Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 17:7 - ಕನ್ನಡ ಸತ್ಯವೇದವು J.V. (BSI)

7 ಮೋಶೆ ಆ ಕೋಲುಗಳನ್ನು ಆಜ್ಞಾಶಾಸನಗಳಿರುವ ಗುಡಾರದಲ್ಲಿ ಯೆಹೋವನ ಸನ್ನಿಧಿಯಲ್ಲಿ ಇಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಮೋಶೆ ಆ ಕೋಲುಗಳನ್ನು ಆಜ್ಞಾಶಾಸನಗಳಿರುವ ಗುಡಾರದಲ್ಲಿ ಯೆಹೋವನ ಸನ್ನಿಧಿಯಲ್ಲಿ ಇಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಮೋಶೆ ಆ ಕೋಲುಗಳನ್ನು ಮಂಜೂಷವಿರುವ ಗುಡಾರದಲ್ಲಿ ಸರ್ವೇಶ್ವರನ ಸನ್ನಿಧಿಯಲ್ಲಿ ಇಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಮೋಶೆ ಆ ಕೋಲುಗಳನ್ನು ಒಡಂಬಡಿಕೆಯ ಗುಡಾರದಲ್ಲಿ ಯೆಹೋವನ ಮುಂದೆ ಇಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಆಗ ಮೋಶೆಯು ಆ ಕೋಲುಗಳನ್ನು ಸಾಕ್ಷಿಯ ಗುಡಾರದ ಒಳಗೆ ಯೆಹೋವ ದೇವರ ಸಮ್ಮುಖದಲ್ಲಿ ಇಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 17:7
9 ತಿಳಿವುಗಳ ಹೋಲಿಕೆ  

ದೇವದರ್ಶನಗುಡಾರವು ಅಡವಿಯೊಳಗೆ ನಮ್ಮ ಪಿತೃಗಳ ಬಳಿಯಲ್ಲಿ ಇತ್ತು. ಮೋಶೆಯ ಸಂಗಡ ಮಾತಾಡಿದವನು - ನೀನು ನೋಡಿದ ಮಾದರಿಯ ಪ್ರಕಾರವೇ ಅದನ್ನು ಮಾಡಿಸಬೇಕೆಂದು ನೇವಿುಸಿದ್ದನು.


ದೇವದರ್ಶನದ ಗುಡಾರವನ್ನು ಮಾಡುವದರಲ್ಲಿ ಉಪಯೋಗಿಸಿದ ಪದಾರ್ಥಗಳ ಲೆಕ್ಕ. ಮೋಶೆಯ ಆಜ್ಞೆಯ ಮೇರೆಗೆ ಮಹಾಯಾಜಕನಾದ ಆರೋನನ ಮಗ ಈತಾಮಾರನು ಲೇವಿಯರ ಕೈಯಿಂದ ಲೆಕ್ಕ ಮಾಡಿಸಿದ್ದು.


ನಿನ್ನ ಕುಲದ ಮೂಲಪುರುಷನಾದ ಲೇವಿಯ ವಂಶದವರನ್ನು ನೀನು ಹತ್ತಿರಕ್ಕೆ ಕರೆದು ಜೊತೆಯಲ್ಲಿರಿಸಿಕೊಂಡು ನಿನ್ನ ಕೈಕೆಳಗೆ ಸೇವೆ ಮಾಡಿಸಬೇಕು; ಆದರೆ ಆಜ್ಞಾಶಾಸನಗಳಿರುವ ಗುಡಾರದ ಮುಂದೆ ನೀನೂ ನಿನ್ನ ಮಕ್ಕಳೂ ಮಾತ್ರ ಸೇವೆಮಾಡಬೇಕು.


ಆಜ್ಞಾಶಾಸನಗಳಿರುವ ಗುಡಾರವನ್ನೂ ಅದರ ಸಾಮಾನು, ಉಪಕರಣ ಇವುಗಳನ್ನೂ ನೋಡಿಕೊಳ್ಳುವದಕ್ಕೆ ಅವರನ್ನು ನೇವಿುಸಬೇಕು. ಅವರು ಆ ಗುಡಾರವನ್ನೂ ಅದರ ಸಾಮಾನನ್ನೂ ಹೊರುವದಕ್ಕಾಗಿ ಇರಬೇಕು. ಮತ್ತು ಅವರು ಅದರ ಸೇವೆಯನ್ನು ಮಾಡುವವರಾಗಿ ಅದರ ಸುತ್ತಲೂ ತಮ್ಮ ಡೇರೆಗಳನ್ನು ಹಾಕಿಕೊಳ್ಳಬೇಕು.


ಲೇವಿಯರು ಮಾತ್ರ ತಮ್ಮ ಡೇರೆಗಳನ್ನು ದೇವದರ್ಶನದ ಗುಡಾರದ ಸುತ್ತಲೂ ಹಾಕಿಕೊಳ್ಳಬೇಕು. ಹೀಗಾದರೆ [ಯೆಹೋವನ] ಕೋಪವು ಇಸ್ರಾಯೇಲ್ಯರ ಮೇಲೆ ಉಂಟಾಗುವದಕ್ಕೆ ಆಸ್ಪದವಿರುವದಿಲ್ಲ. ಲೇವಿಯರು ದೇವದರ್ಶನದ ಗುಡಾರವನ್ನು ಕಾಯುವವರಾಗಿರಬೇಕು.


ಇಸ್ರಾಯೇಲ್ಯರು ದೇವದರ್ಶನದ ಗುಡಾರವನ್ನು ಎತ್ತಿ ನಿಲ್ಲಿಸಿದ ದಿನದಲ್ಲಿ ಮೇಘವು ಅದರ ಮೇಲೆ ಮುಚ್ಚಿಕೊಂಡಿತು. ಅದು ಸಂಜೆಯಿಂದ ಮುಂಜಾನೆಯವರೆಗೆ ಬೆಂಕಿಯಂತೆ ಕಾಣಿಸುತ್ತಿರುವದು.


ನೀನು ಆ ಕೋಲುಗಳನ್ನು ದೇವದರ್ಶನದ ಗುಡಾರದಲ್ಲಿ ಆಜ್ಞಾಶಾಸನಗಳ ಮುಂದೆ ನಾನು ನಿಮಗೆ ದರ್ಶನಕೊಡುವ ಸ್ಥಳದಲ್ಲಿ ಇಡಬೇಕು.


ಅದಕ್ಕನುಸಾರವಾಗಿ ಮೋಶೆಯು ಇಸ್ರಾಯೇಲ್ಯರ ಸಂಗಡ ಮಾತಾಡಲಾಗಿ ಅವರ ಕುಲಾಧಿಪತಿಗಳೆಲ್ಲರೂ ಕುಲಕ್ಕೆ ಒಂದು ಕೋಲಿನ ಮೇರೆಗೆ ಹನ್ನೆರಡು ಕೋಲುಗಳನ್ನು ಅವನ ಕೈಗೆ ಕೊಟ್ಟರು; ಅವುಗಳೊಡನೆ ಆರೋನನ ಕೋಲೂ ಇತ್ತು.


ಆದರೆ ಜನಸಮೂಹದವರೆಲ್ಲರೂ [ಕೇಳಲೊಲ್ಲದೆ] ಅವರನ್ನು ಕಲ್ಲೆಸೆದು ಕೊಲ್ಲಬೇಕೆಂದು ಹೇಳಿಕೊಳ್ಳುತ್ತಿರಲಾಗಿ ಯೆಹೋವನ ತೇಜಸ್ಸು ದೇವದರ್ಶನದ ಗುಡಾರದಲ್ಲಿ ಹೊಳೆದು ಇಸ್ರಾಯೇಲ್ಯರೆಲ್ಲರಿಗೂ ಕಾಣಿಸಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು