Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 18:19 - ಕನ್ನಡ ಸತ್ಯವೇದವು J.V. (BSI)

19 ಇಸ್ರಾಯೇಲ್ಯರು ಯೆಹೋವನಿಗೋಸ್ಕರ ಪ್ರತ್ಯೇಕಿಸಿ ಸಮರ್ಪಿಸುವ ದೇವರ ವಸ್ತುಗಳೆಲ್ಲಾ ನಿನಗೂ ನಿನ್ನ ಸಂತತಿಯವರಾದ ಸ್ತ್ರೀಪುರುಷರೆಲ್ಲರಿಗೂ ಸದಾಕಾಲವೂ ಸಲ್ಲಬೇಕೆಂದು ನಾನು ಅನುಗ್ರಹಮಾಡಿದ್ದೇನೆ. ಇದು ಯೆಹೋವನ ಸನ್ನಿಧಿಯಲ್ಲಿ ನಿನ್ನೊಡನೆಯೂ ನಿನ್ನ ಸಂತತಿಯೊಡನೆಯೂ ಮಾಡಲ್ಪಟ್ಟ ಶಾಶ್ವತವಾದ ಉಪ್ಪಿನ ಒಡಂಬಡಿಕೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಇಸ್ರಾಯೇಲರು ಯೆಹೋವನಿಗೋಸ್ಕರ ಪ್ರತ್ಯೇಕಿಸಿ ಸಮರ್ಪಿಸುವ ದೇವರ ವಸ್ತುಗಳೆಲ್ಲಾ ನಿನಗೂ, ನಿನ್ನ ಸಂತತಿಯವರಾದ ಸ್ತ್ರೀಪುರುಷರೆಲ್ಲರಿಗೂ ಸದಾಕಾಲವೂ ಸಲ್ಲಬೇಕೆಂದು ನಾನು ಅನುಗ್ರಹಮಾಡಿದ್ದೇನೆ. ಇದು ಯೆಹೋವನ ಸನ್ನಿಧಿಯಲ್ಲಿ ನಿನ್ನೊಡನೆಯೂ, ನಿನ್ನ ಸಂತತಿಯೊಡನೆಯೂ ಮಾಡಲ್ಪಟ್ಟ ಶಾಶ್ವತವಾದ ಉಪ್ಪಿನ ಒಡಂಬಡಿಕೆಯಾಗಬೇಕು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 “ಇಸ್ರಯೇಲರು ನನಗೆ ಮೀಸಲಾಗಿಟ್ಟು ಸಮರ್ಪಿಸುವ ಪವಿತ್ರ ವಸ್ತುಗಳೆಲ್ಲಾ ನಿನಗೂ ನಿನ್ನ ಸಂತತಿಯವರಾದ ಸ್ತ್ರೀಪುರುಷರಿಗೂ ಸಲ್ಲಬೇಕು. ಸದಾಕಾಲಕ್ಕೂ ಇದನ್ನು ನಾನು ನಿನಗೆ ಅನುಗ್ರಹಿಸಿದ್ದೇನೆ. ಇದು ನನ್ನ ಸನ್ನಿಧಿಯಲ್ಲಿ ನಿನ್ನೊಡನೆ ಮತ್ತು ನಿನ್ನ ಸಂತತಿಯೊಡನೆ ಮಾಡಿಕೊಂಡ ಶಾಶ್ವತವಾದ ಉಪ್ಪಿನ ಒಡಂಬಡಿಕೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಇಸ್ರೇಲರು ಯೆಹೋವನಿಗೋಸ್ಕರ ಪ್ರತ್ಯೇಕಿಸಿ ಸಮರ್ಪಿಸುವ ಪವಿತ್ರ ವಸ್ತುಗಳೆಲ್ಲವನ್ನು ನಿನಗೂ ನಿನ್ನ ಸಂತತಿಯವರಾದ ಸ್ತ್ರೀಪುರುಷರೆಲ್ಲರಿಗೂ ಶಾಶ್ವತವಾದ ಪಾಲಾಗಿ ಅನುಗ್ರಹಿಸಿದ್ದೇನೆ. ಇದು ಯೆಹೋವನ ಸನ್ನಿಧಿಯಲ್ಲಿ ನಿನ್ನೊಡನೆಯೂ ನಿನ್ನ ನಂತರದ ಸಂತತಿಯವರೊಡನೆಯೂ ಮಾಡಿಕೊಂಡ ಶಾಶ್ವತವಾದ ಉಪ್ಪಿನ ಒಡಂಬಡಿಕೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಇಸ್ರಾಯೇಲರು ಯೆಹೋವ ದೇವರಿಗೆ ನೈವೇದ್ಯ ಮಾಡುವ ಪರಿಶುದ್ಧವಾದ ಬಲಿಗಳನ್ನೆಲ್ಲಾ ನಿನಗೂ ನಿನ್ನ ಪುತ್ರಪುತ್ರಿಯರಿಗೂ ಕ್ರಮ ಪ್ರಕಾರವಾದ ಭಾಗವಾಗಿ ಕೊಟ್ಟಿದ್ದೇನೆ. ಇದು ಯೆಹೋವ ದೇವರ ಮುಂದೆ ನಿನಗೂ ನಿನ್ನ ಸಂಗಡ ಇರುವ ನಿನ್ನ ಸಂತತಿಗೂ ಶಾಶ್ವತವಾದ ಉಪ್ಪಿನ ಒಡಂಬಡಿಕೆಯಾಗಿರಬೇಕು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 18:19
15 ತಿಳಿವುಗಳ ಹೋಲಿಕೆ  

ಯೆಹೋವನು ಉಪ್ಪಿನ ಒಡಂಬಡಿಕೆಯಿಂದ ದಾವೀದನಿಗೂ ಅವನ ಸಂತಾನದವರಿಗೂ ಇಸ್ರಾಯೇಲ್ಯರ ಮೇಲೆ ಶಾಶ್ವತವಾದ ಅರಸುತನವನ್ನು ಕೊಟ್ಟಿದ್ದಾನೆಂದು ನಿಮಗೆ ಗೊತ್ತಿಲ್ಲವೋ?


ಅದಲ್ಲದೆ ಇಸ್ರಾಯೇಲ್ಯರು [ಮಾಡುವ ಸಮಾಧಾನಯಜ್ಞದ್ರವ್ಯಗಳಿಂದ] ನನಗೋಸ್ಕರ ಪ್ರತ್ಯೇಕಿಸಿಕೊಡುವ ದ್ರವ್ಯಗಳೂ ನೈವೇದ್ಯವಾಗಿ ನಿವಾಳಿಸುವ ದ್ರವ್ಯಗಳೂ ನಿಮಗೆ ಆಗಬೇಕು; ಇವು ನಿನಗೂ ನಿನ್ನ ಸಂತತಿಯವರಾದ ಸ್ತ್ರೀಪುರುಷರೆಲ್ಲರಿಗೂ ಶಾಶ್ವತವಾದ ನಿಯಮದಿಂದ ಸಲ್ಲಬೇಕೆಂದು ಅನುಗ್ರಹಿಸಿದ್ದೇನೆ. ಇವುಗಳನ್ನು ನಿಮ್ಮ ಮನೆಗಳಲ್ಲಿರುವ ಶುದ್ಧರಾದವರೆಲ್ಲರೂ ಊಟ ಮಾಡಬಹುದು.


ಎಲ್ಲಾ ನೈವೇದ್ಯ ಪದಾರ್ಥಗಳಿಗೂ ಉಪ್ಪುಹಾಕಿ ಸಮರ್ಪಿಸಬೇಕು. ಉಪ್ಪು ಯೆಹೋವನ ಸಂಗಡ ನಿಮಗಿರುವ ಒಡಂಬಡಿಕೆಯನ್ನು ಸೂಚಿಸುವದರಿಂದ ಅದು ಯಾವ ನೈವೇದ್ಯದ್ರವ್ಯವಾದರೂ ಉಪ್ಪಿಲ್ಲದೆ ಇರಬಾರದು. ನೀವು ಅರ್ಪಿಸುವ ಎಲ್ಲಾ ಪದಾರ್ಥಗಳಲ್ಲಿಯೂ ಉಪ್ಪು ಸೇರೇ ಇರಬೇಕು.


ಯಾಜಕರು ಮತ್ತು ಲೇವಿಯರು ಯೆಹೋವ ಧರ್ಮದಲ್ಲಿ ಆಸಕ್ತರಾಗಿರುವದಕ್ಕಾಗಿ ಅವರಿಗೆ ಸಲ್ಲತಕ್ಕ ಜೀವನಾಂಶವನ್ನು ಯೆರೂಸಲೇವಿುನಲ್ಲಿ ವಾಸಿಸುವ ಜನರು ಕೊಡಬೇಕೆಂತಲೂ ಗೊತ್ತುಮಾಡಿದನು.


ಆ ಸ್ಥಳಕ್ಕೆ ಮಾತ್ರ ನೀವು ಸಮರ್ಪಿಸುವ ಸರ್ವಾಂಗಹೋಮಗಳೇ ಮುಂತಾದ ಯಜ್ಞಗಳ ಪಶುಗಳನ್ನೂ ನಿಮ್ಮ ಬೆಳೆಯಲ್ಲಿ ದಶಮಾಂಶವನ್ನೂ ಯಾಜಕರಿಗೋಸ್ಕರ ಪ್ರತ್ಯೇಕಿಸುವ ಪದಾರ್ಥಗಳನ್ನೂ ಹರಕೇ ಮುಡುಪುಗಳನ್ನೂ ಕಾಣಿಕೆಗಳನ್ನೂ ದನಕುರಿಗಳ ಚೊಚ್ಚಲು ಮರಿಗಳನ್ನೂ ತಂದು


ಯೆಹೋವನ ಅಪ್ಪಣೆಯ ಮೇರೆಗೆ ಮೋಶೆ ಆ ಕಪ್ಪವನ್ನು ಯೆಹೋವನಿಗೋಸ್ಕರ ಪ್ರತ್ಯೇಕಿಸಿ ಮಹಾಯಾಜಕನಾದ ಎಲ್ಲಾಜಾರನಿಗೆ ಒಪ್ಪಿಸಿದನು.


ಯೆಹೋವನಿಗೋಸ್ಕರ ಕಪ್ಪವನ್ನು ತೆಗೆದುಕೊಂಡು ಆತನಿಗೋಸ್ಕರ ಪ್ರತ್ಯೇಕಿಸಿ ಮಹಾಯಾಜಕ ಎಲ್ಲಾಜಾರನಿಗೆ ಒಪ್ಪಿಸಬೇಕು.


ಯೆಹೋವನು ಆರೋನನಿಗೆ ಆಜ್ಞಾಪಿಸಿದ್ದೇನಂದರೆ - ಇಸ್ರಾಯೇಲ್ಯರು ನನಗೋಸ್ಕರ ಪ್ರತ್ಯೇಕಿಸಿ ಸಮರ್ಪಿಸುವ ಪದಾರ್ಥಗಳನ್ನೆಲ್ಲಾ ಅಂದರೆ ದೇವರ ವಸ್ತುಗಳನ್ನೆಲ್ಲಾ ನಾನು ನಿನ್ನ ಮತ್ತು ನಿನ್ನ ಸಂತತಿಯವರ ಪಾಲಾಗುವದಕ್ಕೆ ದಾನಮಾಡಿದ್ದೇನೆ; ಅವು ಸದಾಕಾಲವೂ ನಿಮಗೇ ಸಲ್ಲಬೇಕು.


ಸಮರ್ಪಿಸಿದ ಪ್ರತಿಯೊಂದು ವಿಧವಾದ ಪದಾರ್ಥಗಳಲ್ಲಿಯೂ ಒಂದೊಂದನ್ನು ಯೆಹೋವನಿಗೋಸ್ಕರ ಪ್ರತ್ಯೇಕಿಸಬೇಕು. ಅವು ವೇದಿಗೆ ಯಜ್ಞಪಶುವಿನ ರಕ್ತವನ್ನು ಎರಚಿದ ಯಾಜಕನಿಗೆ ಆಗಬೇಕು.


ಆದರೆ ನಿಮ್ಮ ಬಳಿಯಲ್ಲಿರುವ ದೇವರ ವಸ್ತುಗಳನ್ನೂ ಹರಕೆಮಾಡಿದ್ದನ್ನೂ ಯೆಹೋವನು ಆದುಕೊಂಡ ಸ್ಥಳಕ್ಕೇ ತೆಗೆದುಕೊಂಡು ಹೋಗಬೇಕು.


ಅಪರಾಧ ಪ್ರಾಯಶ್ಚಿತ್ತಕ್ಕಾಗಿಯೂ ದೋಷಪರಿಹಾರಕ್ಕಾಗಿಯೂ ತರಲ್ಪಟ್ಟ ಹಣವು ಯಾಜಕರ ಭಾಗವಾಗಿತ್ತು; ಅದು ಯೆಹೋವನ ಆಲಯಕ್ಕೆ ಸೇರಲಿಲ್ಲ.


ನೀನು ಅವುಗಳನ್ನು ಯೆಹೋವನಿಗೆ ಸಮರ್ಪಿಸಲು ಯಾಜಕರು ಅವುಗಳ ಮೇಲೆ ಉಪ್ಪನ್ನು ಚೆಲ್ಲಿ ಯೆಹೋವನಿಗಾಗಿ ಸರ್ವಾಂಗಹೋಮ ಮಾಡಬೇಕು.


ಆರೋನನಿಗೂ ಅವನ ಮಕ್ಕಳಿಗೂ ಯಾಜಕದೀಕ್ಷೆಯನ್ನು ಕೊಡುವಾಗ ಸಮರ್ಪಿಸಿದ ಟಗರಿನ ಮಾಂಸದಲ್ಲಿ ನೈವೇದ್ಯವಾಗಿ ನಿವಾಳಿಸಿದ ಎದೆಯ ಭಾಗವನ್ನೂ ಯಾಜಕರ ಭಾಗಕ್ಕೆ ಪ್ರತ್ಯೇಕಿಸಿದ ತೊಡೆಯನ್ನೂ ದೇವರದೆಂದು ಭಾವಿಸಬೇಕು.


ದೇವರಿಗೆ ನೈವೇದ್ಯವಾದ ಆಹಾರದಲ್ಲಿ ಪರಿಶುದ್ಧವಾದದ್ದನ್ನೂ ಮಹಾಪರಿಶುದ್ಧವಾದದ್ದನ್ನೂ ಅವನು ಊಟಮಾಡಬಹುದೇ ಹೊರತು


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು