Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 14:33 - ಕನ್ನಡ ಸತ್ಯವೇದವು J.V. (BSI)

33 ನೀವು ಮಾಡಿದ ದ್ರೋಹದ ಫಲವನ್ನು ನಿಮ್ಮ ಮಕ್ಕಳು ಅನುಭವಿಸುವವರಾಗಿ ನಾಲ್ವತ್ತು ವರುಷ ಅರಣ್ಯವಾಸಿಗಳಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 ನಿಮ್ಮೆಲ್ಲರ ಶವಗಳು ಈ ಮರುಭೂಮಿಯಲ್ಲಿ ಬೀಳುವವರೆಗೂ ನೀವು ಮಾಡಿದ ದ್ರೋಹದ ಫಲವನ್ನು ನಿಮ್ಮ ಮಕ್ಕಳು ಅನುಭವಿಸುವವರಾಗಿ ನಲ್ವತ್ತು ವರ್ಷ ಮರುಭೂಮಿಯಲ್ಲಿ ವಾಸಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

33 ನಿಮ್ಮ ಮಕ್ಕಳು ನೀವು ಮಾಡಿದ ದ್ರೋಹದ ಫಲವನ್ನು ಅನುಭವಿಸುವವರಾಗಿ ನಾಲ್ವತ್ತು ವರ್ಷ ಮರುಭೂಮಿಯಲ್ಲೇ ಅಲೆದಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

33 “‘ನಿಮ್ಮ ಅಪನಂಬಿಗಸ್ತಿಕೆಯ ಫಲವನ್ನು ನಿಮ್ಮ ಮಕ್ಕಳು ಅನುಭವಿಸುವವರಾಗಿ ನೀವು ಸಾಯುವತನಕ ನಲವತ್ತು ವರ್ಷ ಮರುಭೂಮಿಯಲ್ಲಿ ಅಲೆದಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

33 ಇದಲ್ಲದೆ ನಿಮ್ಮ ಮಕ್ಕಳು ನಲವತ್ತು ವರುಷ ಮರುಭೂಮಿಯಲ್ಲಿ ಅಲೆದಾಡಿ, ನಿಮ್ಮ ಹೆಣಗಳು ಮರುಭೂಮಿಯಲ್ಲಿ ಹಾಳಾಗಿ ಹೋಗುವ ತನಕ ನಿಮ್ಮ ಅಪನಂಬಿಗಸ್ತಿಕೆಯನ್ನು ಅನುಭವಿಸುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 14:33
20 ತಿಳಿವುಗಳ ಹೋಲಿಕೆ  

ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ನೀನು ನನ್ನನ್ನು ಬೆನ್ನ ಹಿಂದಕ್ಕೆ ಎಸೆದು ಮರೆತುಬಿಟ್ಟದ್ದರಿಂದ ನಿನ್ನ ಪುಂಡಾಟದ ಮತ್ತು ಸೂಳೆತನದ ಫಲವನ್ನು ನೀನೂ ಅನುಭವಿಸಬೇಕು.


ಯೆಹೋವನು ಇಸ್ರಾಯೇಲ್ಯರ ಮೇಲೆ ಕೋಪಗೊಂಡವನಾಗಿ ತನ್ನ ದೃಷ್ಟಿಯಲ್ಲಿ ಕೆಟ್ಟ ನಡತೆಯುಳ್ಳ ಆ ಸಂತತಿಯವರೆಲ್ಲರೂ ನಾಶವಾಗುವ ತನಕ, ಅಂದರೆ ನಾಲ್ವತ್ತು ವರುಷಕಾಲ, ಇಸ್ರಾಯೇಲ್ಯರನ್ನು ಅರಣ್ಯದಲ್ಲಿ ತಿರುಗಾಡ ಮಾಡಿದನು.


ಪ್ರಭುಗಳಿಗೆ ಅಪಮಾನವನ್ನುಂಟುಮಾಡಿ ಅವರನ್ನು ದಾರಿಯಿಲ್ಲದ ಅರಣ್ಯದಲ್ಲಿ ಅಲೆದಾಡಿಸುವಾತನು


ಇಸ್ರಾಯೇಲೇ, ಜನಾಂಗಗಳಂತೆ ವಿುತಿಮೀರಿ ಉಲ್ಲಾಸಿಸಬೇಡ; ನೀನು ನಿನ್ನ ದೇವರನ್ನು ಬಿಟ್ಟು ಸೂಳೆತನ ನಡಿಸಿದ್ದೀ; ಎಲ್ಲಾ ಕಣಗಳಲ್ಲಿನ ಫಲವನ್ನು ಅದರ ಪ್ರತಿಫಲವನ್ನಾಗಿ ಆಶಿಸಿದ್ದೀ.


ಅವರು ಅರಣ್ಯದಲ್ಲಿಯೂ ಮರಳುಕಾಡಿನಲ್ಲಿಯೂ ದಾರಿತಪ್ಪಿ ಅಲೆಯುವವರಾಗಿ ಜನವಿರುವ ಊರನ್ನು ಕಾಣದೆ


ಯೆಹೋವನು ಈ ಮಾತುಗಳನ್ನು ಮೋಶೆಗೆ ಹೇಳಿದಂದಿನಿಂದ ಇಸ್ರಾಯೇಲ್ಯರು ಅರಣ್ಯದಲ್ಲಿ ಅಲೆಯುತ್ತಿದ್ದ ವರುಷಗಳೂ ಸೇರಿ ನಾಲ್ವತ್ತೈದು ವರುಷಗಳು ದಾಟಿದವು. ಯೆಹೋವನು ತಾನು ನುಡಿದಂತೆಯೇ ಈ ಕಾಲವೆಲ್ಲಾ ನನ್ನನ್ನು ಜೀವದಿಂದುಳಿಸಿದ್ದಾನೆ. ಈಗ ನಾನು ಎಂಭತ್ತೈದು ವರುಷದವನಾಗಿದ್ದೇನೆ.


ಮೋಶೆಯು ಹೆಷ್ಬೋನಿನಲ್ಲಿದ್ದ ಅಮೋರಿಯರ ಅರಸನಾದ ಸೀಹೋನನನ್ನೂ ಅಷ್ಟಾರೋತ್, ಎದ್ರೈ ಎಂಬ ಪಟ್ಟಣಗಳಲ್ಲಿದ್ದ ಬಾಷಾನಿನ ಅರಸನಾದ ಓಗನನ್ನೂ ಜಯಿಸಿದ ತರುವಾಯ,


ಮಹಾಯಾಜಕ ಆರೋನನು ಯೆಹೋವನಿಂದ ಅಪ್ಪಣೆಯನ್ನು ಹೊಂದಿ ಹೋರ್ ಬೆಟ್ಟವನ್ನು ಹತ್ತಿ ಇಸ್ರಾಯೇಲ್ಯರು ಐಗುಪ್ತದೇಶದಿಂದ ಹೊರಟ ನಾಲ್ವತ್ತನೆಯ ವರುಷದ ಐದನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಅಲ್ಲೇ ಪ್ರಾಣಬಿಟ್ಟನು.


ಆ ಪುರುಷನು ನಿರಪರಾಧಿಯಾಗುವನು; ಆ ಸ್ತ್ರೀಯು ತನ್ನ ಪಾಪದ ಫಲವನ್ನು ಅನುಭವಿಸಬೇಕು.


ಅವನೇ ಐಗುಪ್ತದೇಶದಲ್ಲಿಯೂ ಕೆಂಪು ಸಮುದ್ರದಲ್ಲಿಯೂ ನಾಲ್ವತ್ತು ವರುಷ ಅಡವಿಯಲ್ಲಿಯೂ ಅದ್ಭುತಕಾರ್ಯಗಳನ್ನೂ ಸೂಚಕಕಾರ್ಯಗಳನ್ನೂ ಮಾಡುತ್ತಾ ಅವರನ್ನು ನಡಿಸಿಕೊಂಡು ಬಂದವನು.


ಅವುಗಳಿಗೆ ಅಡ್ಡಬೀಳಲೂ ಬಾರದು ಪೂಜೆಮಾಡಲೂ ಬಾರದು. ನಿನ್ನ ದೇವರಾದ ಯೆಹೋವನೆಂಬ ನಾನು ನನಗೆ ಸಲ್ಲತಕ್ಕ ಗೌರವವನ್ನು ಮತ್ತೊಬ್ಬನಿಗೆ ಸಲ್ಲಗೊಡಿಸದವನಾದದರಿಂದ ನನ್ನನ್ನು ದ್ವೇಷಿಸುವವರ ವಿಷಯದಲ್ಲಿ ತಂದೆಗಳ ದೋಷಫಲವನ್ನು ಮಕ್ಕಳ ಮೇಲೆ ಮೂರು ನಾಲ್ಕು ತಲೆಗಳವರೆಗೆ ಬರಮಾಡುವವನಾಗಿಯೂ


ನೀವು ಕೈಹಾಕಿದ ಎಲ್ಲಾ ಕೆಲಸಗಳನ್ನೂ ನಿಮ್ಮ ದೇವರಾದ ಯೆಹೋವನು ಸಫಲಪಡಿಸಿದ್ದಾನಲ್ಲಾ. ಈ ದೊಡ್ಡ ಅರಣ್ಯದಲ್ಲಿ ನೀವು ಸಂಚರಿಸುತ್ತಿರುವಾಗೆಲ್ಲಾ ಆತನು ನಿಮ್ಮನ್ನು ಪರಾಂಬರಿಸುತ್ತಾ ಬಂದನು. ಈ ನಾಲ್ವತ್ತು ವರುಷ ನಿಮ್ಮ ದೇವರಾದ ಯೆಹೋವನು ನಿಮ್ಮ ಸಂಗಡ ಇದ್ದದರಿಂದ ನಿಮಗೆ ಏನೂ ಕಡಿಮೆಯಾಗಲಿಲ್ಲ ಎಂದು ಹೇಳಿದನು.


ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಈ ನಾಲ್ವತ್ತು ವರುಷ ಅರಣ್ಯದಲ್ಲಿ ನಡಿಸಿದ್ದನ್ನೂ ನೀವು ತನ್ನ ಆಜ್ಞೆಗಳನ್ನು ಕೈಕೊಳ್ಳುವವರೋ ಅಲ್ಲವೋ ಎಂದು ತಿಳಿದುಕೊಳ್ಳುವದಕ್ಕೆ ನಿಮ್ಮನ್ನು ಕಷ್ಟಕ್ಕೆ ಒಳಪಡಿಸಿ ನಿಮ್ಮ ಮನೋಭಾವವನ್ನು ಪರೀಕ್ಷಿಸಿದ್ದನ್ನೂ ನೆನಪಿಗೆ ತಂದುಕೊಳ್ಳಿರಿ.


ಈ ನಾಲ್ವತ್ತು ವರುಷ ನಿಮ್ಮ ಮೈಮೇಲಿದ್ದ ಉಡುಪು ಜೀರ್ಣವಾಗಲಿಲ್ಲ; ನಿಮ್ಮ ಕಾಲುಗಳು ಬಾತುಹೋಗಲಿಲ್ಲ.


ನಾಲ್ಪತ್ತು ವರುಷ ನಾನು ನಿಮ್ಮನ್ನು ಅರಣ್ಯದಲ್ಲಿ ನಡಿಸಿಕೊಂಡು ಬಂದಿದ್ದೇನೆ. ನಿಮ್ಮ ಮೈಮೇಲಿದ್ದ ಉಡುಪಾಗಲಿ ಕಾಲಲ್ಲಿದ್ದ ಕೆರವಾಗಲಿ ಜೀರ್ಣವಾಗಲಿಲ್ಲ;


ಐಗುಪ್ತದಿಂದ ಬಂದ ಇಸ್ರಾಯೇಲ್ಯರು ಯೆಹೋವನ ಮಾತನ್ನು ಕೇಳದೆ ಹೋದದರಿಂದ ಅವರು ತಮ್ಮ ಭಟರೆಲ್ಲರೂ ಸಂಹಾರವಾಗುವ ತನಕ ನಾಲ್ವತ್ತು ವರುಷ ಅರಣ್ಯದಲ್ಲಿ ಅಲೆಯುತ್ತಿರಬೇಕಾಯಿತು. ಯೆಹೋವನು ತಾನು ಅವರ ಪಿತೃಗಳಿಗೆ ವಾಗ್ದಾನ ಮಾಡಿದ್ದ ಹಾಲೂ ಜೇನೂ ಹರಿಯುವ ದೇಶದಲ್ಲಿ ಅವರನ್ನು ಸೇರಿಸುವದಿಲ್ಲವೆಂದು ಆಣೆಯಿಟ್ಟನು.


ಆದದರಿಂದ ಆತನು ಅವರ ಜೀವಿತ ದಿನಗಳನ್ನು ಉಸಿರಿನಂತೆಯೂ ಅವರ ವರುಷಗಳನ್ನು ಭೀಕರವಾಗಿಯೂ ಮುಗಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು