Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 15:7 - ಕನ್ನಡ ಸತ್ಯವೇದವು J.V. (BSI)

7 ಪಾನದ್ರವ್ಯವಾಗಿ ಎರಡು ಸೇರು ದ್ರಾಕ್ಷಾರಸವನ್ನೂ ತಂದು ಸಮರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಪಾನದ್ರವ್ಯವಾಗಿ ಯೆಹೋವನಿಗೆ ಸುವಾಸನೆಯಾಗಿ ಎರಡು ಸೇರು ದ್ರಾಕ್ಷಾರಸವನ್ನೂ ತಂದು ಸಮರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಮತ್ತು ಪಾನದ್ರವ್ಯಕ್ಕಾಗಿ ಎರಡು ಸೇರು ದ್ರಾಕ್ಷಾರಸವನ್ನು ಸಮರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಪಾನದ್ರವ್ಯಕ್ಕಾಗಿ ಎರಡು ಸೇರು ದ್ರಾಕ್ಷಾರಸವನ್ನೂ ಸಮರ್ಪಿಸಬೇಕು. ಅದು ಯೆಹೋವನಿಗೆ ಸುವಾಸನೆಯನ್ನು ಉಂಟುಮಾಡುವ ಯಜ್ಞವಾಗಿರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಪಾನದ ಸಮರ್ಪಣೆಯಾಗಿ ಯೆಹೋವ ದೇವರಿಗೆ ಸುವಾಸನೆಗಾಗಿ ಒಂದು ಲೀಟರ್ ದ್ರಾಕ್ಷಾರಸವನ್ನು ಅರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 15:7
8 ತಿಳಿವುಗಳ ಹೋಲಿಕೆ  

ಟಗರಿನೊಂದಿಗೆ ಯೆಹೋವನಿಗೆ ಸುವಾಸನೆಯನ್ನುಂಟುಮಾಡುವದಕ್ಕೆ ಧಾನ್ಯನೈವೇದ್ಯಕ್ಕಾಗಿ ಎರಡು ಸೇರು ಎಣ್ಣೆ ಬೆರಸಿದ ಆರು ಸೇರು ಗೋದಿಯ ಹಿಟ್ಟನ್ನೂ


ಸರ್ವಾಂಗಹೋಮ, ಹರಕೆ ಸಲ್ಲಿಸುವ ಯಜ್ಞ, ಬೇರೆ ವಿಧವಾದ ಸಮಾಧಾನಯಜ್ಞ ಇವುಗಳಿಗಾಗಿ


ಒಂದುವರೆ ಸೇರು ಶ್ರೇಷ್ಠವಾದ ಎಣ್ಣೆಯನ್ನೂ ಮೂರು ಸೇರು ಗೋದಿಹಿಟ್ಟನ್ನೂ ಬೆರಸಿ ಧಾನ್ಯ ಸಮರ್ಪಣೆಗಾಗಿ ಆ ಮೊದಲನೆಯ ಕುರಿಯ ಸಂಗಡ ಹೋಮ ಮಾಡಬೇಕು. ಪಾನ ದ್ರವ್ಯಾರ್ಪಣೆಗಾಗಿ ಒಂದುವರೆ ಸೇರು ದ್ರಾಕ್ಷಾರಸವನ್ನು ಹೋಮಮಾಡಬೇಕು.


ಅದಲ್ಲದೆ ಒಂದು ಪುಟ್ಟಿ ತುಂಬಾ ಎಣ್ಣೆ ಬೆರಸಿದ ಗೋದಿಹಿಟ್ಟಿನ ಹುಳಿಯಿಲ್ಲದ ರೊಟ್ಟಿಗಳು, ಎಣ್ಣೆಹಾಕಿದ ಹುಳಿಯಿಲ್ಲದ ಕಡುಬುಗಳು ಇವುಗಳನ್ನೂ ಮೇಲೆ ಕಂಡ ಯಜ್ಞಗಳೊಡನೆ ಕೊಡಬೇಕಾದ ಧಾನ್ಯದ್ರವ್ಯಪಾನದ್ರವ್ಯಗಳನ್ನೂ ಸಮರ್ಪಿಸಬೇಕು.


ನನಗೆ ಸಮರ್ಪಿಸಬೇಕಾದ ಯಜ್ಞಗಳನ್ನು ಅಂದರೆ ನನಗೆ ಸುಗಂಧಹೋಮ ಮಾಡುವದಕ್ಕಾಗಿ ಇಸ್ರಾಯೇಲ್ಯರು ನನಗೋಸ್ಕರ ತರುವ ಆಹಾರವನ್ನು ತಕ್ಕ ಕಾಲಗಳಲ್ಲಿ ತಂದು ಎಚ್ಚರಿಕೆಯಿಂದ ಸಮರ್ಪಿಸಬೇಕೆಂದು ಅವರಿಗೆ ಆಜ್ಞಾಪಿಸು.


ಆ ಕುರಿಯೊಂದಿಗೆ ಪಾನದ್ರವ್ಯಾರ್ಪಣೆಗಾಗಿ ಒಂದುವರೆ ಸೇರು ಮದ್ಯವನ್ನು ದೇವಸ್ಥಾನದಲ್ಲಿ ಯೆಹೋವನಿಗೋಸ್ಕರ ಹೊಯ್ದುಬಿಡಬೇಕು.


ಅದು ಅವುಗಳಿಗೆ - ನಾನು ನನ್ನ ರಸದಿಂದ ದೇವತೆಗಳಿಗೂ ಮನುಷ್ಯರಿಗೂ ಆನಂದಕೊಡುವದನ್ನು ಬಿಟ್ಟು ಮರಗಳ ಮೇಲೆ ಓಲಾಡುವದಕ್ಕೆ ಬರಬೇಕೋ ಅಂದಿತು.


ಮರುದಿನ ಅವರು ಯೆಹೋವನಿಗೆ ಯಜ್ಞಗಳನ್ನೂ ಸರ್ವಾಂಗಹೋಮಗಳನ್ನೂ ಸಮರ್ಪಿಸಿದರು. ಅವರು ಆ ದಿವಸ ಯಜ್ಞಕ್ಕಾಗಿ ಸಾವಿರ ಹೋರಿಗಳನ್ನೂ ಸಾವಿರ ಟಗರುಗಳನ್ನೂ ಸಾವಿರ ಕುರಿಮರಿಗಳನ್ನೂ ವಧಿಸಿದರು. ಇವುಗಳೊಡನೆ ಅರ್ಪಿಸತಕ್ಕ ಪಾನದ್ರವ್ಯಗಳನ್ನೂ ಇಸ್ರಾಯೇಲ್ಯರೆಲ್ಲರಿಗೆ ಸಾಕಾಗುವಷ್ಟು ಸಮಾಧಾನಯಜ್ಞಗಳನ್ನೂ ಸಮರ್ಪಿಸಿ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು