Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 16:40 - ಕನ್ನಡ ಸತ್ಯವೇದವು J.V. (BSI)

40 ಆರೋನನ ಸಂತತಿಯವರಲ್ಲದ ಇತರರಲ್ಲಿ ಯಾರೂ ಯೆಹೋವನ ಸನ್ನಿಧಿಗೆ ಬಂದು ಧೂಪವನ್ನು ಸಮರ್ಪಿಸಬಾರದು; ಸಮರ್ಪಿಸಿದರೆ ಕೋರಹನಿಗೂ ಅವನ ಜೊತೆಗಾರರಿಗೂ ಉಂಟಾದ ಗತಿಗೆ ಗುರಿಯಾದಾರೆಂದು ಇಸ್ರಾಯೇಲ್ಯರಿಗೆ ನೆನಪು ಹುಟ್ಟಿಸುವದಕ್ಕಾಗಿ ಅದು ಗುರುತಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

40 ಆರೋನನ ಸಂತಾನಕ್ಕೆ ಸೇರದ ಬೇರೆ ಜನರು ಯೆಹೋವನ ಸನ್ನಿಧಿಗೆ ಬಂದು ಧೂಪವನ್ನು ಸಮರ್ಪಿಸಬಾರದು. ಸಮರ್ಪಿಸಿದರೆ ಕೋರಹನಿಗೂ ಮತ್ತು ಅವನ ಸಮೂಹದವರಿಗೂ ಆದ ಸ್ಥಿತಿಯೇ ಇವರಿಗೂ ಉಂಟಾಗುವುದೆಂಬುದನ್ನು ಇಸ್ರಾಯೇಲರಿಗೆ ಜ್ಞಾಪಿಸುವುದಕ್ಕೆ ಗುರುತಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

40 ಆರೋನನ ಸಂತತಿಯವರಲ್ಲದೆ ಇತರರು ಸರ್ವೇಶ್ವರನ ಸನ್ನಿಧಿಗೆ ಬಂದು ಧೂಪವನ್ನು ಅರ್ಪಿಸಬಾರದು; ಅರ್ಪಿಸಿದರೆ ಕೋರಹನಿಗೂ ಅವನ ಪಂಗಡದವರಿಗೂ ಆದ ಗತಿಗೆ ಗುರಿಯಾಗುವರು ಎಂದು ಇಸ್ರಯೇಲರಿಗೆ ಎಚ್ಚರಿಕೆ ನೀಡುವ ಚಿನ್ಹೆಯಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

40 ಆರೋನನ ಕುಟುಂಬದವನು ಮಾತ್ರ ಯೆಹೋವನ ಎದುರಿನಲ್ಲಿ ಧೂಪವನ್ನು ಹಾಕತಕ್ಕದ್ದು ಮತ್ತು ಬೇರೆ ಯಾರಾದರೂ ಹಾಕಿದರೆ ಅವರು ಕೋರಹ ಮತ್ತು ಅವನ ಹಿಂಬಾಲಕರಂತೆ ಸಾಯುವರು ಎಂಬುದನ್ನು ಇಸ್ರೇಲರಿಗೆ ಆ ಮುಚ್ಚಳವು ನೆನಪು ಮಾಡುವ ಗುರುತಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

40 ಆರೋನನ ಸಂತಾನವಲ್ಲದ ಪರಕೀಯನು ಯೆಹೋವ ದೇವರ ಸಮ್ಮುಖದಲ್ಲಿ ಧೂಪವನ್ನು ಅರ್ಪಿಸಬಾರದು, ಅರ್ಪಿಸಿದರೆ ಕೋರಹ ಮತ್ತು ಅವನ ಸಮೂಹಕ್ಕೆ ಆದ ಸ್ಥಿತಿಯೇ ಇವರಿಗೂ ಉಂಟಾಗುವುದೆಂಬುದನ್ನು ಇಸ್ರಾಯೇಲರಿಗೆ ಜ್ಞಾಪಿಸುವದಕ್ಕಾಗಿ ಅದು ಗುರುತಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 16:40
16 ತಿಳಿವುಗಳ ಹೋಲಿಕೆ  

ಯಾಜಕೋದ್ಯೋಗವನ್ನು ನಡಿಸುವದಕ್ಕೆ ಆರೋನನನ್ನೂ ಅವನ ಮಕ್ಕಳನ್ನೂ ನೇವಿುಸಬೇಕು. ಇತರನು ಆ ಕೆಲಸಕ್ಕೆ ಕೈಹಾಕಿದರೆ ಅವನಿಗೆ ಮರಣಶಿಕ್ಷೆಯಾಗಬೇಕು.


ಅವರ ಗತಿಯನ್ನು ಏನು ಹೇಳಲಿ; ಇವರು ಕಾಯಿನನ ಮಾರ್ಗವನ್ನು ಹಿಡಿದವರೂ ದ್ರವ್ಯಸಂಪಾದನೆಗೋಸ್ಕರ ಬಿಳಾಮನ ಭ್ರಾಂತಿಯಲ್ಲಿ ಪೂರ್ಣವಾಗಿ ಮುಣುಗಿದವರೂ ಕೋರಹನಂತೆ ಎದುರುಮಾತುಗಳನ್ನಾಡಿ ನಾಶವಾಗಿಹೋಗತಕ್ಕವರೂ ಆಗಿದ್ದಾರೆ.


ದೇವದರ್ಶನದ ಗುಡಾರದ ಪೂರ್ವದಿಕ್ಕಿನಲ್ಲಿ ಅಂದರೆ ಸೂರ್ಯೋದಯವಾಗುವ ಕಡೆಯಲ್ಲಿ ಮೋಶೆಯೂ ಆರೋನನೂ ಆರೋನನ ಮಕ್ಕಳೂ ತಮ್ಮ ಡೇರೆಗಳನ್ನು ಹಾಕಿಕೊಳ್ಳಬೇಕು. ಅವರು ಇಸ್ರಾಯೇಲ್ಯರಿಗೋಸ್ಕರವಾಗಿ ದೇವಸ್ಥಾನವನ್ನು ನೋಡಿಕೊಳ್ಳಬೇಕು. ಇತರರು ಆ ಕೆಲಸಕ್ಕೆ ಕೈಹಾಕಿದರೆ ಅವರಿಗೆ ಮರಣಶಿಕ್ಷೆಯಾಗಬೇಕು.


ಹೊರಡುವಾಗ ಆ ಗುಡಾರವನ್ನು ಲೇವಿಯರೇ ಬಿಚ್ಚಬೇಕು; ಇಳಿಯುವಾಗ ಲೇವಿಯರೇ ಅದನ್ನು ಹಾಕಬೇಕು. ಇತರರು ಹತ್ತಿರಕ್ಕೆ ಬಂದರೆ ಅವರಿಗೆ ಮರಣಶಿಕ್ಷೆಯಾಗಬೇಕು.


ಯಾಜಕನಲ್ಲದ ಇತರನು ನೈವೇದ್ಯ ಪದಾರ್ಥವನ್ನು ಊಟಮಾಡಕೂಡದು. ಯಾಜಕನ ಬಳಿಯಲ್ಲಿ ಇಳುಕೊಂಡವನಾಗಲಿ ಕೂಲಿಯಾಳಾಗಲಿ ಅದನ್ನು ಊಟಮಾಡಬಾರದು.


ಇದಲ್ಲದೆ ಯಾವನೂ ತನ್ನಷ್ಟಕ್ಕೆ ತಾನೇ ಈ ಗೌರವವನ್ನು ವಹಿಸಿಕೊಳ್ಳದೆ ದೇವರಿಂದ ನೇವಿುಸಲ್ಪಟ್ಟು ವಹಿಸಿಕೊಳ್ಳುತ್ತಾನೆ; ಆರೋನನು ಸಹ ದೇವರಿಂದಲೇ ನೇವಿುಸಲ್ಪಟ್ಟು ಆ ಗೌರವವನ್ನು ವಹಿಸಿಕೊಂಡನಲ್ಲಾ.


ಯೆಹೋವನು ಮೋಶೆಯ ಮೂಲಕ ಹೇಳಿದ ಅಪ್ಪಣೆಯ ಮೇರೆಗೆ ಯಾಜಕನಾದ ಎಲ್ಲಾಜಾರನು ಸುಟ್ಟುಹೋದವರಿಂದ ಮೊದಲು ತರಲ್ಪಟ್ಟಿದ್ದ ಆ ತಾಮ್ರದ ಧೂಪಾರತಿಗಳನ್ನು ತೆಗೆದುಕೊಂಡು ತಗಡುಗಳಾಗಿ ಹೊಡಿಸಿ ಯಜ್ಞವೇದಿಗೆ ಮುಚ್ಚಳವನ್ನು ಮಾಡಿಸಿದನು.


ನೀವು ಅವರಿಗೆ - ಯೆಹೋವನ ಒಡಂಬಡಿಕೆಯ ಮಂಜೂಷವು ಯೊರ್ದನನ್ನು ದಾಟುವಾಗ ಅದರ ಮುಂದೆ ಯೊರ್ದನಿನ ನೀರು ನಿಂತುಹೋಯಿತೆಂದು ಹೇಳಿರಿ. ಯೊರ್ದನಿನ ನೀರು ನಿಂತುಹೋಯಿತೆಂಬದಕ್ಕೆ ಈ ಕಲ್ಲುಗಳು ಇಸ್ರಾಯೇಲ್ಯರಿಗೆ ಸದಾಕಾಲವೂ ಸಾಕ್ಷಿಗಳಾಗಿರುವವು ಅಂದನು.


ಇವರು ತಮ್ಮ ವಂಶಾವಳಿ ಪತ್ರಗಳನ್ನು ಹುಡುಕಿದರೂ ಅವು ಸಿಕ್ಕದ ಕಾರಣ


ಬಡಗಲಿಗೆ ಅಭಿಮುಖವಾಗಿರುವ ಆ ಕೋಣೆಯು ಯಜ್ಞವೇದಿಯ ಕಾರ್ಯದರ್ಶಿಗಳಾದ ಯಾಜಕರಿಗೆ ನೇಮಕವಾಗಿದೆ; ಚಾದೋಕನ ಸಂತತಿಯವರಾದ ಇವರು ಲೇವಿಯ ಕುಲದವರಲ್ಲಿ ಯೆಹೋವನ ಸನ್ನಿಧಿಸೇವಕರಾಗಿದ್ದಾರೆ ಎಂದು ಹೇಳಿದನು.


ಲೇವಿಯರೂ ಚಾದೋಕನ ಸಂತಾನದವರೂ ನನ್ನ ಸನ್ನಿಧಿಸೇವಕರೂ ಆದ ಯಾಜಕರಿಗೆ ನೀನು ಒಂದು ಹೋರಿಯನ್ನು ದೋಷಪರಿಹಾರಕ ಯಜ್ಞಕ್ಕಾಗಿ ಕೊಡು. ಇದು ಕರ್ತನಾದ ಯೆಹೋವನ ನುಡಿ.


ಆರೋನನ ಮನೆತನದವರೇ, ಯೆಹೋವನಲ್ಲಿ ಭರವಸವಿಡಿರಿ. ಅವರ ಸಹಾಯಕನೂ ಗುರಾಣಿಯೂ ಆತನೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು