Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 17:9 - ಕನ್ನಡ ಸತ್ಯವೇದವು J.V. (BSI)

9 ಮೋಶೆ ಆ ಕೋಲುಗಳನ್ನೆಲ್ಲಾ ಯೆಹೋವನ ಸನ್ನಿಧಿಯಿಂದ ಇಸ್ರಾಯೇಲ್ಯರೆಲ್ಲರ ಬಳಿಗೆ ತಂದು ತೋರಿಸಿದನು; ಅವರು ನೋಡಿ ತಮ್ಮ ತಮ್ಮ ಕೋಲುಗಳನ್ನು ತೆಗೆದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಮೋಶೆ ಆ ಕೋಲುಗಳನ್ನೆಲ್ಲಾ ಯೆಹೋವನ ಸನ್ನಿಧಿಯಿಂದ ಇಸ್ರಾಯೇಲರ ಬಳಿಗೆ ತಂದು ತೋರಿಸಿದನು. ಅವರು ನೋಡಿ ತಮ್ಮತಮ್ಮ ಕೋಲುಗಳನ್ನು ಪರೀಕ್ಷಿಸಿ ತೆಗೆದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಮೋಶೆ ಆ ಕೋಲುಗಳನ್ನೆಲ್ಲ ಸವೇಶ್ವರನ ಸನ್ನಿಧಿಯಿಂದ ಇಸ್ರಯೇಲರೆಲ್ಲರ ಬಳಿಗೆ ತಂದು ತೋರಿಸಿದನು. ಅವರು ತಮ್ಮ ತಮ್ಮ ಕೋಲುಗಳನ್ನು ಪರೀಕ್ಷಿಸಿ ತೆಗೆದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಮೋಶೆ ಎಲ್ಲಾ ಕೋಲುಗಳನ್ನು ಯೆಹೋವನ ಸನ್ನಿಧಿಯಿಂದ ಹೊರಗೆ ತೆಗೆದುಕೊಂಡು ಬಂದು ಅವುಗಳನ್ನೆಲ್ಲಾ ಇಸ್ರೇಲರಿಗೆ ತೋರಿಸಿದನು. ಪ್ರಧಾನರು ಆ ಕೋಲುಗಳನ್ನು ನೋಡಿ, ತಮ್ಮತಮ್ಮ ಕೋಲುಗಳನ್ನು ತೆಗೆದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಆಗ ಮೋಶೆಯು ಕೋಲುಗಳನ್ನು ಯೆಹೋವ ದೇವರ ಸನ್ನಿಧಿಯಿಂದ ಎಲ್ಲಾ ಇಸ್ರಾಯೇಲರಿಗೆ ತೋರಿಸುವುದಕ್ಕಾಗಿ ಹೊರಗೆ ತಂದನು. ಆಗ ಅವರು ನೋಡಿ ತಮ್ಮ ತಮ್ಮ ಕೋಲುಗಳನ್ನು ತೆಗೆದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 17:9
2 ತಿಳಿವುಗಳ ಹೋಲಿಕೆ  

ಮರುದಿನ ಮೋಶೆ ಗುಡಾರದಲ್ಲಿ ಹೋಗಿ ನೋಡಲಾಗಿ ಆಹಾ, ಲೇವಿಕುಲಕ್ಕೋಸ್ಕರ ಆರೋನನು ಕೊಟ್ಟಿದ್ದ ಕೋಲು ಚಿಗುರಿ ಮೊಗ್ಗೆ ಬಿಟ್ಟು ಹೂವರಳಿ ಬಾದಾವಿು ಹಣ್ಣುಗಳನ್ನು ಫಲಿಸಿತ್ತು.


ತರುವಾಯ ಯೆಹೋವನು ಮೋಶೆಗೆ - ಆರೋನನ ಕೋಲನ್ನು ತಿರಿಗಿ ಆಜ್ಞಾಶಾಸನಗಳ ಮುಂದೆ ಇಡಬೇಕು. ಅದು ತಿರುಗಿಬೀಳುವವರಿಗೆ ದೃಷ್ಟಾಂತವಾಗಿ ಅಲ್ಲೇ ಇರಬೇಕು; ಇವರು ಇನ್ನು ಮುಂದೆ ನನಗೆ ವಿರೋಧವಾಗಿ ಗುಣುಗುಟ್ಟಿ ನಾಶವಾಗದಂತೆ ನೀನು ಹೀಗೆ ಮಾಡಬೇಕು ಎಂದು ಆಜ್ಞಾಪಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು