Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 19:10 - ಕನ್ನಡ ಸತ್ಯವೇದವು J.V. (BSI)

10 ಆ ಬೂದಿಯನ್ನು ಕೂಡಿಸಿದವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಆ ದಿನದ ಸಾಯಂಕಾಲದವರೆಗೆ ಅಶುದ್ಧನಾಗಿರಬೇಕು. ಇದು ಇಸ್ರಾಯೇಲ್ಯರಿಗೂ ಅವರಲ್ಲಿ ಇಳುಕೊಂಡಿರುವ ಇತರರಿಗೂ ಶಾಶ್ವತನಿಯಮ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಆ ಕೆಂದಾಕಳ ಬೂದಿಯನ್ನು ಕೂಡಿಸಿದವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಆ ದಿನದ ಸಾಯಂಕಾಲದವರೆಗೆ ಅಶುದ್ಧನಾಗಿರಬೇಕು. ಇದು ಇಸ್ರಾಯೇಲರಿಗೂ ಮತ್ತು ಅವರಲ್ಲಿರುವ ಪ್ರವಾಸಿಗರಿಗೂ ಶಾಶ್ವತ ನಿಯಮವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಆ ಬೂದಿಯನ್ನು ಕೂಡಿಸಿದವನು ತನ್ನ ಬಟ್ಟೆಗಳನ್ನು ಒಗೆದುಕೊಂಡು, ಸಂಜೆಯವರೆಗೆ ಮಡಿಗೆಟ್ಟವನಾಗಿರಬೇಕು. ಇದು ಇಸ್ರಯೇಲರಿಗೂ ಅವರ ಮಧ್ಯೆ ವಾಸಿಸುವ ಇತರರಿಗೂ ಅನ್ವಯಿಸುವ ಶಾಶ್ವತ ನಿಯಮ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 “ಆ ಬೂದಿಯನ್ನು ಕೂಡಿಸಿದವನು ತನ್ನ ಬಟ್ಟೆಗಳನ್ನು ತೊಳೆದುಕೊಳ್ಳಬೇಕು. ಅವನು ಸಾಯಂಕಾಲದವರೆಗೆ ಅಶುದ್ಧನಾಗಿರುವನು. “ಇದು ಇಸ್ರೇಲರಿಗೂ ಅವರ ಮಧ್ಯದಲ್ಲಿ ಇಳಿದುಕೊಂಡಿರುವ ಪರದೇಶಸ್ಥರಿಗೂ ಶಾಶ್ವತ ನಿಯಮ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಹಸುವಿನ ಬೂದಿಯನ್ನು ಕೂಡಿಸಿದವನು ತನ್ನ ವಸ್ತ್ರಗಳನ್ನು ತೊಳೆದುಕೊಳ್ಳಬೇಕು, ಸಂಜೆಯವರೆಗೆ ಅಶುದ್ಧನಾಗಿರಬೇಕು. ಇದು ಇಸ್ರಾಯೇಲರಿಗೂ ಅವರ ಮಧ್ಯದಲ್ಲಿ ಪ್ರವಾಸಿಯಾಗಿರುವ ಪರಕೀಯನಿಗೂ ಶಾಶ್ವತ ಕಟ್ಟಳೆಯಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 19:10
10 ತಿಳಿವುಗಳ ಹೋಲಿಕೆ  

ಇದನ್ನು ಧರಿಸಿಕೊಂಡಿರುವದರಲ್ಲಿ ಗ್ರೀಕನು ಯೆಹೂದ್ಯನು ಎಂಬ ಭೇದವಿಲ್ಲ; ಸುನ್ನತಿ ಮಾಡಿಸಿಕೊಂಡವರು ಸುನ್ನತಿಮಾಡಿಸಿಕೊಳ್ಳದವರು ಎಂಬ ಭೇದವಿಲ್ಲ; ಮ್ಲೇಚ್ಫ ಹೂಣ ಎಂಬ ಹೆಸರುಗಳಿಲ್ಲ; ಆಳು ಒಡೆಯ ಎಂಬ ಭೇದವಿಲ್ಲ. ಆದರೆ ಕ್ರಿಸ್ತನೇ ಸಮಸ್ತರಲ್ಲಿಯೂ ಸಮಸ್ತವೂ ಆಗಿರುವನು.


ಅವನು ಮೂರನೆಯ ದಿನದಲ್ಲಿಯೂ ಏಳನೆಯ ದಿನದಲ್ಲಿಯೂ ಅಶುದ್ಧನಾದವನ ಮೇಲೆ ಅದನ್ನು ಚಿವಿುಕಿಸಬೇಕು. ಅಶುದ್ಧನಾದವನು ಏಳನೆಯ ದಿನದಲ್ಲಿ ದೋಷಪರಿಹಾರಹೊಂದಿದವನಾಗಿ ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಿ ಸಾಯಂಕಾಲದಲ್ಲಿ ಶುದ್ಧನಾಗುವನು.


ಸ್ವದೇಶದವನಿಗೂ ನಿಮ್ಮಲ್ಲಿ ವಾಸವಾಗಿರುವ ಪರದೇಶದವನಿಗೂ ಒಂದೇ ವಿಧಿಯಿರಬೇಕು ಅಂದನು.


ಆ ಮನೆಯು ಮುಚ್ಚಿರುವ ದಿನಗಳಲ್ಲಿ ಯಾವನಾದರೂ ಒಳಕ್ಕೆ ಹೋದರೆ ಅವನು ಆ ದಿನದ ಸಾಯಂಕಾಲದವರೆಗೆ ಅಶುದ್ಧನಾಗಿರುವನು.


ಅವುಗಳ ಹೆಣವನ್ನು ಎತ್ತಿದವನು ತನ್ನ ಬಟ್ಟೆಗಳನ್ನು ಒಗೆದುಕೊಳ್ಳಬೇಕು. ಮತ್ತು ಸಾಯಂಕಾಲದವರೆಗೂ ಅಶುದ್ಧನಾಗಿರುವನು.


ಅವುಗಳನ್ನು ಸುಟ್ಟವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನ ಮಾಡಿಯೇ ಪಾಳೆಯದೊಳಗೆ ಬರಬೇಕು.


ಇದು ಇಸ್ರಾಯೇಲ್ಯರಿಗೆ ಶಾಶ್ವತನಿಯಮ. ಹೊಲೆಗಳೆವ ಆ ನೀರನ್ನು ಚಿವಿುಕಿಸಿದವನು ತನ್ನ ಬಟ್ಟೆಗಳನ್ನು ಒಗೆದುಕೊಳ್ಳಬೇಕು; ಮತ್ತು ಆ ನೀರು ಯಾರಿಗೆ ಸೋಂಕಿತೋ ಅವನು ಆ ದಿನದ ಸಾಯಂಕಾಲದವರೆಗೆ ಅಶುದ್ಧನಾಗಿರಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು