Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 17:3 - ಕನ್ನಡ ಸತ್ಯವೇದವು J.V. (BSI)

3 ಲೇವಿ ಕುಲಕ್ಕೂ ಒಂದು ಕೋಲು ಇರುವದರಿಂದ ಅದರ ಮೇಲೆ ಆರೋನನ ಹೆಸರನ್ನು ಬರೆಯಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಲೇವಿ ಕುಲಕ್ಕೂ ಒಂದು ಕೋಲು ಇರುವುದರಿಂದ ಅದರ ಮೇಲೆ ಆರೋನನ ಹೆಸರನ್ನು ಬರೆಯಿಸಬೇಕು ಏಕೆಂದರೆ ಅವರ ಪೂರ್ವಿಕರ ಗೋತ್ರದ ಮುಖ್ಯಸ್ಥನಿಗೆ ಒಂದು ಕೋಲು ಇರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಲೇವಿಯ ಕುಲಕ್ಕೂ ಒಂದು ಕೋಲು ಇರುವುದರಿಂದ ಅದರ ಮೇಲೆ ಆರೋನನ ಹೆಸರನ್ನು ಬರೆಯಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಲೇವಿ ಕುಲದ ಕೋಲಿನ ಮೇಲೆ ಆರೋನನ ಹೆಸರನ್ನು ಬರೆಯಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಆರೋನನ ಹೆಸರನ್ನು ಲೇವಿಯ ಕೋಲಿನ ಮೇಲೆ ಬರೆಯಬೇಕು. ಏಕೆಂದರೆ ಅವರ ಪಿತೃಗಳ ಗೋತ್ರದ ಮುಖ್ಯಸ್ಥನಿಗೆ ಒಂದು ಕೋಲು ಇರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 17:3
10 ತಿಳಿವುಗಳ ಹೋಲಿಕೆ  

ನೀನೂ ನಿನ್ನ ಸಂತತಿಯವರೂ ಯಾಜಕೋದ್ಯೋಗವನ್ನು ಕೈಕೊಂಡವರಾಗಿ ಯಜ್ಞವೇದಿಯ ಮತ್ತು ತೆರೆಯೊಳಗಣ ಕಾರ್ಯಗಳನ್ನು ನಡಿಸಬೇಕು; ಅವುಗಳ ಪರಿಚರ್ಯವನ್ನು ನೀವೇ ಮಾಡಬೇಕು; ನಾನು ಯಾಜಕತ್ವವನ್ನು ನಿಮಗೇ ಅನುಗ್ರಹಿಸಿದ್ದೇನೆ; ಇತರರು ಅದಕ್ಕೆ ಕೈಹಾಕಿದರೆ ಅವರಿಗೆ ಮರಣಶಿಕ್ಷೆಯಾಗಬೇಕು.


ಆಗ ಯೆಹೋವನು ಆರೋನನಿಗೆ - ದೇವದರ್ಶನದ ಗುಡಾರದ ವಿಷಯದಲ್ಲಿ ಅಕ್ರಮವೇನಾದರೂ ನಡೆದರೆ ನೀನೂ ನಿನ್ನ ಸಂತತಿಯವರೂ ನಿನ್ನ ಕುಲದವರೆಲ್ಲರೂ ಆ ದೋಷದ ಫಲವನ್ನು ಅನುಭವಿಸಬೇಕು. ಯಾಜಕತ್ವದ ವಿಷಯದಲ್ಲಿ ಅಕ್ರಮವೇನಾದರೂ ನಡೆದರೆ ನೀನೂ ನಿನ್ನ ಸಂತತಿಯವರೂ ಮಾತ್ರವೇ ಆ ದೋಷದ ಫಲವನ್ನು ಅನುಭವಿಸಬೇಕು.


ಅಮ್ರಾಮನು ತನ್ನ ಸೋದರತ್ತೆಯಾದ ಯೋಕೆಬೆದಳನ್ನು ಮದುವೆಮಾಡಿಕೊಂಡನು. ಆಕೆ ಅವನಿಗೆ ಆರೋನನನ್ನೂ ಮೋಶೆಯನ್ನೂ ಹೆತ್ತಳು. ಅಮ್ರಾನನು ನೂರಮೂವತ್ತೇಳು ವರುಷ ಬದುಕಿದನು.


ವಂಶಾವಳಿಗಳ ಪ್ರಕಾರ ಲೇವಿಯ ಮಕ್ಕಳು ಯಾರಂದರೆ - ಗೇರ್ಷೋನ್ ಕೆಹಾತ್ ಮೆರಾರೀ ಇವರೇ. ಲೇವಿಯು ನೂರಮೂವತ್ತೇಳು ವರುಷ ಬದುಕಿದನು.


ನೀನು ಇಸ್ರಾಯೇಲ್ಯರ ಸಂಗಡ ಮಾತಾಡಿ ಹೀಗೆ ಮಾಡಬೇಕು. ಒಂದೊಂದು ಕುಲದ ಅಧಿಪತಿಯಿಂದ ಒಂದೊಂದು ಕೋಲಿನ ಮೇರೆಗೆ ಹನ್ನೆರಡು ಕೋಲುಗಳನ್ನು ತೆಗೆದುಕೊಳ್ಳಬೇಕು. ಅವನವನ ಕೋಲಿನ ಮೇಲೆ ಆಯಾ ಕುಲಾಧಿಪತಿಯ ಹೆಸರನ್ನು ಬರೆಯಿಸಬೇಕು.


ನೀನು ಆ ಕೋಲುಗಳನ್ನು ದೇವದರ್ಶನದ ಗುಡಾರದಲ್ಲಿ ಆಜ್ಞಾಶಾಸನಗಳ ಮುಂದೆ ನಾನು ನಿಮಗೆ ದರ್ಶನಕೊಡುವ ಸ್ಥಳದಲ್ಲಿ ಇಡಬೇಕು.


ನರಪುತ್ರನೇ, ನೀನು ಒಂದು ದಂಡವನ್ನು ತೆಗೆದು ಅದರಲ್ಲಿ - ಯೆಹೂದದ್ದು, ಯೆಹೂದಕ್ಕೆ ಸೇರಿದ ಇಸ್ರಾಯೇಲ್ಯರದು ಎಂದು ಬರೆದು ಇನ್ನೊಂದು ದಂಡವನ್ನು ತೆಗೆದು ಅದರಲ್ಲಿ - ಯೋಸೇಫಿನದು, ಎಫ್ರಾಯೀವಿುನದು ಯೋಸೇಫಿಗೆ ಸೇರಿದ ಎಲ್ಲಾ ಇಸ್ರಾಯೇಲ್ಯರದು ಎಂದು ಬರೆ;


ಭೂವಿುಯು ಬಾಯ್ದೆರೆದು ಅವರನ್ನೂ ಕೋರಹನನ್ನೂ ನುಂಗಿಬಿಟ್ಟಿತಷ್ಟೆ; ಮತ್ತು ಬೆಂಕಿಯು ಆ ಗುಂಪಿನವರಲ್ಲಿ ಬೇರೆ ಇನ್ನೂರೈವತ್ತು ಮಂದಿಯನ್ನು ದಹಿಸಿ ಇಸ್ರಾಯೇಲ್ಯರಿಗೆ ಎಚ್ಚರವುಂಟಾಗುವಂತೆ ಮಾಡಿತಲ್ಲಾ.


ನಿಮ್ಮನ್ನು ನೀವೇ ಮೋಸಪಡಿಸಿಕೊಂಡಿದ್ದೀರಿ; ನೀವು ನನ್ನ ಬಳಿಗೆ ಬಂದು - ನಮ್ಮ ದೇವರಾದ ಯೆಹೋವನನ್ನು ನಮಗಾಗಿ ಪ್ರಾರ್ಥಿಸು; ನಮ್ಮ ದೇವರಾದ ಯೆಹೋವನು ಯಾವ ಅಪ್ಪಣೆಕೊಡುತ್ತಾನೋ ಅದನ್ನು ನಮಗೆ ತಿಳಿಸು, ಅದರಂತೆಯೇ ನಡೆಯುವೆವು ಎಂಬದಾಗಿ ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ವಿಚಾರಿಸುವದಕ್ಕೆ ನನ್ನನ್ನು ಕಳುಹಿಸಿದಿರಲ್ಲಾ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು