Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 14:30 - ಕನ್ನಡ ಸತ್ಯವೇದವು J.V. (BSI)

30 ಯೆಫುನ್ನೆಯ ಮಗನಾದ ಕಾಲೇಬ್ ಮತ್ತು ನೂನನ ಮಗನಾದ ಯೆಹೋಶುವ ಇವರಿಬ್ಬರೇ ಹೊರತು ನಿಮ್ಮಲ್ಲಿ ಯಾರೂ ನಿಮ್ಮ ನಿವಾಸಕ್ಕಾಗಿ ನಾನು ಪ್ರಮಾಣಪೂರ್ವಕವಾಗಿ ವಾಗ್ದಾನ ಮಾಡಿದ ದೇಶವನ್ನು ಸೇರುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಯೆಫುನ್ನೆಯ ಮಗನಾದ ಕಾಲೇಬನು ಮತ್ತು ನೂನನ ಮಗನಾದ ಯೆಹೋಶುವನು ಇವರಿಬ್ಬರೇ ಹೊರತು ನಿಮ್ಮಲ್ಲಿ ಯಾರೂ ನಿಮ್ಮ ವಾಸಕ್ಕಾಗಿ ನಾನು ಪ್ರಮಾಣಪೂರ್ವಕವಾಗಿ ವಾಗ್ದಾನಮಾಡಿದ ದೇಶವನ್ನು ಸೇರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ಯೆಫುನ್ನೆಯ ಮಗ ಕಾಲೇಬ್ ಮತ್ತು ನೂನನ ಮಗ ಯೆಹೋಶುವ ಇವರಿಬ್ಬರೇ ಹೊರತು ನಿಮ್ಮಲ್ಲಿ ಯಾರೂ ನಿಮ್ಮ ನಿವಾಸಕ್ಕಾಗಿ ನಾನು ಪ್ರಮಾಣಪೂರ್ವಕವಾಗಿ ವಾಗ್ದಾನ ಮಾಡಿದ ನಾಡನ್ನು ಸೇರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 ಯೆಫುನ್ನೆಯ ಮಗನಾದ ಕಾಲೇಬ್ ಮತ್ತು ನೂನನ ಮಗನಾದ ಯೆಹೋಶುವ ಇವರಿಬ್ಬರೇ ಹೊರತು ನಿಮ್ಮಲ್ಲಿ ಬೇರೆ ಯಾರೂ ನಾನು ಪ್ರಮಾಣಪೂರ್ವಕವಾಗಿ ವಾಗ್ದಾನ ಮಾಡಿದ ದೇಶವನ್ನು ಸೇರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 ಯೆಫುನ್ನೆಯ ಮಗ ಕಾಲೇಬನೂ, ನೂನನ ಮಗ ಯೆಹೋಶುವನ ಹೊರತು ನಾನು ನಿಮ್ಮನ್ನು ವಾಸಮಾಡುವುದಕ್ಕೆ ಪ್ರಮಾಣಪೂರ್ವಕವಾಗಿ ವಾಗ್ದಾನ ಮಾಡಿದ ದೇಶಕ್ಕೆ ನಿಸ್ಸಂದೇಹವಾಗಿ ನೀವೆಲ್ಲರೂ ಬಾರದೆ ಇರುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 14:30
12 ತಿಳಿವುಗಳ ಹೋಲಿಕೆ  

ಅವರೆಲ್ಲರೂ ಅರಣ್ಯದಲ್ಲಿಯೇ ಸಾಯುವರೆಂದು ಯೆಹೋವನು ಅವರ ವಿಷಯದಲ್ಲಿ ಹೇಳಿದ್ದನಷ್ಟೆ; ಆದದರಿಂದ ಯೆಫುನ್ನೆಯ ಮಗನಾದ ಕಾಲೇಬ್ ಮತ್ತು ನೂನನ ಮಗನಾದ ಯೆಹೋಶುವ ಇವರಿಬ್ಬರೇ ಹೊರತಾಗಿ ಅವರಲ್ಲಿ ಯಾರೂ ಉಳಿಯಲಿಲ್ಲ.


ಅವರಲ್ಲಿ ನೂನನ ಮಗನಾದ ಯೆಹೋಶುವನೂ ಯೆಫುನ್ನೆಯ ಮಗನಾದ ಕಾಲೇಬನೂ ಉಳಿದರು.


ಆಸ್ತಿಯನ್ನು ನೀನೇ ತಕ್ಕೋ ಎಂದು ಹೇಳಲು ಅಬ್ರಾಮನು ಅವನಿಗೆ - ಒಂದು ದಾರವನ್ನಾಗಲಿ ಕೆರದ ಬಾರನ್ನಾಗಲಿ ನಿನ್ನದರಲ್ಲಿ ಯಾವದನ್ನೂ ತೆಗೆದುಕೊಳ್ಳುವದಿಲ್ಲವೆಂದು ಭೂಮ್ಯಾಕಾಶಗಳನ್ನು ನಿರ್ಮಾಣಮಾಡಿದ ಪರಾತ್ಪರದೇವರಾಗಿರುವ ಯೆಹೋವನ ಕಡೆಗೆ ಕೈಯೆತ್ತಿ ಪ್ರಮಾಣ ಮಾಡುತ್ತೇನೆ. ಅಬ್ರಾಮನು ನನ್ನ ಸೊತ್ತಿನಿಂದಲೇ ಐಶ್ವರ್ಯವಂತನಾದನೆಂದು ಹೇಳಿಕೊಳ್ಳುವದಕ್ಕೆ ನಿನಗೆ ಆಸ್ಪದವಾಗಬಾರದು, ನನಗೆ ಏನೂ ಬೇಡ.


ಪರಲೋಕವನ್ನೂ ಅದರಲ್ಲಿರುವ ಸಮಸ್ತವನ್ನೂ ಭೂವಿುಯನ್ನೂ ಅದರಲ್ಲಿರುವ ಸಮಸ್ತವನ್ನೂ ಸಮುದ್ರವನ್ನೂ ಅದರಲ್ಲಿರುವ ಸಮಸ್ತವನ್ನೂ ಸೃಷ್ಟಿಸಿ


ಇದಲ್ಲದೆ ಅಬ್ರಹಾಮ ಇಸಾಕ ಯಾಕೋಬರಿಗೆ ಕೊಡುವೆನೆಂದು ನಾನು ಪ್ರಮಾಣವಾಗಿ ಹೇಳಿದ ದೇಶಕ್ಕೆ ನಿಮ್ಮನ್ನು ಸೇರಿಸಿ ಅದನ್ನು ನಿಮಗೆ ಸ್ವದೇಶವನ್ನಾಗಿ ಕೊಡುವೆನು; ಯೆಹೋವನೇ ನಾನು; ಹೀಗೆ ಅವರಿಗೆ ಹೇಳು ಅಂದನು.


ಯೆಹೂದ ಕುಲದ ಯೆಫುನ್ನೆಯ ಮಗನಾದ ಕಾಲೇಬ್,


ನನ್ನ ದಾಸನಾದ ಕಾಲೇಬನು ಅಂಥ ಮನಸ್ಸುಳ್ಳವನಾಗಿರದೆ ಮನಃಪೂರ್ವಕವಾಗಿ ನನ್ನ ಮಾತನ್ನು ಅನುಸರಿಸಿ ನಡೆದದ್ದರಿಂದ ಅವನನ್ನೇ ಅವನು ಸಂಚರಿಸಿದ ಆ ದೇಶದಲ್ಲಿ ಸೇರಿಸುವೆನು; ಅವನ ಸಂತತಿಯವರು ಅದನ್ನು ಸ್ವಾಧೀನಪಡಿಸಿಕೊಳ್ಳುವರು.


ಆಮೇಲೆ ಸಕಲದೇಶಶಿರೋಮಣಿಯಾದ ಯಾವ ದೇಶವನ್ನು ಅವರಿಗೆ ವಾಗ್ದಾನ ಮಾಡಿದೆನೋ ಹಾಲೂ ಜೇನೂ ಹರಿಯುವ ಆ ದೇಶಕ್ಕೆ ನಿಮ್ಮನ್ನು ಸೇರಿಸೆನೆಂದು ಅರಣ್ಯದಲ್ಲಿ ಅವರಿಗೆ ಪ್ರಮಾಣ ಮಾಡಿದೆನು;


ದ್ರೋಹಿಗಳಾದವರನ್ನು ನಿಮ್ಮೊಳಗಿಂದ ಗುಡಿಸಿಬಿಡುವೆನು; ಅವರು ಪ್ರವಾಸಿಗಳಾಗಿದ್ದ ದೇಶದಿಂದ ನಾನು ಅವರನ್ನು ಪಾರುಮಾಡಿದರೂ ಅವರು ಇಸ್ರಾಯೇಲ್ ದೇಶಕ್ಕೆ ಸೇರುವದೇ ಇಲ್ಲ ; ನಾನೇ ಯೆಹೋವನು ಎಂದು ನಿಮಗೆ ಗೊತ್ತಾಗುವದು.


ಆದದರಿಂದ ಇವರು ನನ್ನ ವಿಶ್ರಾಂತಿಯಲ್ಲಿ ಸೇರುವದೇ ಇಲ್ಲವೆಂದು ಕೋಪಗೊಂಡು ಪ್ರಮಾಣಮಾಡಿದೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು