Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 15:3 - ಕನ್ನಡ ಸತ್ಯವೇದವು J.V. (BSI)

3 ಯೆಹೋವನಿಗೆ ಸುವಾಸನೆಯನ್ನುಂಟುಮಾಡುವದಕ್ಕಾಗಿ ದನಗಳಲ್ಲಾಗಲಿ ಆಡುಕುರಿಗಳಲ್ಲಾಗಲಿ ಒಂದು ಪಶುವನ್ನು ಹೋಮಮಾಡುವವನು ಸರ್ವಾಂಗ ಹೋಮಮಾಡಿದರೂ ಸರಿಯೇ, ಹರಕೆ ಸಲ್ಲಿಸುವದಕ್ಕೋ ಕೃತಜ್ಞತೆಯನ್ನು ತೋರಿಸುವದಕ್ಕೋ ಹಬ್ಬವನ್ನು ಆಚರಿಸುವದಕ್ಕೋ ಸಮಾಧಾನಯಜ್ಞ ಮಾಡಿದರೂ ಸರಿಯೇ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಯೆಹೋವನಿಗೆ ಪರಿಮಳವನ್ನು ಉಂಟುಮಾಡುವುದಕ್ಕಾಗಿ ಪಶುಗಳಿಂದಾಗಲಿ, ಆಡುಕುರಿ ಹಿಂಡುಗಳಿಂದಾಗಲಿ ಒಂದು ಪಶುವನ್ನು ಹೋಮಮಾಡುವವನು, ಸರ್ವಾಂಗಹೋಮ ಮಾಡುವುದಕ್ಕೂ, ಹರಕೆಸಲ್ಲಿಸುವುದಕ್ಕೂ, ಕೃತಜ್ಞತೆಯನ್ನು ತೋರಿಸುವುದಕ್ಕೂ, ಹಬ್ಬವನ್ನು ಆಚರಿಸುವುದಕ್ಕೂ ಸಮಾಧಾನಯಜ್ಞಮಾಡಿದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಸರ್ವೇಶ್ವರನಾದ ನನಗೆ ಸುವಾಸನೆಯ ಕಾಣಿಕೆಯಾಗಿ ದನಕರುಗಳಿಂದ ಬಲಿಯನ್ನು ಅರ್ಪಿಸುವಾಗ ಅದು ಹರಕೆಯ, ಕೃತಜ್ಞತೆಯ ಹಬ್ಬಾಚರಣೆಯ, ಶಾಂತಿಸಮಾಧಾನದ ಬಲಿಯಾಗಿರಲಿ ಅಥವಾ ದಹನಬಲಿಯಾಗಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ನೀವು ಯೆಹೋವನಿಗೆ ಸುವಾಸನೆಯನ್ನು ಉಂಟುಮಾಡುವುದಕ್ಕಾಗಿ ನಿಮ್ಮ ಮಂದೆಯಿಂದಾಗಲಿ ಹಿಂಡಿನಿಂದಾಗಲಿ ಅಗ್ನಿಯ ಮೂಲಕ ಯಜ್ಞವನ್ನರ್ಪಿಸುವವನು ಸರ್ವಾಂಗಹೋಮ ಮಾಡಿದರೂ ಅಥವಾ ಸಮಾಧಾನಯಜ್ಞಮಾಡಿದರೂ ಹರಕೆಯ ಯಜ್ಞಮಾಡಿದರೂ ಅಥವಾ ಸ್ವಇಚ್ಛೆಯಿಂದ ಯಜ್ಞಮಾಡಿದರೂ ನಿಯಮಿತ ಹಬ್ಬಗಳಲ್ಲಿ ಯಜ್ಞಮಾಡಿದರೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಯೆಹೋವ ದೇವರಿಗೆ ಪಶುಗಳಿಂದಾದರೂ ಕುರಿಗಳಿಂದಾದರೂ ಸುವಾಸನೆಯನ್ನುಂಟುಮಾಡುವ ದಹನಬಲಿಯಾಗಲಿ, ಹರಕೆಯನ್ನು ಈಡೇರಿಸುವ ಬಲಿಯನ್ನಾಗಲಿ, ಉಚಿತವಾದ ಸಮರ್ಪಣೆಯಾಗಲಿ, ನಿಮ್ಮ ಪವಿತ್ರ ಹಬ್ಬಗಳಲ್ಲಿಯಾಗಲಿ ಯೆಹೋವ ದೇವರಿಗೆ ಬೆಂಕಿಯಿಂದ ಅರ್ಪಿಸಲಾಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 15:3
27 ತಿಳಿವುಗಳ ಹೋಲಿಕೆ  

ಅದನ್ನೆಲ್ಲಾ ಯಜ್ಞವೇದಿಯ ಮೇಲೆ ಯೆಹೋವನಿಗೆ ಸರ್ವಾಂಗಹೋಮವಾಗಿ ಸಮರ್ಪಿಸಬೇಕು. ಇದು ಯೆಹೋವನಿಗೆ ಸುಗಂಧಹೋಮವಾಗಿದೆ.


ಅದರ ಸುವಾಸನೆಯು ಯೆಹೋವನಿಗೆ ಗಮಗವಿುಸಲು ಆತನು ಹೃದಯದೊಳಗೆ - ಮನುಷ್ಯರ ಮನಸ್ಸಂಕಲ್ಪವು ಚಿಕ್ಕಂದಿನಿಂದಲೇ ಕೆಟ್ಟದ್ದು; ಆದರೂ ನಾನು ಇನ್ನು ಮೇಲೆ ಅವರ ನಿವಿುತ್ತವಾಗಿ ಭೂವಿುಯನ್ನು ಶಪಿಸುವದಿಲ್ಲ; ನಾನು ಎಲ್ಲಾ ಜೀವಿಗಳನ್ನೂ ಈಗ ಸಂಹರಿಸಿದಂತೆ ಇನ್ನು ಮೇಲೆ ಸಂಹರಿಸುವದಿಲ್ಲ.


ಆ ದಿನದಲ್ಲಿ ನೀವು ಯೆಹೋವನಿಗೆ ಸುವಾಸನೆಯನ್ನುಂಟುಮಾಡುವದಕ್ಕೋಸ್ಕರ ಸರ್ವಾಂಗಹೋಮಕ್ಕಾಗಿ ಎರಡು ಹೋರಿ, ಒಂದು ಟಗರು, ವರುಷದ ಏಳು ಕುರಿ ಇವುಗಳನ್ನೂ;


ಎಪಫ್ರೊದೀತನ ಕೈಯಿಂದ ನೀವು ಕೊಟ್ಟು ಕಳುಹಿಸಿದ್ದು ನನಗೆ ತಲಪಲಾಗಿ ನಾನು ತುಂಬಿತುಳುಕಿದವನಾಗಿದ್ದೇನೆ. ಅದು ದೇವರಿಗೆ ಮೆಚ್ಚಿಕೆಯಾದದ್ದು, ಸುಗಂಧವಾಸನೆಯೇ, ಇಷ್ಟ ಯಜ್ಞವೇ.


ನೀನು ಇಸ್ರಾಯೇಲ್ಯರಿಗೆ ಹೀಗೆ ಆಜ್ಞಾಪಿಸು - ಯಾವನಾದರೂ ಮನುಷ್ಯರ ಪ್ರಾಣಗಳನ್ನು ಯೆಹೋವನಿಗೆ ಹರಕೆಮಾಡಿ ಪ್ರತಿಷ್ಠಿಸಿದರೆ [ಅವುಗಳನ್ನು ಬಿಡಿಸುವದಕ್ಕೆ] ದೇವರ ಸೇವೆಗೆ ನೇಮಕವಾದ ರೂಪಾಯಿಯ ಮೇರೆಗೆ ನೀವು ಅವನಿಂದ ಕೊಡಿಸಬೇಕಾದ ಈಡು ಹೇಗಂದರೆ -


ಕ್ರಿಸ್ತನು ನಿಮ್ಮನ್ನು ಪ್ರೀತಿಸಿ ನಮ್ಮೆಲ್ಲರಿಗೋಸ್ಕರ ತನ್ನನ್ನೇ ದೇವರಿಗೆ ಸುಗಂಧವಾಸನೆಯಾದ ಕಾಣಿಕೆಯಾಗಿಯೂ ಯಜ್ಞವಾಗಿಯೂ ಸಮರ್ಪಿಸಿಕೊಂಡ ಪ್ರಕಾರ ನೀವೂ ಪ್ರೀತಿಯಲ್ಲಿ ನಡೆದುಕೊಳ್ಳಿರಿ.


ಆಗ - ಈತನು ಪ್ರಿಯನಾಗಿರುವ ನನ್ನ ಮಗನು, ಈತನನ್ನು ನಾನು ಮೆಚ್ಚಿದ್ದೇನೆ ಎಂದು ಆಕಾಶವಾಣಿ ಆಯಿತು.


ಧಾನ್ಯ, ದ್ರಾಕ್ಷೆ, ಎಣ್ಣೇಕಾಯಿ ಈ ಬೆಳೆಗಳ ದಶಮಾಂಶಗಳನ್ನೂ ದನಕುರಿಗಳ ಚೊಚ್ಚಲುಮರಿಗಳನ್ನೂ ಹರಕೆಮಾಡಿದ ಪದಾರ್ಥಗಳನ್ನೂ ಕಾಣಿಕೆಗಳನ್ನೂ ಯಾಜಕರಿಗೋಸ್ಕರ ಪ್ರತ್ಯೇಕಿಸಿದ ಪದಾರ್ಥಗಳನ್ನೂ ನಿಮ್ಮ ನಿಮ್ಮ ಊರುಗಳಲ್ಲಿ ತಿನ್ನಬಾರದು.


ನಾನು ನಿಮಗೆ ಆಜ್ಞಾಪಿಸಿದ ಎಲ್ಲಾ ಕಾಣಿಕೆಗಳನ್ನು ಅಂದರೆ ಸರ್ವಾಂಗಹೋಮಗಳೇ ಮುಂತಾದ ಯಜ್ಞಪಶುಗಳನ್ನೂ ಬೆಳೆಯ ದಶಮಾಂಶಗಳನ್ನೂ ಯೆಹೋವನಿಗೋಸ್ಕರ ಪ್ರತ್ಯೇಕಿಸುವ ಪದಾರ್ಥಗಳನ್ನೂ ಹರಕೆಮಾಡಿದ ವಿಶೇಷವಾದ ಕಾಣಿಕೆಗಳನ್ನೂ ಇವುಗಳನ್ನೆಲ್ಲಾ ನಿಮ್ಮ ದೇವರಾದ ಯೆಹೋವನು ತನ್ನ ಹೆಸರನ್ನು ಸ್ಥಾಪಿಸುವದಕ್ಕೆ


ಆ ಸ್ಥಳಕ್ಕೆ ಮಾತ್ರ ನೀವು ಸಮರ್ಪಿಸುವ ಸರ್ವಾಂಗಹೋಮಗಳೇ ಮುಂತಾದ ಯಜ್ಞಗಳ ಪಶುಗಳನ್ನೂ ನಿಮ್ಮ ಬೆಳೆಯಲ್ಲಿ ದಶಮಾಂಶವನ್ನೂ ಯಾಜಕರಿಗೋಸ್ಕರ ಪ್ರತ್ಯೇಕಿಸುವ ಪದಾರ್ಥಗಳನ್ನೂ ಹರಕೇ ಮುಡುಪುಗಳನ್ನೂ ಕಾಣಿಕೆಗಳನ್ನೂ ದನಕುರಿಗಳ ಚೊಚ್ಚಲು ಮರಿಗಳನ್ನೂ ತಂದು


ನೀವು ಯೆಹೋವನಿಗೆ ಸುವಾಸನೆಯನ್ನುಂಟುಮಾಡುವ ಸರ್ವಾಂಗಹೋಮಕ್ಕಾಗಿ ಒಂದು ಹೋರಿ, ಒಂದು ಟಗರು, ಏಳು ಪೂರ್ಣಾಂಗವಾದ ವರುಷದ ಕುರಿ ಇವುಗಳನ್ನೂ;


ಅದು ಮಹಾಪರಿಶುದ್ಧವಾಗಿರುವದರಿಂದ ಪವಿತ್ರಸ್ಥಳದೊಳಗೇ ಅದನ್ನು ಊಟಮಾಡಬೇಕು. ಜನರು ಯೆಹೋವನಿಗೆ ಸಮರ್ಪಿಸುವ ಹೋಮದ್ರವ್ಯಗಳಲ್ಲಿ ಅದು ನಿನಗೂ ನಿನ್ನ ಮಕ್ಕಳಿಗೂ ಸಲ್ಲತಕ್ಕದ್ದೆಂದು ಅಪ್ಪಣೆಯಾಗಿದೆ.


ಯಾರಾದರೂ ಹರಕೆಯನ್ನು ಸಲ್ಲಿಸುವದಕ್ಕಾಗಲಿ ಸ್ವೇಚ್ಫೆಯಿಂದಾಗಲಿ ಅಂಥ ಯಜ್ಞವನ್ನು ಮಾಡಿಸಿದರೆ ಅದನ್ನು ಸಮರ್ಪಿಸಿದ ದಿನದಲ್ಲೇ ಅದರ ಮಾಂಸವನ್ನು ಊಟಮಾಡಬೇಕು; ಆದರೆ ವಿುಕ್ಕದ್ದನ್ನು ಮರುದಿನದಲ್ಲಿ ತಿನ್ನಬಹುದು.


ಸಾಯಂಕಾಲದಲ್ಲಿ ಎರಡನೆಯ ಕುರಿಯನ್ನು ಹೋಮಮಾಡುವಾಗ ಹೊತ್ತಾರೆಯಲ್ಲಿ ಮಾಡಿದ ಪ್ರಕಾರವೇ ಅದರೊಂದಿಗೆ ಧಾನ್ಯವನ್ನೂ ಪಾನದ್ರವ್ಯವನ್ನೂ ಸಮರ್ಪಿಸಬೇಕು. ಅದು ಯೆಹೋವನಿಗೆ ಸುಗಂಧ ಹೋಮವಾಗಿರುವದು.


ಆಮೇಲೆ ಅವುಗಳನ್ನು ಅವರ ಕೈಯಿಂದ ತೆಗೆದುಕೊಂಡು ಯಜ್ಞವೇದಿಯ ಮೇಲೆ ಸರ್ವಾಂಗಹೋಮದ್ರವ್ಯದ ಸಂಗಡ ಯೆಹೋವನಿಗೆ ಆಹುತಿಕೊಡಬೇಕು. ಅದು ಯೆಹೋವನಿಗೆ ಸುಗಂಧ ಹೋಮವಾಗಿದೆ.


ರಕ್ಷಣಾಮಾರ್ಗದಲ್ಲಿರುವವರಲ್ಲಿಯೂ ನಾಶನಮಾರ್ಗದಲ್ಲಿರುವವರಲ್ಲಿಯೂ ನಾವು ದೇವರ ಮುಂದೆ ಕ್ರಿಸ್ತನ ಪರಿಮಳವಾಗಿದ್ದೇವೆ.


ನಾವು ನಾಶನಮಾರ್ಗದಲ್ಲಿರುವವರಿಗೆ ಮರಣದಿಂದ ಹುಟ್ಟಿ ಮರಣವನ್ನು ಹುಟ್ಟಿಸುವ ವಾಸನೆಯಾಗಿಯೂ ರಕ್ಷಣಾಮಾರ್ಗದಲ್ಲಿರುವವರಿಗೆ ಜೀವದಿಂದ ಹುಟ್ಟಿ ಜೀವವನ್ನು ಹುಟ್ಟಿಸುವ ವಾಸನೆಯಾಗಿಯೂ ಇದ್ದೇವೆ. ಇಂಥ ಕಾರ್ಯಗಳಿಗೆ ಯಾರು ಯೋಗ್ಯರು?


ಯೆಹೋವನೇ, ನೀನು ನನ್ನನ್ನು ಸರ್ವಾಪತ್ತುಗಳಿಂದ ಬಿಡಿಸಿ ನನ್ನ ಕಣ್ಣ ಮುಂದೆಯೇ ನನ್ನ ವೈರಿಗಳನ್ನು ಶಿಕ್ಷಿಸಿದ್ದರಿಂದ


ಅದಲ್ಲದೆ ಒಂದು ಪುಟ್ಟಿ ತುಂಬಾ ಎಣ್ಣೆ ಬೆರಸಿದ ಗೋದಿಹಿಟ್ಟಿನ ಹುಳಿಯಿಲ್ಲದ ರೊಟ್ಟಿಗಳು, ಎಣ್ಣೆಹಾಕಿದ ಹುಳಿಯಿಲ್ಲದ ಕಡುಬುಗಳು ಇವುಗಳನ್ನೂ ಮೇಲೆ ಕಂಡ ಯಜ್ಞಗಳೊಡನೆ ಕೊಡಬೇಕಾದ ಧಾನ್ಯದ್ರವ್ಯಪಾನದ್ರವ್ಯಗಳನ್ನೂ ಸಮರ್ಪಿಸಬೇಕು.


ನೀನು ಈ ಹಣದಿಂದ ಹೋರಿ ಟಗರು ಕುರಿ ಇವುಗಳನ್ನೂ ಮತ್ತು ಇವುಗಳೊಡನೆ ಸಮರ್ಪಣೆಯಾಗತಕ್ಕ ಧಾನ್ಯದ್ರವ್ಯಪಾನದ್ರವ್ಯಗಳನ್ನೂ ಕೊಂಡುಕೊಂಡು ಅವುಗಳನ್ನು ಯೆರೂಸಲೇವಿುನಲ್ಲಿರುವ ನಿಮ್ಮ ದೇವರ ಆಲಯದ ಯಜ್ಞವೇದಿಯ ಮೇಲೆ ಸಮರ್ಪಿಸಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು