Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 15:5 - ಕನ್ನಡ ಸತ್ಯವೇದವು J.V. (BSI)

5 ಒಂದುವರೆ ಸೇರು ದ್ರಾಕ್ಷಾರಸವನ್ನೂ ತರಬೇಕು. ನೀವು ಸರ್ವಾಂಗಹೋಮವಾಗಿ ಇಲ್ಲವೆ ಸಮಾಧಾನಯಜ್ಞವಾಗಿ ಸಮರ್ಪಿಸುವ ಒಂದೊಂದು ಕುರಿಯೊಂದಿಗೆ ಇದನ್ನೂ ಸಮರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಪಾನದ್ರವ್ಯಕ್ಕಾಗಿ ಒಂದುವರೆ ಸೇರು ದ್ರಾಕ್ಷಾರಸವನ್ನೂ ತರಬೇಕು. ನೀವು ಸರ್ವಾಂಗಹೋಮ ಅಥವಾ ಸಮಾಧಾನಯಜ್ಞವಾಗಿ ಕಾಣಿಕೆಯಾಗಿ ಒಂದೊಂದು ಕುರಿಯೊಂದಿಗೂ ದಹನ ಬಲಿಯನ್ನು ಸಮರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಮತ್ತು ಪಾನದ್ರವ್ಯಕ್ಕಾಗಿ ಒಂದೂವರೆ ಸೇರು ದ್ರಾಕ್ಷಾರಸವನ್ನೂ ತರಬೇಕು. ನೀವು ದಹನಬಲಿದಾನವಾಗಿ ಇಲ್ಲವೆ ಸಮಾಧಾನ ಬಲಿಯಾಗಿ ಸಮರ್ಪಿಸುವ ಒಂದೊಂದು ಕುರಿಯೊಂದಿಗೆ ಇದನ್ನು ಸಮರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಪಾನದ್ರವ್ಯಕ್ಕಾಗಿ ಒಂದೂವರೆ ಸೇರು ದ್ರಾಕ್ಷಾರಸವನ್ನೂ ತರಬೇಕು. ನೀವು ಸರ್ವಾಂಗಹೋಮವಾಗಿ ಇಲ್ಲವೆ ಸಮಾಧಾನಯಜ್ಞವಾಗಿ ಸಮರ್ಪಿಸುವ ಒಂದೊಂದು ಕುರಿಯೊಂದಿಗೆ ಇದನ್ನೂ ಸಮರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಪಾನದ ಅರ್ಪಣೆಗಾಗಿ ದಹನಬಲಿಯ ಸಂಗಡ ಒಂದು ಕುರಿಗೋಸ್ಕರ ಒಂದು ಲೀಟರ್ ದ್ರಾಕ್ಷಾರಸವನ್ನು ಅರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 15:5
18 ತಿಳಿವುಗಳ ಹೋಲಿಕೆ  

ಇವುಗಳಿಗೆ ತಕ್ಕ ಪಾನದ್ರವ್ಯಾರ್ಪಣೆ ಯಾವದಂದರೆ - ಒಂದೊಂದು ಹೋರಿಯೊಡನೆ ಮೂರು ಸೇರೂ ಟಗರಿನೊಡನೆ ಎರಡು ಸೇರೂ ಕುರಿಯೊಡನೆ ಒಂದುವರೆ ಸೇರೂ ದ್ರಾಕ್ಷಾರಸ. ಸಂವತ್ಸರದ ಪ್ರತಿ ಅಮಾವಾಸ್ಯೆಯಲ್ಲಿಯೂ ಹೀಗೆ ಸರ್ವಾಂಗಹೋಮವನ್ನು ಮಾಡಬೇಕು;


ಆ ಕುರಿಯೊಂದಿಗೆ ಪಾನದ್ರವ್ಯಾರ್ಪಣೆಗಾಗಿ ಒಂದುವರೆ ಸೇರು ಮದ್ಯವನ್ನು ದೇವಸ್ಥಾನದಲ್ಲಿ ಯೆಹೋವನಿಗೋಸ್ಕರ ಹೊಯ್ದುಬಿಡಬೇಕು.


ಯಾಕಂದರೆ ನಾನಂತೂ ಈಗಲೇ ಪಾನದ್ರವ್ಯವಾಗಿ ಅರ್ಪಿತನಾಗುತ್ತಾ ಇದ್ದೇನೆ; ನಾನು ಹೊರಟು ಹೋಗಬೇಕಾದ ಸಮಯವು ಸಮೀಪಕ್ಕೆ ಬಂದದೆ.


ನಿಮ್ಮ ನಂಬಿಕೆಯೆಂಬ ಯಜ್ಞವನ್ನು ದೇವರಿಗರ್ಪಿಸುವ ಸೇವೆಯಲ್ಲಿ ನಾನೇ ಪಾನದ್ರವ್ಯವಾಗಿ ಅರ್ಪಿತವಾಗಬೇಕಾದರೂ ನನಗೆ ಸಂತೋಷ, ನಿಮ್ಮೆಲ್ಲರ ಕೂಡ ಸಂತೋಷ.


ಆಹಾ, ಅವರ ಸೌಖ್ಯವೆಷ್ಟು, ಅವರ ಸೌಂದರ್ಯವೆಷ್ಟು! ಧಾನ್ಯವು ಯುವಕರನ್ನು, ದ್ರಾಕ್ಷಾರಸವು ಯುವತಿಯರನ್ನು ಪುಷ್ಟಿಗೊಳಿಸುವದು.


ನನ್ನನ್ನು ತುಸು ಎಳೆ; ನಿನ್ನ ಹಿಂದೆ ಓಡಿ ಬರುವೆವು; ರಾಜನು ನನ್ನನ್ನು ಅಂತಃಪುರಕ್ಕೆ ಬರಮಾಡಿದ್ದಾನೆ; ನಿನ್ನಲ್ಲಿ ಹರ್ಷಿಸಿ ಉಲ್ಲಾಸಿಸುವೆವು, ದ್ರಾಕ್ಷಾರಸಕ್ಕಿಂತಲೂ ನಿನ್ನ ಲಾಲನೆಯನ್ನು ಹೆಚ್ಚಾಗಿ ಕೊಂಡಾಡುವೆವು; ನಿನ್ನನ್ನು ಯಥಾರ್ಥವಾಗಿ ಪ್ರೀತಿಸುವರು.


ರಕ್ಷಣಾಪಾತ್ರೆಯನ್ನು ತೆಗೆದುಕೊಂಡು ಯೆಹೋವನಾಮವನ್ನು ಪ್ರಖ್ಯಾತಿಪಡಿಸುವೆನು.


ಅದು ಅವುಗಳಿಗೆ - ನಾನು ನನ್ನ ರಸದಿಂದ ದೇವತೆಗಳಿಗೂ ಮನುಷ್ಯರಿಗೂ ಆನಂದಕೊಡುವದನ್ನು ಬಿಟ್ಟು ಮರಗಳ ಮೇಲೆ ಓಲಾಡುವದಕ್ಕೆ ಬರಬೇಕೋ ಅಂದಿತು.


ಒಬ್ಬನು ಆಡನ್ನಾಗಲಿ ಕುರಿಯನ್ನಾಗಲಿ ಸರ್ವಾಂಗಹೋಮ ಮಾಡಬೇಕೆಂದಿದ್ದರೆ ಅವನು ಪೂರ್ಣಾಂಗವಾದ ಗಂಡನ್ನು ತರಬೇಕು.


ಸಮಾಧಾನಯಜ್ಞಕ್ಕಾಗಿ ಯೆಹೋವನಿಗೆ ಸಮರ್ಪಿಸುವಂಥದು ಕುರಿ ಅಥವಾ ಆಡು ಆಗಿರುವ ಪಕ್ಷದಲ್ಲಿ ಅದು ಗಂಡಾಗಲಿ ಹೆಣ್ಣಾಗಲಿ ಪೂರ್ಣಾಂಗವಾಗಿರಬೇಕು.


ಅದು ಕುರಿಯಾಗಿದ್ದರೆ ತಂದವನು ಅದನ್ನು ಯೆಹೋವನ ಸನ್ನಿಧಿಗೆ ತೆಗೆದುಕೊಂಡು ಬಂದು


ಟಗರಿನೊಂದಿಗೆ ಯೆಹೋವನಿಗೆ ಸುವಾಸನೆಯನ್ನುಂಟುಮಾಡುವದಕ್ಕೆ ಧಾನ್ಯನೈವೇದ್ಯಕ್ಕಾಗಿ ಎರಡು ಸೇರು ಎಣ್ಣೆ ಬೆರಸಿದ ಆರು ಸೇರು ಗೋದಿಯ ಹಿಟ್ಟನ್ನೂ


ಕುರಿ, ಆಡು, ಟಗರು, ಹೋರಿ ಇವುಗಳಲ್ಲಿ ಪ್ರತಿಯೊಂದು ಪಶುವಿನ ಸಂಗಡ ಈ ಮೇರೆಗೆ ನೀವು ನೈವೇದ್ಯ ಮಾಡಬೇಕು.


ತಮ್ಮನ್ನು ಶುದ್ಧಪಡಿಸಿಕೊಳ್ಳುವದರಲ್ಲಿ ಯಾಜಕರಿಗಿಂತ ಲೇವಿಯರೇ ಹೆಚ್ಚು ಶ್ರದ್ಧೆಯುಳ್ಳವರಾಗಿದ್ದರು. ಇದಲ್ಲದೆ ಯಾಜಕರು ಸಮರ್ಪಿಸಬೇಕಾಗಿದ್ದ ಸರ್ವಾಂಗಹೋಮ, ಸಮಾಧಾನಯಜ್ಞಗಳ ಕೊಬ್ಬು, ಸರ್ವಾಂಗಹೋಮ ಸಂಬಂಧವಾದ ಪಾನದ್ರವ್ಯ ಇವು ಅಪಾರವಾಗಿದ್ದವು.


ಒಂದುವರೆ ಸೇರು ಶ್ರೇಷ್ಠವಾದ ಎಣ್ಣೆಯನ್ನೂ ಮೂರು ಸೇರು ಗೋದಿಹಿಟ್ಟನ್ನೂ ಬೆರಸಿ ಧಾನ್ಯ ಸಮರ್ಪಣೆಗಾಗಿ ಆ ಮೊದಲನೆಯ ಕುರಿಯ ಸಂಗಡ ಹೋಮ ಮಾಡಬೇಕು. ಪಾನ ದ್ರವ್ಯಾರ್ಪಣೆಗಾಗಿ ಒಂದುವರೆ ಸೇರು ದ್ರಾಕ್ಷಾರಸವನ್ನು ಹೋಮಮಾಡಬೇಕು.


ಅದರೊಂದಿಗೆ ಮಾಡಬೇಕಾದ ಧಾನ್ಯನೈವೇದ್ಯವು ಯಾವದಂದರೆ ಎಣ್ಣೆ ಬೆರೆತ ಆರು ಸೇರು ಗೋದಿಯ ಹಿಟ್ಟೇ. ಯೆಹೋವನಿಗೆ ಸುವಾಸನೆಯನ್ನುಂಟುಮಾಡುವದಕ್ಕೆ ಇದನ್ನು ಬೆಂಕಿಯಲ್ಲಿ ಹೋಮಮಾಡಬೇಕು. ಅದರೊಂದಿಗೆ ಸಮರ್ಪಿಸಬೇಕಾದ ಪಾನದ್ರವ್ಯವು ಒಂದುವರೆ ಸೇರು ದ್ರಾಕ್ಷಾರಸ.


ನೀನು ಈ ಹಣದಿಂದ ಹೋರಿ ಟಗರು ಕುರಿ ಇವುಗಳನ್ನೂ ಮತ್ತು ಇವುಗಳೊಡನೆ ಸಮರ್ಪಣೆಯಾಗತಕ್ಕ ಧಾನ್ಯದ್ರವ್ಯಪಾನದ್ರವ್ಯಗಳನ್ನೂ ಕೊಂಡುಕೊಂಡು ಅವುಗಳನ್ನು ಯೆರೂಸಲೇವಿುನಲ್ಲಿರುವ ನಿಮ್ಮ ದೇವರ ಆಲಯದ ಯಜ್ಞವೇದಿಯ ಮೇಲೆ ಸಮರ್ಪಿಸಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು