Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 16:38 - ಕನ್ನಡ ಸತ್ಯವೇದವು J.V. (BSI)

38 ಪ್ರಾಣವನ್ನು ಹೋಗಲಾಡಿಸಿಕೊಂಡ ಆ ದೋಷಿಗಳ ಧೂಪಾರತಿಗಳು ಯೆಹೋವನ ಸನ್ನಿಧಿಗೆ ತರಲ್ಪಟ್ಟ ಕಾರಣ ಪರಿಶುದ್ಧವಾದವು; ಆದದರಿಂದ ಅವುಗಳನ್ನು ತಗಡುಗಳಾಗಿ ಹೊಡೆದು ಯಜ್ಞವೇದಿಗೆ ಮುಚ್ಚಳವನ್ನು ಮಾಡಿಸಬೇಕು; ಹಾಗೆ ಅವು ಇಸ್ರಾಯೇಲ್ಯರಿಗೆ ನೆನಪುಹುಟ್ಟಿಸುವವು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

38 ತಮ್ಮ ಪಾಪಗಳಿಂದ ಪ್ರಾಣವನ್ನು ಕಳೆದುಕೊಂಡ ಆ ದೋಷಿಗಳ ಧೂಪಾರತಿಗಳು ಯೆಹೋವನ ಸನ್ನಿಧಿಗೆ ತಂದ ಕಾರಣ ಅವು ಪರಿಶುದ್ಧವಾದವು. ಆದುದರಿಂದ ಅವುಗಳನ್ನು ತಗಡುಗಳನ್ನಾಗಿ ಮಾಡಿ, ಯಜ್ಞವೇದಿಗೆ ಮುಚ್ಚಳವನ್ನು ಮಾಡಿಸಬೇಕು. ಇಸ್ರಾಯೇಲರಿಗೆ ಅವು ಗುರುತುಗಳಾಗಿರಬೇಕು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

38 ಆ ಧೂಪಾರತಿಗಳು ಸರ್ವೇಶ್ವರನ ಸನ್ನಿಧಿಗೆ ತರಲಾದವುಗಳು. ಈ ಕಾರಣ ಪವಿತ್ರವಾದುವು. ಆದುದರಿಂದ ಅವುಗಳನ್ನು ತಗಡುಗಳಾಗಿ ತಟ್ಟಿ ಬಲಿಪೀಠಕ್ಕೆ ಮುಚ್ಚಳವನ್ನಾಗಿ ಮಾಡಿಸು. ಹೀಗೆ ಅವು ಇಸ್ರಯೇಲರಿಗೆ ನೆನಪು ಹುಟ್ಟಿಸುವ ಗುರುತುಗಳಾಗುವುವು,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

38 ಪ್ರಾಣವನ್ನು ಕಳೆದುಕೊಂಡ ಆ ದೋಷಿಗಳ ಧೂಪಾರತಿಗಳು ಯೆಹೋವನ ಸನ್ನಿಧಿಗೆ ತರಲ್ಪಟ್ಟ ಕಾರಣ ಪರಿಶುದ್ಧವಾಗಿವೆ. ಆದ್ದರಿಂದ ಅವುಗಳನ್ನು ತೆಗೆದು ತಗಡುಗಳಾಗಿ ಹೊಡೆದು ಯಜ್ಞವೇದಿಕೆಗೆ ಮುಚ್ಚಳವನ್ನು ಮಾಡಿಸಬೇಕು. ಇದು ಇಸ್ರೇಲರೆಲ್ಲರಿಗೆ ಎಚ್ಚರಿಕೆಯಾಗಿರುವುದು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

38 ತಮ್ಮ ಪ್ರಾಣಕ್ಕೆ ವಿರೋಧವಾಗಿ ಪಾಪಮಾಡಿದ ಮನುಷ್ಯರ ಧೂಪದ ಪಾತ್ರೆಗಳನ್ನು ಬಲಿಪೀಠವನ್ನು ಮುಚ್ಚತಕ್ಕ ಅಗಲವಾದ ತಗಡುಗಳನ್ನಾಗಿ ಮಾಡಬೇಕು. ಏಕೆಂದರೆ ಅವುಗಳನ್ನು ಯೆಹೋವ ದೇವರ ಸಮ್ಮುಖದಲ್ಲಿ ಅರ್ಪಿಸಿದ ಕಾರಣ ಅವು ಪರಿಶುದ್ಧವಾದವುಗಳು. ಇಸ್ರಾಯೇಲರಿಗೆ ಅವು ಗುರುತುಗಳಾಗಿರಬೇಕು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 16:38
14 ತಿಳಿವುಗಳ ಹೋಲಿಕೆ  

ಆತನು ಸೊದೋಮ್‍ಗೊಮೋರ ಪಟ್ಟಣಗಳನ್ನು ಸುಟ್ಟು ಬೂದಿಮಾಡಿ ಮುಂದೆ ಭಕ್ತಿಹೀನರಾಗಿ ಬದುಕುವವರ ಗತಿ ಇಂಥದೆಂದು ಸೂಚಿಸುವದಕ್ಕಾಗಿ ಅವುಗಳಿಗೆ ನಾಶನವನ್ನು ವಿಧಿಸಿದನು.


ಅವನ ಮೇಲೆ ಉಗ್ರಕೋಪಗೊಂಡು ಅವನ ಗತಿಯನ್ನು ಬೆರಗಿಗೂ ಎಚ್ಚರಿಕೆಯ ಮಾತುಗಳಿಗೂ ಕಟ್ಟುಗಾದೆಗಳಿಗೂ ಈಡುಮಾಡಿ ಅವನನ್ನು ನನ್ನ ಜನರೊಳಗಿಂದ ಕಿತ್ತುಹಾಕುವೆನು; ಹೀಗೆ ನಾನೇ ಯೆಹೋವನು ಎಂದು ನಿಮಗೆ ಗೊತ್ತಾಗುವದು.


ರಾಜನು ಗರ್ಜಿಸುವ ಸಿಂಹದಂತೆ ಭಯಂಕರನು, ಅವನನ್ನು ಕೆಣಕುವವನು ತನಗೇ ಕೆಡುಕುಮಾಡಿಕೊಳ್ಳುವನು.


ಭೂವಿುಯು ಬಾಯ್ದೆರೆದು ಅವರನ್ನೂ ಕೋರಹನನ್ನೂ ನುಂಗಿಬಿಟ್ಟಿತಷ್ಟೆ; ಮತ್ತು ಬೆಂಕಿಯು ಆ ಗುಂಪಿನವರಲ್ಲಿ ಬೇರೆ ಇನ್ನೂರೈವತ್ತು ಮಂದಿಯನ್ನು ದಹಿಸಿ ಇಸ್ರಾಯೇಲ್ಯರಿಗೆ ಎಚ್ಚರವುಂಟಾಗುವಂತೆ ಮಾಡಿತಲ್ಲಾ.


ನೀನು ಬಹುಜನಾಂಗಗಳನ್ನು ನಿರ್ಮೂಲಮಾಡಿದ್ದು ನಿನ್ನ ಕುಲಕ್ಕೆ ಅವಮಾನವನ್ನೇ ಆಲೋಚಿಸಿಕೊಂಡ ಹಾಗಾಯಿತು, ನಿನಗೇ ಕೆಡುಕುಮಾಡಿಕೊಂಡಿದ್ದೀ.


ಇದಲ್ಲದೆ ಅರಸನಾದ ಸೊಲೊಮೋನನು - ಯೆಹೋವನಾಣೆ, ಅದೋನೀಯನ ಈ ಮಾತಿಗೋಸ್ಕರ ನಾನು ಅವನನ್ನು ಮರಣಕ್ಕೆ ಪಾತ್ರನೆಂದು ಎಣಿಸದಿದ್ದರೆ ದೇವರು ನನಗೆ ಬೇಕಾದದ್ದನ್ನು ಮಾಡಲಿ.


ತರುವಾಯ ಯೆಹೋವನು ಮೋಶೆಗೆ - ಆರೋನನ ಕೋಲನ್ನು ತಿರಿಗಿ ಆಜ್ಞಾಶಾಸನಗಳ ಮುಂದೆ ಇಡಬೇಕು. ಅದು ತಿರುಗಿಬೀಳುವವರಿಗೆ ದೃಷ್ಟಾಂತವಾಗಿ ಅಲ್ಲೇ ಇರಬೇಕು; ಇವರು ಇನ್ನು ಮುಂದೆ ನನಗೆ ವಿರೋಧವಾಗಿ ಗುಣುಗುಟ್ಟಿ ನಾಶವಾಗದಂತೆ ನೀನು ಹೀಗೆ ಮಾಡಬೇಕು ಎಂದು ಆಜ್ಞಾಪಿಸಿದನು.


ಅವರಿಗೆ ಸಂಭವಿಸಿದ ಈ ಸಂಗತಿಗಳು ನಿದರ್ಶನರೂಪವಾಗಿವೆ; ಮತ್ತು ಯುಗಾಂತ್ಯಕ್ಕೆ ಬಂದಿರುವವರಾದ ನಮಗೆ ಬುದ್ಧಿವಾದಗಳಾಗಿ ಬರೆದವೆ.


ಯಾವನು ನನಗೆ ತಪ್ಪುಮಾಡುತ್ತಾನೋ ಅವನು ತನ್ನ ಆತ್ಮಕ್ಕೆ ಕೇಡುಮಾಡಿಕೊಳ್ಳುತ್ತಾನೆ; ನನ್ನನ್ನು ಹಗೆಮಾಡುವವರೆಲ್ಲರೂ ಮರಣವನ್ನು ಪ್ರೀತಿಸುತ್ತಾರೆ.


ಇವರಾದರೋ ಸ್ವರಕ್ತವನ್ನು ಸುರಿಸಿಕೊಳ್ಳುವದಕ್ಕೆ ಹೊಂಚುಹಾಕುತ್ತಾರೆ, ಸ್ವಜೀವವನ್ನು ತೆಗೆದುಕೊಳ್ಳುವದಕ್ಕೆ ಕಾದಿರುತ್ತಾರೆ.


ಆರೋನನ ಸಂತತಿಯವರಲ್ಲದ ಇತರರಲ್ಲಿ ಯಾರೂ ಯೆಹೋವನ ಸನ್ನಿಧಿಗೆ ಬಂದು ಧೂಪವನ್ನು ಸಮರ್ಪಿಸಬಾರದು; ಸಮರ್ಪಿಸಿದರೆ ಕೋರಹನಿಗೂ ಅವನ ಜೊತೆಗಾರರಿಗೂ ಉಂಟಾದ ಗತಿಗೆ ಗುರಿಯಾದಾರೆಂದು ಇಸ್ರಾಯೇಲ್ಯರಿಗೆ ನೆನಪು ಹುಟ್ಟಿಸುವದಕ್ಕಾಗಿ ಅದು ಗುರುತಾಯಿತು.


ಯೆಹೋವನು ಮೋಶೆಯ ಮೂಲಕ ಹೇಳಿದ ಅಪ್ಪಣೆಯ ಮೇರೆಗೆ ಯಾಜಕನಾದ ಎಲ್ಲಾಜಾರನು ಸುಟ್ಟುಹೋದವರಿಂದ ಮೊದಲು ತರಲ್ಪಟ್ಟಿದ್ದ ಆ ತಾಮ್ರದ ಧೂಪಾರತಿಗಳನ್ನು ತೆಗೆದುಕೊಂಡು ತಗಡುಗಳಾಗಿ ಹೊಡಿಸಿ ಯಜ್ಞವೇದಿಗೆ ಮುಚ್ಚಳವನ್ನು ಮಾಡಿಸಿದನು.


ಹೀಗಿರಲು ಸೇನಾಧೀಶ್ವರಸ್ವಾವಿುಯೂ ಇಸ್ರಾಯೇಲಿನ ದೇವರೂ ಆದ ಯೆಹೋವನು ಈಗ ಇಂತೆನ್ನುತ್ತಾನೆ - ಈ ದೊಡ್ಡ ಕೇಡನ್ನು ನಿಮಗೆ ನೀವೇ ಉಂಟುಮಾಡಿಕೊಳ್ಳುವದೇಕೆ? ಈ ದುರಾಚಾರದ ನಿವಿುತ್ತ ಯೆಹೂದದಲ್ಲಿರುವ ಗಂಡಸರು, ಹೆಂಗಸರು, ಮಕ್ಕಳು, ಮೊಲೆಕೂಸುಗಳು ನಿರ್ಮೂಲವಾಗುವರು, ನಿಮ್ಮಲ್ಲಿ ಯಾರೂ ಉಳಿಯರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು