ಅರಣ್ಯಕಾಂಡ 14:9 - ಕನ್ನಡ ಸತ್ಯವೇದವು J.V. (BSI)9 ಹೀಗಿರುವದರಿಂದ ಯೆಹೋವನಿಗೆ ತಿರುಗಿಬೀಳಬೇಡಿರಿ. ಅದಲ್ಲದೆ ಆ ದೇಶದ ಜನರಿಗೆ ದಿಗಿಲುಪಡಬೇಡಿರಿ; ನಾವು ಅವರನ್ನು ನುಂಗಿ ಪುಷ್ಟಿಯಾಗುವೆವು. ಅವರಿಗೆ ನೆರಳಾಗಿದ್ದ ದೇವರು ಅವರನ್ನು ಕೈಬಿಟ್ಟನು; ನಮ್ಮ ಕಡೆ ಯೆಹೋವನು ಇದ್ದಾನೆ. ಅವರಿಗೆ ಭಯಪಡಬೇಡಿರಿ ಅಂದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಹೀಗಿರುವುದರಿಂದ ಯೆಹೋವನಿಗೆ ತಿರುಗಿಬೀಳಬೇಡಿರಿ. ಇದಲ್ಲದೆ ಆ ದೇಶದ ಜನರಿಗೆ ಭಯಪಡಬೇಡಿರಿ. ಏಕೆಂದರೆ ನಾವು ಅವರನ್ನು ಸುಲಭವಾಗಿ ಜಯಿಸಿಬಿಡುವೆವು. ಅವರಿಗೆ ನೆರಳಾಗಿದ್ದ ದೇವರು ಅವರನ್ನು ಕೈಬಿಟ್ಟಿದ್ದಾನೆ, ಯೆಹೋವನು ನಮ್ಮ ಸಂಗಡ ಇದ್ದಾನೆ. ಅವರಿಗೆ ಭಯಪಡಬೇಡಿರಿ” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಆದ್ದರಿಂದ ಸರ್ವೇಶ್ವರನಿಗೆ ವಿರುದ್ಧ ದಂಗೆ ಏಳಬೇಡಿ. ಆ ನಾಡಿನ ಜನರಿಗೆ ದಿಗಿಲುಪಡಬೇಡಿ. ಅವರು ನಮಗೆ ತುತ್ತಾಗುವರು. ನಾವು ಪುಷ್ಠಿಯಾಗುವೆವು. ಅವರಿಗೆ ನೆರಳಾಗಿದ್ದ ದೇವರು ಅವರನ್ನು ಕೈಬಿಟ್ಟಿದ್ದಾನೆ. ಸರ್ವೇಶ್ವರ ನಮ್ಮ ಕಡೆ ಇದ್ದಾರೆ. ಅವರಿಗೆ ಭಯಪಡಬೇಡಿ” ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಹೀಗಿರುವುದರಿಂದ ಯೆಹೋವನಿಗೆ ವಿರುದ್ಧವಾಗಿ ಏಳಬೇಡಿರಿ. ಆ ದೇಶದ ಜನರಿಗೆ ಭಯಪಡಬೇಡಿರಿ. ನಾವು ಅವರನ್ನು ಸೋಲಿಸಬಹುದು. ಅವರಿಗೆ ಯಾವ ಸಂರಕ್ಷಣೆ ಇರುವುದಿಲ್ಲ. ಆದರೆ ನಮ್ಮ ಕಡೆ ಯೆಹೋವನು ಇದ್ದಾನೆ. ಆದ್ದರಿಂದ ಭಯಪಡಬೇಡಿರಿ” ಅಂದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಆದ್ದರಿಂದ ನೀವಾದರೋ ಯೆಹೋವ ದೇವರಿಗೆ ತಿರುಗಿ ಬೀಳಬೇಡಿರಿ. ಆ ದೇಶದ ಜನರಿಗೆ ಭಯಪಡಬೇಡಿರಿ. ಏಕೆಂದರೆ ನಾವು ಅವರನ್ನು ನುಂಗಿಬಿಡುವೆವು. ಅವರ ಆಶ್ರಯವು ಅವರ ಬಳಿಯಿಂದ ಹೋಯಿತು. ಯೆಹೋವ ದೇವರು ನಮ್ಮ ಸಂಗಡ ಇದ್ದಾರೆ, ಅವರಿಗೆ ಭಯಪಡಬೇಡಿರಿ,” ಎಂದರು. ಅಧ್ಯಾಯವನ್ನು ನೋಡಿ |
ಹೇಗೂ ಕ್ರಿಸ್ತನ ಸುವಾರ್ತೆಗೆ ಯೋಗ್ಯರಾಗಿ ನಡೆದುಕೊಳ್ಳಿರಿ. ಆಗ ನಾನು ಬಂದು ನಿಮ್ಮನ್ನು ನೋಡಿದರೂ ಸರಿಯೇ, ದೂರದಲ್ಲಿದ್ದು ನಿಮ್ಮ ಸುದ್ದಿಯನ್ನು ಕೇಳಿದರೂ ಸರಿಯೇ, ನೀವು ನಿಮ್ಮ ವಿರೋಧಿಗಳಿಗೆ ಯಾವ ವಿಷಯದಲ್ಲಾದರೂ ಹೆದರದೆ ಒಂದೇ ಆತ್ಮದಲ್ಲಿ ದೃಢವಾಗಿ ನಿಂತು ಸುವಾರ್ತೆಯಲ್ಲಿಟ್ಟ ನಂಬಿಕೆಗೋಸ್ಕರ ಐಕಮತ್ಯದಿಂದ ಹೋರಾಡುವವರಾಗಿದ್ದೀರೆಂದು ನಾನು ತಿಳಿದುಕೊಳ್ಳುವೆನು.
ಹೀಗಿರಲಾಗಿ ಯೆಹೋವನು ಆ ದಿನದಲ್ಲಿ ಸೂಚಿಸಿದಂಥ ಈ ಪರ್ವತಪ್ರದೇಶವನ್ನು ನನಗೆ ಕೊಡು. ಇದರಲ್ಲಿ ಉನ್ನತ ಪುರುಷರಿರುತ್ತಾರೆಂದೂ ಇದರ ಪಟ್ಟಣಗಳು ದೊಡ್ಡವೂ ಕೋಟೆಕೊತ್ತಲುಳ್ಳವುಗಳೂ ಆಗಿವೆ ಎಂದೂ ಆ ಕಾಲದಲ್ಲಿ ನೀನು ಕೇಳಿದಿಯಲ್ಲಾ. ಅವರೆಲ್ಲರನ್ನೂ ಓಡಿಸಿ ಬಿಡುವದಕ್ಕೋಸ್ಕರ ಯೆಹೋವನು ತನ್ನ ಮಾತಿಗನುಸಾರವಾಗಿ ನನಗೆ ಸಹಾಯ ಮಾಡುವನೆಂದು ನಿರೀಕ್ಷಿಸಿಕೊಂಡಿದ್ದೇನೆ ಅಂದನು.