Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 16:7 - ಕನ್ನಡ ಸತ್ಯವೇದವು J.V. (BSI)

7 ಅವುಗಳಲ್ಲಿ ಕೆಂಡಗಳನ್ನಿಟ್ಟು ನಾಳೆ ಯೆಹೋವನ ಸನ್ನಿಧಿಯಲ್ಲಿ ಧೂಪಹಾಕಿರಿ. ಆಗ ಯೆಹೋವನು ಯಾರನ್ನು ಮೆಚ್ಚುವನೋ ಅವನೇ ದೇವರಿಗೆ ಪ್ರತಿಷ್ಠಿತನೆಂದು ತಿಳುಕೊಳ್ಳುವಿರಿ. ಲೇವಿಯರೇ, ನಿವ್ಮಿುಂದ ಸಾಕಾಯಿತು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಅವುಗಳಲ್ಲಿ ಕೆಂಡಗಳನ್ನಿಟ್ಟು ನಾಳೆ ಯೆಹೋವನ ಸನ್ನಿಧಿಯಲ್ಲಿ ಧೂಪಹಾಕಿರಿ. ಆಗ ಯೆಹೋವನು ಯಾರನ್ನು ಮೆಚ್ಚುವನೋ ಅವನೇ ದೇವರಿಗೆ ಪ್ರತಿಷ್ಠಿತನೆಂದು ತಿಳಿದುಕೊಳ್ಳುವಿರಿ. ಲೇವಿಯರೇ, ನಿಮ್ಮ ವರ್ತನೆ ಅತಿಯಾಯಿತು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಆಗ ಸರ್ವೇಶ್ವರ ಯಾರನ್ನು ಮೆಚ್ಚುತ್ತಾರೋ ಅವನೇ ದೇವರಿಗೆ ಪ್ರತಿಷ್ಠಿತನೆಂದು ತಿಳಿದುಕೊಳ್ಳುವಿರಿ. ಲೇವಿಯರೇ, ಅಧಿಕವಾಗಿರುವುದು ನಿಮ್ಮ ವರ್ತನೆಯೆ!”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ನಾಳೆ ಅಗ್ಗಿಷ್ಠಿಕೆಗಳನ್ನು ತೆಗೆದುಕೊಂಡು ಅವುಗಳ ಮೇಲೆ ಉರಿಯುವ ಕೆಂಡಗಳನ್ನು ಹಾಕಿರಿ ಮತ್ತು ಯೆಹೋವನ ಮುಂದೆ ಅವುಗಳ ಮೇಲೆ ಧೂಪವನ್ನು ಹಾಕಿರಿ. ಆಗ ಯೆಹೋವನು ಯಾರನ್ನು ಆರಿಸಿಕೊಳ್ಳುವನೋ ಅವನೇ ನಿಜವಾಗಿಯೂ ಪವಿತ್ರನಾದವನು. ಲೇವಿಯರಾದ ನೀವು ಅಧಿಕಾರವನ್ನು ಮತ್ತು ಘನತೆಯನ್ನು ಅತಿಯಾಗಿ ಅಪೇಕ್ಷಿಸುತ್ತೀರಿ.” ಎಂದು ಹೇಳಿದನು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ನಾಳೆ ಅವುಗಳಲ್ಲಿ ಬೆಂಕಿಯನ್ನು ಹಾಕಿ, ಅವುಗಳ ಮೇಲೆ ಧೂಪವನ್ನು ಯೆಹೋವ ದೇವರ ಮುಂದೆ ಹಾಕಿರಿ. ಆಗ ಯೆಹೋವ ದೇವರು ಯಾವನನ್ನು ಆಯ್ದುಕೊಳ್ಳುವರೋ ಅವನೇ ಪರಿಶುದ್ಧನಾಗಿರುವನು. ಲೇವಿಯರೇ, ನೀವು ಬಹಳ ಮಿತಿಮೀರಿ ಹೋಗುತ್ತಿರುವಿರಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 16:7
10 ತಿಳಿವುಗಳ ಹೋಲಿಕೆ  

ಅವರು ಒಟ್ಟಾಗಿ ಕೂಡಿಕೊಂಡು ಮೋಶೆ ಆರೋನರ ಬಳಿಗೆ ಬಂದು ಅವರಿಗೆ - ನಿವ್ಮಿುಂದ ಸಾಕಾಯಿತು; ಈ ಸಮೂಹದವರಲ್ಲಿ ಪ್ರತಿಯೊಬ್ಬನೂ ದೇವರಿಗೆ ಪ್ರತಿಷ್ಠಿತನೇ; ಯೆಹೋವನು ಇವರೆಲ್ಲರ ಮಧ್ಯದಲ್ಲಿ ಇದ್ದಾನಲ್ಲವೇ; ಹೀಗಿರಲಾಗಿ ಯೆಹೋವನ ಸಮೂಹದವರಿಗಿಂತಲೂ ನಿಮ್ಮನ್ನು ನೀವೇ ಹೆಚ್ಚಿಸಿಕೊಳ್ಳುವದೇನು ಎಂದು ಹೇಳಿದರು.


ನೀವಾದರೋ ನಿಮ್ಮನ್ನು ಕತ್ತಲೆಯೊಳಗಿಂದ ಕರೆದು ತನ್ನ ಆಶ್ಚರ್ಯಕರವಾದ ಬೆಳಕಿನಲ್ಲಿ ಸೇರಿಸಿದಾತನ ಗುಣಾತಿಶಯಗಳನ್ನು ಪ್ರಚಾರಮಾಡುವವರಾಗುವಂತೆ ದೇವರಾದುಕೊಂಡ ಜನಾಂಗವೂ ರಾಜವಂಶಸ್ಥರಾದ ಯಾಜಕರೂ ಮೀಸಲಾದ ಜನವೂ ದೇವರ ಸ್ವಕೀಯ ಪ್ರಜೆಯೂ ಆಗಿದ್ದೀರಿ.


ಕರ್ತನಿಗೆ ಪ್ರಿಯರಾಗಿರುವ ಸಹೋದರರೇ, ನೀವು ಪವಿತ್ರಾತ್ಮನಿಂದ ಶುದ್ಧೀಕರಿಸಲ್ಪಟ್ಟವರಾಗಿ ಸತ್ಯದ ಮೇಲೆ ನಂಬಿಕೆಯನ್ನಿಟ್ಟು ರಕ್ಷಣೆಯನ್ನು ಪಡೆಯುವದಕ್ಕಾಗಿ ದೇವರು ನಿಮ್ಮನ್ನು ಆದಿಯಿಂದ ಆರಿಸಿಕೊಂಡದರಿಂದ ನಾವು ನಿಮ್ಮ ವಿಷಯದಲ್ಲಿ ಯಾವಾಗಲೂ ದೇವರಿಗೆ ಕೃತಜ್ಞತಾಸ್ತುತಿಮಾಡುವದಕ್ಕೆ ಬದ್ಧರಾಗಿದ್ದೇವೆ.


ಹೇಗಂದರೆ ನಾವು ಪ್ರೀತಿಯಲ್ಲಿ ನಡೆದು ಆತನ ಸನ್ನಿಧಿಯಲ್ಲಿ ಪರಿಶುದ್ಧರೂ ದೋಷವಿಲ್ಲದವರೂ ಆಗಿರಬೇಕೆಂದು ನಮ್ಮನ್ನು ಜಗದುತ್ಪತ್ತಿಗೆ ಮುಂಚೆ ಕ್ರಿಸ್ತನಲ್ಲಿ ಆರಿಸಿಕೊಂಡನು.


ತನ್ನವರು ಯಾರಾರೆಂಬದನ್ನು ಯೆಹೋವನು ನಾಳೆ ತಿಳಿಸುವನು. ಯಾರನ್ನು ಯೆಹೋವನು ಪ್ರತಿಷ್ಠಿಸಿದ್ದಾನೋ ಯಾರನ್ನು ತಾನೇ ಆದು ಕೊಂಡಿದ್ದಾನೋ ಅವರನ್ನು ಮಾತ್ರ ಆತನು ತನ್ನ ಹತ್ತಿರಕ್ಕೆ ಬರಗೊಡಿಸುವನು.


ನೀವು ಹೀಗೆ ಮಾಡಿರಿ - ನೀವೆಲ್ಲರೂ ಅಂದರೆ ಕೋರಹನೂ ಅವನ ಸಮೂಹದವರೆಲ್ಲರೂ ಧೂಪಾರತಿಗಳನ್ನು ತೆಗೆದುಕೊಂಡು


ಮೋಶೆ ಕೋರಹನಿಗೆ - ಲೇವಿಯರೇ, ಕೇಳಿರಿ.


ಅವರು ಪಾಳೆಯದಲ್ಲಿ ಮೋಶೆಯ ಮೇಲೆಯೂ ಯೆಹೋವನು ಪ್ರತಿಷ್ಠಿಸಿದ ಆರೋನನ ಮೇಲೆಯೂ ಹೊಟ್ಟೆಕಿಚ್ಚುಪಡಲು


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು