ಅರಣ್ಯಕಾಂಡ 16:10 - ಕನ್ನಡ ಸತ್ಯವೇದವು J.V. (BSI)10 ನಿನ್ನ ಸ್ವಕುಲದವರಾದ ಲೇವಿಯರನ್ನೂ ತನ್ನ ಹತ್ತಿರ ಇಟ್ಟುಕೊಂಡದ್ದು ಅಲ್ಪಕಾರ್ಯವೆಂದು ನಿಮಗೆ ಕಾಣುತ್ತದೋ? ಯಾಜಕತ್ವವೂ ನಿಮಗೆ ಆಗಬೇಕೆಂದು ಕೋರುತ್ತೀರಾ? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಆತನು ನಿನ್ನನ್ನೂ, ನಿನ್ನ ಸ್ವಕುಲದವರಾದ ಲೇವಿಯರನ್ನೂ ತನ್ನ ಹತ್ತಿರ ಬರಮಾಡಿಕೊಂಡಿದ್ದಾನೆ. ನೀವು ಸಹ ಯಾಜಕತ್ವವನ್ನು ಬಯಸುತ್ತಿರೋ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಇದು ಕೋರಹನಾದ ನಿನಗೂ ನಿನ್ನ ಸ್ವಕುಲದವರಾದ ಲೇವಿಯರಿಗೂ ಕೇವಲ ಅಲ್ಪಕಾರ್ಯವೆಂದು ತೋರಿತೇ? ಯಾಜಕ ಪದವಿ ನಿಮಗಾಗಬೇಕೆಂದು ಕೋರುತ್ತೀರೋ? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಈ ರೀತಿ ಆತನ ಬಳಿಯಲ್ಲಿ ಸೇವೆಮಾಡಲು ನಿನಗೂ ನಿನ್ನ ಸಹೋದ್ಯೋಗಿಗಳಾದ ಎಲ್ಲಾ ಲೇವಿಯರಿಗೂ ಯೆಹೋವನು ಅವಕಾಶ ಕೊಟ್ಟಿದ್ದಾನೆ. ಆದರೆ ಈಗ ನೀವು ಯಾಜಕರಾಗಬೇಕೆಂದು ಸಹ ಪ್ರಯತ್ನಿಸುತ್ತಿದ್ದೀರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ದೇವರು ನಿನ್ನನ್ನೂ, ನಿನ್ನ ಸಂಗಡ ಲೇವಿಯ ಪುತ್ರರಾದ ನಿನ್ನ ಸಹೋದರರೆಲ್ಲರನ್ನೂ ತಮ್ಮ ಹತ್ತಿರ ಬರಮಾಡಿಕೊಂಡಿದ್ದಾರೆ. ನೀವು ಯಾಜಕತ್ವವನ್ನು ಸಹ ಹುಡುಕುತ್ತೀರೋ? ಅಧ್ಯಾಯವನ್ನು ನೋಡಿ |