Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 19:11 - ಕನ್ನಡ ಸತ್ಯವೇದವು J.V. (BSI)

11 ಮನುಷ್ಯನ ಶವ ಸೋಂಕಿದವನು ಏಳು ದಿನಗಳವರೆಗೆ ಅಶುದ್ಧನಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 “ಮನುಷ್ಯನ ಶವ ಸೋಂಕಿದವನು ಏಳು ದಿನಗಳವರೆಗೆ ಅಶುದ್ಧನಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 “ಮನುಷ್ಯನ ಶವವನ್ನು ಸೋಂಕಿದವನು ಏಳು ದಿನಗಳವರೆಗೆ ಮಡಿಗೆಟ್ಟವನಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಯಾವನಾದರೂ ಮನುಷ್ಯನ ಶವವನ್ನು ಮುಟ್ಟಿದರೆ, ಏಳು ದಿನಗಳವರೆಗೆ ಅಶುದ್ಧನಾಗಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 “ಮನುಷ್ಯನ ಶವವನ್ನು ಮುಟ್ಟಿದವನು ಏಳು ದಿನಗಳವರೆಗೆ ಅಶುದ್ಧನಾಗಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 19:11
22 ತಿಳಿವುಗಳ ಹೋಲಿಕೆ  

ಎಲ್ಲಾ ಕುಷ್ಠರೋಗಿಗಳನ್ನೂ ಮೇಹಸ್ರಾವವುಳ್ಳವರನ್ನೂ ಹೆಣದ ಸೋಂಕಿನಿಂದ ಅಶುದ್ಧರಾದವರನ್ನೂ


ನೀವಾದರೋ ಏಳುದಿನದವರೆಗೂ ಪಾಳೆಯದ ಹೊರಗೆ ಇರಬೇಕು. ಮನುಷ್ಯ ಪ್ರಾಣತೆಗೆದವರೂ ಶವಸೋಂಕಿದವರೂ ನಿಮ್ಮವರಾದರೂ ಸೆರೆಯವರಾದರೂ ಮೂರನೆಯ ಮತ್ತು ಏಳನೆಯ ದಿನಗಳಲ್ಲಿ ದೋಷಪರಿಹಾರ ಮಾಡಿಕೊಳ್ಳಬೇಕು.


ಯೆಹೋವನು ಮೋಶೆಗೆ ಹೇಳಿದ್ದೇನಂದರೆ - ನೀನು ಆರೋನನ ಮಕ್ಕಳಾದ ಯಾಜಕರಿಗೆ ಹೀಗೆ ಆಜ್ಞಾಪಿಸಬೇಕು - ಕುಲದಲ್ಲಿ ಸತ್ತವರಿಗೋಸ್ಕರ ಯಾವ ಯಾಜಕನೂ ತನ್ನನ್ನು ಅಪವಿತ್ರಮಾಡಿಕೊಳ್ಳಬಾರದು.


ಬೈಲಿನಲ್ಲಿರುವ ಯಾವನಿಗಾದರೂ ಶಸ್ತ್ರಹತನ ಶವವಾಗಲಿ ಬೇರೆ ಯಾವ ಮನುಷ್ಯ ಶವವಾಗಲಿ ಮನುಷ್ಯನ ಎಲುಬಾಗಲಿ ಸಮಾಧಿಯಾಗಲಿ ಸೋಂಕಿದರೆ ಅವನು ಏಳು ದಿನಗಳವರೆಗೆ ಅಶುದ್ಧನಾಗಿರಬೇಕು.


ನೀನು ಇಸ್ರಾಯೇಲ್ಯರಿಗೆ ಹೀಗೆ ಆಜ್ಞಾಪಿಸು - ನಿಮ್ಮಲ್ಲಿಯಾಗಲಿ ನಿಮ್ಮ ಸಂತತಿಯವರಲ್ಲಿಯಾಗಲಿ ಶವಸೋಂಕಿದದರಿಂದ ಅಶುದ್ಧರಾದವರೂ ದೂರ ಪ್ರಯಾಣದಲ್ಲಿರುವವರೂ ಕೂಡ ಯೆಹೋವನ ಆಜ್ಞಾನುಸಾರ ಪಸ್ಕಹಬ್ಬವನ್ನು ಆಚರಿಸಲೇಬೇಕು.


ಆದರೆ ಕೆಲವು ಜನರು ಮನುಷ್ಯ ಶವ ಸೋಂಕಿದದರಿಂದ ಅಶುದ್ಧರಾಗಿ ಆ ದಿನದಲ್ಲಿ ಪಸ್ಕಹಬ್ಬವನ್ನು ಆಚರಿಸಲಾರದೆ ಮೋಶೆ ಆರೋನರ ಬಳಿಗೆ ಬಂದು ಮೋಶೆಗೆ -


ಅವನು ಶವವಿರುವ ಯಾವ ಸ್ಥಳಕ್ಕೂ ಹೋಗಬಾರದು. ತಂದೆತಾಯಿಗಳ ಮರಣದ ನಿವಿುತ್ತ ತನ್ನನ್ನು ಅಪವಿತ್ರಮಾಡಿಕೊಳ್ಳಬಾರದು.


ನಿತ್ಯಾತ್ಮನಿಂದ ತನ್ನನ್ನು ತಾನೇ ನಿರ್ದೋಷಿಯನ್ನಾಗಿ ದೇವರಿಗೆ ಸಮರ್ಪಿಸಿಕೊಂಡ ಕ್ರಿಸ್ತನ ರಕ್ತವು ಎಷ್ಟೋ ಹೆಚ್ಚಾಗಿ ನಮ್ಮನ್ನು ನಿರ್ಜೀವಕರ್ಮಗಳಿಂದ ಬಿಡಿಸಿ ನಾವು ಜೀವವುಳ್ಳ ದೇವರನ್ನು ಆರಾಧಿಸುವವರಾಗುವಂತೆ ನಮ್ಮ ಮನಸ್ಸನ್ನು ಶುದ್ಧೀಕರಿಸುವದಲ್ಲವೇ.


ಆತನು ಅಪರಾಧಗಳ ಮತ್ತು ಪಾಪಗಳ ದೆಸೆಯಿಂದ ಸತ್ತವರಾಗಿದ್ದ ನಿಮ್ಮನ್ನು ಸಹ ಬದುಕಿಸಿದನು.


ಆದದರಿಂದ ಅನ್ಯಜನರ ಮಧ್ಯದಲ್ಲಿಂದ ಹೊರಟು ಬಂದು ಪ್ರತ್ಯೇಕವಾಗಿರಿ; ಅಶುದ್ಧವಾದ ಯಾವದನ್ನೂ ಮುಟ್ಟದಿರಿ ಎಂದು ಕರ್ತನು ಹೇಳುತ್ತಾನೆ.


ಈ ವಿಷಯ ಹೇಗಂದರೆ - ಒಬ್ಬ ಮನುಷ್ಯನಿಂದಲೇ ಪಾಪವೂ ಪಾಪದಿಂದ ಮರಣವೂ ಲೋಕದೊಳಗೆ ಸೇರಿದವು; ಎಲ್ಲರು ಪಾಪ ಮಾಡಿದ್ದರಿಂದ ಮರಣವು ಹೀಗೆ ಎಲ್ಲರಲ್ಲಿಯೂ ವ್ಯಾಪಿಸಿತು.


ಆಮೇಲೆ ಹಗ್ಗಾಯನು - ಹೆಣವನ್ನು ಮುಟ್ಟಿ ಅಶುದ್ಧನಾದವನು ಇವುಗಳಲ್ಲಿ ಯಾವದನ್ನಾದರೂ ಸೋಕಿದರೆ ಅದು ಅಶುದ್ಧವಾಗುವದೋ ಎಂದು ಕೇಳಿದ್ದಕ್ಕೆ ಯಾಜಕರು - ಅಶುದ್ಧವೇ ಆಗುವದು ಎಂದು ಉತ್ತರಕೊಟ್ಟರು.


ಆಹಾ, ಆ ಯಾಜಕಪ್ರವಾದಿಗಳು ಕುರುಡರಂತೆ ಬೀದಿಗಳಲ್ಲಿ ಅಲೆಯುತ್ತಾರೆ; ರಕ್ತದಿಂದ ಹೊಲಸಾಗಿ ಹೋಗಿದ್ದಾರೆ, ಅವರ ಬಟ್ಟೆಯನ್ನು ಯಾರೂ ಮುಟ್ಟರು.


ನೆಲದ ಮೇಲೆ ಸಂಚರಿಸುವ ಈ ಅಶುದ್ಧವಾದ ಸಣ್ಣ ಜಂತುಗಳ ಹೆಣವು ಯಾರಿಗೆ ಸೋಂಕುವದೋ ಅವರು ಆ ಸಾಯಂಕಾಲದವರೆಗೂ ಅಶುದ್ಧರಾಗಿರುವರು.


ಆಗ ಪೌಲನು ಆ ಮನುಷ್ಯರನ್ನು ಕರೆದುಕೊಂಡು ಮರುದಿನ ಅವರೊಡನೆ ತನ್ನನ್ನು ಶುದ್ಧಿಮಾಡಿಕೊಂಡು ವ್ರತದ ದಿವಸಗಳು ಮುಗಿದವೆಂದು ತಿಳಿಸುವವನಾಗಿ ದೇವಾಲಯದೊಳಗೆ ಹೋದನು. ಪ್ರತಿಯೊಬ್ಬನಿಗೋಸ್ಕರ ಮಾಡಬೇಕಾದ ಅರ್ಪಣೆಯನ್ನು ಮುಂದೆ ಅರ್ಪಿಸಬೇಕಾಗಿತ್ತು.


ಆ ಏಳು ದಿವಸಗಳು ತುಂಬುತ್ತಿರುವಾಗ ಆಸ್ಯಸೀಮೆಯಿಂದ ಬಂದಿದ್ದ ಯೆಹೂದ್ಯರು ಅವನನ್ನು ದೇವಾಲಯದಲ್ಲಿ ಕಂಡು ಗುಂಪುಕೂಡಿದ ಜನರೆಲ್ಲರನ್ನು ಕಲಕಿ ಅವನನ್ನು ಹಿಡಿದು -


ಯಾವನಿಗಾದರೂ ಅಶುದ್ಧವಾದ ಕಾಡುಮೃಗ, ಪಶು, ಜಂತು ಇವುಗಳ ಹೆಣವಾಗಲಿ ಬೇರೆ ಯಾವ ಅಶುದ್ಧವಸ್ತುವಾಗಲಿ ತಗಲಿದರೆ ಅವನಿಗೆ ತಿಳಿಯದೆಹೋದರೂ ಅವನು ಅಶುದ್ಧನೂ ದೋಷಿಯೂ ಆಗಿರುವನು.


ತನ್ನನ್ನು ಯೆಹೋವನಿಗೆ ಪ್ರತಿಷ್ಠಿಸಿಕೊಂಡ ದಿನಗಳೆಲ್ಲಾ ಯಾವ ಶವವನ್ನೂ ಮುಟ್ಟಬಾರದು.


ತೊಲಗಿರಿ, ತೊಲಗಿರಿ, ಬಾಬೆಲಿನಿಂದ ಹೊರಡಿರಿ, ಅಶುದ್ಧವಾದ ಯಾವದನ್ನೂ ಮುಟ್ಟದಿರಿ, ಅದರ ಮಧ್ಯದೊಳಗಿಂದ ತೆರಳಿರಿ, ಯೆಹೋವನ ಆರಾಧನೆಯ ಉಪಕರಣಗಳನ್ನು ಹೊರುವವರೇ, ಶುದ್ಧರಾಗಿರಿ!


ಆರೋನನ ಸಂತತಿಯವರಲ್ಲಿ ಯಾವನಿಗಾದರೂ ಕುಷ್ಠರೋಗವಾಗಲಿ ಮೇಹವಾಗಲಿ ಇದ್ದರೆ ಅವನು ಶುದ್ಧನಾಗುವ ತನಕ ದೇವರಿಗೆ ನೈವೇದ್ಯವಾದ ಪದಾರ್ಥಗಳನ್ನು ಉಣ್ಣಕೂಡದು. ಹೆಣದ ಸಂಪರ್ಕದಿಂದ ಅಶುದ್ಧವಾದದ್ದನ್ನು ಮುಟ್ಟಿದವನಾಗಲಿ ವೀರ್ಯಸ್ಖಲನ ಮಾಡಿಕೊಂಡವನಾಗಲಿ


ಇಸ್ರಾಯೇಲ್ಯರು ದೇಶವನ್ನು ಶುದ್ಧಿಮಾಡುವದಕ್ಕಾಗಿ ಏಳು ತಿಂಗಳು ಅವರನ್ನು ಹೂಣುತ್ತಲೇ ಇರುವರು.


ಅಂಥವನನ್ನು ಶುದ್ಧನಾದ ಮೇಲೂ ಏಳು ದಿವಸ ಪ್ರತ್ಯೇಕಿಸಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು