Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 15:4 - ಕನ್ನಡ ಸತ್ಯವೇದವು J.V. (BSI)

4 ಅದರೊಂದಿಗೆ ಧಾನ್ಯನೈವೇದ್ಯಕ್ಕಾಗಿ ಒಂದುವರೆ ಸೇರು ಎಣ್ಣೆ ಬೆರಸಿದ ಮೂರು ಸೇರು ಗೋದಿಯ ಹಿಟ್ಟನ್ನೂ ಪಾನದ್ರವ್ಯಕ್ಕಾಗಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಅದರೊಂದಿಗೆ ಯೆಹೋವನಿಗೆ ಕಾಣಿಕೆಯಾಗಿ ಧಾನ್ಯನೈವೇದ್ಯ ಸಮರ್ಪಿಸುವಾಗ ಒಂದುವರೆ ಸೇರು ಎಣ್ಣೆ ಬೆರಸಿದ ಮೂರು ಸೇರು ಗೋದಿಯ ಹಿಟ್ಟನ್ನೂ ಸೇರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಆ ಬಲಿಪ್ರಾಣಿಯೊಂದಿಗೆ ಧಾನ್ಯನೈವೇದ್ಯಕ್ಕಾಗಿ ಒಂದೂವರೆ ಸೇರು ಎಣ್ಣೆ ಬೆರೆಸಿದ ಮೂರು ಸೇರು ಗೋದಿಯ ಹಿಟ್ಟನ್ನು ತರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಅದರೊಂದಿಗೆ ಧಾನ್ಯನೈವೇದ್ಯಕ್ಕಾಗಿ ಒಂದೂವರೆ ಸೇರು ಎಣ್ಣೆ ಬೆರಸಿದ ಮೂರು ಸೇರು ಗೋಧಿಯ ಹಿಟ್ಟನ್ನೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಅದರೊಂದಿಗೆ ಯೆಹೋವ ದೇವರಿಗೆ ತನ್ನ ಬಲಿಯನ್ನು ಅರ್ಪಿಸುವಾಗ ಧಾನ್ಯ ಅರ್ಪಣೆಗಾಗಿ ಸುಮಾರು ಒಂದುವರೆ ಕಿಲೋಗ್ರಾಂ ಗೋಧಿ ಹಿಟ್ಟನ್ನು ಒಂದು ಲೀಟರ್ ಓಲಿವ್ ಎಣ್ಣೆಗೆ ಬೆರೆಸಲಾಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 15:4
21 ತಿಳಿವುಗಳ ಹೋಲಿಕೆ  

ಒಂದುವರೆ ಸೇರು ಶ್ರೇಷ್ಠವಾದ ಎಣ್ಣೆಯನ್ನೂ ಮೂರು ಸೇರು ಗೋದಿಹಿಟ್ಟನ್ನೂ ಬೆರಸಿ ಧಾನ್ಯ ಸಮರ್ಪಣೆಗಾಗಿ ಆ ಮೊದಲನೆಯ ಕುರಿಯ ಸಂಗಡ ಹೋಮ ಮಾಡಬೇಕು. ಪಾನ ದ್ರವ್ಯಾರ್ಪಣೆಗಾಗಿ ಒಂದುವರೆ ಸೇರು ದ್ರಾಕ್ಷಾರಸವನ್ನು ಹೋಮಮಾಡಬೇಕು.


ಅದರೊಂದಿಗೆ ಮಾಡಬೇಕಾದ ಧಾನ್ಯನೈವೇದ್ಯವು ಯಾವದಂದರೆ ಎಣ್ಣೆ ಬೆರೆತ ಆರು ಸೇರು ಗೋದಿಯ ಹಿಟ್ಟೇ. ಯೆಹೋವನಿಗೆ ಸುವಾಸನೆಯನ್ನುಂಟುಮಾಡುವದಕ್ಕೆ ಇದನ್ನು ಬೆಂಕಿಯಲ್ಲಿ ಹೋಮಮಾಡಬೇಕು. ಅದರೊಂದಿಗೆ ಸಮರ್ಪಿಸಬೇಕಾದ ಪಾನದ್ರವ್ಯವು ಒಂದುವರೆ ಸೇರು ದ್ರಾಕ್ಷಾರಸ.


ಧಾನ್ಯನೈವೇದ್ಯ ವಿಷಯವಾದ ನಿಯಮಗಳು. ಆರೋನನ ವಂಶದವರು ನೈವೇದ್ಯದ್ರವ್ಯವನ್ನು ಯೆಹೋವನ ಸನ್ನಿಧಿಯಲ್ಲಿ ಯಜ್ಞವೇದಿಯ ಎದುರಾಗಿಯೇ ಸಮರ್ಪಿಸಬೇಕು.


ಯಾವನಾದರೂ ಯೆಹೋವನಿಗೆ ಧಾನ್ಯ ನೈವೇದ್ಯ ಮಾಡಬೇಕೆಂದಿದ್ದರೆ ಅದು ಗೋದಿಹಿಟ್ಟಾಗಿರಬೇಕು. ಅವನು ಅದರ ಮೇಲೆ ಎಣ್ಣೆಯನ್ನು ಹೊಯಿದು ಧೂಪವನ್ನಿಟ್ಟು


ಎಂಟನೆಯ ದಿನದಲ್ಲಿ ಅವನು ಪೂರ್ಣಾಂಗವಾದ ಎರಡು ಟಗರುಗಳನ್ನೂ ಪೂರ್ಣಾಂಗವಾದ ಒಂದು ವರುಷದ ಕುರಿಯನ್ನೂ ನೈವೇದ್ಯಕ್ಕಾಗಿ ಎಣ್ಣೇ ಕಲಸಿದ ಒಂಭತ್ತು ಸೇರು ಗೋದಿಹಿಟ್ಟನ್ನೂ ಒಂದು ಸೇರು ಎಣ್ಣೆಯನ್ನೂ ತೆಗೆದುಕೊಂಡು ಬರಬೇಕು.


ಇದಲ್ಲದೆ ಪರೋಪಕಾರವನ್ನೂ ಧರ್ಮಮಾಡುವದನ್ನೂ ಮರೆಯಬೇಡಿರಿ; ಇವೇ ದೇವರಿಗೆ ಸಮರ್ಪಕವಾದ ಯಜ್ಞಗಳು.


ಸೂರ್ಯನು ಮೂಡುವ ದಿಕ್ಕಿನಿಂದ ಮುಣುಗುವ ದಿಕ್ಕಿನವರೆಗೂ ನನ್ನ ನಾಮವು ಅನ್ಯಜನಾಂಗಗಳಲ್ಲಿ ಘನವಾಗಿದೆ; ಒಂದೊಂದು ಸ್ಥಳದಲ್ಲಿಯೂ ನನ್ನ ನಾಮಕ್ಕೆ ಧೂಪವನ್ನೂ ಶುದ್ಧನೈವೇದ್ಯವನ್ನೂ ಅರ್ಪಿಸುತ್ತಾರೆ; ಹೌದು, ಅನ್ಯಜನಾಂಗಗಳಲ್ಲಿಯೇ ನನ್ನ ನಾಮವು ಘನವಾಗಿದೆ; ಇದು ಸೇನಾಧೀಶ್ವರ ಯೆಹೋವನ ನುಡಿ.


ಅದರೊಂದಿಗೆ ಪ್ರತಿದಿನ ಬೆಳಿಗ್ಗೆ ಧಾನ್ಯನೈವೇದ್ಯವಾಗಿ ಐದು ಸೇರು ಗೋದಿಹಿಟ್ಟನ್ನೂ ಅದನ್ನು ನೆನೆಯಿಸುವದಕ್ಕೆ ಎರಡು ಸೇರು ಎಣ್ಣೆಯನ್ನೂ ನೀನು ಸಮರ್ಪಿಸಬೇಕು; ಇವುಗಳನ್ನು ಪ್ರತಿನಿತ್ಯವೂ ಯೆಹೋವನಿಗೆ ಧಾನ್ಯನೈವೇದ್ಯವಾಗಿ ಅರ್ಪಿಸತಕ್ಕದ್ದು; ಇದು ಶಾಶ್ವತನಿಯಮ.


ಯೆಹೋವನು ಹೀಗನ್ನುತ್ತಾನೆ - ಇಸ್ರಾಯೇಲ್ಯರು ಯೆಹೋವನ ಆಲಯಕ್ಕೆ ಶುದ್ಧ ಪಾತ್ರೆಯಲ್ಲಿ ನೈವೇದ್ಯವನ್ನು ತೆಗೆದುಕೊಂಡು ಬರುವ ಪ್ರಕಾರ ಸಮಸ್ತಜನಾಂಗಗಳಲ್ಲಿ ಚದರಿಹೋಗಿರುವ ನಮ್ಮ ಸಹೋದರರನ್ನು ಕುದುರೆ, ತೇರು, ಪಾಲಕಿ, ಹೇಸರಗತ್ತೆ, ಒಂಟೆ ಇವುಗಳ ಮೇಲೆ ಯೆಹೋವನ ನೈವೇದ್ಯಕ್ಕಾಗಿ ಯೆರೂಸಲೇಮೆಂಬ ನನ್ನ ಪರಿಶುದ್ಧ ಪರ್ವತಕ್ಕೆ ಕರತರುವರು.


ಆಗ ಅದು ಅವುಗಳಿಗೆ - ನನ್ನಲ್ಲಿರುವ ಎಣ್ಣೆಗೋಸ್ಕರ ದೇವತೆಗಳೂ ಮನುಷ್ಯರೂ ನನ್ನನ್ನು ಘನಪಡಿಸುತ್ತಾರೆ; ಇದನ್ನು ಬಿಟ್ಟು ಮರಗಳ ಮೇಲೆ ಓಲಾಡುವದಕ್ಕೆ ಬರಬೇಕೋ ಅಂದಿತು.


ಅದು ನೈವೇದ್ಯ ವಸ್ತುವಾದದರಿಂದ ಅದರ ಮೇಲೆ ಎಣ್ಣೆ ಹೊಯಿದು ಧೂಪವಿಡಬೇಕು.


ಅದರ ಕರುಳುಗಳನ್ನೂ ಕಾಲುಗಳನ್ನೂ ನೀರಿನಲ್ಲಿ ತೊಳೆಸಿದನಂತರ ಯಾಜಕನು ಅದನ್ನು ಪೂರ್ತಿಯಾಗಿ ಯಜ್ಞವೇದಿಯ ಮೇಲೆ ಹೋಮಮಾಡಬೇಕು. ಅದು ಅಗ್ನಿಯ ಮೂಲಕ ಯೆಹೋವನಿಗೆ ಸುವಾಸನೆಯನ್ನುಂಟು ಮಾಡುವ ಸರ್ವಾಂಗಹೋಮವಾಗಿದೆ.


ಅದು ಕುರಿಯಾಗಿದ್ದರೆ ತಂದವನು ಅದನ್ನು ಯೆಹೋವನ ಸನ್ನಿಧಿಗೆ ತೆಗೆದುಕೊಂಡು ಬಂದು


ನೀವು ದಿನಂಪ್ರತಿಯೂ ಯೆಹೋವನಿಗೆ ಸರ್ವಾಂಗಹೋಮಕ್ಕಾಗಿ ಹೊತ್ತಾರೆಯಲ್ಲಿ ಒಂದು ಕುರಿಯನ್ನೂ ಸಾಯಂಕಾಲದಲ್ಲಿ ಒಂದು ಕುರಿಯನ್ನೂ ಅಂತು ಎರಡು ಪೂರ್ಣಾಂಗವಾದ ವರುಷದ ಕುರಿಗಳನ್ನು ಸಮರ್ಪಿಸಬೇಕು.


ಇವುಗಳೊಡನೆ ಧಾನ್ಯನೈವೇದ್ಯಕ್ಕಾಗಿ ನೀವು ಪ್ರತಿಯೊಂದು ಹೋರಿಗೆ ಒಂಭತ್ತು ಸೇರೂ


ನೀನು ಈ ಹಣದಿಂದ ಹೋರಿ ಟಗರು ಕುರಿ ಇವುಗಳನ್ನೂ ಮತ್ತು ಇವುಗಳೊಡನೆ ಸಮರ್ಪಣೆಯಾಗತಕ್ಕ ಧಾನ್ಯದ್ರವ್ಯಪಾನದ್ರವ್ಯಗಳನ್ನೂ ಕೊಂಡುಕೊಂಡು ಅವುಗಳನ್ನು ಯೆರೂಸಲೇವಿುನಲ್ಲಿರುವ ನಿಮ್ಮ ದೇವರ ಆಲಯದ ಯಜ್ಞವೇದಿಯ ಮೇಲೆ ಸಮರ್ಪಿಸಬೇಕು.


ಅವನ ಕಾಣಿಕೆಯು ಯಾವದಂದರೆ - ದೇವರ ಸೇವೆಗೆ ನೇಮಕವಾದ ರೂಪಾಯಿಯ ತೂಕದ ಮೇರೆಗೆ ನೂರ ಮೂವತ್ತು ರೂಪಾಯಿ ತೂಕದ ಬೆಳ್ಳಿಯ ಹರಿವಾಣವು; ಎಪ್ಪತ್ತು ತೊಲೆ ತೂಕವುಳ್ಳ ಬೆಳ್ಳಿಯ ಬಟ್ಟಲು; ಈ ಎರಡರಲ್ಲಿಯೂ ನೈವೇದ್ಯಕ್ಕಾಗಿ ಎಣ್ಣೆ ಬೆರಸಿದ ಗೋದಿಯ ಹಿಟ್ಟು ತುಂಬಿತ್ತು;


ಅಮಾವಾಸ್ಯೆಯಲ್ಲಿಯೂ ದಿನಂಪ್ರತಿಯೂ ಮಾಡಬೇಕಾದ ಸರ್ವಾಂಗಹೋಮಗಳನ್ನೂ ಅವುಗಳಿಗೆ ನೇಮಕವಾದ ಧಾನ್ಯದ್ರವ್ಯಪಾನದ್ರವ್ಯ ನೈವೇದ್ಯಗಳನ್ನೂ ಮಾತ್ರವಲ್ಲದೆ ಮೇಲೆ ಕಂಡ ಯಜ್ಞಗಳನ್ನು ಹೆಚ್ಚಾಗಿ ಮಾಡಬೇಕು. ಅವು ಯೆಹೋವನಿಗೆ ಸುಗಂಧಹೋಮವಾಗಿರುವವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು