Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 18:6 - ಕನ್ನಡ ಸತ್ಯವೇದವು J.V. (BSI)

6 ಇಗೋ ನಾನು ಇಸ್ರಾಯೇಲ್ಯರೊಳಗಿಂದ ನಿನ್ನ ಕುಲದವರಾದ ಲೇವಿಯರನ್ನು ತೆಗೆದುಕೊಂಡಿದ್ದೇನೆ; ಅವರು ಯೆಹೋವನಿಗೆ ಸಮರ್ಪಿಸಲ್ಪಟ್ಟ ಕಾಣಿಕೆಯಂತೆ ನಿನ್ನ ವಶದಲ್ಲಿಯೇ ಇದ್ದಾರೆ; ಅವರೇ ದೇವದರ್ಶನದ ಗುಡಾರದ ಪರಿಚರ್ಯವನ್ನು ಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಇಗೋ, ನಾನು ಇಸ್ರಾಯೇಲರೊಳಗಿಂದ ನಿನ್ನ ಕುಲದವರಾದ ಲೇವಿಯರನ್ನು ಆರಿಸಿಕೊಂಡಿದ್ದೇನೆ. ಅವರು ಯೆಹೋವನಿಗೆ ಸಮರ್ಪಿಸಲ್ಪಟ್ಟ ಕಾಣಿಕೆಯಂತೆ ನಿನ್ನ ವಶದಲ್ಲಿಯೇ ಇದ್ದಾರೆ. ಅವರೇ ದೇವದರ್ಶನದ ಗುಡಾರದ ಸೇವಾಕಾರ್ಯವನ್ನು ಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಇಸ್ರಯೇಲರಲ್ಲಿ ನಿನ್ನ ಕುಲದವರಾದ ಲೇವಿಯರನ್ನು ನಾನೇ ಆರಿಸಿಕೊಂಡಿದ್ದೇನೆ. ಅವರು ಸರ್ವೇಶ್ವರನಿಗೆ ಸಮರ್ಪಿತವಾಗಿ ಕಾಣಿಕೆಯಂತೆ ನಿನ್ನ ವಶದಲ್ಲೇ ಇದ್ದಾರೆ. ದೇವದರ್ಶನದ ಗುಡಾರದ ಪರಿಚರ್ಯವನ್ನು ಅವರೇ ಮಾಡಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಎಲ್ಲಾ ಇಸ್ರೇಲರಿಂದ ನಾನೇ ಲೇವಿಯರನ್ನು ಆರಿಸಿಕೊಂಡಿದ್ದೇನೆ. ಅವರು ನಿನಗೆ ಕೊಡಲ್ಪಟ್ಟ ಬಹುಮಾನವಾಗಿದ್ದಾರೆ. ದೇವದರ್ಶನಗುಡಾರಕ್ಕೆ ಸಂಬಂಧಿಸಿದ ಭಾರವಾದ ಕೆಲಸವನ್ನು ಮಾಡಲು ಅವರು ಯೆಹೋವನಿಗೆ ಪ್ರತಿಷ್ಠಿತರಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ನಾನು ನಿಮ್ಮ ಸಹೋದರರಾದ ಲೇವಿಯರನ್ನು ಇಸ್ರಾಯೇಲರೊಳಗಿಂದ ತೆಗೆದುಕೊಂಡಿದ್ದೇನೆ. ದೇವದರ್ಶನ ಗುಡಾರದ ಸೇವೆಯನ್ನು ಮಾಡುವುದಕ್ಕೆ ಅವರು ಯೆಹೋವ ದೇವರಿಗಾಗಿ ನಿಮಗೆ ಕಾಣಿಕೆಯಾಗಿ ಸಮರ್ಪಿತರಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 18:6
14 ತಿಳಿವುಗಳ ಹೋಲಿಕೆ  

ನೀನು ಲೇವಿಯರನ್ನು ಆರೋನನಿಗೂ ಅವನ ಮಕ್ಕಳಿಗೂ ಒಪ್ಪಿಸಬೇಕು; ಇಸ್ರಾಯೇಲ್ಯರಲ್ಲಿ ಆರೋನನಿಗೆ ಸಂಪೂರ್ಣವಾಗಿ ವಶಮಾಡಲ್ಪಟ್ಟವರು ಇವರೇ.


ಅವರ ಚೊಚ್ಚಲಾದ ಪಶುಗಳಿಗೆ ಬದಲಾಗಿ ಲೇವಿಯರ ಪಶುಗಳನ್ನೂ ತೆಗೆದುಕೋ. ಲೇವಿಯರೇ ನನ್ನ ಸೊತ್ತಾಗಿರುವರು; ನಾನು ಯೆಹೋವನು.


ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಇಗೋ, ನಾನೇ ಕೊಬ್ಬಿದ ಟಗರುಹೋತಗಳಿಗೂ ಬಡ ಕುರಿಮೇಕೆಗಳಿಗೂ ನ್ಯಾಯತೀರಿಸುವೆನು.


ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಆಹಾ, ನಾನೇ ನನ್ನ ಕುರಿಗಳನ್ನು ಹಿಂಬಾಲಿಸಿ ಹುಡುಕುವೆನು.


ನಾನೇ, ನಾನೇ ನಿನ್ನನ್ನು ಸಂತೈಸುವವನಾಗಿರುವಲ್ಲಿ ಮರ್ತ್ಯಮನುಷ್ಯನಿಗೆ, ಹುಲ್ಲಿನ ಗತಿಗೆ ಬರುವ ನರಜನ್ಮದವನಿಗೆ ಭಯಪಡುವ ನೀನು ಎಂಥವನು?


ನಾನೇ, ನಾನೇ ಬಾಯಿಬಿಟ್ಟು ಅವನನ್ನು ಕರೆದು ಬರಮಾಡಿದ್ದೇನೆ; ಅವನ ಮಾರ್ಗವು ಸಾರ್ಥಕವಾಗುವದು.


ಅವನೊಂದಿಗೆ ದಾನ್ ಕುಲದವನಾದ ಅಹೀಸಾಮಾಕನ ಮಗನಾದ ಒಹೊಲೀಯಾಬನನ್ನೂ ನೇವಿುಸಿದ್ದೇನೆ. ಅದಲ್ಲದೆ ನಾನು ನಿನಗೆ ಆಜ್ಞಾಪಿಸಿದ್ದೆಲ್ಲವನ್ನು ಮಾಡುವದಕ್ಕೆ ಜಾಣರೆಲ್ಲರ ಹೃದಯದಲ್ಲಿ ಜ್ಞಾನವನ್ನುಂಟುಮಾಡಿದ್ದೇನೆ.


ನಾನಂತೂ ಐಗುಪ್ತ್ಯರ ಹೃದಯಗಳನ್ನು ಕಠಿಣಪಡಿಸುವೆನಾದದರಿಂದ ಅವರು ಇವರ ಹಿಂದೆ ಸಮುದ್ರದೊಳಗೆ ಹೋಗುವರು; ಆಗ ನಾನು ಫರೋಹನಲ್ಲಿಯೂ ಅವನ ಸಮಸ್ತ ಸೈನ್ಯದಲ್ಲಿಯೂ ರಥಗಳಲ್ಲಿಯೂ ಕುದುರೆಗಳಲ್ಲಿಯೂ ಪ್ರಖ್ಯಾತಿಗೊಳ್ಳುವೆನು.


ಕೇಳಿರಿ, ನಾನು ನಿಮ್ಮನ್ನೂ ನಿಮ್ಮ ಸಂತತಿಯವರನ್ನೂ


ನಾನಂತೂ ಭೂವಿುಯ ಮೇಲೆ ಜಲಪ್ರಳಯವನ್ನು ಬರಮಾಡಿ ಆಕಾಶದ ಕೆಳಗಿರುವ ಸಕಲ ಪ್ರಾಣಿಗಳನ್ನೂ ಅಳಿಸಿಬಿಡುವೆನು; ಭೂವಿುಯಲ್ಲಿರುವ ಸಮಸ್ತವೂ ಲಯವಾಗುವದು.


ನೀನು ಲೇವಿ ಕುಲದವರನ್ನು ಹತ್ತಿರಕ್ಕೆ ಕರೆದು ಅವರು [ದೇವರ ಸೇವಾಕಾರ್ಯಕ್ಕಾಗಿ] ಯಾಜಕನಾದ ಆರೋನನ ಕೈಕೆಳಗಿರುವಂತೆ ಅವನ ಮುಂದೆ ನಿಲ್ಲಿಸು.


ಇಸ್ರಾಯೇಲ್ಯರ ಚೊಚ್ಚಲಾದವರೆಲ್ಲರು ನನ್ನ ಸೊತ್ತಷ್ಟೆ; ಐಗುಪ್ತದೇಶದಲ್ಲಿದ್ದ ಚೊಚ್ಚಲಾದದ್ದನ್ನೆಲ್ಲಾ ನಾನು ಸಂಹಾರಮಾಡಿದಾಗ ಇಸ್ರಾಯೇಲ್ಯರಲ್ಲಿರುವ ಚೊಚ್ಚಲಾದ ಮನುಷ್ಯರನ್ನೂ ಪಶುಗಳನ್ನೂ ನನ್ನ ಸ್ವಂತಕ್ಕಾಗಿ ಪ್ರತಿಷ್ಠಿಸಿಕೊಂಡೆನಲ್ಲಾ; ಅವರು ನನ್ನವರೇ; ನಾನು ಯೆಹೋವನು ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು