Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 15:25 - ಕನ್ನಡ ಸತ್ಯವೇದವು J.V. (BSI)

25 ಯಾಜಕನು ಇಸ್ರಾಯೇಲ್ಯರ ಸರ್ವಸಮೂಹದವರಿಗೋಸ್ಕರ ದೋಷಪರಿಹಾರವನ್ನು ಮಾಡಿದಾಗ ಅವರಿಗೆ ಕ್ಷಮಾಪಣೆಯಾಗುವದು. ಅವರು ಆ ತಪ್ಪನ್ನು ತಿಳಿಯದೆ ಮಾಡಿದ್ದರಿಂದ ಮತ್ತು ಅವರು ಅದನ್ನು ಪರಿಹರಿಸುವದಕ್ಕಾಗಿ ಯೆಹೋವನ ಸನ್ನಿಧಿಯಲ್ಲಿ ಸರ್ವಾಂಗಹೋಮವನ್ನೂ ದೋಷಪರಿಹಾರಕಯಜ್ಞವನ್ನೂ ಮಾಡಿಸಿದ್ದರಿಂದ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಯಾಜಕನು ಇಸ್ರಾಯೇಲರ ಸರ್ವಸಮೂಹದವರಿಗೋಸ್ಕರ ದೋಷಪರಿಹಾರವನ್ನು ಮಾಡಿದಾಗ ಅವರಿಗೆ ಕ್ಷಮಾಪಣೆಯಾಗುವುದು. ಅವರು ಆ ತಪ್ಪನ್ನು ತಿಳಿಯದೆ ಮಾಡಿದುದರಿಂದ ಮತ್ತು ಅವರು ಅದನ್ನು ಪರಿಹರಿಸುವುದಕ್ಕಾಗಿ ಯೆಹೋವನ ಸನ್ನಿಧಿಯಲ್ಲಿ ಕಾಣಿಕೆಯಾಗಿ ಸರ್ವಾಂಗ ಹೋಮವನ್ನೂ, ದೋಷಪರಿಹಾರಕ ಯಜ್ಞವನ್ನೂ ಮಾಡಿಸಿದ್ದರಿಂದ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಹೀಗೆ ಯಾಜಕನು ಇಸ್ರಯೇಲರ ಸರ್ವಸಮೂಹದವರ ಪರವಾಗಿ ದೋಷಪರಿಹಾರವನ್ನು ಮಾಡಿದಾಗ ಅವರಿಗೆ ಕ್ಷಮಾಪಣೆ ದೊರಕುವುದು. ಅವರು ಆ ತಪ್ಪನ್ನು ತಿಳಿಯದೆ ಮಾಡಿದ್ದರಿಂದ ಮತ್ತು ಅವರು ಅದರ ಪರಿಹಾರಕ್ಕಾಗಿ ಸರ್ವೇಶ್ವರನ ಸನ್ನಿಧಿಯಲ್ಲಿ ದಹನಬಲಿಯನ್ನೂ ದೋಷಪರಿಹಾರಕಬಲಿಯನ್ನೂ ಅರ್ಪಿಸಿದ್ದರಿಂದ ಕ್ಷಮೆ ಲಭಿಸುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 “ಈ ರೀತಿಯಲ್ಲಿ ಇಸ್ರೇಲರ ಇಡೀ ಸಮುದಾಯದವರ ಕ್ಷಮೆಗಾಗಿ ಯಾಜಕನು ಪ್ರಾಯಶ್ಚಿತ್ತ ಮಾಡುವನು. ಯಾಕೆಂದರೆ ಅದು ತಿಳಿಯದೆ ಮಾಡಿದ ತಪ್ಪಾಗಿತ್ತು ಮತ್ತು ಆ ತಪ್ಪಿಗಾಗಿ ಅವರು ತಮ್ಮ ಅರ್ಪಣೆಯನ್ನು ಯೆಹೋವನಿಗೆ ಕಾಣಿಕೆಯಾಗಿ ತಂದರು ಮತ್ತು ಯೆಹೋವನ ಎದುರಿನಲ್ಲಿ ಪಾಪಪರಿಹಾರಕ ಯಜ್ಞವನ್ನು ಅರ್ಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಯಾಜಕನು ಇಸ್ರಾಯೇಲರ ಸಮಸ್ತ ಸಭೆಗೋಸ್ಕರ ಅವರಿಗೆ ಕ್ಷಮೆಯಾಗುವ ಹಾಗೆ ಪ್ರಾಯಶ್ಚಿತ್ತ ಮಾಡಬೇಕು. ಏಕೆಂದರೆ ಅದು ತಿಳಿಯದೆ ಮಾಡಲಾಗಿತ್ತು. ಆದರೂ ಅವರು ಯೆಹೋವ ದೇವರಿಗೆ ದಹನಬಲಿಯಾಗಿ ತಮ್ಮ ಸಮರ್ಪಣೆಯನ್ನೂ, ತಮ್ಮ ತಪ್ಪಿಗೋಸ್ಕರ ಪಾಪ ಪರಿಹಾರಕ ಬಲಿಯನ್ನೂ ಯೆಹೋವ ದೇವರ ಮುಂದೆ ತರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 15:25
13 ತಿಳಿವುಗಳ ಹೋಲಿಕೆ  

ಅವನು [ಅಭಿಷಿಕ್ತ ಯಾಜಕನ] ದೋಷಪರಿಹಾರಕಯಜ್ಞದ ಹೋರಿಯ ವಿಷಯದಲ್ಲಿ ಹೇಗೆ ಮಾಡಬೇಕೆಂದು ವಿಧಿಸಲ್ಪಟ್ಟಿತೋ ಇದರ ವಿಷಯದಲ್ಲಿಯೂ ಹಾಗೆಯೇ ಮಾಡಬೇಕು. ಯಾಜಕನು ಅವರಿಗೋಸ್ಕರ ದೋಷಪರಿಹಾರ ಮಾಡಿದನಂತರ ಅವರಿಗೆ ಕ್ಷಮಾಪಣೆಯಾಗುವದು.


ಆದದರಿಂದ ಆತನು ಎಲ್ಲಾ ವಿಷಯಗಳಲ್ಲಿ ತನ್ನ ಸಹೋದರರಿಗೆ ಸಮಾನನಾಗಬೇಕಾಗಿ ಬಂತು. ಹೀಗೆ ಆತನು ಜನರ ಪಾಪಗಳನ್ನು ನಿವಾರಣಮಾಡುವದಕ್ಕಾಗಿ ದೇವರ ಕಾರ್ಯಗಳಲ್ಲಿ ಕರುಣೆಯೂ ನಂಬಿಕೆಯೂ ಉಳ್ಳ ಮಹಾಯಾಜಕನಾದನು.


ಈತನು ತನ್ನ ರಕ್ತವನ್ನು ಸುರಿಸಿ ನಂಬಿಕೆಯಿದ್ದವರಿಗಾಗಿ ಕೃಪಾಧಾರವಾಗಬೇಕೆಂದು ದೇವರು ಈತನನ್ನು ಮುಂದಿಟ್ಟನು.


ಆತನು ನಮ್ಮ ಪಾಪಗಳನ್ನು ನಿವಾರಣಮಾಡುವ ಯಜ್ಞವಾಗಿದ್ದಾನೆ; ನಮ್ಮ ಪಾಪಗಳನ್ನು ಮಾತ್ರವಲ್ಲದೆ ಸಮಸ್ತ ಲೋಕದ ಪಾಪಗಳನ್ನು ಸಹ ನಿವಾರಣಮಾಡುತ್ತಾನೆ.


ಮೋಶೆಯ ಧರ್ಮಶಾಸ್ತ್ರದ ಮೂಲಕ ನೀವು ಬಿಡುಗಡೆಹೊಂದಲಾಗದ ಎಲ್ಲಾ ಪಾಪಗಳಿಂದ ನಂಬುವವರೆಲ್ಲರು ಆತನ ಮೂಲಕವಾಗಿ ಬಿಡುಗಡೆ ಹೊಂದಿ ನೀತಿವಂತರೆನಿಸಿಕೊಳ್ಳುತ್ತಾರೆ.


ಆಗ ಯೇಸು - ತಂದೆಯೇ, ಅವರಿಗೆ ಕ್ಷವಿುಸು; ತಾವು ಏನು ಮಾಡುತ್ತೇವೆಂಬದನ್ನು ಅರಿಯರು ಅಂದನು. ಆಮೇಲೆ ಆತನ ಬಟ್ಟೆಗಳನ್ನು ಪಾಲುಮಾಡಿ ಚೀಟು ಹಾಕಿದರು.


ಸಮಾಧಾನಯಜ್ಞದ ಪಶುವಿನ ಕೊಬ್ಬನ್ನು ಅವನು ಹೋಮಮಾಡುವ ಪ್ರಕಾರವೇ ಇದರ ಎಲ್ಲಾ ಕೊಬ್ಬನ್ನೂ ಹೋಮಮಾಡಬೇಕು. ಹೀಗೆ ಯಾಜಕನು ಅವನಿಗೋಸ್ಕರ ದೋಷಪರಿಹಾರವನ್ನು ಮಾಡುವದರಿಂದ ಅವನಿಗೆ ಕ್ಷಮಾಪಣೆಯಾಗುವದು.


ಆದರೆ ಎರಡನೆಯ ಭಾಗದೊಳಗೆ ಮಹಾಯಾಜಕನೊಬ್ಬನೇ ವರುಷಕ್ಕೆ ಒಂದೇ ಸಾರಿ ಹೋಗುತ್ತಾನೆ, ಅವನು ರಕ್ತವನ್ನು ತಕ್ಕೊಳ್ಳದೆ ಹೋಗುವದಿಲ್ಲ; ಆ ರಕ್ತವನ್ನು ತನಗೋಸ್ಕರವೂ ಜನರ ತಪ್ಪುಗಳಿಗೋಸ್ಕರವೂ ಸಮರ್ಪಿಸುತ್ತಾನೆ.


ಹೀಗೆ ನೀವು ಆ ದುಷ್ಟತ್ವವನ್ನು ನಿಮ್ಮ ಮಧ್ಯದೊಳಗಿಂದ ತೆಗೆದುಹಾಕಿಬಿಡಬೇಕು. ಇಸ್ರಾಯೇಲ್ಯರೆಲ್ಲರೂ ಕೇಳಿ ಭಯಪಡುವರು.


ನಿನ್ನ ಬಾಯಿ ನಿನ್ನನ್ನು ಪಾಪಕ್ಕೆ ಗುರಿಮಾಡದಂತೆ ನೋಡಿಕೋ; ಇದು ಅಜಾಗ್ರತೆಯಿಂದಾಯಿತೆಂದು ದೂತನ ಮುಂದೆ ಹೇಳಬೇಡ; ದೇವರು ನಿನ್ನ ಮಾತಿಗೆ ರೋಷಗೊಂಡು ನಿನ್ನ ಕೈಗೆಲಸವನ್ನು ಏಕೆ ಹಾಳುಮಾಡಬೇಕು?


ಸಮಾಧಾನಯಜ್ಞಪಶುಗಳ ಕೊಬ್ಬನ್ನು ಪ್ರತ್ಯೇಕಿಸುವ ಪ್ರಕಾರ ಯಾಜಕನು ಇದರ ಎಲ್ಲಾ ಕೊಬ್ಬನ್ನೂ ಪ್ರತ್ಯೇಕಿಸಿ ಯೆಹೋವನಿಗೆ ಸುವಾಸನೆಯನ್ನುಂಟುಮಾಡುವದಕ್ಕೆ ಯಜ್ಞವೇದಿಯ ಮೇಲೆ ಹೋಮಮಾಡಬೇಕು. ಹೀಗೆ ಯಾಜಕನು ಅವನಿಗೋಸ್ಕರ ದೋಷಪರಿಹಾರವನ್ನು ಮಾಡುವದರಿಂದ ಅವನಿಗೆ ಕ್ಷಮಾಪಣೆಯಾಗುವದು.


ಸಮಾಧಾನ ಯಜ್ಞಪಶುಗಳ ಕೊಬ್ಬನ್ನು ಪ್ರತ್ಯೇಕಿಸುವ ಪ್ರಕಾರ ಯಾಜಕನು ಇದರ ಎಲ್ಲಾ ಕೊಬ್ಬನ್ನೂ ಪ್ರತ್ಯೇಕಿಸಿ ಯಜ್ಞವೇದಿಯಲ್ಲಿ ಉರಿಯುವ ಹೋಮದ್ರವ್ಯಗಳ ಮೇಲೆ ಯೆಹೋವನಿಗೆ ಹೋಮಮಾಡಬೇಕು. ಅವನ ತಪ್ಪಿನ ನಿವಿುತ್ತ ಯಾಜಕನು ಹೀಗೆ ಅವನಿಗೋಸ್ಕರ ದೋಷಪರಿಹಾರವನ್ನು ಮಾಡುವದರಿಂದ ಅವನಿಗೆ ಕ್ಷಮಾಪಣೆಯಾಗುವದು.


ಯಾಜಕನು ದೋಷಪರಿಹಾರಕಯಜ್ಞಕ್ಕಾಗಿ ಒಂದನ್ನೂ ಸರ್ವಾಂಗಹೋಮಕ್ಕಾಗಿ ಇನ್ನೊಂದನ್ನೂ ಸಮರ್ಪಿಸಬೇಕು. ಹೀಗೆ ಯಾಜಕನು ಅವನ ಸ್ರಾವದ ವಿಷಯದಲ್ಲಿ ಯೆಹೋವನ ಸನ್ನಿಧಿಯಲ್ಲಿ ಅವನಿಗೋಸ್ಕರ ದೋಷಪರಿಹಾರ ಮಾಡುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು