Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 18:3 - ಕನ್ನಡ ಸತ್ಯವೇದವು J.V. (BSI)

3 ಲೇವಿಯರು ನಿನ್ನ ಅಪ್ಪಣೆಯ ಮೇರೆಗೆ ನಡೆದು ಗುಡಾರವನ್ನೆಲ್ಲಾ ಕಾಯಬೇಕು; ಆದರೆ ಪವಿತ್ರಸ್ಥಾನದ ಸಾಮಾನಿನ ಹತ್ತಿರವಾಗಲಿ ಯಜ್ಞವೇದಿಯ ಹತ್ತಿರವಾಗಲಿ ಅವರು ಬರಕೂಡದು; ಬಂದರೆ ಅವನು ಸಾಯುವದು ಮಾತ್ರವಲ್ಲದೆ ನೀವೂ ಸತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಲೇವಿಯರು ನಿನ್ನ ಅಪ್ಪಣೆಯ ಪ್ರಕಾರ ನಡೆದು ಗುಡಾರವನ್ನು ಕಾಯಬೇಕು. ಆದರೆ ಪವಿತ್ರಸ್ಥಾನದ ವಸ್ತುಗಳ ಹತ್ತಿರವಾಗಲಿ ಅಥವಾ ಯಜ್ಞವೇದಿಯ ಹತ್ತಿರವಾಗಲಿ ಅವರು ಬರಬಾರದು, ಬಂದರೆ ಅವರು ಸಾಯುವುದು ಮಾತ್ರವಲ್ಲದೆ ನೀವೂ ಸಾಯುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಲೇವಿಯರು ನಿನ್ನ ಅಪ್ಪಣೆ ಮೇರೆಗೆ ನಡೆದು ಇಡೀ ಗುಡಾರವನ್ನು ಕಾಯಬೇಕು. ಆದರೆ ಪವಿತ್ರಸ್ಥಾನದ ವಸ್ತುಗಳ ಹತ್ತಿರವಾಗಲಿ, ಬಲಿಪೀಠದ ಹತ್ತಿರವಾಗಲಿ ಅವರು ಬರಕೂಡದು; ಬಂದರೆ ಅವರು ಮಾತ್ರವಲ್ಲ ನೀವೂ ಕೂಡ ಸಾಯಬೇಕಾಗಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಆ ಲೇವಿಯರು ನಿನಗೆ ಕಾವಲುಗಾರರಾಗಿರಬೇಕು ಅಂದರೆ ಇಡೀ ಗುಡಾರವನ್ನು ಕಾಯಬೇಕು. ಆದರೆ ಅವರು ಪವಿತ್ರವಾದ ಪಾತ್ರೆಯನ್ನಾಗಲಿ ಯಜ್ಞವೇದಿಕೆಯನ್ನಾಗಲಿ ಮುಟ್ಟಬಾರದು; ಮುಟ್ಟಿದರೆ ಅವರೂ ಸಾಯುವರು ಮತ್ತು ನೀವೂ ಸಾಯುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಅವರು ನಿನಗೂ ದೇವದರ್ಶನದ ಗುಡಾರದ ಕಾರ್ಯಗಳಿಗೂ ಜವಾಬ್ದಾರರಾಗಿರುವರು. ಆದರೆ ಪರಿಶುದ್ಧಸ್ಥಳದ ಸಲಕರಣೆಗಳ ಹತ್ತಿರವಾಗಲಿ, ಬಲಿಪೀಠದ ಹತ್ತಿರವಾಗಲಿ ಅವರು ಬರಬಾರದು, ಬಂದರೆ ಅವರು ಮಾತ್ರವಲ್ಲ ನೀವೂ ಸಹ ಸಾಯುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 18:3
12 ತಿಳಿವುಗಳ ಹೋಲಿಕೆ  

ದಂಡು ಹೊರಡುವ ಕಾಲದಲ್ಲಿ ಆರೋನನೂ ಅವನ ಮಕ್ಕಳೂ ದೇವಸ್ಥಾನದ ಎಲ್ಲಾ ಸಾಮಾನುಗಳನ್ನು ಮುಚ್ಚಿ ಸಿದ್ಧಮಾಡಿದನಂತರ ಕೆಹಾತ್ಯರು ಅವುಗಳನ್ನು ಹೊರುವದಕ್ಕೆ ಬರಬೇಕು. ಇವರು ದೇವಸ್ಥಾನದ ಸಾಮಾನುಗಳನ್ನು ಮುಟ್ಟಬಾರದು; ಮುಟ್ಟಿದರೆ ಸತ್ತಾರು. ದೇವದರ್ಶನದ ಗುಡಾರದ ಸಾಮಾನುಗಳಲ್ಲಿ ಕೆಹಾತ್ಯರು ಹೊರಬೇಕಾದವುಗಳು ಇವೇ.


ಆರೋನನ ಸಂತತಿಯವರಲ್ಲದ ಇತರರಲ್ಲಿ ಯಾರೂ ಯೆಹೋವನ ಸನ್ನಿಧಿಗೆ ಬಂದು ಧೂಪವನ್ನು ಸಮರ್ಪಿಸಬಾರದು; ಸಮರ್ಪಿಸಿದರೆ ಕೋರಹನಿಗೂ ಅವನ ಜೊತೆಗಾರರಿಗೂ ಉಂಟಾದ ಗತಿಗೆ ಗುರಿಯಾದಾರೆಂದು ಇಸ್ರಾಯೇಲ್ಯರಿಗೆ ನೆನಪು ಹುಟ್ಟಿಸುವದಕ್ಕಾಗಿ ಅದು ಗುರುತಾಯಿತು.


ಮೆರಾರೀ ವಂಶದವರ ವಶಕ್ಕೆ ಕೊಟ್ಟವುಗಳು ಯಾವವಂದರೆ - ಗುಡಾರದ ಚೌಕಟ್ಟುಗಳೂ ಅಗುಳಿಗಳೂ ಕಂಬಗಳೂ ಗದ್ದಿಗೇಕಲ್ಲುಗಳೂ ಇವುಗಳ ಉಪಕರಣಗಳೂ


ಅವರು ಕಾಪಾಡಬೇಕಾದವುಗಳು ಯಾವವಂದರೆ - ಮಂಜೂಷವೂ ಮೇಜೂ ದೀಪಸ್ತಂಭವೂ ವೇದಿಗಳೂ ದೇವಸ್ಥಾನದ ಸೇವೋಪಕರಣಗಳೂ ಒಳಗಣ ತೆರೆಯೂ ಇವುಗಳೇ. ಇವುಗಳ ಸಕಲವಿಧವಾದ ಪರಿಚರ್ಯವನ್ನು ಅವರು ಮಾಡಬೇಕು.


ದೇವದರ್ಶನದ ಗುಡಾರದ ಸಾಮಾನುಗಳಲ್ಲಿ ಗೇರ್ಷೋನನ ವಂಶದವರು ಕಾಪಾಡಬೇಕಾದವುಗಳು ಯಾವವಂದರೆ - ಗುಡಾರವೂ ಅದರ ಮೇಲಣ ಡೇರೆಯ ಬಟ್ಟೆಯೂ ಅದರ ಮೇಲ್ಹೊದಿಕೆಯೂ ದೇವದರ್ಶನದ ಗುಡಾರದ ಬಾಗಲಲ್ಲಿರುವ ಪರದೆಯೂ


ನೀನೂ ನಿನ್ನ ಸಂತತಿಯವರೂ ಯಾಜಕೋದ್ಯೋಗವನ್ನು ಕೈಕೊಂಡವರಾಗಿ ಯಜ್ಞವೇದಿಯ ಮತ್ತು ತೆರೆಯೊಳಗಣ ಕಾರ್ಯಗಳನ್ನು ನಡಿಸಬೇಕು; ಅವುಗಳ ಪರಿಚರ್ಯವನ್ನು ನೀವೇ ಮಾಡಬೇಕು; ನಾನು ಯಾಜಕತ್ವವನ್ನು ನಿಮಗೇ ಅನುಗ್ರಹಿಸಿದ್ದೇನೆ; ಇತರರು ಅದಕ್ಕೆ ಕೈಹಾಕಿದರೆ ಅವರಿಗೆ ಮರಣಶಿಕ್ಷೆಯಾಗಬೇಕು.


ಹೊರಡುವಾಗ ಆ ಗುಡಾರವನ್ನು ಲೇವಿಯರೇ ಬಿಚ್ಚಬೇಕು; ಇಳಿಯುವಾಗ ಲೇವಿಯರೇ ಅದನ್ನು ಹಾಕಬೇಕು. ಇತರರು ಹತ್ತಿರಕ್ಕೆ ಬಂದರೆ ಅವರಿಗೆ ಮರಣಶಿಕ್ಷೆಯಾಗಬೇಕು.


ಅವರೇ ನಿನ್ನ ಜೊತೆಯಲ್ಲಿದ್ದು ದೇವದರ್ಶನದ ಗುಡಾರವನ್ನು ನೋಡಿಕೊಂಡು ಅದರ ಸಕಲ ಪರಿಚರ್ಯವನ್ನು ಮಾಡಬೇಕು; ಇತರ ಕುಲದವರು ನಿಮ್ಮ ಜೊತೆಯಲ್ಲಿರಕೂಡದು.


ವಿುಕ್ಕ ಇಸ್ರಾಯೇಲ್ಯರಿಗೆ ಬರುವ ಭಾಗದಿಂದ ಮನುಷ್ಯ, ದನ, ಕತ್ತೆ, ಆಡು, ಕುರಿ ಇವುಗಳಲ್ಲಿ ಐವತ್ತರಲ್ಲಿ ಒಂದರ ಮೇರೆಗೆ ತೆಗೆದುಕೊಂಡು ಯೆಹೋವನ ಗುಡಾರವನ್ನು ನೋಡಿಕೊಳ್ಳುವ ಲೇವಿಯರಿಗೆ ಕೊಡಬೇಕೆಂದು ಆಜ್ಞಾಪಿಸಿದನು.


ಅವರು ನನಗೆ ಯಾಜಕಸೇವೆಮಾಡುವದಕ್ಕೆ ನನ್ನ ಸನ್ನಿಧಿಗೆ ಸೇರಕೂಡದು; ನನ್ನ ಅತಿಪವಿತ್ರವಾದ ಪರಿಶುದ್ಧವಸ್ತುಗಳಲ್ಲಿ ಯಾವದನ್ನೂ ಸಮೀಪಿಸಬಾರದು; ತಮಗಾದ ಅವಮಾನವನ್ನೂ ತಾವು ನಡಿಸಿದ ದುರಾಚಾರಗಳ ಫಲವನ್ನೂ ಅನುಭವಿಸುವರು.


ಲೇವಿಯರು ಮಾತ್ರ ತಮ್ಮ ಡೇರೆಗಳನ್ನು ದೇವದರ್ಶನದ ಗುಡಾರದ ಸುತ್ತಲೂ ಹಾಕಿಕೊಳ್ಳಬೇಕು. ಹೀಗಾದರೆ [ಯೆಹೋವನ] ಕೋಪವು ಇಸ್ರಾಯೇಲ್ಯರ ಮೇಲೆ ಉಂಟಾಗುವದಕ್ಕೆ ಆಸ್ಪದವಿರುವದಿಲ್ಲ. ಲೇವಿಯರು ದೇವದರ್ಶನದ ಗುಡಾರವನ್ನು ಕಾಯುವವರಾಗಿರಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು