Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 17:13 - ಕನ್ನಡ ಸತ್ಯವೇದವು J.V. (BSI)

13 ಯೆಹೋವನ ಗುಡಾರದ ಹತ್ತಿರಕ್ಕೆ ಬರುವವರೆಲ್ಲರೂ ಸಾಯುತ್ತಾರಷ್ಟೆ; ನಾವೆಲ್ಲರೂ ಹಾಗೆಯೇ ಸಾಯಬೇಕೇನು ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಯೆಹೋವನ ಗುಡಾರದ ಹತ್ತಿರಕ್ಕೆ ಬರುವವರೆಲ್ಲರೂ ಸಾಯುತ್ತಾರಷ್ಟೆ; ನಾವೆಲ್ಲರೂ ಹಾಗೆಯೇ ಸಾಯಬೇಕೇನು?” ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಸರ್ವೇಶ್ವರನ ಗುಡಾರದ ಸಮೀಪಕ್ಕೆ ಬರುವವರೆಲ್ಲರು ಸಾಯಲೇ ಬೇಕಾದರೆ ಇನ್ನು ನಾವೆಲ್ಲರು ಸತ್ತಹಾಗೆ ತಾನೆ?” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಯೆಹೋವನ ಗುಡಾರದ ಹತ್ತಿರಕ್ಕೆ ಬಂದವರೆಲ್ಲರೂ ಸಾಯುತ್ತಾರಲ್ಲಾ, ನಾವೆಲ್ಲರೂ ಹಾಗೆಯೇ ಸಾಯುತ್ತೇವೋ?” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಯೆಹೋವ ದೇವರ ಗುಡಾರದ ಸಮೀಪಕ್ಕೆ ಬರುವವರೆಲ್ಲರೂ ಸಾಯುವರು. ಹಾಗೆಯೇ ನಾವೆಲ್ಲರೂ ಸಾಯಬೇಕೋ?” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 17:13
21 ತಿಳಿವುಗಳ ಹೋಲಿಕೆ  

ಈಗಲಾದರೋ ಮೊದಲು ದೂರವಾಗಿದ್ದ ನೀವು ಕ್ರಿಸ್ತ ಯೇಸುವನ್ನು ಸೇರಿದವರಾಗಿದ್ದು ಆತನ ರಕ್ತದ ಮೂಲಕ ಸಮೀಪಸ್ಥರಾದಿರಿ.


ಈ ಮಾತುಗಳನ್ನು ಅನನೀಯನು ಕೇಳಿದ ಕೂಡಲೆ ಬಿದ್ದು ಪ್ರಾಣಬಿಟ್ಟನು; ಕೇಳಿದವರೆಲ್ಲರಿಗೂ ಮಹಾ ಭಯ ಹಿಡಿಯಿತು.


ಆದಕಾರಣ ನಿಮ್ಮ ಬಂಧನಗಳು ಇನ್ನೂ ಬಿಗಿಯಾಗದಂತೆ ಧರ್ಮನಿಂದೆಯನ್ನು ಬಿಡಿರಿ; ಭೂಮಂಡಲದಲ್ಲೆಲ್ಲಾ ನಿಶ್ಚಿತಪ್ರಲಯವಾಗಲಿ ಎಂದು ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು ನುಡಿಯುವದನ್ನು ಕೇಳಿದ್ದೇನೆ.


ನಿನ್ನ ಕೋಪದಿಂದ ಇಲ್ಲವಾದೆವು; ನಿನ್ನ ರೌದ್ರದಿಂದ ತಲ್ಲಣಗೊಂಡೆವು.


ನೀವು ಮೊದಲನೆಯ ಸಾರಿ ಇರಲಿಲ್ಲವಾದದರಿಂದ ನಮ್ಮ ದೇವರಾದ ಯೆಹೋವನು ತನ್ನ ಸನ್ನಿಧಿಗೆ ಧರ್ಮವಿಧಿ ವಿರೋಧವಾಗಿ ಬಂದ ನಮ್ಮಲ್ಲಿ ಒಬ್ಬನನ್ನು ಸಂಹರಿಸಿದನಷ್ಟೆ ಎಂದು ಹೇಳಲು


ಆ ಸೈನಿಕರೆಲ್ಲರೂ ಸತ್ತುಹೋದನಂತರ ಯೆಹೋವನು ನನಗೆ - ನೀವು ಈಗ ಮೋವಾಬ್ಯರ ಪ್ರಾಂತ್ಯವಾಗಿರುವ ಆರ್ ಎಂಬ ಪ್ರದೇಶವನ್ನು ದಾಟುವವರಾಗಿದ್ದೀರಿ.


ಯೆಹೋವನು ಇಸ್ರಾಯೇಲ್ಯರ ಮೇಲೆ ಕೋಪಗೊಂಡವನಾಗಿ ತನ್ನ ದೃಷ್ಟಿಯಲ್ಲಿ ಕೆಟ್ಟ ನಡತೆಯುಳ್ಳ ಆ ಸಂತತಿಯವರೆಲ್ಲರೂ ನಾಶವಾಗುವ ತನಕ, ಅಂದರೆ ನಾಲ್ವತ್ತು ವರುಷಕಾಲ, ಇಸ್ರಾಯೇಲ್ಯರನ್ನು ಅರಣ್ಯದಲ್ಲಿ ತಿರುಗಾಡ ಮಾಡಿದನು.


ಅವನು [ಇಸ್ರಾಯೇಲ್ಯರ] ಸಮೂಹದವರಿಗೆ - ಈ ದುಷ್ಟರ ಡೇರೆಗಳ ಬಳಿಯಲ್ಲಿ ಇರದೆ ದೂರ ಹೋಗಬೇಕು; ಇವರ ಸೊತ್ತಿನಲ್ಲಿ ಯಾವದನ್ನೂ ಮುಟ್ಟಬಾರದು; ಇವರ ದೋಷಗಳಿಗಾಗಿ ಉಂಟಾಗುವ ಶಿಕ್ಷೆ ನಿಮ್ಮನ್ನೂ ಕೊಚ್ಚಿಕೊಂಡು ಹೋದೀತು ಎಂದು ಹೇಳಿದನು.


ಆದರೆ ತೋಟದ ಮಧ್ಯದಲ್ಲಿರುವ ಈ ಮರದ ಫಲದ ವಿಷಯವಾಗಿ - ಇದನ್ನು ತಿನ್ನಲೂ ಕೂಡದು, ಮುಟ್ಟಲೂ ಕೂಡದು; ತಿಂದರೆ ಸಾಯುವಿರಿ ಎಂದು ದೇವರು ಹೇಳಿದ್ದಾನೆ ಅಂದಳು.


ಆಗ ಯೆಹೋವನು ಆರೋನನಿಗೆ - ದೇವದರ್ಶನದ ಗುಡಾರದ ವಿಷಯದಲ್ಲಿ ಅಕ್ರಮವೇನಾದರೂ ನಡೆದರೆ ನೀನೂ ನಿನ್ನ ಸಂತತಿಯವರೂ ನಿನ್ನ ಕುಲದವರೆಲ್ಲರೂ ಆ ದೋಷದ ಫಲವನ್ನು ಅನುಭವಿಸಬೇಕು. ಯಾಜಕತ್ವದ ವಿಷಯದಲ್ಲಿ ಅಕ್ರಮವೇನಾದರೂ ನಡೆದರೆ ನೀನೂ ನಿನ್ನ ಸಂತತಿಯವರೂ ಮಾತ್ರವೇ ಆ ದೋಷದ ಫಲವನ್ನು ಅನುಭವಿಸಬೇಕು.


ಆ ಇಸ್ರಾಯೇಲ್ಯನ ಹಿಂದೆ ಹೋಗಿ ಅವನು ಮಲಗುವ ಕೋಣೆಯನ್ನು ಹೊಕ್ಕು ಅವರಿಬ್ಬರನ್ನೂ ಅಂದರೆ ಆ ಇಸ್ರಾಯೇಲ್ಯನನ್ನೂ ಆ ಸ್ತ್ರೀಯನ್ನೂ ಒಂದೇ ಏಟಿನಿಂದ ಹೊಟ್ಟೆಯಲ್ಲಿ ತಿವಿದು ಕೊಂದನು. ಆಗ ಇಸ್ರಾಯೇಲ್ಯರಿಗುಂಟಾಗಿದ್ದ ವ್ಯಾಧಿ ನಿಂತುಹೋಯಿತು.


ಅಲ್ಲಿ ಯೆಹೋವನಿಗೋಸ್ಕರ ಯಜ್ಞವೇದಿಯನ್ನು ಕಟ್ಟಿಸಿ ಅದರ ಮೇಲೆ ಆತನಿಗೆ ಸರ್ವಾಂಗ ಹೋಮಗಳನ್ನೂ ಸಮಾಧಾನಯಜ್ಞಗಳನ್ನೂ ಅರ್ಪಿಸಿದನು. ಹೀಗೆ ದೇಶದ ಮೇಲಿದ್ದ ಯೆಹೋವನ ಕೋಪವು ಶಾಂತವಾಯಿತು. ಇಸ್ರಾಯೇಲ್ಯರಲ್ಲಿದ್ದ ಸಂಹಾರಕವ್ಯಾಧಿಯು ನಿಂತುಹೋಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು