Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 14:40 - ಕನ್ನಡ ಸತ್ಯವೇದವು J.V. (BSI)

40 ಮರುದಿನ ಬೆಳಿಗ್ಗೆ ಜನರು ಎದ್ದು - ನಾವು ಪಾಪಮಾಡಿರುವದು ನಿಜ; ಯೆಹೋವನು ವಾಗ್ದಾನಮಾಡಿದ ಸ್ಥಳಕ್ಕೆ ಹತ್ತೋಣ ಬನ್ನಿ ಎಂದು ಹೇಳಿಕೊಳ್ಳುತ್ತಾ ಆ ಬೆಟ್ಟದ ಮೇಲಕ್ಕೆ ಹತ್ತಿಹೋಗುವವರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

40 ಮರುದಿನ ಬೆಳಿಗ್ಗೆ ಜನರು ಎದ್ದು, “ನಾವು ಪಾಪ ಮಾಡಿರುವುದು ನಿಜ; ಯೆಹೋವನು ವಾಗ್ದಾನ ಮಾಡಿದ ಸ್ಥಳಕ್ಕೆ ಹತ್ತೋಣ ಬನ್ನಿ” ಎಂದು ಹೇಳಿಕೊಳ್ಳುತ್ತಾ ಆ ಬೆಟ್ಟದ ಮೇಲಕ್ಕೆ ಹತ್ತಿಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

40 ಮಾರನೆಯ ದಿನ ಬೆಳಿಗ್ಗೆ ಜನರು ಎದ್ದು, “ನಾವು ಪಾಪ ಮಾಡಿರುವುದೇನೋ ನಿಜ; ಸರ್ವೇಶ್ವರ ವಾಗ್ದಾನ ಮಾಡಿದ ಸ್ಥಳಕ್ಕೆ ಏರಿಹೋಗೋಣ ಬನ್ನಿ,” ಎಂದು ಹೇಳಿಕೊಳ್ಳುತ್ತಾ ಆ ಬೆಟ್ಟದ ಮೇಲಕ್ಕೆ ಹತ್ತಿಹೋಗಲಾರಂಭಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

40 ಮರುದಿನ ಬೆಳಿಗ್ಗೆ ಜನರು ಎದ್ದು, “ನಾವು ಪಾಪ ಮಾಡಿರುವುದು ನಿಜ. ಯೆಹೋವನು ವಾಗ್ದಾನ ಮಾಡಿರುವ ದೇಶಕ್ಕೆ ಹೋಗಲು ನಾವು ಈಗ ಸಿದ್ಧರಾಗಿದ್ದೇವೆ” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

40 ಮರುದಿವಸ ಬೆಳಿಗ್ಗೆ ಅವರು ಎದ್ದು, ಬೆಟ್ಟದ ತುದಿಯ ಮೇಲಕ್ಕೆ ಏರಿ, “ಇಗೋ, ಯೆಹೋವ ದೇವರು ವಾಗ್ದಾನ ಮಾಡಿದ ಸ್ಥಳಕ್ಕೆ ಏರಿ ಹೋಗುವುದಕ್ಕೆ ಇದ್ದೇವೆ. ನಾವು ಪಾಪಮಾಡಿದ್ದೇವೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 14:40
8 ತಿಳಿವುಗಳ ಹೋಲಿಕೆ  

ಅದಕ್ಕೆ ನೀವು - ನಾವು ಯೆಹೋವನಿಗೆ ದ್ರೋಹಿಗಳಾದೆವು; ಆದರೂ ನಮ್ಮ ದೇವರಾದ ಯೆಹೋವನು ಆಜ್ಞಾಪಿಸಿದಂತೆ ನಾವೇ ಈಗ ಆ ಬೆಟ್ಟದ ಸೀಮೆಯನ್ನು ಹತ್ತಿ ಯುದ್ಧಮಾಡುವೆವು ಎಂದು ಉತ್ತರ ಕೊಟ್ಟು ನೀವೆಲ್ಲರೂ ನಿಮ್ಮ ನಿಮ್ಮ ಆಯುಧಗಳನ್ನು ತೆಗೆದುಕೊಂಡು ಆ ಬೆಟ್ಟದ ಸೀಮೆಯನ್ನು ಹತ್ತಿ ಜಯಿಸುವದು ಅಲ್ಪಕಾರ್ಯವೆಂದು ಭಾವಿಸಿ ಹೊರಡುವದಕ್ಕಿದ್ದಿರಿ.


ಮನೇಯಜಮಾನನು ಎದ್ದು ಕದಾ ಹಾಕಿಕೊಂಡ ಮೇಲೆ ನೀವು ಹೊರಗೆ ನಿಂತುಕೊಂಡು ಕದತಟ್ಟಿ - ಸ್ವಾಮೀ, ನಮಗೆ ತೆರೆಯಿರಿ ಎಂದು ಹೇಳುವದಕ್ಕೆ ತೊಡಗುವಾಗ ಅವನು - ನೀವು ಎಲ್ಲಿಯವರೋ? ನಿಮ್ಮ ಗುರುತು ನನಗಿಲ್ಲ ಅಂದಾನು.


ಎಲ್ಲರಿಗೂ ಒಂದೇ ಗತಿಯೆಂಬ ಸಂಕಟವು ಲೋಕವ್ಯವಹಾರದಲ್ಲೆಲ್ಲಾ ಸೇರಿಕೊಂಡಿದೆ; ಇದಲ್ಲದೆ ನರವಂಶದವರ ಎದೆಯಲ್ಲಿ ಕೆಟ್ಟತನವು ತುಂಬಿದೆ; ಅವರು ಬದುಕಿರುವ ತನಕ ಮರುಳುತನವು ಅವರ ಮನಸ್ಸನ್ನು ಹಿಡಿದಿರುವದು. ಆಮೇಲೆ ಪ್ರೇತಲೋಕವೇ ಗತಿ.


ಆದರೆ ಸ್ವದೇಶದವನಾಗಲಿ ಅನ್ಯದೇಶದವನಾಗಲಿ ಯಾವನಾದರೂ ಮನಃಪೂರ್ವಕವಾಗಿ ಹಟದಿಂದ ಪಾಪವನ್ನು ಮಾಡಿದರೆ ಅವನು ಯೆಹೋವನನ್ನು ದೂಷಿಸಿದವನಾದ್ದರಿಂದ ಕುಲದಿಂದ ತೆಗೆದುಹಾಕಲ್ಪಡಬೇಕು.


ಅದಕ್ಕೆ ಬಿಳಾಮನು - ನಾನು ಪಾಪಮಾಡಿದ್ದೇನೆ; ನೀನೇ ನನಗೆದುರಾಗಿ ದಾರಿಯಲ್ಲಿ ನಿಂತಿರುವದು ನನಗೆ ತಿಳಿಯಲಿಲ್ಲ; ನಾನು ಮಾಡುವದು ನಿನಗೆ ಕೆಟ್ಟದ್ದಾಗಿ ತೋರಿದರೆ ಹಿಂದಕ್ಕೆ ತಿರುಗಿಕೊಳ್ಳುತ್ತೇನೆ ಅಂದಾಗ


ನಾನು ಆ ಮಾತನ್ನು ನಿಮಗೆ ತಿಳಿಸಿದರೂ ನೀವು ಕಿವಿಗೊಡದೆ ಯೆಹೋವನ ಆಜ್ಞೆಯನ್ನು ತಾತ್ಸಾರ ಮಾಡಿ ಸೊಕ್ಕಿನಿಂದ ಆ ಬೆಟ್ಟವನ್ನು ಹತ್ತಿದಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು