Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 19:14 - ಕನ್ನಡ ಸತ್ಯವೇದವು J.V. (BSI)

14 [ಹೊಲೆಗಳೆವ] ಕಟ್ಟಳೆ ಹೇಗಂದರೆ - ಯಾರಾದರೂ ಡೇರೆಯೊಳಗೆ ಸತ್ತ ಸಂದರ್ಭದಲ್ಲಿ ಆ ಡೇರೆಯಲ್ಲಿರುವವರೆಲ್ಲರೂ ಅದರೊಳಗೆ ಬರುವವರೂ ಏಳು ದಿನಗಳವರೆಗೆ ಅಶುದ್ಧರಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 “ಯಾರಾದರೂ ಡೇರೆಯಲ್ಲಿ ಸತ್ತರೆ ಅವನ ವಿಷಯವಾದ ನಿಯಮವೇನೆಂದರೆ: ಆ ಡೇರೆಯಲ್ಲಿರುವವರೆಲ್ಲರೂ ಮತ್ತು ಅದರೊಳಗೆ ಪ್ರವೇಶಿಸುವವರು ಏಳು ದಿನಗಳವರೆಗೆ ಅಶುದ್ಧರಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 “ಮೈಲಿಗೆ ನಿಯಮವಿದು: ಯಾರಾದರೂ ಡೇರೆಯೊಳಗೆ ಸತ್ತ ಸಂದರ್ಭದಲ್ಲಿ ಆ ಡೇರೆಯೊಳಗಿರುವವರೆಲ್ಲರು ಹಾಗು ಅದರೊಳಗೆ ಬರುವವರು ಕೂಡ ಮೈಲಿಗೆಯಾಗಿರುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 “ಯಾವನಾದರೂ ಗುಡಾರದಲ್ಲಿ ಸತ್ತರೆ ಅನುಸರಿಸಬೇಕಾದ ನಿಯಮವಿದು: ಒಬ್ಬನು ಗುಡಾರದಲ್ಲಿ ಸತ್ತರೆ, ಆ ಗುಡಾರವನ್ನು ಪ್ರವೇಶಿಸುವ ಪ್ರತಿಯೊಬ್ಬನು ಮತ್ತು ಆ ಗುಡಾರದಲ್ಲಿರುವ ಪ್ರತಿಯೊಬ್ಬನು ಅಶುದ್ಧನಾಗುವನು. ಅವರು ಏಳು ದಿನಗಳವರೆಗೆ ಅಶುದ್ಧರಾಗಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 “ಒಬ್ಬ ಮನುಷ್ಯನು ಡೇರೆಯಲ್ಲಿ ಸತ್ತರೆ, ಅವನ ವಿಷಯವಾದ ನಿಯಮವೇನೆಂದರೆ: ಆ ಡೇರೆಯೊಳಗೆ ಪ್ರವೇಶಿಸುವವರೆಲ್ಲರೂ, ಡೇರೆಯಲ್ಲಿರುವವರೆಲ್ಲರೂ ಏಳು ದಿವಸಗಳವರೆಗೆ ಅಶುದ್ಧರಾಗಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 19:14
13 ತಿಳಿವುಗಳ ಹೋಲಿಕೆ  

ಅವನು ಶವವಿರುವ ಯಾವ ಸ್ಥಳಕ್ಕೂ ಹೋಗಬಾರದು. ತಂದೆತಾಯಿಗಳ ಮರಣದ ನಿವಿುತ್ತ ತನ್ನನ್ನು ಅಪವಿತ್ರಮಾಡಿಕೊಳ್ಳಬಾರದು.


ಮನುಷ್ಯನ ಶವ ಸೋಂಕಿದವನು ದೋಷಪರಿಹಾರವನ್ನು ಮಾಡಿಕೊಳ್ಳದೆಹೋದರೆ ಅವನು ಯೆಹೋವನ ಗುಡಾರವನ್ನು ಅಪವಿತ್ರಪಡಿಸುವವನಾದನು. ಅಂಥವನನ್ನು ಇಸ್ರಾಯೇಲ್ಯರಿಂದ ತೆಗೆದುಹಾಕಬೇಕು. ಹೊಲೆಗಳೆವ ನೀರನ್ನು ತನ್ನ ಮೇಲೆ ಚಿವಿುಕಿಸಿಕೊಳ್ಳದೆ ಇರುವದರಿಂದ ಅವನು ಅಶುದ್ಧನು; ಅವನಿಗುಂಟಾದ ಅಪವಿತ್ರತೆಯು ಇದ್ದೇ ಇರುವದು.


ಮತ್ತು ಮುಚ್ಚಳ ಹಾಕಿ ಕಟ್ಟದಿರುವ ಎಲ್ಲಾ ಪಾತ್ರೆಗಳು ಅಶುದ್ಧವಾಗಿರುವವು.


ನಾನಾ ವಿಧವಾದ ಕುಷ್ಠರೋಗದ ಗುರುತುಗಳು ಅಂದರೆ ಕೂದಲು ಬೆಳೆಯದ ದದ್ದು,


ಮೇಹಸ್ರಾವವುಳ್ಳವನು, ವೀರ್ಯಸ್ಖಲನದಿಂದ ಅಶುದ್ಧನಾದವನು,


ಯೆಹೋವನು ಮೋಶೆಗೆ ಹೇಳಿದ್ದೇನಂದರೆ - ನೀನು ಆರೋನನ ಮಕ್ಕಳಾದ ಯಾಜಕರಿಗೆ ಹೀಗೆ ಆಜ್ಞಾಪಿಸಬೇಕು - ಕುಲದಲ್ಲಿ ಸತ್ತವರಿಗೋಸ್ಕರ ಯಾವ ಯಾಜಕನೂ ತನ್ನನ್ನು ಅಪವಿತ್ರಮಾಡಿಕೊಳ್ಳಬಾರದು.


ಎಲ್ಲಾ ಕುಷ್ಠರೋಗಿಗಳನ್ನೂ ಮೇಹಸ್ರಾವವುಳ್ಳವರನ್ನೂ ಹೆಣದ ಸೋಂಕಿನಿಂದ ಅಶುದ್ಧರಾದವರನ್ನೂ


ತನ್ನನ್ನು ಯೆಹೋವನಿಗೆ ಪ್ರತಿಷ್ಠಿಸಿಕೊಂಡ ದಿನಗಳೆಲ್ಲಾ ಯಾವ ಶವವನ್ನೂ ಮುಟ್ಟಬಾರದು.


ಯಾವನಾದರೂ ಅಕಸ್ಮಾತ್ತಾಗಿ ಅವನ ಬಳಿಯಲ್ಲೇ ಸತ್ತದರಿಂದ ತಾನು ಪ್ರತಿಷ್ಠಿಸಿಕೊಂಡ ತಲೆಕೂದಲು ಅಪವಿತ್ರವಾದರೆ ಏಳನೆಯ ದಿನದಲ್ಲಿ ಅಂದರೆ ಶುದ್ಧನಾಗುವ ದಿನದಲ್ಲಿ ತಲೆಯನ್ನು ಕ್ಷೌರಮಾಡಿಸಿಕೊಳ್ಳಬೇಕು.


ಆದರೆ ಕೆಲವು ಜನರು ಮನುಷ್ಯ ಶವ ಸೋಂಕಿದದರಿಂದ ಅಶುದ್ಧರಾಗಿ ಆ ದಿನದಲ್ಲಿ ಪಸ್ಕಹಬ್ಬವನ್ನು ಆಚರಿಸಲಾರದೆ ಮೋಶೆ ಆರೋನರ ಬಳಿಗೆ ಬಂದು ಮೋಶೆಗೆ -


ಅದಲ್ಲದೆ ಎಲ್ಲಾ ಬಟ್ಟೆಗಳನ್ನೂ ತೊಗಲಿನ ಸಾಮಾನನ್ನೂ ಮೇಕೇಕೂದಲಿನ ವಸ್ತುಗಳನ್ನೂ ಮರದ ಸಾಮಾನನ್ನೂ ಶುದ್ಧಮಾಡಿಕೊಳ್ಳಬೇಕು ಎಂದು ಹೇಳಿದನು.


ಇಸ್ರಾಯೇಲ್ಯರು ದೇಶವನ್ನು ಶುದ್ಧಿಮಾಡುವದಕ್ಕಾಗಿ ಏಳು ತಿಂಗಳು ಅವರನ್ನು ಹೂಣುತ್ತಲೇ ಇರುವರು.


ಅಂಥವನನ್ನು ಶುದ್ಧನಾದ ಮೇಲೂ ಏಳು ದಿವಸ ಪ್ರತ್ಯೇಕಿಸಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು