Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 16:34 - ಕನ್ನಡ ಸತ್ಯವೇದವು J.V. (BSI)

34 ಹೀಗೆ ಅವರು ಸಮೂಹದವರೊಳಗಿಂದ ನಾಶವಾದರು. ಅವರ ಸುತ್ತಲಿದ್ದ ಇಸ್ರಾಯೇಲ್ಯರೆಲ್ಲರೂ ಸಾಯುವವರ ಹಾಹಾಕಾರವನ್ನು ಕೇಳಿ - ಭೂವಿುಯು ನಮ್ಮನ್ನೂ ನುಂಗೀತೆಂದು ಓಡಿಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

34 ಅವರ ಸುತ್ತಲಿದ್ದ ಇಸ್ರಾಯೇಲರೆಲ್ಲರೂ ಹೆದರಿಕೊಂಡು, “ಭೂಮಿಯು ನಮ್ಮನ್ನೂ ಸಹ ನುಂಗಿಬಿಟ್ಟೀತು!” ಎಂದು ಹೇಳಿ ಓಡಿಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

34 ಹೀಗೆ ಅವರು ಸಮುದಾಯದಿಂದ ನಾಶವಾದರು. ಅವರ ಸುತ್ತಲಿದ್ದ ಇಸ್ರಯೇಲರೆಲ್ಲರೂ ಸಾಯುವವರ ಹಾಹಾಕಾರವನ್ನು ಕೇಳಿ, “ಭೂಮಿ ನಮ್ಮನ್ನು ನುಂಗದಿರಲಿ” ಎಂದುಕೊಂಡು ಓಡಿಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

34 ನಾಶವಾಗುತ್ತಿರುವ ಜನರ ಗೋಳಾಟವನ್ನು ಕೇಳಿದ ಇಸ್ರೇಲ್ ಜನರು, “ಭೂಮಿಯು ನಮ್ಮನ್ನೂ ನುಂಗಿಬಿಡುತ್ತದೆ!” ಎಂದುಕೊಂಡು ನಾನಾ ದಿಕ್ಕುಗಳಿಗೆ ಓಡಿಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

34 ಆಗ ಅವರ ಸುತ್ತಲಿದ್ದ ಇಸ್ರಾಯೇಲರೆಲ್ಲರೂ ಓಡಿಹೋದರು, ಏಕೆಂದರೆ ಅವರು, “ಭೂಮಿಯು ನಮ್ಮನ್ನು ಸಹ ನುಂಗಿಬಿಟ್ಟೀತು,” ಎಂದು ಹೆದರಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 16:34
6 ತಿಳಿವುಗಳ ಹೋಲಿಕೆ  

ನೀವು ನನ್ನ ಗುಡ್ಡಗಳ ನಡುವಣ ಆ ಡೊಂಗರದೊಳಕ್ಕೆ ಓಡಿಹೋಗುವಿರಿ; ಏಕಂದರೆ ಆ ಡೊಂಗರವು ಆಚೆಲಿಗೆ ಮುಟ್ಟಿರುವದು; ಯೆಹೂದದ ಅರಸನಾದ ಉಜ್ಜೀಯನ ಕಾಲದಲ್ಲಿ ಭೂಕಂಪದ ಕಡೆಯಿಂದ ನೀವು ಓಡಿಹೋದಂತೆಯೇ ಓಡಿಹೋಗುವಿರಿ; ಆಗ ನನ್ನ ದೇವರಾದ ಯೆಹೋವನು ಸಮಸ್ತ ದೇವದೂತಸಮೇತ ಬರುವನು.


ಭೋರ್ಗರೆಯುವ ಶಬ್ದಕ್ಕೆ ಜನಾಂಗಗಳು ಓಡುವವು; ನೀನು ಏಳುವಾಗ ರಾಜ್ಯಗಳು ದಿಕ್ಕಾಪಾಲಾಗುವವು.


ಅವರು ಸಜೀವಿಗಳಾಗಿ ತಮ್ಮ ಸರ್ವಸ್ವವು ಸಹಿತ ಪಾತಾಳಕ್ಕೆ ಹೋಗಿಬಿಟ್ಟರು; ಭೂವಿುಯು ಅವರನ್ನು ಮುಚ್ಚಿಕೊಂಡಿತು.


ಮತ್ತು ಯೆಹೋವನ ಬಳಿಯಿಂದ ಬೆಂಕಿ ಹೊರಟು ಧೂಪವನ್ನು ಅರ್ಪಿಸುತ್ತಿದ್ದ ಆ ಇನ್ನೂರೈವತ್ತು ಮಂದಿಯನ್ನು ಭಸ್ಮ ಮಾಡಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು