Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 14:4 - ಕನ್ನಡ ಸತ್ಯವೇದವು J.V. (BSI)

4 ನಾವು ನಾಯಕನನ್ನು ನೇವಿುಸಿಕೊಂಡು ಐಗುಪ್ತದೇಶಕ್ಕೆ ತಿರಿಗಿ ಹೋಗೋಣ ಎಂದು ಮಾತಾಡಿಕೊಳ್ಳುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಹೀಗೆ ಅವರು ಒಬ್ಬರ ಸಂಗಡಲೊಬ್ಬರು, “ನಾವು ಬೇರೆ ನಾಯಕನನ್ನು ನೇಮಿಸಿಕೊಂಡು ಐಗುಪ್ತ ದೇಶಕ್ಕೆ ಹಿಂತಿರುಗಿ ಹೋಗೋಣ” ಎಂದು ಮಾತನಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 “ಒಬ್ಬ ನಾಯಕನನ್ನು ನೇಮಿಸಿಕೊಂಡು ಈಜಿಪ್ಟಿಗೆ ಹಿಂತಿರುಗಿ ಹೋಗೋಣ,” ಎಂದೂ ಒಬ್ಬರಿಗೊಬ್ಬರು ಮಾತಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಬಳಿಕ ಜನರು, “ನಾವು ಇನ್ನೊಬ್ಬ ನಾಯಕನನ್ನು ಆರಿಸಿಕೊಂಡು ಈಜಿಪ್ಟಿಗೆ ಮರಳಿಹೋಗೋಣ” ಎಂದು ಮಾತಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ನಾವು ನಾಯಕನನ್ನು ನೇಮಿಸಿಕೊಂಡು ಈಜಿಪ್ಟ್ ದೇಶಕ್ಕೆ ಹಿಂದಿರುಗೋಣ ಬನ್ನಿರಿ,” ಎಂದು ಒಬ್ಬರಿಗೊಬ್ಬರು ಹೇಳಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 14:4
11 ತಿಳಿವುಗಳ ಹೋಲಿಕೆ  

ಆದರೆ ನಮ್ಮ ಪಿತೃಗಳು ಅವನ ಮಾತುಗಳನ್ನು ಕೇಳುವದಕ್ಕೆ ಮನಸ್ಸಿಲ್ಲದವರಾಗಿ ಅವನನ್ನು ತಳ್ಳಿ ಬಿಟ್ಟು ತಿರಿಗಿ ಐಗುಪ್ತದೇಶದ ಕಡೆಗೆ ಮನಸ್ಸಿಟ್ಟರು.


ಲೋಟನ ಹೆಂಡತಿಯನ್ನು ನೆನಪಿಗೆ ತಂದುಕೊಳ್ಳಿರಿ.


ಅವನು ಕುದುರೆಯ ದಂಡನ್ನು ಕೂಡಿಸಿಕೊಳ್ಳಬಾರದು. ಕುದುರೆಗಳನ್ನು ಸಂಪಾದಿಸಿಕೊಳ್ಳುವದಕ್ಕಾಗಿ ತನ್ನ ಪ್ರಜೆಗಳನ್ನು ಐಗುಪ್ತದೇಶಕ್ಕೆ ಹೋಗಗೊಡಿಸಬಾರದು. ನೀವು ಇನ್ನು ಆ ದೇಶಕ್ಕೆ ಹೋಗಲೇಕೂಡದೆಂದು ಯೆಹೋವನು ಆಜ್ಞಾಪಿಸಿದ್ದಾನಲ್ಲಾ.


ತಾವು ಹೊರಟುಬಂದಿದ್ದ ದೇಶದ ಮೇಲೆ ಮನಸ್ಸಿಟ್ಟವರಾಗಿದ್ದರೆ ತಿರಿಗಿ ಅಲ್ಲಿಗೆ ಹೋಗುವದಕ್ಕೆ ಅವರಿಗೆ ಯಾವಾಗಲೂ ಅವಕಾಶವಿತ್ತು.


ನೀವು ಐಗುಪ್ತದೇಶವನ್ನು ತಿರಿಗಿ ಎಂದಿಗೂ ನೋಡುವದಿಲ್ಲವೆಂದು ಯೆಹೋವನು ಹೇಳಿದ್ದರೂ ಆತನು ನಿಮ್ಮನ್ನು ಹಡಗುಗಳನ್ನೇರಿಸಿ ಅಲ್ಲಿಗೆ ತಿರಿಗಿ ಹೋಗಮಾಡುವನು. ಅಲ್ಲಿ ನೀವು ಶತ್ರುಗಳಿಗೆ ನಿಮ್ಮನ್ನು ದಾಸದಾಸಿಯರನ್ನಾಗಿ ಮಾರಿಕೊಳ್ಳಬೇಕೆಂದು ಅಪೇಕ್ಷಿಸಿದರೂ ಯಾರೂ ನಿಮ್ಮನ್ನು ಕೊಂಡುಕೊಳ್ಳುವದಿಲ್ಲ.


ಆಗ ಮೋಶೆ ಆರೋನರು ಇಸ್ರಾಯೇಲ್ಯರ ಸರ್ವಸಮೂಹದವರ ಮುಂದೆ ಬೋರಲಬಿದ್ದರು.


ಪೂರಾ ಒಂದು ತಿಂಗಳು ಮಾಂಸವನ್ನು ಊಟಮಾಡುವಿರಿ. ಅದು ಓಕರಿಕೆಯಾಗಿ ನಿಮ್ಮ ಮೂಗಿನಲ್ಲಿ ಹೊರಟು ನಿಮಗೆ ಅಸಹ್ಯವಾಗುವ ತನಕ ಅದನ್ನು ಊಟಮಾಡುವಿರಿ ಅಂದನು.


ನಾವು ಯುದ್ಧಕಾಣದೆ ತುತೂರಿಯ ಶಬ್ದಕೇಳದೆ ಅನ್ನದ ಕೊರತೆಯಿಂದ ಹಸಿವೆಗೊಳ್ಳದೆ ಇರುವ ಐಗುಪ್ತದೇಶಕ್ಕೆ ಹೋಗಿ ಅಲ್ಲೇ ವಾಸಿಸುವೆವು ಎಂದುಕೊಂಡರೆ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು