Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 16:35 - ಕನ್ನಡ ಸತ್ಯವೇದವು J.V. (BSI)

35 ಮತ್ತು ಯೆಹೋವನ ಬಳಿಯಿಂದ ಬೆಂಕಿ ಹೊರಟು ಧೂಪವನ್ನು ಅರ್ಪಿಸುತ್ತಿದ್ದ ಆ ಇನ್ನೂರೈವತ್ತು ಮಂದಿಯನ್ನು ಭಸ್ಮ ಮಾಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

35 ನಂತರ ಯೆಹೋವನ ಬಳಿಯಿಂದ ಬೆಂಕಿಹೊರಟು, ಧೂಪವನ್ನು ಅರ್ಪಿಸುತ್ತಿದ್ದ ಆ ಇನ್ನೂರೈವತ್ತು ಮಂದಿಯನ್ನು ದಹಿಸಬಿಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

35 ಸರ್ವೇಶ್ವರನ ಬಳಿಯಿಂದ ಬೆಂಕಿ ಹೊರಟು ಧೂಪಾರತಿಯನ್ನು ಅರ್ಪಿಸುತ್ತಿದ್ದ ಆ 250 ಮಂದಿಯನ್ನು ಭಸ್ಮಮಾಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

35 ಅಲ್ಲದೆ ಯೆಹೋವನಿಂದ ಬೆಂಕಿಯು ಹೊರಟುಬಂದು ಧೂಪವನ್ನು ಅರ್ಪಿಸುತ್ತಿದ್ದ ಇನ್ನೂರೈವತ್ತು ಮಂದಿಯನ್ನು ದಹಿಸಿಬಿಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

35 ಯೆಹೋವ ದೇವರ ಬಳಿಯಿಂದ ಬೆಂಕಿಯು ಹೊರಟು, ಧೂಪವನ್ನು ಅರ್ಪಿಸಿದ ಇನ್ನೂರ ಐವತ್ತು ಮಂದಿಯನ್ನು ದಹಿಸಿಬಿಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 16:35
14 ತಿಳಿವುಗಳ ಹೋಲಿಕೆ  

ಭೂವಿುಯು ಬಾಯ್ದೆರೆದು ಅವರನ್ನೂ ಕೋರಹನನ್ನೂ ನುಂಗಿಬಿಟ್ಟಿತಷ್ಟೆ; ಮತ್ತು ಬೆಂಕಿಯು ಆ ಗುಂಪಿನವರಲ್ಲಿ ಬೇರೆ ಇನ್ನೂರೈವತ್ತು ಮಂದಿಯನ್ನು ದಹಿಸಿ ಇಸ್ರಾಯೇಲ್ಯರಿಗೆ ಎಚ್ಚರವುಂಟಾಗುವಂತೆ ಮಾಡಿತಲ್ಲಾ.


ಆತನ ಸನ್ನಿಧಿಯಲ್ಲಿ ಸಮರ್ಪಿಸಲಾಗಿ ಯೆಹೋವನ ಸನ್ನಿಧಿಯಿಂದ ಬೆಂಕಿ ಹೊರಟು ಅವರನ್ನು ನಾಶಮಾಡಿತು; ಅವರು ಯೆಹೋವನ ಸನ್ನಿಧಿಯಲ್ಲಿಯೇ ಸತ್ತರು.


ಮತ್ತು ಅವರ ಮಧ್ಯದಲ್ಲಿ ಬೆಂಕಿಯುಂಟಾಯಿತು; ಅಗ್ನಿಜ್ವಾಲೆಯು ದುಷ್ಟರನ್ನು ದಹಿಸಿಬಿಟ್ಟಿತು.


ಅವರಲ್ಲಿ ಒಬ್ಬೊಬ್ಬನು ತನ್ನ ತನ್ನ ಧೂಪಾರತಿಯನ್ನು, ಅಂದರೆ ಒಟ್ಟಾಗಿ ಇನ್ನೂರೈವತ್ತು ಧೂಪಾರತಿಗಳನ್ನು ತೆಗೆದುಕೊಂಡು ಧೂಪಹಾಕಿ ಯೆಹೋವನ ಸನ್ನಿಧಿಗೆ ಬರಬೇಕು; ಹಾಗೆಯೇ ನೀನೂ ಆರೋನನೂ ನಿಮ್ಮ ನಿಮ್ಮ ಧೂಪಾರತಿಗಳನ್ನು ತೆಗೆದುಕೊಂಡು ಬರಬೇಕು ಎಂದು ಹೇಳಿದನು.


ಮತ್ತು ಸಮೂಹದವರಲ್ಲಿ ಮುಖ್ಯಸ್ಥರಾಗಿಯೂ ಆಲೋಚನಾಕರ್ತರಾಗಿಯೂ ಹೆಸರುಗೊಂಡವರಾಗಿಯೂ ಇದ್ದ ಇನ್ನೂರೈವತ್ತುಮಂದಿ ಇಸ್ರಾಯೇಲ್ಯರೂ ಮೋಶೆಗೆ ವಿರೋಧವಾಗಿ ತಿರುಗಿಬಿದ್ದರು.


ಇವರಿಗೆ ಯಾವನಾದರೂ ಕೇಡನ್ನುಂಟುಮಾಡಬೇಕೆಂದಿದ್ದರೆ ಇವರ ಬಾಯೊಳಗಿಂದ ಬೆಂಕಿ ಹೊರಟು ಇವರ ಶತ್ರುಗಳನ್ನು ದಹಿಸಿಬಿಡುವದು;


ಹೀಗೆ ಅವರು ಸಮೂಹದವರೊಳಗಿಂದ ನಾಶವಾದರು. ಅವರ ಸುತ್ತಲಿದ್ದ ಇಸ್ರಾಯೇಲ್ಯರೆಲ್ಲರೂ ಸಾಯುವವರ ಹಾಹಾಕಾರವನ್ನು ಕೇಳಿ - ಭೂವಿುಯು ನಮ್ಮನ್ನೂ ನುಂಗೀತೆಂದು ಓಡಿಹೋದರು.


ಆಗ ಯೆಹೋವನು ಮೋಶೆಗೆ - ಮಹಾಯಾಜಕ ಆರೋನನ ಮಗನಾದ ಎಲ್ಲಾಜಾರನು ಸುಟ್ಟುಹೋದವರ ನಡುವೆಯಿಂದ ಆ ಧೂಪಾರತಿಗಳನ್ನು ಎತ್ತಬೇಕೆಂದು ಆಜ್ಞಾಪಿಸು; ಮತ್ತು ನೀನು ಅವುಗಳಲ್ಲಿರುವ ಕೆಂಡಗಳನ್ನು ದೂರಕ್ಕೆ ಚೆಲ್ಲು; ಆ ಧೂಪಾರತಿಗಳು ದೇವರ ವಸ್ತುವಾದವಲ್ಲಾ.


ಕೋರಹನನ್ನು ಕೂಡಿಕೊಂಡು ಸತ್ತವರಲ್ಲದೆ ಆ ವಿಪತ್ತಿನಿಂದ ಸತ್ತವರು ಹದಿನಾಲ್ಕು ಸಾವಿರದ ಏಳುನೂರು ಮಂದಿ.


ನಮ್ಮ ದೇವರು ಪ್ರತ್ಯಕ್ಷನಾಗುವನು, ಎಷ್ಟು ಮಾತ್ರವೂ ಸುಮ್ಮನಿರುವದಿಲ್ಲ; ಆತನ ಮುಂಭಾಗದಲ್ಲಿ ಬೆಂಕಿ ಪ್ರಜ್ವಲಿಸುತ್ತದೆ; ಆತನ ಸುತ್ತಲು ಬಿರುಗಾಳಿ ಬೀಸುತ್ತದೆ.


ಇಸ್ರಾಯೇಲ್‍ವಂಶದ ಎಪ್ಪತ್ತು ಮಂದಿ ಹಿರಿಯರೂ ಅವರ ಮಧ್ಯದಲ್ಲಿ ಶಾಫಾನನ ಮಗನಾದ ಯಾಜನ್ಯನೂ ತಮ್ಮ ತಮ್ಮ ಕೈಗಳಲ್ಲಿ ಧೂಪಾರತಿಗಳನ್ನು ಹಿಡಿದುಕೊಂಡು ಆ ಚಿತ್ರಗಳ ಮುಂದೆ ನಿಂತಿದ್ದರು; ಧೂಪದ ಸುವಾಸನೆಯ ಧೂಮವು ಮೇಘವಾಗಿ ಏರುತ್ತಿತ್ತು.


ನಾದಾಬ್ ಅಬೀಹೂ ಎಂಬಿಬ್ಬರು ಸೀನಾಯಿ ಅರಣ್ಯದಲ್ಲಿ ಯೆಹೋವನು ಆಜ್ಞಾಪಿಸದೆ ಇದ್ದ ಬೇರೆ ಬೆಂಕಿಯಿಂದ ಧೂಪವನ್ನು ಸಮರ್ಪಿಸಿದದರಿಂದ ಆತನ ಸನ್ನಿಧಿಯಲ್ಲೇ ಸತ್ತು ಹೋದರು; ಅವರಿಗೆ ಮಕ್ಕಳಿರಲಿಲ್ಲ. ಎಲ್ಲಾಜಾರ್ ಈತಾಮಾರ್ ಎಂಬಿಬ್ಬರು ತಂದೆಯ ಕೈಕೆಳಗೆ ಯಾಜಕಧರ್ಮವನ್ನು ನಡಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು