Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 14:34 - ಕನ್ನಡ ಸತ್ಯವೇದವು J.V. (BSI)

34 ನೀವು ಆ ದೇಶವನ್ನು ಸಂಚರಿಸಿ ನೋಡಿದ ನಾಲ್ವತ್ತು ದಿನಗಳಿಗೆ ಸಮನಾಗಿ, ದಿನ ಒಂದಕ್ಕೆ ಒಂದು ಸಂವತ್ಸರದ ಮೇರೆಗೆ, ನಾಲ್ವತ್ತು ವರುಷ ನಿಮ್ಮ ಪಾಪದ ಫಲವನ್ನು ಅನುಭವಿಸುವವರಾಗಿ ನಾನು ಕೈಬಿಟ್ಟವರ ಗತಿ ಎಂಥದೆಂದು ತಿಳಿದುಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

34 ನೀವು ಆ ದೇಶವನ್ನು ಸಂಚರಿಸಿ ನೋಡಿದ ನಲ್ವತ್ತು ದಿನಗಳ ಪ್ರಕಾರ, ಒಂದು ದಿನಕ್ಕೆ ಒಂದು ವರ್ಷವಾಗಿ ಈ ಪ್ರಕಾರ ನಲ್ವತ್ತು ವರ್ಷ ನಿಮ್ಮ ಪಾಪಫಲವನ್ನು ಅನುಭವಿಸುವವರಾಗಿ ನಾನು ಕೈಬಿಟ್ಟವರ ಗತಿ ಎಂಥದೆಂದು ತಿಳಿದುಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

34 ನೀವು ಆ ನಾಡನ್ನು ನಾಲ್ವತ್ತು ದಿನಗಳು ಸಂಚರಿಸಿ ನೋಡಿದಿರಿ. ಅಂತೆಯೇ ಒಂದು ದಿನಕ್ಕೆ ಒಂದು ವರ್ಷದ ಮೇರೆಗೆ ನಾಲ್ವತ್ತು ವರ್ಷ ನಿಮ್ಮ ಪಾಪದ ಫಲವನ್ನು ಅನುಭವಿಸಿರಿ; ನಾನು ಕೈಬಿಟ್ಟವರ ಗತಿ ಎಂಥದೆಂದು ತಿಳಿದುಕೊಳ್ಳುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

34 ನೀವು ಆ ದೇಶವನ್ನು ಸಂಚರಿಸಿ ನೋಡಿದ ನಲವತ್ತು ದಿನಗಳಿಗೆ ಸಮನಾಗಿ, ದಿನ ಒಂದಕ್ಕೆ ಒಂದು ಸಂವತ್ಸರದ ಮೇರೆಗೆ ನಲವತ್ತು ವರ್ಷ ನಿಮ್ಮ ಪಾಪದ ಫಲವನ್ನು ಅನುಭವಿಸುವಿರಿ. ನನ್ನನ್ನು ತಿರಸ್ಕರಿಸುವುದೆಂದರೆ ಏನೆಂಬುದು ನಿಮಗೆ ಗೊತ್ತಾಗುತ್ತದೆ.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

34 ನೀವು ಆ ದೇಶವನ್ನು ಪರೀಕ್ಷಿಸಿದ ನಲವತ್ತು ದಿವಸಗಳ ಪ್ರಕಾರ ಒಂದು ದಿನಕ್ಕೆ ಒಂದು ವರುಷವಾಗಿ ಈ ಪ್ರಕಾರ ನಲವತ್ತು ವರುಷ ನಿಮ್ಮ ಅಪರಾಧಗಳನ್ನು ಹೊತ್ತು, ನನ್ನ ವಾಗ್ದಾನವನ್ನು ಭಂಗಪಡಿಸಿದ ಫಲವನ್ನು ನೀವು ಅನುಭವಿಸುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 14:34
26 ತಿಳಿವುಗಳ ಹೋಲಿಕೆ  

ಅಷ್ಟು ದಿವಸಗಳನ್ನು ತೀರಿಸಿದ ಮೇಲೆ ಬಲಮಗ್ಗುಲಲ್ಲಿ ಮಲಗಿಕೊಂಡು ಯೆಹೂದವಂಶದವರ ಅಧರ್ಮವನ್ನು ಹೊತ್ತುಕೊಳ್ಳಬೇಕು; ವರುಷ ಒಂದಕ್ಕೆ ಒಂದು ದಿನದ ಮೇರೆಗೆ ನಾಲ್ವತ್ತು ದಿನ ಅವರ ಅಧರ್ಮವನ್ನು ಹೊತ್ತುಕೊಳ್ಳಬೇಕೆಂದು ನಿನಗೆ ಗೊತ್ತುಮಾಡಿದ್ದೇನೆ.


ಅವರು ನಾಲ್ವತ್ತು ದಿವಸಗಳು ಆ ದೇಶವನ್ನು ಸಂಚರಿಸಿ ನೋಡಿದ ಮೇಲೆ ಪಾರಾನ್ ಅರಣ್ಯದಲ್ಲಿದ್ದ ಮೋಶೆ ಆರೋನರ ಮತ್ತು ಇಸ್ರಾಯೇಲ್ಯರ ಸರ್ವಸಮೂಹದವರ ಬಳಿಗೆ ಕಾದೇಶಿಗೆ ಬಂದು ಅವರಿಗೆ ಸಮಾಚಾರವನ್ನು ತಿಳಿಸಿ ಆ ದೇಶದ ಹಣ್ಣುಗಳನ್ನು ತೋರಿಸಿದರು.


ಅಧರ್ಮವನ್ನು ಕೊನೆಗಾಣಿಸುವದು, ಪಾಪಗಳನ್ನು ತೀರಿಸುವದು, ಅಪರಾಧವನ್ನು ನಿವಾರಿಸುವದು, ಸನಾತನ ಧರ್ಮವನ್ನು ಸ್ಥಾಪಿಸುವದು, ಕನಸನ್ನೂ ಪ್ರವಾದಿಯ ನುಡಿಯನ್ನೂ ಮುದ್ರೆಹಾಕಿ ಯಥಾರ್ಥಮಾಡುವದು, ಅತಿಪರಿಶುದ್ಧವಾದದ್ದನ್ನು ಅಭಿಷೇಕಿಸುವದು, ಇವೆಲ್ಲಾ ನೆರವೇರುವದಕ್ಕೆ ಮೊದಲು ನಿನ್ನ ಜನಕ್ಕೂ ನಿನ್ನ ಪರಿಶುದ್ಧಪುರಕ್ಕೂ ಎಪ್ಪತ್ತು ವಾರಗಳು ಕಳೆಯಬೇಕು ಎಂದು ನಿಷ್ಕರ್ಷೆಯಾಗಿದೆ.


ಹೀಗಿರಲಾಗಿ ದೇವರ ವಿಶ್ರಾಂತಿಯಲ್ಲಿ ಸೇರಬಹುದೆಂಬ ವಾಗ್ದಾನವು ಇನ್ನೂ ಇರುವಲ್ಲಿ ನಿಮ್ಮೊಳಗೆ ಯಾವನಾದರೂ ಆ ವಾಗ್ದಾನದ ಫಲವನ್ನು ಹೊಂದದೆ ತಪ್ಪುವವನಾದಾನೋ ಎಂದು ನಾವು ಭಯಪಡೋಣ.


ನಾನು ನಾಲ್ವತ್ತು ವರುಷ ಆ ಸಂತತಿಯವರ ವಿಷಯದಲ್ಲಿ ಬೇಸರಗೊಂಡೆನು; ಈ ಜನರು ಹೃದಯದಲ್ಲಿ ತಪ್ಪಿಹೋಗುವವರು, ನನ್ನ ಮಾರ್ಗವನ್ನು ತಿಳಿಯದವರು, ಎಂದು ಹೇಳಿದೆನು.


ಈ ಪ್ರಕಾರ ಯೆಹೋವನು ಯೆರೆಮೀಯನ ಮುಖಾಂತರ ಹೇಳಿಸಿದ ಮಾತು ನೆರವೇರಿ ದೇಶವು ತನ್ನ ಸಬ್ಬತ್‍ಕಾಲವನ್ನು ಅನುಭವಿಸುವದಕ್ಕೆ ಮಾರ್ಗವಾಯಿತು. ದೇಶವು ಎಪ್ಪತ್ತು ವರುಷ ಹಾಳುಬಿದ್ದು ಆ ಕಾಲದಲ್ಲೆಲ್ಲಾ ವಿಶ್ರಾಂತಿಯನ್ನು ಅನುಭವಿಸುತ್ತಿತ್ತು.


ನಿನ್ನ ಗೋತ್ರದವರೂ ಸಂತಾನದವರೂ ನಿರಂತರವೂ ನನ್ನ ಸನ್ನಿಧಿಯಲ್ಲಿ ಸೇವೆಮಾಡಬಹುದು ಎಂದು ಆಜ್ಞಾಪಿಸಿದ ಇಸ್ರಾಯೇಲ್‍ದೇವರಾದ ಯೆಹೋವನೆಂಬ ನಾನು ಈಗ ತಿಳಿಸುವದೇನಂದರೆ - ಅದು ನನಗೆ ದೂರವಾಗಿರಲಿ; ನನ್ನನ್ನು ಸನ್ಮಾನಿಸುವವರನ್ನು ಸನ್ಮಾನಿಸುವೆನು; ನನ್ನನ್ನು ತಿರಸ್ಕರಿಸುವವರು ತಿರಸ್ಕಾರಹೊಂದುವರು.


ಇದಲ್ಲದೆ ನನ್ನ ಇಬ್ಬರು ಸಾಕ್ಷಿಗಳು ಗೋಣೀತಟ್ಟುಗಳನ್ನು ಹೊದ್ದುಕೊಂಡು ಸಾವಿರದ ಇನ್ನೂರ ಅರುವತ್ತು ದಿನಗಳ ತನಕ ಪ್ರವಾದಿಸುವ ಹಾಗೆ ಮಾಡುವೆನು.


ನಾನು ಎಲ್ಲಾ ಜನಾಂಗಗಳೊಂದಿಗೆ ಮಾಡಿಕೊಂಡಿದ್ದ ಒಡಂಬಡಿಕೆಯನ್ನು ಭಂಗಪಡಿಸಬೇಕೆಂದು ಕನಿಕರವೆಂಬ ನನ್ನ ಕೋಲನ್ನು ತೆಗೆದು ಕತ್ತರಿಸಿಬಿಟ್ಟೆನು.


ಪ್ರವಾದಿಯ ದೋಷವು ಎಷ್ಟೋ, ಅವನನ್ನು ಪ್ರಶ್ನೆಕೇಳುವವನ ದೋಷವೂ ಅಷ್ಟೇ; ಉಭಯರೂ ತಮ್ಮ ತಮ್ಮ ದೋಷಫಲವನ್ನು ಅನುಭವಿಸುವರು.


ಹೀಗೆ ಆತನು ತನ್ನ ಪರಿಶುದ್ಧವಚನವನ್ನೂ ತನ್ನ ಸೇವಕನಾದ ಅಬ್ರಹಾಮನನ್ನೂ ನೆನಪುಮಾಡಿಕೊಂಡು


ಆತನ ಕೃಪಾವಾತ್ಸಲ್ಯವು ನಿಂತೇ ಹೋಯಿತೋ? ಆತನ ವಾಗ್ದಾನವು ಎಂದೆಂದಿಗೂ ಬಿದ್ದೇ ಹೋಯಿತೋ?


ನನ್ನ ಅಪರಾಧಗಳು ನನ್ನನ್ನು ಮುಣುಗಿಸಿ ಬಿಟ್ಟವೆ; ಅವು ಹೊರಲಾರದಷ್ಟು ಭಾರವಾದ ಹೊರೆಯಂತೆ ನನ್ನನ್ನು ಅದಿವಿುಬಿಟ್ಟವೆ.


ತಾನು ವಾಗ್ದಾನಮಾಡಿದಂತೆ ತನ್ನ ಪ್ರಜೆಗಳಾದ ಇಸ್ರಾಯೇಲ್ಯರಿಗೆ ವಿಶ್ರಾಂತಿಯನ್ನು ಅನುಗ್ರಹಿಸಿದ ಯೆಹೋವನಿಗೆ ಸ್ತೋತ್ರವಾಗಲಿ. ಆತನು ತನ್ನ ಸೇವಕನಾದ ಮೋಶೆಯ ಮುಖಾಂತರವಾಗಿ ಮಾಡಿದ ಅತಿಶ್ರೇಷ್ಠವಾಗ್ದಾನಗಳಲ್ಲಿ ಒಂದೂ ತಪ್ಪಿಹೋಗಲಿಲ್ಲ.


ಲೇವಿಯರೇ ದೇವದರ್ಶನದ ಗುಡಾರದ ಪರಿಚರ್ಯವನ್ನು ಮಾಡಬೇಕು; ಅದರ ಸಂಬಂಧವಾಗಿ ಅವರು ಮಾಡುವ ಪಾಪದ ಫಲವನ್ನು ತಾವೇ ಅನುಭವಿಸಬೇಕು. ಇದು ನಿಮಗೂ ನಿಮ್ಮ ಸಂತತಿಯವರಿಗೂ ಶಾಶ್ವತ ನಿಯಮ. ಆದರೆ ಇಸ್ರಾಯೇಲ್ಯರ ಮಧ್ಯದಲ್ಲಿ ಲೇವಿಯರಿಗೆ ಸ್ವಂತವಾದ ಭೂಸ್ಥಿತಿಯುಂಟಾಗುವದಿಲ್ಲ.


ತಂದೆಯ ಅಥವಾ ತಾಯಿಯ ಒಡಹುಟ್ಟಿದವಳ ಸಂಗ ಮಾಡಬಾರದು; ಹಾಗೆ ಮಾಡಿದವನು ರಕ್ತಸಂಬಂಧಿಯನ್ನು ಸಂಗವಿುಸಿದವನಾದದರಿಂದ ಅವರಿಬ್ಬರೂ ತಮ್ಮ ಪಾಪದ ಫಲವನ್ನು ಅನುಭವಿಸಬೇಕು.


ಆತನು ಸುಮಾರು ನಾಲ್ವತ್ತು ವರುಷಗಳವರೆಗೂ ಅಡವಿಯಲ್ಲಿ ಅವರ ನಡಾವಳಿಯನ್ನು ಸಹಿಸಿಕೊಂಡು


ನೀವು ಕೈಹಾಕಿದ ಎಲ್ಲಾ ಕೆಲಸಗಳನ್ನೂ ನಿಮ್ಮ ದೇವರಾದ ಯೆಹೋವನು ಸಫಲಪಡಿಸಿದ್ದಾನಲ್ಲಾ. ಈ ದೊಡ್ಡ ಅರಣ್ಯದಲ್ಲಿ ನೀವು ಸಂಚರಿಸುತ್ತಿರುವಾಗೆಲ್ಲಾ ಆತನು ನಿಮ್ಮನ್ನು ಪರಾಂಬರಿಸುತ್ತಾ ಬಂದನು. ಈ ನಾಲ್ವತ್ತು ವರುಷ ನಿಮ್ಮ ದೇವರಾದ ಯೆಹೋವನು ನಿಮ್ಮ ಸಂಗಡ ಇದ್ದದರಿಂದ ನಿಮಗೆ ಏನೂ ಕಡಿಮೆಯಾಗಲಿಲ್ಲ ಎಂದು ಹೇಳಿದನು.


ಅವರು ಎಷ್ಟು ವರುಷ ತಮ್ಮ ಅಧರ್ಮದ ಫಲವನ್ನು ಅನುಭವಿಸಬೇಕೋ ಅಷ್ಟು ದಿವಸ ಅಂದರೆ ಮುನ್ನೂರತೊಂಭತ್ತು ದಿವಸ ನೀನು ಮಲಗಿಕೊಂಡಿರಬೇಕೆಂದು ನಿನಗೆ ನೇವಿುಸಿದ್ದೇನೆ; ಅಷ್ಟು ದಿವಸ ಇಸ್ರಾಯೇಲ್ ವಂಶದವರ ಅಧರ್ಮವನ್ನು ನೀನು ಹೊತ್ತುಕೊಂಡಿರಬೇಕು.


ಯೆಹೋವನು ಇಸ್ರಾಯೇಲ್ಯರ ಮೇಲೆ ಕೋಪಗೊಂಡವನಾಗಿ ತನ್ನ ದೃಷ್ಟಿಯಲ್ಲಿ ಕೆಟ್ಟ ನಡತೆಯುಳ್ಳ ಆ ಸಂತತಿಯವರೆಲ್ಲರೂ ನಾಶವಾಗುವ ತನಕ, ಅಂದರೆ ನಾಲ್ವತ್ತು ವರುಷಕಾಲ, ಇಸ್ರಾಯೇಲ್ಯರನ್ನು ಅರಣ್ಯದಲ್ಲಿ ತಿರುಗಾಡ ಮಾಡಿದನು.


ಯೆಹೋವನು ಈ ಮಾತುಗಳನ್ನು ಮೋಶೆಗೆ ಹೇಳಿದಂದಿನಿಂದ ಇಸ್ರಾಯೇಲ್ಯರು ಅರಣ್ಯದಲ್ಲಿ ಅಲೆಯುತ್ತಿದ್ದ ವರುಷಗಳೂ ಸೇರಿ ನಾಲ್ವತ್ತೈದು ವರುಷಗಳು ದಾಟಿದವು. ಯೆಹೋವನು ತಾನು ನುಡಿದಂತೆಯೇ ಈ ಕಾಲವೆಲ್ಲಾ ನನ್ನನ್ನು ಜೀವದಿಂದುಳಿಸಿದ್ದಾನೆ. ಈಗ ನಾನು ಎಂಭತ್ತೈದು ವರುಷದವನಾಗಿದ್ದೇನೆ.


ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ನೀನು ನನ್ನನ್ನು ಬೆನ್ನ ಹಿಂದಕ್ಕೆ ಎಸೆದು ಮರೆತುಬಿಟ್ಟದ್ದರಿಂದ ನಿನ್ನ ಪುಂಡಾಟದ ಮತ್ತು ಸೂಳೆತನದ ಫಲವನ್ನು ನೀನೂ ಅನುಭವಿಸಬೇಕು.


ಒಂದು ವೇಳೆ ಮಕ್ಕಳನ್ನು ಹೆತ್ತು ಸಾಕಿದರೂ ಯಾವನೂ ಉಳಿಯದೆ ಇರುವ ತನಕ ಅವರಿಗೆ ಪುತ್ರಶೋಕವನ್ನು ಉಂಟುಮಾಡುತ್ತಲೇ ಬರುವೆನು; ಹೌದು, ನಾನು ಅವರಿಗೆ ವಿಮುಖನಾಗಲು ಅವರ ಗತಿಯನ್ನು ಏನೆಂದು ಹೇಳಲಿ!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು