Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 16:30 - ಕನ್ನಡ ಸತ್ಯವೇದವು J.V. (BSI)

30 ಆದರೆ ಯೆಹೋವನು ಇವರಿಗೋಸ್ಕರ ಅಪೂರ್ವವಾದ ಶಿಕ್ಷೆಯನ್ನು ಕಲ್ಪಿಸಿದರೆ ಅಂದರೆ ಭೂವಿುಯು ಬಾಯ್ದೆರೆದು ಇವರನ್ನೂ ಇವರ ಸರ್ವಸ್ವವನ್ನೂ ನುಂಗುವದರಿಂದ ಇವರೆಲ್ಲರೂ ಸಜೀವಿಗಳಾಗಿ ಪಾತಾಳಕ್ಕೆ ಹೋಗಿಬಿಟ್ಟರೆ ಇವರು ಯೆಹೋವನನ್ನು ಉಲ್ಲಂಘಿಸಿದವರೆಂದು ನೀವು ತಿಳಿದುಕೊಳ್ಳಬೇಕು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಆದರೆ ಯೆಹೋವನು ಇವರಿಗೋಸ್ಕರ ಭೂಮಿಯು ಬಾಯ್ದೆರೆದು ಇವರನ್ನೂ, ಇವರ ಸರ್ವಸ್ವವನ್ನೂ ನುಂಗಿ, ಇವರು ಸಜೀವಿಗಳಾಗಿ ಪಾತಾಳಕ್ಕೆ ಹೋಗಿಬಿಟ್ಟರೆ, ಇವರು ಯೆಹೋವನನ್ನು ತಿರಸ್ಕರಿಸಿದವರೆಂದು ನೀವು ತಿಳಿದುಕೊಳ್ಳಬೇಕು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ಬದಲಿಗೆ ಸರ್ವೇಶ್ವರ ಇವರಿಗಾಗಿ ಆಶ್ಚರ್ಯಕರವಾದ ಶಿಕ್ಷೆಯನ್ನು ಕಲ್ಪಿಸಿ ಅಂದರೆ ಭೂಮಿ ಬಾಯ್ದೆರೆದು ಇವರನ್ನು ಹಾಗೂ ಇವರಿಗಿರುವ ಸರ್ವಸ್ವವನ್ನು ನುಂಗಿಬಿಟ್ಟರೆ, ಇವರೆಲ್ಲರು ಸಜೀವಿಗಳಾಗಿ ಪಾತಾಳಕ್ಕೆ ಹೋಗಿಬಿಟ್ಟರೆ, ಇವರು ಸರ್ವೇಶ್ವರನನ್ನು ಉಲ್ಲಂಘಿಸಿದವರೆಂದು ನೀವು ತಿಳಿದುಕೊಳ್ಳಬೇಕು,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 ಆದರೆ ಯೆಹೋವನು ಇವರಿಗೋಸ್ಕರ ಅಪೂರ್ವ ಶಿಕ್ಷೆಯನ್ನು ಕಲ್ಪಿಸಿದರೆ ಅಂದರೆ ಭೂಮಿಯು ಬಾಯ್ದೆರೆದು ಇವರನ್ನೂ ಇವರ ಸರ್ವಸ್ವವನ್ನೂ ನುಂಗುವುದರಿಂದ ಇವರೆಲ್ಲರೂ ಸಜೀವಿಗಳಾಗಿ ಸಮಾಧಿಯಾದರೆ, ಇವರು ನಿಜವಾಗಿಯೂ ಯೆಹೋವನನ್ನು ತಿರಸ್ಕರಿಸಿದವರೆಂದು ನೀವು ತಿಳಿದುಕೊಳ್ಳಬೇಕು” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 ಆದರೆ ಯೆಹೋವ ದೇವರು ಹೊಸದನ್ನು ಮಾಡಿ, ಭೂಮಿಯು ತನ್ನ ಬಾಯಿತೆರೆದು, ಇವರನ್ನೂ, ಇವರಿಗಿರುವ ಎಲ್ಲದನ್ನೂ ನುಂಗಿ, ಇವರು ತೀವ್ರವಾಗಿ ಪಾತಾಳಕ್ಕೆ ಇಳಿಯುವಂತೆ ಮಾಡಿ, ಈ ಮನುಷ್ಯರು ಯೆಹೋವ ದೇವರನ್ನು ರೇಗಿಸಿದ್ದಾರೆಂದು ನೀವು ತಿಳಿದುಕೊಳ್ಳುವಿರಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 16:30
12 ತಿಳಿವುಗಳ ಹೋಲಿಕೆ  

ಆ ದುಷ್ಟರಿಗೆ ಮರಣವು ತಟ್ಟನೆ ಬರಲಿ; ಸಜೀವರಾಗಿಯೇ ಪಾತಾಳಕ್ಕೆ ಇಳಿದು ಹೋಗಲಿ. ಅವರ ಮನೆಯಲ್ಲಿಯೂ ಮನಸ್ಸಿನಲ್ಲಿಯೂ ಕೆಟ್ಟತನವೇ.


ಅವರು ಸಜೀವಿಗಳಾಗಿ ತಮ್ಮ ಸರ್ವಸ್ವವು ಸಹಿತ ಪಾತಾಳಕ್ಕೆ ಹೋಗಿಬಿಟ್ಟರು; ಭೂವಿುಯು ಅವರನ್ನು ಮುಚ್ಚಿಕೊಂಡಿತು.


ಆತನು ಅನ್ಯಾಯಗಾರರಿಗೆ ವಿಪತ್ತನ್ನೂ ಕೆಡುಕರಿಗೆ ಉಪದ್ರವವನ್ನೂ ಕೊಡುವನಲ್ಲವೆ.


ದ್ರೋಹಿಯಾದ ಮಗಳೇ, ಎಂದಿನವರೆಗೆ ಅತ್ತಿತ್ತ ಅಲೆದಾಡುವಿ? ಯೆಹೋವನು ಲೋಕದಲ್ಲಿ ಅಪೂರ್ವವಾದದ್ದನ್ನು ಉಂಟುಮಾಡಿದ್ದಾನೆ ನೋಡು, ಹೆಂಗಸು ಗಂಡಸನ್ನು ಕಾಪಾಡುವಳು.


ಭೂಲೋಕವನ್ನುಂಟುಮಾಡಿ ಅದರಲ್ಲಿನ ಮನುಷ್ಯರನ್ನು ಸೃಷ್ಟಿಸಿದವನು ನಾನೇ; ನನ್ನ ಕೈಗಳೇ ಆಕಾಶ ಮಂಡಲವನ್ನು ಹರಡಿದವು; ನಕ್ಷತ್ರಸೈನ್ಯಕ್ಕೆ ಅಪ್ಪಣೆಕೊಟ್ಟವನೂ ನಾನೇ.


ಇನ್ನು ಯಾವನೂ ಅಲ್ಲ, ನಾನು ಬೆಳಕಿಗೂ ಕತ್ತಲಿಗೂ ಸೃಷ್ಟಿಕರ್ತನು, ಮೇಲನ್ನೂ ಕೇಡನ್ನೂ ಬರಮಾಡುವವನು, ಈ ಸಮಸ್ತ ಕಾರ್ಯಗಳನ್ನು ನಡೆಯಿಸುವ ಯೆಹೋವನು ನಾನೇ ಎಂದು ತಿಳಿದುಕೊಳ್ಳುವರು.


ಇಗೋ, ಹೊಸ ಕಾರ್ಯವನ್ನು ಮಾಡುವೆನು, ಈಗ ತಲೆದೋರುತ್ತಲಿದೆ, ನಿಮಗೆ ಕಾಣುವದಿಲ್ಲವೋ? ನಾನು ಅರಣ್ಯದಲ್ಲಿ ಮಾರ್ಗವನ್ನು ಏರ್ಪಡಿಸಿ ಅಡವಿಯಲ್ಲಿ ನದಿಗಳನ್ನು ಹರಿಸುವೆನು.


ಯೆಹೋವನು ಈಗ ಅಪರೂಪವಾದ ತನ್ನ ಕೆಲಸವನ್ನು ನಡಿಸಬೇಕೆಂತಲೂ ಅಪೂರ್ವವಾದ ತನ್ನ ಕಾರ್ಯವನ್ನು ನೆರವೇರಿಸಬೇಕೆಂತಲೂ ಪೆರಾಚೀಮ್ ಬೆಟ್ಟದಲ್ಲಿ ಎದ್ದಂತೆ ಏಳುವನು, ಗಿಬ್ಯೋನ್ ತಗ್ಗಿನಲ್ಲಿ ರೋಷಗೊಂಡಂತೆ ರೋಷಗೊಳ್ಳುವನು.


ಮೋಶೆ ಈ ಮಾತುಗಳನ್ನು ಹೇಳಿ ಮುಗಿಸಿದ ಕೂಡಲೆ ಆ ಮನುಷ್ಯರ ಕೆಳಗಿದ್ದ ನೆಲವು ಸೀಳಿತು;


ದೇವರು ಮೇಲಣ ಲೋಕದಿಂದ ಯಾವ ಪಾಲನ್ನು ವಿಧಿಸುವನು, ಸರ್ವಶಕ್ತನು ಉನ್ನತಾಕಾಶದಿಂದ ಕೊಡುವ ಬಾಧ್ಯತೆ ಯಾವದು?


ನಿಶ್ಚಯವಾಗಿ ಅವರು ಕೋಪದಿಂದ ಉರಿಗೊಂಡು ನಮ್ಮನ್ನು ಜೀವಸಹಿತ ನುಂಗಿಬಿಡುತ್ತಿದ್ದರು;


ನೀರಾವರಿಯ ಯಾವ ಮರಗಳೂ ತಮ್ಮ ನೀಳವನ್ನು ಹೆಚ್ಚಿಸಿಕೊಂಡು ತಮ್ಮ ತುದಿಯನ್ನು ಮೋಡಗಳಿಗೆ ತಗಲಿಸದಿರಲೆಂದೂ ನೀರನ್ನು ಹೀರುತ್ತಲೇ ಇರುವ ದೊಡ್ಡ ದೊಡ್ಡ ಮರಗಳು ಎತ್ತರವಾಗಿ ನಿಗುರಿಕೊಳ್ಳದಿರಲೆಂದೂ ಹೀಗಾಯಿತು; ಅವೆಲ್ಲಾ ಮರಣದ ಪಾಲಾಗುವವು, ಅಧೋಲೋಕವೇ ಅವುಗಳ ಗತಿ; ಪಾತಾಳಕ್ಕೆ ಇಳಿದುಹೋದವರ ಬಳಿಗೆ ನರಜನ್ಮದವರೊಂದಿಗೆ ಒಂದೇ ಗುಂಪಾಗಿ ಸೇರುವವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು