Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 15:9 - ಕನ್ನಡ ಸತ್ಯವೇದವು J.V. (BSI)

9 ನೀವು ತರುವಂಥದು ಹೋರಿಯಾಗುವ ಪಕ್ಷಕ್ಕೆ ಅದರೊಂದಿಗೆ ಧಾನ್ಯನೈವೇದ್ಯಕ್ಕಾಗಿ ಮೂರು ಸೇರು ಎಣ್ಣೆ ಬೆರಸಿದ ಒಂಭತ್ತು ಸೇರು ಗೋದಿಯ ಹಿಟ್ಟನ್ನೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಅವನು ಧಾನ್ಯನೈವೇದ್ಯಕ್ಕಾಗಿ ಮೂರು ಸೇರು ಎಣ್ಣೆ ಬೆರಸಿದ ಒಂಭತ್ತು ಸೇರು ಗೋದಿಯ ಹಿಟ್ಟನ್ನೂ, ಒಂದು ಹೋರಿಯೊಂದಿಗೆ ತರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಆಗ ನೀವು ‘ಆ ಬಲಿಪ್ರಾಣಿಯೊಂದಿಗೆ ಧಾನ್ಯನೈವೇದ್ಯಕ್ಕಾಗಿ ಮೂರು ಸೇರು ಎಣ್ಣೆ ಬೆರೆಸಿದ ಒಂಬತ್ತು ಸೇರು ಗೋದಿಯ ಹಿಟ್ಟನ್ನು ಅರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಅದರೊಂದಿಗೆ ಧಾನ್ಯನೈವೇದ್ಯಕ್ಕಾಗಿ ಮೂರು ಸೇರು ಎಣ್ಣೆ ಬೆರಸಿದ ಒಂಭತ್ತು ಸೇರು ಗೋಧಿಯ ಹಿಟ್ಟನ್ನೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ನೀವು ಆ ಹೋರಿಯೊಂದಿಗೆ ಧಾನ್ಯ ಸಮರ್ಪಣೆಯಾಗಿ ಸುಮಾರು ಎರಡು ಲೀಟರ್ ಓಲಿವ್ ಎಣ್ಣೆ ಬೆರೆಸಿದ ಐದು ಕಿಲೋಗ್ರಾಂ ಗೋಧಿ ಹಿಟ್ಟನ್ನು ಅರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 15:9
18 ತಿಳಿವುಗಳ ಹೋಲಿಕೆ  

ಇವುಗಳಿಗೆ ತಕ್ಕ ಪಾನದ್ರವ್ಯಾರ್ಪಣೆ ಯಾವದಂದರೆ - ಒಂದೊಂದು ಹೋರಿಯೊಡನೆ ಮೂರು ಸೇರೂ ಟಗರಿನೊಡನೆ ಎರಡು ಸೇರೂ ಕುರಿಯೊಡನೆ ಒಂದುವರೆ ಸೇರೂ ದ್ರಾಕ್ಷಾರಸ. ಸಂವತ್ಸರದ ಪ್ರತಿ ಅಮಾವಾಸ್ಯೆಯಲ್ಲಿಯೂ ಹೀಗೆ ಸರ್ವಾಂಗಹೋಮವನ್ನು ಮಾಡಬೇಕು;


ಇವುಗಳೊಡನೆ ಧಾನ್ಯನೈವೇದ್ಯಕ್ಕಾಗಿ ನೀವು ಪ್ರತಿಯೊಂದು ಹೋರಿಗೆ ಒಂಭತ್ತು ಸೇರೂ


ಎಂಟನೆಯ ದಿನದಲ್ಲಿ ಅವನು ಪೂರ್ಣಾಂಗವಾದ ಎರಡು ಟಗರುಗಳನ್ನೂ ಪೂರ್ಣಾಂಗವಾದ ಒಂದು ವರುಷದ ಕುರಿಯನ್ನೂ ನೈವೇದ್ಯಕ್ಕಾಗಿ ಎಣ್ಣೇ ಕಲಸಿದ ಒಂಭತ್ತು ಸೇರು ಗೋದಿಹಿಟ್ಟನ್ನೂ ಒಂದು ಸೇರು ಎಣ್ಣೆಯನ್ನೂ ತೆಗೆದುಕೊಂಡು ಬರಬೇಕು.


ಧಾನ್ಯನೈವೇದ್ಯ ವಿಷಯವಾದ ನಿಯಮಗಳು. ಆರೋನನ ವಂಶದವರು ನೈವೇದ್ಯದ್ರವ್ಯವನ್ನು ಯೆಹೋವನ ಸನ್ನಿಧಿಯಲ್ಲಿ ಯಜ್ಞವೇದಿಯ ಎದುರಾಗಿಯೇ ಸಮರ್ಪಿಸಬೇಕು.


ಆತನು ಒಂದು ವೇಳೆ ಪಶ್ಚಾತ್ತಾಪಪಟ್ಟು ಹಿಂದಿರುಗಿ ನಿಮ್ಮ ದೇವರಾದ ಯೆಹೋವನ ಧಾನ್ಯಪಾನನೈವೇದ್ಯಗಳಿಗೆ ಅನುಕೂಲವಾದ ಸುವರಗಳನ್ನು ದಯಪಾಲಿಸಿ ಹೋದಾನು.


ಧಾನ್ಯಪಾನನೈವೇದ್ಯಗಳು ಯೆಹೋವನ ಆಲಯದಲ್ಲಿ ನಿಂತುಹೋಗಿವೆ; ಯೆಹೋವನ ಸೇವಕರಾದ ಯಾಜಕರು ದುಃಖಿಸುತ್ತಾರೆ.


ಯಾಜಕರು ಕುರಿಯನ್ನೂ ಧಾನ್ಯ ನೈವೇದ್ಯವನ್ನೂ ಎಣ್ಣೆಯನ್ನೂ ನಿತ್ಯಸರ್ವಾಂಗಹೋಮವಾಗಿ ಪ್ರತಿದಿನ ಬೆಳಿಗ್ಗೆ ಸಮರ್ಪಿಸಬೇಕು.


[ಪ್ರಭುವು] ಉತ್ಸವಗಳಲ್ಲಿಯೂ ಹಬ್ಬಗಳಲ್ಲಿಯೂ ಹೋರಿಯೊಡನೆ ಮೂವತ್ತು ಸೇರು, ಟಗರಿನೊಡನೆ ಮೂವತ್ತು ಸೇರು, ಕುರಿಗಳೊಡನೆ ಶಕ್ತಿಯಿದ್ದಷ್ಟು ಸೇರು [ಗೋದಿ ಹಿಟ್ಟನ್ನೂ] ಮೂವತ್ತು ಮೂವತ್ತು ಸೇರಿಗೆ ಆರಾರು ಸೇರಿನಂತೆ ಎಣ್ಣೆಯನ್ನೂ ಧಾನ್ಯನೈವೇದ್ಯಕ್ಕಾಗಿ ಒದಗಿಸಬೇಕು.


ಮತ್ತು ಹೋರಿಯೊಡನೆ ಮೂವತ್ತು ಸೇರು, ಟಗರಿನೊಡನೆ ಮೂವತ್ತು ಸೇರು, ಕುರಿಗಳೊಡನೆ ಶಕ್ತಿಯಿದ್ದಷ್ಟು ಸೇರು [ಗೋದಿ ಹಿಟ್ಟನ್ನೂ] ಮೂವತ್ತು ಮೂವತ್ತು ಸೇರಿಗೆ ಆರಾರು ಸೇರಿನಂತೆ ಎಣ್ಣೆಯನ್ನೂ ಧಾನ್ಯನೈವೇದ್ಯಕ್ಕಾಗಿ ಒದಗಿಸಬೇಕು.


ಟಗರಿನೊಡನೆ ಮೂವತ್ತು ಸೇರು [ಗೋದಿ ಹಿಟ್ಟನ್ನೂ] ಕುರಿಗಳೊಡನೆ ಶಕ್ತಿಯಿದ್ದಷ್ಟು [ಗೋದಿ ಹಿಟ್ಟನ್ನೂ] ಮೂವತ್ತು ಮೂವತ್ತು ಸೇರು [ಗೋದಿ ಹಿಟ್ಟಿಗೆ] ಆರಾರು ಸೇರಿನಂತೆ ಎಣ್ಣೆಯನ್ನೂ ಧಾನ್ಯನೈವೇದ್ಯಕ್ಕಾಗಿ ಕೊಡಲಿ.


ಆಗ ಅವನು ನನಗೆ - ದೀಕ್ಷಿತರ ಪ್ರಾಕಾರದ ಬಡಗಣ ತೆಂಕಣ ಕಡೆಗಳಲ್ಲಿನ ಕೋಣೆಗಳು ಪರಿಶುದ್ಧವಾಗಿವೆ; ಅಲ್ಲಿ ಯೆಹೋವನ ಸನ್ನಿಧಿ ಸೇವಕರಾದ ಯಾಜಕರು ಮಹಾಪರಿಶುದ್ಧ ಪದಾರ್ಥಗಳನ್ನು ಭುಜಿಸುವರು, ಮತ್ತು ಧಾನ್ಯನೈವೇದ್ಯ, ದೋಷಪರಿಹಾರಕಯಜ್ಞದ್ರವ್ಯ, ಪ್ರಾಯಶ್ಚಿತ್ತಯಜ್ಞದ್ರವ್ಯ ಎಂಬೀ ಮಹಾಪರಿಶುದ್ಧಪದಾರ್ಥಗಳನ್ನು ಅಲ್ಲಿಡುವರು; ಆ ಸ್ಥಳವು ಪರಿಶುದ್ಧವಷ್ಟೆ.


ಆ ಹಣವು ದೇವರ ಸನ್ನಿಧಿಯಲ್ಲಿಡತಕ್ಕ ರೊಟ್ಟಿ, ನಿತ್ಯಧಾನ್ಯ ನೈವೇದ್ಯ ಇವುಗಳಿಗೋಸ್ಕರವೂ ನಿತ್ಯಸರ್ವಾಂಗಹೋಮ ಮತ್ತು ಸಬ್ಬತ್ ದಿನ, ಅಮಾವಾಸ್ಯೆ, ಜಾತ್ರೆ ಇವುಗಳಲ್ಲಿ ಮಾಡತಕ್ಕ ಸರ್ವಾಂಗಹೋಮ, ಸಮಾಧಾನಯಜ್ಞ, ಇಸ್ರಾಯೇಲ್ಯರ ದೋಷಪರಿಹಾರಾರ್ಥವಾದ ಯಜ್ಞ ಇವುಗಳಿಗೋಸ್ಕರವೂ ನಮ್ಮ ದೇವಾಲಯ ಸಂಬಂಧವಾದ ಬೇರೆ ಎಲ್ಲಾ ಕೆಲಸಕ್ಕೋಸ್ಕರವೂ ವೆಚ್ಚವಾಗಬೇಕು;


ಆಗ ಒರ್ನಾನನು ದಾವೀದನಿಗೆ - ನನ್ನ ಒಡೆಯನಾದ ಅರಸನು ತನಗೆ ಇಷ್ಟವಾದದ್ದನ್ನು ತೆಗೆದುಕೊಂಡು ಯಜ್ಞಮಾಡೋಣವಾಗಲಿ. ಇಲ್ಲಿ ಯಜ್ಞಕ್ಕೆ ಹೋರಿಗಳೂ ಸೌದೆಗೆ ಹಂತೀಕುಂಟೆಗಳೂ ನೈವೇದ್ಯಕ್ಕೋಸ್ಕರ ಗೋದಿಯೂ ಇರುತ್ತವೆ; ಇವೆಲ್ಲವನ್ನೂ ಕೊಡುತ್ತೇನೆ ಎಂದು ಹೇಳಿದನು.


ಅಮಾವಾಸ್ಯೆಯಲ್ಲಿಯೂ ದಿನಂಪ್ರತಿಯೂ ಮಾಡಬೇಕಾದ ಸರ್ವಾಂಗಹೋಮಗಳನ್ನೂ ಅವುಗಳಿಗೆ ನೇಮಕವಾದ ಧಾನ್ಯದ್ರವ್ಯಪಾನದ್ರವ್ಯ ನೈವೇದ್ಯಗಳನ್ನೂ ಮಾತ್ರವಲ್ಲದೆ ಮೇಲೆ ಕಂಡ ಯಜ್ಞಗಳನ್ನು ಹೆಚ್ಚಾಗಿ ಮಾಡಬೇಕು. ಅವು ಯೆಹೋವನಿಗೆ ಸುಗಂಧಹೋಮವಾಗಿರುವವು.


ಸರ್ವಾಂಗಹೋಮ, ಧಾನ್ಯನೈವೇದ್ಯ, ದೋಷಪರಿಹಾರಕಯಜ್ಞ, ಪ್ರಾಯಶ್ಚಿತ್ತಯಜ್ಞ, ಯಾಜಕ ಪ್ರತಿಷ್ಠೆ, ಸಮಾಧಾನ ಯಜ್ಞ ಎಂಬಿವುಗಳ ವಿಷಯದಲ್ಲಿ ಮೇಲೆ ಕಂಡದ್ದೆ ವಿಧಿ.


ಸರ್ವಾಂಗಹೋಮ, ಹರಕೆ ಸಲ್ಲಿಸುವ ಯಜ್ಞ, ಬೇರೆ ವಿಧವಾದ ಸಮಾಧಾನಯಜ್ಞ ಇವುಗಳಿಗಾಗಿ


ಪಾನದ್ರವ್ಯಕ್ಕಾಗಿ ಮೂರು ಸೇರು ದ್ರಾಕ್ಷಾರಸವನ್ನೂ ತಂದು ಸಮರ್ಪಿಸಬೇಕು. ಇದು ಯೆಹೋವನಿಗೆ ಸುಗಂಧಹೋಮವಾಗುವದು.


ಅನಂತರ ಆಕೆಯು ಮೂರು ವರುಷದ ಒಂದು ಹೋರಿಯನ್ನೂ ಮೂವತ್ತು ಸೇರು ಹಿಟ್ಟನ್ನೂ ಒಂದು ತಿತ್ತಿ ದ್ರಾಕ್ಷಾರಸವನ್ನೂ ತೆಗೆದುಕೊಂಡು ಪುತ್ರಸಹಿತವಾಗಿ ಶೀಲೋವಿನಲ್ಲಿದ್ದ ಯೆಹೋವನ ಮಂದಿರಕ್ಕೆ ಬಂದಳು; ಮಗನು ಇನ್ನೂ ಚಿಕ್ಕವನಾಗಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು