ನಮ್ಮ ಹೆಂಡತಿಯರನ್ನೂ ಮಕ್ಕಳನ್ನೂ ತೆಗೆದುಕೊಳ್ಳುವರು. ನಾವು ಈಜಿಪ್ಟಿಗೆ ಮರಳಿಹೋಗುವುದೇ ಉತ್ತಮ” ಎಂದು ಹೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ನಾವು ಖಡ್ಗದಿಂದ ಕೊಲೆಯಾಗುವ ಹಾಗೆಯೂ ನಮ್ಮ ಹೆಂಡತಿಯರು ಮಕ್ಕಳು ಸುಲಿಗೆಯಾಗುವ ಹಾಗೆಯೂ ಯೆಹೋವ ದೇವರು ನಮ್ಮನ್ನು ಈ ದೇಶಕ್ಕೆ ಏಕೆ ಬರಮಾಡಿದ್ದಾರೆ? ಈಜಿಪ್ಟ್ ದೇಶಕ್ಕೆ ನಾವು ತಿರುಗಿ ಹೋಗುವುದು ನಮಗೆ ಒಳ್ಳೆಯದಲ್ಲವೋ? ಅಧ್ಯಾಯವನ್ನು ನೋಡಿ |