Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 19:18 - ಕನ್ನಡ ಸತ್ಯವೇದವು J.V. (BSI)

18 ಆಗ ಶುದ್ಧನಾದವನೊಬ್ಬನು ಆ ನೀರನ್ನು ಹಿಸ್ಸೋಪ್‍ಗಿಡದ ಬರಲಿಂದ [ಮನುಷ್ಯನು ಸತ್ತ] ಆ ಡೇರೆಯ ಮೇಲೂ ಅದರಲ್ಲಿದ್ದ ಸಾಮಾನುಗಳ ಮತ್ತು ಮನುಷ್ಯರ ಮೇಲೂ ಚಿವಿುಕಿಸಬೇಕು; ಹಾಗೆಯೇ ಎಲುಬಾಗಲಿ ಹತವಾದವನ ಅಥವಾ ಬೇರೆ ಮನುಷ್ಯನ ಶವವಾಗಲಿ ಸಮಾಧಿಯಾಗಲಿ ಯಾವನಿಗೆ ಸೋಂಕಿತೋ ಅವನ ಮೇಲೆಯೂ ಚಿವಿುಕಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಆಗ ಶುದ್ಧನಾದವನೊಬ್ಬನು ಆ ನೀರನ್ನು ಹಿಸ್ಸೋಪ್ ಗಿಡದ ಬರಲಿಂದ ಮನುಷ್ಯನು ಸತ್ತ ಆ ಡೇರೆಯ ಮೇಲೆಯೂ, ಅದರಲ್ಲಿದ್ದ ಸಾಮಾನುಗಳ ಮತ್ತು ಮನುಷ್ಯರ ಮೇಲೆಯೂ ಚಿಮಿಕಿಸಬೇಕು. ಹಾಗೆಯೇ ಎಲುಬಾಗಲಿ, ಹತವಾದವನ ಅಥವಾ ಬೇರೆ ಮನುಷ್ಯನ ಶವವಾಗಲಿ, ಸಮಾಧಿಯಾಗಲಿ ಯಾವನಿಗೆ ಸೋಂಕುವುದೋ ಅವನ ಮೇಲೆಯೂ ನೀರನ್ನು ಚಿಮಿಕಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಬಳಿಕ ಮೈಲಿಗೆಯಾಗದವನೊಬ್ಬನು ಆ ನೀರನ್ನು ಹಿಸ್ಸೋಪ್ ಗಿಡದ ಗೊಂಚಲಿನಿಂದ ಸಾವಾದ, ಆ ಡೇರೆಯ ಮೇಲೂ ಅದರಲ್ಲಿರುವ ಸಲಕರಣೆಗಳ ಮೇಲೂ ವ್ಯಕ್ತಿಗಳ ಮೇಲೂ ಚಿಮುಕಿಸಬೇಕು. ಹಾಗೆಯೇ ಎಲುಬಾಗಲಿ, ಹತನಾದವನ ಅಥವಾ ಬೇರೆ ಮನುಷ್ಯನ ಶವವಾಗಲಿ, ಸಮಾಧಿಯಾಗಲಿ ಯಾರಿಗೆ ಸೋಂಕಿತೋ ಅವರ ಮೇಲೆಯೂ ಚಿಮುಕಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಆಗ ಶುದ್ಧನಾಗಿರುವ ಒಬ್ಬನು ಹಿಸ್ಸೋಪ್ ಗಿಡದ ಎಳೆಕೊಂಬೆಯನ್ನು ಆ ನೀರಿನಲ್ಲಿ ಅದ್ದಿ ಗುಡಾರದ ಮೇಲೆಯೂ ಪಾತ್ರೆಗಳ ಮೇಲೆಯೂ ಮತ್ತು ಅದರೊಳಗಿದ್ದ ವ್ಯಕ್ತಿಗಳ ಮೇಲೆಯೂ ಚಿಮಿಕಿಸಬೇಕು. ಸತ್ತವನ ದೇಹವನ್ನು ಮುಟ್ಟಿದವನಿಗೂ ಯುದ್ಧದಲ್ಲಿ ಕೊಲ್ಲಲ್ಪಟ್ಟವನ ದೇಹವನ್ನು ಮುಟ್ಟಿದವನಿಗೂ ಸತ್ತವನ ಮೂಳೆಗಳನ್ನು ಮುಟ್ಟಿದವನಿಗೂ ನೀವು ಹೀಗೆ ಮಾಡಲೇಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಪವಿತ್ರನಾದವನೊಬ್ಬನು ಹಿಸ್ಸೋಪನ್ನು ತೆಗೆದುಕೊಂಡು ನೀರಿನಲ್ಲಿ ಅದ್ದಿ, ಆ ಡೇರೆಯ ಮೇಲೆಯೂ, ಸಮಸ್ತ ಸಲಕರಣೆಗಳ ಮೇಲೆಯೂ, ಅದರಲ್ಲಿರುವ ಜನರ ಮೇಲೆಯೂ ಚಿಮುಕಿಸಬೇಕು. ಹಾಗೆಯೇ ಎಲುಬನ್ನಾಗಲಿ, ಹತನಾದವನ ಅಥವಾ ಬೇರೆ ಮನುಷ್ಯನ ಶವವಾಗಲಿ, ಸಮಾಧಿಯನ್ನಾಗಲಿ ಮುಟ್ಟಿದವರ ಮೇಲೆಯೂ ಚಿಮುಕಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 19:18
13 ತಿಳಿವುಗಳ ಹೋಲಿಕೆ  

ನಿತ್ಯಾತ್ಮನಿಂದ ತನ್ನನ್ನು ತಾನೇ ನಿರ್ದೋಷಿಯನ್ನಾಗಿ ದೇವರಿಗೆ ಸಮರ್ಪಿಸಿಕೊಂಡ ಕ್ರಿಸ್ತನ ರಕ್ತವು ಎಷ್ಟೋ ಹೆಚ್ಚಾಗಿ ನಮ್ಮನ್ನು ನಿರ್ಜೀವಕರ್ಮಗಳಿಂದ ಬಿಡಿಸಿ ನಾವು ಜೀವವುಳ್ಳ ದೇವರನ್ನು ಆರಾಧಿಸುವವರಾಗುವಂತೆ ನಮ್ಮ ಮನಸ್ಸನ್ನು ಶುದ್ಧೀಕರಿಸುವದಲ್ಲವೇ.


ಮತ್ತು ಶುದ್ಧನಾದವನೊಬ್ಬನು ಆ ಆಕಳಿನ ಬೂದಿಯನ್ನು ಕೂಡಿಸಿ ಪಾಳೆಯದ ಹೊರಗೆ ಶುದ್ಧವಾದ ಸ್ಥಳದಲ್ಲಿ ಇಡಬೇಕು. ಅದನ್ನು ಇಸ್ರಾಯೇಲ್ಯರ ಸಮೂಹದವರ ಉಪಯೋಗಕ್ಕಾಗಿ ನೀವು ಜೋಪಾನ ಮಾಡಬೇಕು. ಅದು ಹೊಲೆಗಳೆವ ನೀರನ್ನು ಸಿದ್ಧಪಡಿಸುವದಕ್ಕಾಗಿ ಅಲ್ಲೇ ಇಟ್ಟಿರಬೇಕು; ಅದು ದೋಷಪರಿಹಾರಕವಾದದ್ದು.


ನೀವು ಕ್ರಿಸ್ತ ಯೇಸುವಿನಲ್ಲಿರುವದು ಆತನಿಂದಲೇ. ಕ್ರಿಸ್ತ ಯೇಸು ನಮಗೆ ದೇವರ ಕಡೆಯಿಂದ ಜ್ಞಾನವೂ ನೀತಿ ಶುದ್ಧೀಕರಣ ವಿಮೋಚನೆಗಳಿಗೆ ಕಾರಣನೂ ಆದನು.


ಇವರು ನಿಜವಾಗಿ ಪ್ರತಿಷ್ಠಿತರಾಗಬೇಕೆಂದು ಇವರಿಗೋಸ್ಕರ ನಾನು ನನ್ನನ್ನು ಪ್ರತಿಷ್ಠೆಪಡಿಸಿಕೊಳ್ಳುತ್ತೇನೆ.


ಇವರನ್ನು ಸತ್ಯದಲ್ಲಿ ಸೇರಿಸಿ ಪ್ರತಿಷ್ಠೆ ಪಡಿಸು; ನಿನ್ನ ವಾಕ್ಯವೇ ಸತ್ಯವು.


ಹಿಸ್ಸೋಪ್ ಗಿಡದ ಬರಲಿನಿಂದ ನೀರನ್ನು ಚಿಮುಕಿಸಿಯೋ ಎಂಬಂತೆ ನನ್ನ ಅಶುದ್ಧತ್ವವನ್ನು ತೆಗೆದುಬಿಡು, ಆಗ ಶುದ್ಧನಾಗಿರುವೆನು; ನನ್ನನ್ನು ತೊಳೆ, ಆಗ ಹಿಮಕ್ಕಿಂತಲೂ ಬೆಳ್ಳಗಾಗುವೆನು.


ಮೋಶೆಯು ದೇವರ ವಿಧಿಗಳನ್ನೆಲ್ಲಾ ಧರ್ಮಶಾಸ್ತ್ರದ ಪ್ರಕಾರ ಜನರೆಲ್ಲರಿಗೆ ಹೇಳಿದ ಮೇಲೆ ನೀರು, ಕೆಂಪು ಉಣ್ಣೆ, ಹಿಸ್ಸೋಪು ಕಡ್ಡಿ ಇವುಗಳೊಂದಿಗೆ ಹೋರಿಕರಗಳ ಮತ್ತು ಹೋತಗಳ ರಕ್ತವನ್ನು ತೆಗೆದುಕೊಂಡು -


ಅಂಥ ಅಶುದ್ಧನಾದವನನ್ನು ಪವಿತ್ರಪಡಿಸಬೇಕಾದರೆ ಆ ದೋಷಪರಿಹಾರಕವಾದ ಬೂದಿಯಲ್ಲಿ ಸ್ವಲ್ಪವನ್ನು ಪಾತ್ರೆಯಲ್ಲಿ ಇಟ್ಟು ಅದರ ಮೇಲೆ ಸೆಲೇನೀರನ್ನು ಹಾಕಬೇಕು.


ಅವನು ಮೂರನೆಯ ದಿನದಲ್ಲಿಯೂ ಏಳನೆಯ ದಿನದಲ್ಲಿಯೂ ಅಶುದ್ಧನಾದವನ ಮೇಲೆ ಅದನ್ನು ಚಿವಿುಕಿಸಬೇಕು. ಅಶುದ್ಧನಾದವನು ಏಳನೆಯ ದಿನದಲ್ಲಿ ದೋಷಪರಿಹಾರಹೊಂದಿದವನಾಗಿ ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಿ ಸಾಯಂಕಾಲದಲ್ಲಿ ಶುದ್ಧನಾಗುವನು.


ಹಾಗೆಯೇ ಅನೇಕ ಜನಾಂಗಗಳವರು ಅವನನ್ನು ಕಂಡು ವಿಸ್ಮಯದಿಂದ ಚಮಕಿತರಾಗುವರು; ಅರಸರೂ ಅವನ ಮುಂದೆ ಬಾಯಿಮುಚ್ಚಿಕೊಳ್ಳುವರು; ಏಕಂದರೆ ಸುದ್ದಿಯೇ ಇಲ್ಲದ ಸಂಗತಿಯನ್ನು ನೋಡುವರು, ಎಂದೂ ಕೇಳದ ವಿಷಯವನ್ನು ಗ್ರಹಿಸಿಕೊಳ್ಳುವರು.


ನನ್ನ ದೋಷಕ್ಕೆ ವಿಮುಖನಾಗು; ನನ್ನ ಪಾಪಗಳನ್ನೆಲ್ಲಾ ಅಳಿಸಿಬಿಡು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು